ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಅವರನ್ನು ರಾಜ್ಯಸಭೆಯಲ್ಲಿ ಅವಮಾನಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರಾಜೀನಾಮೆಗೆ ಆಗ್ರಹಿಸಿ ವಿವಿಧ ಸಂಘಟನೆಗಳು ಮಂಗಳವಾರ ಕಲಬುರಗಿ ಬಂದ್‌ಗೆ ಕರೆ ನೀಡಿವೆ. ಬಂದ್ ಹಿನ್ನೆಲೆ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ವರದಿಯಾಗಿದೆ. ಅಂಬೇಡ್ಕರ್‌ಗೆ ಅವಮಾನ
“ಭಾರತದ ಸಂವಿಧಾನದ 75 ವರ್ಷಗಳ ಅದ್ಭುತ ಪಯಣ” ಎಂಬ ಎರಡು ದಿನಗಳ ಚರ್ಚೆಯ ಮುಕ್ತಾಯದಲ್ಲಿ ರಾಜ್ಯಸಭೆಯನ್ನು ಉದ್ದೇಶಿಸಿ ಮಾತನಾಡುವ ವೇಳೆ ಅವರು ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದರು. ಅಂಬೇಡ್ಕರ್‌ಗೆ ಅವಮಾನ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
“ಅಭಿ ಏಕ್ ಫ್ಯಾಶನ್ ಹೋ ಗಯಾ ಹೈ – ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್. ಇತ್ನಾ ನಾಮ್ ಅಗರ್ ಭಗವಾನ್ ಕಾ ಲೇತೆ ತೋ ಸಾತ್ ಜನ್ಮೋನ್ ತಕ್ ಸ್ವರ್ಗ್ ಮಿಲ್ ಜಾತಾ” (ಈ ಒಂದು ಫ್ಯಾಶನ್ ಆಗಿ ಹೋಗಿದೆ. ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್… ಇಷ್ಟು ಬಾರಿ ಭಗವಂತನ ಹೆಸರನ್ನು ಹೇಳಿದ್ದರೆ, ಏಳು ಜನ್ಮಕ್ಕೂ ಸ್ವರ್ಗ ಸಿಗುತ್ತಿತ್ತು) ಎಂದು ಅಮಿತ್ ಶಾ ಹೇಳಿದ್ದರು.
ಮಂಗಳವಾರ ಕಾಂಗ್ರೆಸ್ ದೇಶದಾದ್ಯಂತ ಅಂಬೇಡ್ಕರ್ ಸಮ್ಮಾನ್ ಮಾರ್ಚ್ ನಡೆಸುತ್ತಿದೆ. ಈ ನಡುವೆ ಹಲವು ಜಿಲ್ಲೆಗಳಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದೆ. ಕಲಬುರಗಿಯಲ್ಲಿ ಸಂವಿಧಾನ ರಕ್ಷಣಾ ಸಮಿತಿ ಮತ್ತು ವಿವಿಧ ಸಂಘಟನೆಗಳು ಮಂಗಳವಾರ ಬಂದ್‌ಗೆ ಕರೆ ನೀಡಿವೆ. ಬಂದ್‌ಗೆ ಉತ್ತಮ ಪ್ರತಿಕ್ರಿಯೆ ಲಭ್ಯವಾಗಿದೆ ಎಂದು ವರದಿಯಾಗಿದೆ. ಜಿಲ್ಲೆಯಲ್ಲಿ ಮುಂಜಾನೆಯಿಂದ ಬಸ್, ಆಟೊ ಸಂಚಾರ ಸ್ಥಗಿತವಾಗಿದ್ದು, ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಸಂಘಟನೆಗಳಿಗೆ ಬೆಂಬಲ ಸೂಚಿಸಿದ್ದಾರೆ ಎನ್ನಲಾಗಿದೆ. ಜಿಲ್ಲಾಡಳಿತ ಎಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಂಡಿದೆ.
ಅಂಬೇಡ್ಕರ್ ಬಗ್ಗೆ ಅಮಿತ್ ಶಾ ಹೇಳಿಕೆ ಖಂಡಿಸಿ ದಲಿತ, ಪ್ರಗತಿಪರ ಸಂಘಟನೆಗಳ ಒಕ್ಕೂಟ ಗದಗ ಜಿಲ್ಲೆಯಲ್ಲೂ ಬಂದ್‌ಗೆ ಕರೆ ನೀಡಿದೆ ಎಂದು ವರದಿಯಾಗಿದೆ, ಜೊತೆಗೆ ಉಡುಪಿ ಜಿಲ್ಲಾ ಅಂಬೇಡ್ಕರ್ ಯುವಸೇನೆ ವತಿಯಿಂದ ಮಂಗಳವಾರ ಸಂಜೆ 4.30 ಗಂಟೆಗೆ ಅಜ್ಜರಕಾಡಿನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧ್ಯಕ್ಷ ಗಣೇಶ್ ನೆರ್ಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ಅಂಬೇಡ್ಕರ್ ಕುರಿತ ಅಮಿತ್ ಶಾ ಹೇಳಿಕೆ ಖಂಡಿಸಿ ನಿರ್ಣಯ ಅಂಗೀಕರಿಸಿದ ಡಿಎಂಕೆ
ಅಂಬೇಡ್ಕರ್ ಕುರಿತ ಅಮಿತ್ ಶಾ ಹೇಳಿಕೆ ಖಂಡಿಸಿ ನಿರ್ಣಯ ಅಂಗೀಕರಿಸಿದ ಡಿಎಂಕೆ


