Homeಮುಖಪುಟಅಂಬೇಡ್ಕರ್‌ಗೆ ಅವಮಾನ | ಅಮಿತ್ ಶಾ ವಿರುದ್ಧ ಟಿಎಂಸಿಯಿಂದ ಹಕ್ಕುಚ್ಯುತಿ ನೋಟಿಸ್

ಅಂಬೇಡ್ಕರ್‌ಗೆ ಅವಮಾನ | ಅಮಿತ್ ಶಾ ವಿರುದ್ಧ ಟಿಎಂಸಿಯಿಂದ ಹಕ್ಕುಚ್ಯುತಿ ನೋಟಿಸ್

- Advertisement -
- Advertisement -

ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ವಿರುದ್ಧ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಗೃಹ ಸಚಿವ ಅಮಿತ್ ಶಾ ವಿರುದ್ಧ ತೃಣಮೂಲ ಕಾಂಗ್ರೆಸ್ ರಾಜ್ಯಸಭಾ ನಾಯಕ ಡೆರೆಕ್ ಒ’ಬ್ರೇನ್ ಬುಧವಾರ ಹಕ್ಕುಚ್ಯುತಿ ನೋಟಿಸ್ ಸಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ರಾಜ್ಯಸಭೆಯ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಮಗಳ ನಿಯಮ 187 ರ ಅಡಿಯಲ್ಲಿ ನೋಟಿಸ್ ಸಲ್ಲಿಸಲಾಗಿದೆ ಎಂದು ವರದಿಯಾಗಿದೆ. ಅಂಬೇಡ್ಕರ್‌ಗೆ ಅವಮಾನ

ಸಂವಿಧಾನದ 75 ವರ್ಷಗಳ ಕುರಿತ ಚರ್ಚೆಗೆ ಉತ್ತರಿಸುತ್ತಾ ಗೃಹ ಸಚಿವರು ಮಂಗಳವಾರ ಮೇಲ್ಮನೆಯಲ್ಲಿ ನೀಡಿದ ಹೇಳಿಕೆಯನ್ನೂ ನೋಟಿಸ್ ಉಲ್ಲೇಖಿಸಿದೆ. ಲೋಕಸಭೆ ಮತ್ತು ರಾಜ್ಯಸಭೆಗಳೆರಡೂ ಕಾಂಗ್ರೆಸ್ ಮತ್ತು ಇತರ ಕೆಲವು ವಿರೋಧ ಪಕ್ಷಗಳಿಂದ ಅಂಬೇಡ್ಕರ್ ಅವರನ್ನು ಅವಮಾನಿಸಿದ ಆರೋಪದ ಮೇಲೆ ಪ್ರತಿಭಟನೆಗೆ ಸಾಕ್ಷಿಯಾದವು. ಇದರ ಪರಿಣಾಮವಾಗಿ ಉಭಯ ಸದನಗಳನ್ನು ಮುಂದೂಡಲಾಯಿತು. ಅಂಬೇಡ್ಕರ್‌ಗೆ ಅವಮಾನ

ಅಂಬೇಡ್ಕರ್ ಹೆಸರನ್ನು ಪದೇ ಪದೇ ಹೇಳಿಕೊಳ್ಳುತ್ತಿರುವ ಕಾಂಗ್ರೆಸ್ ಅನ್ನು ಟೀಕಿಸಿದ್ದ ಅಮಿತ್ ಶಾ, ಇಷ್ಟು ಬಾರಿ ದೇವರ ಹೆಸರು ಹೇಳಿದ್ದರೆ, ಏಳು ಜನ್ಮಗಳಲ್ಲೂ ಸ್ವರ್ಗದಲ್ಲಿ ಸ್ಥಾನ ಪಡೆಯಬಹುದಿತ್ತು ಎಂದು ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಅಭಿ ಏಕ್ ಫ್ಯಾಶನ್ ಹೋ ಗಯಾ ಹೈ – ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್. ಇತ್ನಾ ನಾಮ್ ಅಗರ್ ಭಗವಾನ್ ಕಾ ಲೇತೆ ತೋ ಸಾತ್ ಜನ್ಮೋನ್ ತಕ್ ಸ್ವರ್ಗ್ ಮಿಲ್ ಜಾತಾ” (ಈ ಒಂದು ಫ್ಯಾಶನ್ ಆಗಿ ಹೋಗಿದೆ. ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್… ಇಷ್ಟು ಬಾರಿ ಭಗವಂತನ ಹೆಸರನ್ನು ಹೇಳಿದ್ದರೆ, ಏಳು ಜನ್ಮಕ್ಕೂ ಸ್ವರ್ಗ ಸಿಗುತ್ತಿತ್ತು) ಎಂದು ಅಮಿತ್ ಶಾ ರಾಜ್ಯ ಸಭೆಯಲ್ಲಿ ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಈ ವೇಳೆ ಅವರು “ಭಾರತದ ಸಂವಿಧಾನದ 75 ವರ್ಷಗಳ ಅದ್ಭುತ ಪಯಣ” ಎಂಬ ಎರಡು ದಿನಗಳ ಚರ್ಚೆಯ ಮುಕ್ತಾಯದಲ್ಲಿ ರಾಜ್ಯಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.

ಈ ನಡುವೆ ಅಮಿತ್ ಶಾ ಅವರ ಹೇಳಿಕೆಯನ್ನು ಟಿಎಂಪಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ವಿರೋಧ ವ್ಯಕ್ತಪಡಿಸಿದ್ದು, ಬಿ.ಆರ್. ಅಂಬೇಡ್ಕರ್ ಕುರಿತು ರಾಜ್ಯಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಬಿಜೆಪಿಯ ಜಾತಿವಾದಿ ಮತ್ತು ದಲಿತ ವಿರೋಧಿ ಮನಸ್ಥಿತಿಯ ಪ್ರದರ್ಶನವಾಗಿದೆ ಎಂದು ಬುಧವಾರ ಹೇಳಿದ್ದಾರೆ. ಅಮಿತ್ ಶಾ ಅವರ ಹೇಳಿಕೆಗಳು ಅವಹೇಳನಕಾರಿ ಎಂದು ಕರೆದಿರುವ ಅವರು, ”ಅವರು ಹೇಳಿಕೆಯು ಮಾರ್ಗದರ್ಶನ ಮತ್ತು ಸ್ಫೂರ್ತಿಗಾಗಿ ಅಂಬೇಡ್ಕರ್‌ರನ್ನು ಎದುರು ನೋಡುವ ಲಕ್ಷಾಂತರ ಜನರಿಗೆ ಮಾಡಿದ ಅವಮಾನವಾಗಿದೆ” ಎಂದು ಹೇಳಿದ್ದಾರೆ.

“ಮುಖವಾಡ ಕಳಚಿದೆ! ಸಂಸತ್ತು ಸಂವಿಧಾನದ 75 ವೈಭವದ ವರ್ಷಗಳನ್ನು ಪ್ರತಿಬಿಂಬಿಸುತ್ತಿದೆ, ಗೃಹ ಸಚಿವ ಅಮಿತ್ ಶಾ ಅವರು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ಈ ಸಂದರ್ಭವನ್ನು ಕಳಂಕಗೊಳಿಸಲು ನೋಡಿದ್ದಾರೆ. ಅದೂ ಕೂಡಾ ಪ್ರಜಾಪ್ರಭುತ್ವದ ದೇವಾಲಯದಲ್ಲಿ…” ಅವರು X ನಲ್ಲಿ ಪೋಸ್ಟ್ ಮಾಡಿದ್ದಾರೆ.

“ಇದು ಬಿಜೆಪಿಯ ಜಾತಿವಾದಿ ಮತ್ತು ದಲಿತ ವಿರೋಧಿ ಮನಸ್ಥಿತಿಯ ಪ್ರದರ್ಶನವಾಗಿದೆ. 240 ಸ್ಥಾನಗಳಿಗೆ ಇಳಿದಾಗಲೂ ಅವರು ಈ ರೀತಿ ವರ್ತಿಸಿದರೆ, ಒಂದು ವೇಳೆ ಅವರು 400 ಸ್ಥಾನಗಳು ಪಡೆದಿದ್ದರೆ ಅವರು ಉಂಟುಮಾಡುತ್ತಿದ್ದ ಹಾನಿಯನ್ನು ಊಹಿಸಿ. ಅವರು ಡಾ. ಅಂಬೇಡ್ಕರ್ ಅವರ ಕೊಡುಗೆಗಳ ಇತಿಹಾಸವನ್ನು ಸಂಪೂರ್ಣವಾಗಿ ಅಳಿಸಿ ಪುನಃ ಬರೆಯುತ್ತಿದ್ದರು” ಎಂದು ಅವರು ಆರೋಪಿಸಿದ್ದಾರೆ.

ಬಿಜೆಪಿಯ ಮೇಲೆ ದಾಳಿ ಮಾಡಿದ ಮಮತಾ ಅವರು, ದ್ವೇಷ ಮತ್ತು ಧರ್ಮಾಂಧತೆಯನ್ನು ಆಂತರಿಕಗೊಳಿಸಿದ ಪಕ್ಷದಿಂದ ಇನ್ನೇನು ನಿರೀಕ್ಷಿಸಬಹುದಿತ್ತು ಎಂದು ಹೇಳಿದ್ದಾರೆ. “ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಗಳು ಮಾರ್ಗದರ್ಶನ ಮತ್ತು ಸ್ಫೂರ್ತಿಗಾಗಿ ಬಾಬಾಸಾಹೇಬರನ್ನು ಎದುರು ನೋಡುವ ಲಕ್ಷಾಂತರ ಜನರಿಗೆ ಮಾಡಿರುವ ಅವಮಾನವಾಗಿದೆ.” ಎಂದು ಅವರು ಹೇಳಿದ್ದಾರೆ.

“ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನದ ಪಿತಾಮಹ, ಈ ಅತಿರೇಕದ ಹೇಳಿಕೆಯು ಅವರ ಮೇಲಿನ ನೇರ ದಾಳಿ ಮಾತ್ರವಲ್ಲ, ಸಂವಿಧಾನದ ಕರಡು ಸಮಿತಿಯ ಎಲ್ಲಾ ಸದಸ್ಯರ ಮೇಲಿ ದಾಳಿಯಾಗಿದೆ. ಇದು ಎಲ್ಲಾ ಜಾತಿ, ಮತ, ಜನಾಂಗಗಳ ಸದಸ್ಯರೊಂದಿಗೆ ವಿವಿಧತೆಯಲ್ಲಿ ಭಾರತದ ಏಕತೆಯನ್ನು ಸಂಕೇತಿಸುತ್ತದೆ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಅವರ ಪೋಸ್ಟ್ ಅನ್ನು ಹಂಚಿಕೊಂಡಿರುವ ಟಿಎಂಸಿ, ಅಮಿತ್ ಶಾ ಅವರ ಹೇಳಿಕೆ ನಾಲಿಗೆ ಸ್ಲಿಪ್ ಆಗಿ ಹೇಳಿದ್ದಲ್ಲ, ಬದಲಾಗಿ ಉದ್ದೇಶಪೂರ್ವಕವಾಗಿ ಹೇಳಿದ ಮಾತಾಗಿದೆ ಎಂದು ಹೇಳಿದೆ. ಸಂಸತ್ತಿನಲ್ಲಿ ಅಮಿತ್ ಶಾ ಅವರು ಬೇಷರತ್ ಕ್ಷಮೆಯಾಚಿಸಬೇಕು ಎಂದು ಟಿಎಂಸಿ ಒತ್ತಾಯಿಸಿದೆ.

ಇದನ್ನೂ ಓದಿ: ಬಡತನದಿಂದ ಬಳಲುತ್ತಿರುವವರಿಗೆ ಮಾತ್ರ ಮೀಸಲಾತಿ ನೀಡಬೇಕೇ ಎಂದು ಆಲೋಚಿಸಬೇಕು: ಎಚ್‌.ಡಿ. ದೇವೇಗೌಡ

ಬಡತನದಿಂದ ಬಳಲುತ್ತಿರುವವರಿಗೆ ಮಾತ್ರ ಮೀಸಲಾತಿ ನೀಡಬೇಕೇ ಎಂದು ಆಲೋಚಿಸಬೇಕು: ಎಚ್‌.ಡಿ. ದೇವೇಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...