Homeಮುಖಪುಟಬಿಜೆಪಿ ನೇಮಿಸಿದ ಕುಲಪತಿ ಅಮರ್ಥ್ಯ ಸೇನ್‌ರನ್ನು ಗುರಿಯಾಗಿಸಿಕೊಂಡಿದ್ದಾರೆ - ಗಾಯಕ ಕಬೀರ್ ಸುಮನ್

ಬಿಜೆಪಿ ನೇಮಿಸಿದ ಕುಲಪತಿ ಅಮರ್ಥ್ಯ ಸೇನ್‌ರನ್ನು ಗುರಿಯಾಗಿಸಿಕೊಂಡಿದ್ದಾರೆ – ಗಾಯಕ ಕಬೀರ್ ಸುಮನ್

ಬಂಗಾಳಿಗರಿಗೆ ಬಿಜೆಪಿ ಮಾಡಿದ ಅವಮಾನವನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ನೋಬೆಲ್ ಪುರಸ್ಕೃತ ಅಮರ್ಥ್ಯ ಸೇನ್ ಅವರಿಗೆ ಮಾಡಿದ ಅವಮಾನ ಎಲ್ಲ ಬಂಗಾಳಿಗಳಿಗೆ ಮಾಡಿದ ಅವಮಾನ- ಹೋರಾಟಗಾರರು

- Advertisement -
- Advertisement -

“ಪಶ್ಚಿಮ ಬಂಗಾಳದ ವಿಶ್ವಭಾರತಿ ವಿವಿ ಆವರಣದಲ್ಲಿ ನೊಬೆಲ್ ಪುರಸ್ಕೃತ ಅರ್ಥಶಾಸ್ತ್ರಜ್ಞ ಅಮರ್ಥ್ಯ ಸೇನ್ ಅಕ್ರಮ ಜಮೀನು ಹೊಂದಿದ್ದಾರೆ” ಎಂದು ಆಡಳಿತ ಮಂಡಳಿ ಸರ್ಕಾರಕ್ಕೆ ಪತ್ರ ಬರೆದಿತ್ತು. ಇದನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿರುವ ಹೋರಾಟಗಾರರು, “ಬಂಗಾಳಿಗರಿಗೆ ಮಾಡಿದ ಅವಮಾನವನ್ನು ಸಹಿಸಲು ಸಾಧ್ಯವಿಲ್ಲ” ಎಂದು ಆಕ್ರೋಶ ಹೊರಹಾಕಿದ್ದಾರೆ.

ಈ ವಿವಾದಕ್ಕೆ ಸಂಬಂಧಿಸಿದಂತೆ ಅಮರ್ಥ್ಯ ಸೇನ್ ಅವರನ್ನು ಬೆಂಬಲಿಸಿ ಹಾಗೂ ಕೇಂದ್ರೀಯ ವಿವಿ ಧೋರಣೆಯನ್ನು ಖಂಡಿಸಿ ಭಾನುವಾರ ವಿವಿಧ ಕ್ಷೇತ್ರಗಳ ಗಣ್ಯರು ಪ್ರತಿಭಟನೆ ನಡೆಸಿ, “ಕೇಂದ್ರೀಯ ವಿವಿಯ ಕ್ರಮ ಸರ್ವಾಧಿಕಾರಿ ಮತ್ತು ನಿರಂಕುಶ ಪ್ರಭುತ್ವ”ದ ಕ್ರಮ ಎಂದು ಟೀಕಿಸಿದರು.

ಇದನ್ನೂ ಓದಿ: ಸಿದ್ದರಾಮಯ್ಯ ಅವರನ್ನು ಛೇಡಿಸಿದ ಸುರೇಶ್‌ ಕುಮಾರ್: ತರಾಟೆಗೆ ತೆಗೆದುಕೊಂಡ ಟ್ವಿಟ್ಟಿಗರು!

ಕವಿಗಳಾದ ಜೋಯ್ ಗೋಸ್ವಾಮಿ ಮತ್ತು ಸುಬೋಧ್ ಸರ್ಕಾರ್, ಗಾಯಕ ಕಬೀರ್ ಸುಮನ್, ಚಿತ್ರ ಕಲಾವಿದರಾದ ಜೋಗನ್ ಚೌಧರಿ ಮತ್ತು ಸುವ ಪ್ರಸನ್ನ, ರಂಗಕಲಾವಿದರಾದ ಬ್ರಾತ್ಯ ಬಸು ಮತ್ತು ಇತರರು ಲಲಿತಕಲಾ ಅಕಾಡೆಮಿ ಆವರಣದಲ್ಲಿ ಸೇರಿ ಈ ವಿಷಯಕ್ಕೆ ಸಂಬಂಧಿಸಿದಂತೆ ದನಿ ಎತ್ತಿದರು.

“ಬಂಗಾಳಿಗರಿಗೆ ಬಿಜೆಪಿ ಮಾಡಿದ ಅವಮಾನವನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಅಮರ್ಥ್ಯ ಸೇನ್ ಅವರಿಗೆ ಮಾಡಿದ ಅವಮಾನ ಎಲ್ಲ ಬಂಗಾಳಿಗಳಿಗೆ ಮಾಡಿದ ಅವಮಾನ” ಎಂಬ ಫಲಕಗಳನ್ನು ಹಿಡಿದು ಪ್ರತಿಭಟನೆ ನಡೆಸಿದರು.

ವಿಶ್ವಭಾರತಿ ಇತ್ತೀಚೆಗೆ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಪತ್ರ ಬರೆದು ಸಂಸ್ಥೆಯ ಭೂಮಿಯನ್ನು ಅಮರ್ಥ್ಯ ಸೇನ್ ಸೇರಿದಂತೆ ಹಲವು ಮಂದಿ ಖಾಸಗಿಯವರಿಗೆ ದಾಖಲೆ ಪತ್ರ ಮಾಡಿಕೊಡಲಾಗಿದೆ ಎಂದು ಆಪಾದಿಸಿತ್ತು.

ಇದನ್ನೂ ಓದಿ: ಖರ್ಗೆ ಮುಖ್ಯಮಂತ್ರಿ ಆಗುವುದನ್ನು ತಡೆದವರ ಹೆಸರು ಹೇಳಲಿ: ದೇವೇಗೌಡರಿಗೆ ಸಿದ್ದು ತಿರುಗೇಟು

ಆದರೆ, “ಆವರಣದಲ್ಲಿ ತಮ್ಮ ಸ್ವಾಧೀನದಲ್ಲಿರುವ ಜಮೀನನ್ನು ಧೀರ್ಘಾವಧಿ ಲೀಸ್ ಮೇಲೆ ನೀಡಲಾಗಿದೆ. ಈ ಲೀಸ್ ಅವಧಿ ಮುಕ್ತಾಯದ ಹಂತದಲ್ಲಿದೆ” ಎಂದು ಅಮರ್ಥ್ಯ ಸೇನ್ ಸ್ಪಷ್ಟನೆ ನೀಡಿದ್ದರು.

“ಅಮರ್ಥ್ಯ ಸೇನ್ ಅವರಂಥ ವ್ಯಕ್ತಿಗಳ ಬಗ್ಗೆ ವಿಶ್ವಭಾರತಿಯ ನಡೆ ಸರ್ವಾಧಿಕಾರಿ ಧೋರಣೆ ಮತ್ತು ನಿರಂಕುಶ ಪ್ರಭುತ್ವವನ್ನು ಸೂಚಿಸುತ್ತದೆ. ನಾವೆಲ್ಲರೂ ಸೇನ್ ಅವರ ಬೆಂಬಲಕ್ಕೆ ನಿಲ್ಲುತ್ತೇವೆ” ಎಂದು ಗೋಸ್ವಾಮಿ ಹೇಳಿದರು.

“ಬಿಜೆಪಿ ನೇಮಕ ಮಾಡಿದ ಕುಲಪತಿಯವರು ಅಮರ್ಥ್ಯ ಸೇನ್ ಅವರನ್ನು ಗುರಿ ಮಾಡಿಕೊಂಡಿದ್ದಾರೆ” ಎಂದು ಗಾಯಕ ಕಬೀರ್ ಸುಮನ್ ಆರೋಪಿಸಿದರು.


ಇದನ್ನೂ ಓದಿ: ‘ಗೋ ಕೊರೊನಾ ಗೋ’ ಖ್ಯಾತಿಯ ಕೇಂದ್ರ ಸಚಿವರ ಹೊಸ ಘೋಷಣೆ – ‘ನೋ ಕೊರೊನಾ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...