Homeಕರ್ನಾಟಕಅಂಬೇಡ್ಕರ್‌ಗೆ ಅವಮಾನ | ಅಮಿತ್ ಶಾ ವಿರುದ್ಧ ಪ್ರತಿಭಟನೆ; ಕಲಬುರಗಿ ಬಂದ್

ಅಂಬೇಡ್ಕರ್‌ಗೆ ಅವಮಾನ | ಅಮಿತ್ ಶಾ ವಿರುದ್ಧ ಪ್ರತಿಭಟನೆ; ಕಲಬುರಗಿ ಬಂದ್

- Advertisement -
- Advertisement -

ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಅವರನ್ನು ರಾಜ್ಯಸಭೆಯಲ್ಲಿ ಅವಮಾನಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರಾಜೀನಾಮೆಗೆ ಆಗ್ರಹಿಸಿ ವಿವಿಧ ಸಂಘಟನೆಗಳು ಮಂಗಳವಾರ ಕಲಬುರಗಿ ಬಂದ್‌ಗೆ ಕರೆ ನೀಡಿವೆ. ಬಂದ್ ಹಿನ್ನೆಲೆ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ವರದಿಯಾಗಿದೆ. ಅಂಬೇಡ್ಕರ್‌ಗೆ ಅವಮಾನ

“ಭಾರತದ ಸಂವಿಧಾನದ 75 ವರ್ಷಗಳ ಅದ್ಭುತ ಪಯಣ” ಎಂಬ ಎರಡು ದಿನಗಳ ಚರ್ಚೆಯ ಮುಕ್ತಾಯದಲ್ಲಿ ರಾಜ್ಯಸಭೆಯನ್ನು ಉದ್ದೇಶಿಸಿ ಮಾತನಾಡುವ ವೇಳೆ ಅವರು ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದರು. ಅಂಬೇಡ್ಕರ್‌ಗೆ ಅವಮಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಅಭಿ ಏಕ್ ಫ್ಯಾಶನ್ ಹೋ ಗಯಾ ಹೈ – ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್. ಇತ್ನಾ ನಾಮ್ ಅಗರ್ ಭಗವಾನ್ ಕಾ ಲೇತೆ ತೋ ಸಾತ್ ಜನ್ಮೋನ್ ತಕ್ ಸ್ವರ್ಗ್ ಮಿಲ್ ಜಾತಾ” (ಈ ಒಂದು ಫ್ಯಾಶನ್ ಆಗಿ ಹೋಗಿದೆ. ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್… ಇಷ್ಟು ಬಾರಿ ಭಗವಂತನ ಹೆಸರನ್ನು ಹೇಳಿದ್ದರೆ, ಏಳು ಜನ್ಮಕ್ಕೂ ಸ್ವರ್ಗ ಸಿಗುತ್ತಿತ್ತು) ಎಂದು ಅಮಿತ್ ಶಾ ಹೇಳಿದ್ದರು.

ಮಂಗಳವಾರ ಕಾಂಗ್ರೆಸ್ ದೇಶದಾದ್ಯಂತ ಅಂಬೇಡ್ಕರ್ ಸಮ್ಮಾನ್ ಮಾರ್ಚ್‌ ನಡೆಸುತ್ತಿದೆ. ಈ ನಡುವೆ ಹಲವು ಜಿಲ್ಲೆಗಳಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದೆ. ಕಲಬುರಗಿಯಲ್ಲಿ ಸಂವಿಧಾನ ರಕ್ಷಣಾ ಸಮಿತಿ ಮತ್ತು ವಿವಿಧ ಸಂಘಟನೆಗಳು ಮಂಗಳವಾರ ಬಂದ್‌ಗೆ ಕರೆ ನೀಡಿವೆ. ಬಂದ್‌ಗೆ ಉತ್ತಮ ಪ್ರತಿಕ್ರಿಯೆ ಲಭ್ಯವಾಗಿದೆ ಎಂದು ವರದಿಯಾಗಿದೆ. ಜಿಲ್ಲೆಯಲ್ಲಿ ಮುಂಜಾನೆಯಿಂದ ಬಸ್, ಆಟೊ ಸಂಚಾರ ಸ್ಥಗಿತವಾಗಿದ್ದು, ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಸಂಘಟನೆಗಳಿಗೆ ಬೆಂಬಲ ಸೂಚಿಸಿದ್ದಾರೆ ಎನ್ನಲಾಗಿದೆ. ಜಿಲ್ಲಾಡಳಿತ ಎಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಂಡಿದೆ.

ಅಂಬೇಡ್ಕರ್ ಬಗ್ಗೆ ಅಮಿತ್ ಶಾ ಹೇಳಿಕೆ ಖಂಡಿಸಿ ದಲಿತ, ಪ್ರಗತಿಪರ ಸಂಘಟನೆಗಳ ಒಕ್ಕೂಟ ಗದಗ ಜಿಲ್ಲೆಯಲ್ಲೂ ಬಂದ್‌ಗೆ ಕರೆ ನೀಡಿದೆ ಎಂದು ವರದಿಯಾಗಿದೆ, ಜೊತೆಗೆ ಉಡುಪಿ ಜಿಲ್ಲಾ ಅಂಬೇಡ್ಕರ್ ಯುವಸೇನೆ ವತಿಯಿಂದ ಮಂಗಳವಾರ ಸಂಜೆ 4.30 ಗಂಟೆಗೆ ಅಜ್ಜರಕಾಡಿನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧ್ಯಕ್ಷ ಗಣೇಶ್ ನೆರ್ಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಅಂಬೇಡ್ಕರ್ ಕುರಿತ ಅಮಿತ್ ಶಾ ಹೇಳಿಕೆ ಖಂಡಿಸಿ ನಿರ್ಣಯ ಅಂಗೀಕರಿಸಿದ ಡಿಎಂಕೆ

ಅಂಬೇಡ್ಕರ್ ಕುರಿತ ಅಮಿತ್ ಶಾ ಹೇಳಿಕೆ ಖಂಡಿಸಿ ನಿರ್ಣಯ ಅಂಗೀಕರಿಸಿದ ಡಿಎಂಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...