Homeಕರ್ನಾಟಕಸಾಂಸ್ಕೃತಿಕ ನಾಯಕ ಬಸವಣ್ಣನ ನಿಂದನೆ: ರವಿ ಹಂಜ್‌ ವಿರುದ್ದ ಕರವೇ ನಾರಾಯಣಗೌಡ ಆಕ್ರೋಶ.

ಸಾಂಸ್ಕೃತಿಕ ನಾಯಕ ಬಸವಣ್ಣನ ನಿಂದನೆ: ರವಿ ಹಂಜ್‌ ವಿರುದ್ದ ಕರವೇ ನಾರಾಯಣಗೌಡ ಆಕ್ರೋಶ.

- Advertisement -
- Advertisement -

ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣನ ಕುರಿತು ರವಿ ಹಂಜ್‌ ಎನ್ನುವ ವ್ಯಕ್ತಿ ಆಕ್ಷೇಪಾರ್ಹ ಹಾಗೂ ನಿಂದನೆ ಮಾತುಗಳನ್ನಾಡಿದ್ದರ ಕುರಿತು ಕರವೇ ನಾರಾಯಣಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಕರ್ನಾಟಕ ಕಂಡ ಮಹಾ ಮಾನವತಾವಾದಿ, ದಾರ್ಶನಿಕ, ಸಾಮಾಜಿಕ ಕ್ರಾಂತಿಯ ಹರಿಕಾರ, ಭಕ್ತಿ ಭಂಡಾರಿ ಬಸವಣ್ಣನವರನ್ನು ಕೀಳಾಗಿ ನಿಂದಿಸಿದ್ದ ರವಿ ಹಂಜ್ ಎಂಬಾತನನ್ನು ಪೊಲೀಸರು ಬಂಧಿಸಿರುವುದು ಸ್ವಾಗತಾರ್ಹ. ಈತ ಮಾಡಿರುವುದು ಭಯೋತ್ಪಾದನೆಗೆ ಸಮನಾದ ಕೃತ್ಯ. ಹೀಗಾಗಿ ಈತನ ಮೇಲೆ ಕಠಿಣವಾದ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸುತ್ತೇನೆ.”

“ರವಿ ಹಂಜ್ ರೀತಿಯ ಸಾಂಸ್ಕೃತಿಕ ಭಯೋತ್ಪಾದಕರು ಆಗಾಗ ಸಮಾಜದ ಸ್ವಾಸ್ತ್ಯವನ್ನು ಹಾಳುಗೆಡವುತ್ತಾರೆ. ಇಂಥವರು ಸಮಾಜಕ್ಕೆ ಅಂಟಿದ ಕಳಂಕಗಳು. ನೆಮ್ಮದಿಯ ನಾಡಿನಲ್ಲಿ ಸಮುದಾಯಗಳ ನಡುವೆ ಸಂಘರ್ಷ ಹುಟ್ಟು ಹಾಕುವ ಇಂಥ ರೋಗಿಷ್ಟ ಮನಸ್ಸಿನವರಿಗೆ ತಕ್ಕ ಪಾಠ ಕಲಿಸಬೇಕು.”

“ಅಭಿವ್ಯಕ್ತಿ ಸ್ವಾತಂತ್ರ್ಯ ದ ಹೆಸರಿನಲ್ಲಿ ಕರ್ನಾಟಕದ ಮಹಚೇತನಗಳಿಗೆ ಕೆಸರು ಎರಚುವುದನ್ನು ಯಾವುದೇ ಕಾರಣಕ್ಕೂ ಸಹಿಸಿಕೊಳ್ಳಲು ಸಾಧ್ಯವಿಲ್ಲ. ಅದರಲ್ಲೂ ಇಡೀ ಕನ್ನಡ ಸಮುದಾಯಕ್ಕೆ ನೈತಿಕ ನಡಾವಳಿಯ ಸೂತ್ರವನ್ನೇ ರೂಪಿಸಿಕೊಟ್ಟ, ಜಗತ್ತಿಗೆ ವಿಶ್ವ ಮಾನವತೆಯ ತತ್ವವನ್ನು ಕೊಟ್ಟ ಬಸವಣ್ಣವರನ್ನು ಕೊಲೆಗಾರ, ಕಳ್ಳ ಎಂದು ನಿಂದಿಸುವವರನ್ನು ಸುಮ್ಮನೆ ಬಿಡಲು ಸಾಧ್ಯವಿಲ್ಲ. ಜಗತ್ತಿನ ಶ್ರೇಷ್ಠ ಪರಂಪರೆಗಳಲ್ಲಿ ಒಂದಾದ ಲಿಂಗಾಯತವನ್ನು ಲಿಂಗಾಹತ ಎಂದು ಕರೆಯುವುದು ಈತನ ಹೀನಾಯ ಮನಸ್ಥಿತಿಯನ್ನು ತೋರಿಸುತ್ತದೆ.”

“ಬಸವಣ್ಣನವರು ನಮ್ಮ ಹೆಮ್ಮೆ. ನಿಸ್ಸಂಶಯವಾಗಿ ಅವರು ಕರ್ನಾಟಕದ ಸಾಂಸ್ಕೃತಿಕ ನಾಯಕ. ಅವರು ನಡೆಸಿದ ಸಾಮಾಜಿಕ ಕ್ರಾಂತಿ ನಮಗೆ ಸ್ಫೂರ್ತಿ. ಕರ್ನಾಟಕದ ಸಾಮಾಜಿಕ ಬದುಕನ್ನು ಬದಲಿಸಿ, ಸಮಾನತೆಯ ಬೀಜ ಬಿತ್ತಿದ ಬಸವಣ್ಣನವರನ್ನು ದ್ವೇಷಿಸುವ ಜಾತಿವಾದಿಗಳು, ಯಥಾಸ್ಥಿತಿವಾದಿಗಳು 12ನೇ ಶತಮಾನದಲ್ಲೂ ಇದ್ದರು, ಈ ಆಧುನಿಕ ಕಾಲದಲ್ಲೂ ಇದ್ದಾರೆ. ಈ ಕ್ಷುದ್ರ ಜೀವಿಗಳು ಬಸವಣ್ಣನವರು ಪ್ರತಿಪಾದಿಸಿದ ತತ್ವಗಳ ವಿರೋಧಿಗಳು. ಇವರ ಮಾತುಗಳನ್ನು ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಸಮರ್ಥಿಸಿಕೊಳ್ಳುವವರೂ ಸಹ ಸಮಾಜ ದ್ರೋಹಿಗಳು.”

“ಪೋಲೀಸರು ಮುಲಾಜಿಲ್ಲದೆ ಈ ನಿಕೃಷ್ಟ ಹುಳವನ್ನು ಜೈಲಿಗೆ ಕಳುಹಿಸಬೇಕು. ಈತನ ಪುಸ್ತಕವನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು. ಈತನ ಬೆನ್ನ ಹಿಂದೆ ನಿಂತು ಕುಮ್ಮಕ್ಕು ಕೊಟ್ಟ ಮುಖೇಡಿಗಳನ್ನೂ ಕಾನೂನಿನ ಅಡಿಯಲ್ಲಿ ಶಿಕ್ಷಿಸಬೇಕು ಎಂದು ಒತ್ತಾಯಿಸುತ್ತೇನೆ.” ಎಂದಿದ್ದಾರೆ

ವಿವಾದಿತ ಪತ್ರಕರ್ತ ವಿಶ್ವೇಶ್ವರ್‌ ಭಟ್ ನ ಸಂಪಾದಕತ್ವದ ವಿಶ್ವವಾಣಿ ಯೂಟ್ಯೂಬ್‌ ಚಾನಲ್‌ ನಲ್ಲಿ ವೀಡಿಯೋ ಪ್ರಸಾರವಾಗಿತ್ತು. ಈಗಾಗಲೇ ರವಿ ಹಂಜ್‌ ಹಾಗೂ ವಿಶ್ವೇಶ್ವರ ಭಟ್‌ ವಿರುದ್ದ FIR ದಾಖಲಿಸಲಾಗಿದೆ ಹಾಗೂ ರವಿ ಹಂಜ್‌ ನನ್ನು ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ವಿಶ್ವೇಶ್ವರ ಭಟ್‌ ಆಸ್ತ್ರೇಲಿಯಾ ಪ್ರವಾಸದಲ್ಲಿರುವುದಾಗಿ ಹೇಳಿಕೊಂಡಿದ್ದಾರೆ. ಅವರ ಬಂಧನಕ್ಕೂ ಲುಕೌಟ್‌ ನೋಟೀಸ್‌ ಜಾರಿ ಮಾಡುತ್ತದೆಯೇ ಕಾದು ನೋಡಬೇಕಿದೆ.

ಕಾರ್ಯಕಾರಿ ಸಂಪಾದಕ, ನಾನುಗೌರಿ.ಕಾಮ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

ಚಂದ್ರು ತರಹುಣಿಸೆ
ಚಂದ್ರು ತರಹುಣಿಸೆhttps://naanugauri.com/
ಕಾರ್ಯಕಾರಿ ಸಂಪಾದಕ, ನಾನುಗೌರಿ.ಕಾಮ್
- Advertisment -

ಮುರಿದ ಕೈಗೆ ಚಿಕಿತ್ಸೆ ಬದಲು ಕಾರ್ಡ್‌ಬೋರ್ಡ್ ರಟ್ಟು ಕಟ್ಟಿ ಕಳಿಸಿದ ಆಸ್ಪತ್ರೆ ಸಿಬ್ಬಂದಿ: ಉತ್ತರ ಪ್ರದೇಶದ ಆರೋಗ್ಯ ವ್ಯವಸ್ಥೆ ವಿರುದ್ಧ ಕಾಂಗ್ರೆಸ್ ಕಿಡಿ!

ಉತ್ತರ ಪ್ರದೇಶದ ಕಾನ್ಪುರದ ಸರ್ಕಾರಿ ಆಸ್ಪತ್ರೆಯಲ್ಲಿ ರಸ್ತೆ ಅಪಘಾತದಲ್ಲಿ ಕೈ ಮೂಳೆ ಮುರಿದಿದ್ದ ತರಕಾರಿ ವ್ಯಾಪಾರಿಯೊಬ್ಬರಿಗೆ ಸೂಕ್ತ ಚಿಕಿತ್ಸೆ ನೀಡುವ ಬದಲು ಕಾರ್ಡ್‌ಬೋರ್ಡ್ ರಟ್ಟು ಕಟ್ಟಿ ಮನೆಗೆ ಕಳುಹಿಸಿದ ಘಟನೆ ವ್ಯಾಪಕ ಆಕ್ರೋಶಕ್ಕೆ...

ಎಸ್‌ಐಆರ್ ಅಂತಿಮ ಪಟ್ಟಿ 192 ಕ್ಷೇತ್ರಗಳಲ್ಲಿ ಗೆಲುವಿನ ಅಂತರಕ್ಕಿಂತ ಹೆಚ್ಚು ಮತಗಳು ಡಿಲೀಟ್ ಕಾಂಗ್ರೆಸ್- 115, ಬಿಜೆಪಿ-58 ಹಾಗೂ ಜೆಡಿ(ಎಸ್)ನ 19 ಕ್ಷೇತ್ರಗಳಲ್ಲಿ ಭಾರೀ ವ್ಯತ್ಯಾಸ

ಜನಪರ ಸಂಘಟನೆಗಳು ಮತ್ತು ಜಾತ್ಯತೀತ ಪಕ್ಷಗಳ ವಿರೋಧ, ಆತಂಕ ಹಾಗೂ ಆರೋಪಗಳ ಹೊರತಾಗಿಯೂ ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಗಿದಿದೆ. ದಿನಾಂಕ: 2026ರ ಅಕ್ಟೋಬರ್ 27 ರಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತರಾದ ಅನ್ಬುಕುಮಾರ್...

ಉತ್ತರ ಪ್ರದೇಶದಲ್ಲಿ 1.27 ಕೋಟಿ ಹಿಂದೂ ಮತದಾರರ ಹೆಸರು ಅಳಿಸಿದ ಆರೋಪ: ಯೋಗಿ ಆದಿತ್ಯನಾಥ್ ಅವರಿಂದ ದಾಖಲೆ, ದತ್ತಾಂಶ ಕೇಳಿದ ಸ್ವತಂತ್ರ ಆಯೋಗ

ನವದೆಹಲಿ: ಉತ್ತರ ಪ್ರದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸುಮಾರು 1.27 ಕೋಟಿ ಹಿಂದೂ ಮತದಾರರನ್ನು ಪಟ್ಟಿಯಿಂದ ಹೊರಗಿಡಲಾಗಿದೆ ಎಂಬ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೇಳಿಕೆ ಇದೀಗ...

ಐಸಿಜೆಯ ‘ನರಮೇಧ’ ತೀರ್ಪಿಗೆ ರೋಹಿಂಗ್ಯಾ ನಿರಾಶ್ರಿತರಿಂದ ಸ್ವಾಗತ: ತಾಯ್ನಾಡು ಮ್ಯಾನ್ಮಾರ್‌ಗೆ ಮರಳುವ ಇಂಗಿತ

ನವೆಂಬರ್ 19, 2026ರಂದು, ವಿಶ್ವಸಂಸ್ಥೆಯ ಅತ್ಯುನ್ನತ ನ್ಯಾಯಾಲಯವಾದ ಇಂಟರ್‌ನ್ಯಾಷನಲ್ ಕೋರ್ಟ್ ಆಫ್ ಜಸ್ಟೀಸ್ (ಐಸಿಜೆ) ರೋಹಿಂಗ್ಯಾ ಮುಸ್ಲಿಂ ಅಲ್ಪಸಂಖ್ಯಾತರ ವಿರುದ್ಧ ಮ್ಯಾನ್ಮಾರ್ ನರಮೇಧ ನಡೆಸಿದೆ ಎಂದು ಐತಿಹಾಸಿಕ ತೀರ್ಪು ನೀಡಿದೆ. ಅಂತಾರಾಷ್ಟ್ರೀಯ...

‘ಬಸವ ಮಂಟಪ’ ವಿವಾದ: ವಿದೇಶಕ್ಕೆ ತೆರಳಲು ಯತ್ನಿಸಿದ ಲೇಖಕ ರವಿ ಹಂಜ್ ಕೊಚ್ಚಿನ್ ವಿಮಾನ ನಿಲ್ದಾಣದಲ್ಲಿ ವಶಕ್ಕೆ; ಕೃತಿ ಮುಟ್ಟುಗೋಲು, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸಿಎಂ ಡಿಕೆಶಿ ಆದೇಶ

ಬೆಂಗಳೂರು, ನವೆಂಬರ್ 21: 12ನೇ ಶತಮಾನದ ಸಮಾಜ ಸುಧಾರಕ, ವಚನ ಚಳವಳಿಯ ಮುಂಚೂಣಿ ನಾಯಕ ಜಗಜ್ಯೋತಿ ಬಸವಣ್ಣನವರ ಕುರಿತು ಅವಹೇಳನಕಾರಿ ಮತ್ತು ಅವಮಾನಕರ ವಿಚಾರಗಳನ್ನು ಬರೆದಿದ್ದಾರೆ ಎಂಬ ಆರೋಪಕ್ಕೆ ಗುರಿಯಾಗಿರುವ ‘ಬಸವ ಮಂಟಪ’...

ಸ್ಥಳಾಂತರಗೊಂಡ ರೋಹಿಂಗ್ಯಾಗಳ ಸುರಕ್ಷಿತ, ತ್ವರಿತ ವಾಪಸಾತಿಗೆ ಬೆಂಬಲ : ಭಾರತ ಪುನರುಚ್ಚಾರ

ಸ್ಥಳಾಂತರಗೊಂಡ ರೋಹಿಂಗ್ಯಾ ಮುಸ್ಲಿಮರನ್ನು ಮ್ಯಾನ್ಮಾರ್‌ಗೆ ಸುರಕ್ಷಿತವಾಗಿ ಮತ್ತು ಸುಸ್ಥಿರವಾಗಿ ವಾಪಸ್ ಕಳುಹಿಸುವುದಕ್ಕೆ ತನ್ನ ಬೆಂಬಲವನ್ನು ಭಾರತ ಶುಕ್ರವಾರ (ನ.20) ಪುನರುಚ್ಚರಿಸಿದೆ. ಮ್ಯಾನ್ಮಾರ್ ವಿರುದ್ಧದ ನರಮೇಧ ಪ್ರಕರಣದಲ್ಲಿ ಅಂತಾರಾಷ್ಟ್ರೀಯ ನ್ಯಾಯಾಲಯ (ಐಸಿಜೆ) ತನ್ನ ಐತಿಹಾಸಿಕ...

“ತೆರಿಗೆ ಇಳಿಸಿದರೂ ಉದ್ಯಮ ವಲಯ ಸಂಬಳ ಹೆಚ್ಚಿಸಿಲ್ಲ”: ಪ್ರಧಾನಿ ಮೋದಿ ಮಾತುಗಳಲ್ಲೇ ಸಾಬೀತಾಯ್ತು ‘ಟ್ರಿಕಲ್-ಡೌನ್’ ಆರ್ಥಿಕತೆಯ ವೈಫಲ್ಯ!

ಕೇಂದ್ರ ಸರ್ಕಾರವು ಕಾರ್ಪೊರೇಟ್ ತೆರಿಗೆಯನ್ನು ಕಡಿತಗೊಳಿಸಿ ಉದ್ಯಮ ವಲಯಕ್ಕೆ ಭಾರಿ ರಿಯಾಯಿತಿ ನೀಡಿದ್ದರೂ, ಕಂಪನಿಗಳು ತಮ್ಮ ಲಾಭವನ್ನು ಕಾರ್ಮಿಕರೊಂದಿಗೆ ಹಂಚಿಕೊಳ್ಳದೆ ಕೇವಲ ತಮ್ಮ ತಿಜೋರಿ ತುಂಬಿಸಿಕೊಂಡಿವೆ ಎಂಬುದನ್ನು ಕೇಂದ್ರ ಸಾಂಖ್ಯಿಕ ಮತ್ತು ಕಾರ್ಯಕ್ರಮ...

ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 13 ಮಂದಿ ಸಾವು; 346 ಜನರು ಆಸ್ಪತ್ರೆಗೆ ದಾಖಲು, ಹಲವರ ಸ್ಥಿತಿ ಗಂಭೀರ

ಮಣಿಪುರದ ಚಾಂಡೆಲ್ ಜಿಲ್ಲೆಯಲ್ಲಿ ಕಲುಷಿತ ಮದ್ಯ ಸೇವನೆಯಿಂದ ಸಂಭವಿಸಿರುವ ಭೀಕರ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ನಕಲಿ ಮದ್ಯ ಸೇವನೆಯಿಂದ ಮೆಥನಾಲ್ ವಿಷಪೂರಿತಕ್ಕೆ ಒಳಗಾಗಿರುವ ಶಂಕೆಯ ಹಿನ್ನೆಲೆಯಲ್ಲಿ 346ಕ್ಕೂ ಹೆಚ್ಚು ಜನರನ್ನು...

SIR ಪೂರ್ವದ ಮತದಾರರ ಪಟ್ಟಿ ಬಳಕೆ : ರಾಜಸ್ಥಾನ ಪಂಚಾಯತ್ ಸಮರದಲ್ಲಿ ಕಾಂಗ್ರೆಸ್​ಗೆ ಭರ್ಜರಿ ಜಯ; ಬಿಜೆಪಿಗೆ ಹಿನ್ನಡೆ

ರಾಜಸ್ಥಾನದ ಗ್ರಾಮೀಣ ಸ್ಥಳೀಯ ಸಂಸ್ಥೆಗಳ (ಪಂಚಾಯತ್ ಸಮಿತಿ ಮತ್ತು ಜಿಲ್ಲಾ ಪರಿಷತ್) ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ಪ್ರತಿಪಕ್ಷ ಕಾಂಗ್ರೆಸ್ ಭರ್ಜರಿ ಮೇಲುಗೈ ಸಾಧಿಸಿದೆ. ಈ ಫಲಿತಾಂಶವು ರಾಜ್ಯದ ಆಡಳಿತಾರೂಢ ಬಿಜೆಪಿಗೆ ದೊಡ್ಡ ಮಟ್ಟದ...

ಎಸ್‌ಐಆರ್‌ನಲ್ಲಿ ಅಳಿಸುವಿಕೆಗೆ ಗುರುತಿಸಿದ್ದ 1,635 ಮತದಾರರ ಹೆಸರು ಅಂತಿಮ ಪಟ್ಟಿಯಲ್ಲಿ ಮತ್ತೆ ಪ್ರತ್ಯಕ್ಷ; ಹಳೆಯ EPIC ಸಂಖ್ಯೆಗಳೇ ಮುಂದುವರಿಕೆ

ಬೆಂಗಳೂರು: ಮತದಾರರ ಪಟ್ಟಿಯನ್ನು ಶುದ್ಧೀಕರಿಸುವ ಹೆಸರಿನಲ್ಲಿ ನಡೆದಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಗಂಭೀರ ಲೋಪಗಳು ನಡೆದಿರುವುದನ್ನು ದಿ ವೈರ್ ವರದಿ ಬಹಿರಂಗಪಡಿಸಿದೆ. ಬೆಂಗಳೂರಿನಲ್ಲಿ ಎಸ್‌ಐಆರ್ ವೇಳೆ ಗೈರುಹಾಜರಿ, ಸ್ಥಳಾಂತರ, ಮರಣ...