Homeಮುಖಪುಟರೈತರ ಅವಹೇಳನ ಪ್ರಕರಣ: ಮುಂಬೈ ಪೊಲೀಸರ ಎದುರು ಹಾಜರಾದ ನಟಿ ಕಂಗನಾ ರಣಾವತ್

ರೈತರ ಅವಹೇಳನ ಪ್ರಕರಣ: ಮುಂಬೈ ಪೊಲೀಸರ ಎದುರು ಹಾಜರಾದ ನಟಿ ಕಂಗನಾ ರಣಾವತ್

- Advertisement -
- Advertisement -

ರೈತರು ಮತ್ತು ಸಿಖ್ ಸಮುದಾಯದ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ ಆರೋಪದಲ್ಲಿ ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ವಿಚಾರಣೆಯಿಂದ ಹಲವು ಬಾರಿ ತಪ್ಪಿಸಿಕೊಂಡಿದ್ದ ನಟಿ ಇಂದು ಮುಂಬೈ ಪೊಲೀಸರ ಮುಂದೆ ಹಾಜರಾಗಿದ್ದಾರೆ.

ರೈತರ ಪ್ರತಿಭಟನೆ ಪ್ರತ್ಯೇಕತಾವಾದಿ ಗುಂಪಿನೊಂದಿಗೆ ಜೋಡಿಸಲಾಗಿದೆ ಎಂದು ಆರೋಪಿಸಿ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಾಗಿ ತನ್ನ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಸಂಬಂಧಿಸಿದಂತೆ ನಟಿ ಕಂಗನಾ ರಣಾವತ್ ಗುರುವಾರ, ಡಿಸೆಂಬರ್ 23, 2021 ರಂದು ಮುಂಬೈ ಪೊಲೀಸರ ಮುಂದೆ ಹಾಜರಾಗಿದ್ದಾರೆ ಎಂದು ಅವರ ವಕೀಲರು ತಿಳಿಸಿದ್ದಾರೆ.

ರನೌತ್ ಅವರು 11 ಗಂಟೆಗೆ ಖಾರ್ ಪೊಲೀಸ್ ಠಾಣೆಯನ್ನು ತಲುಪಿದರು.

ಸಿಖ್ ಸಂಘಟನೆಯೊಂದರ ದೂರಿನ ಮೇರೆಗೆ ಕಳೆದ ತಿಂಗಳು ಆಕೆಯ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಅವರು ತಮ್ಮ ಹೇಳಿಕೆಯನ್ನು ದಾಖಲಿಸಲು ಪೊಲೀಸ್ ಠಾಣೆಗೆ ಬಂದಿದ್ದಾರೆ ಎಂದು ಕಂಗನಾ ರಣಾವತ್ ಪರ ವಕೀಲ ರಿಜ್ವಾನ್ ಸಿದ್ದಿಕಿ ಹೇಳಿದ್ದಾರೆ.

ಈ ತಿಂಗಳ ಆರಂಭದಲ್ಲಿ ಪೊಲೀಸರು ಕಂಗನಾ ರಣಾವತ್ ವಿಚಾರಣೆಗೆ ಹಾಜರಾಗಬೇಕು ಎಂದು ನೋಟಿಸ್ ನೀಡಿದ್ದರು.

ಇದನ್ನೂ ಓದಿ: ಮರ್ಯಾದೆಗೇಡು ಹತ್ಯೆ: ಸಹೋದರಿಯ ಶಿರಚ್ಛೇದ ಮಾಡಿ ಸೆಲ್ಫಿ ತೆಗೆದುಕೊಂಡ ಬಾಲಕ!

ಪ್ರಧಾನಿ ನರೇಂದ್ರ ಮೋದಿ ವಿವಾದಿತ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿದ ಬಳಿಕ ನಟಿ ಕಂಗನಾ ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಸಿಖ್ ಸಮುದಾಯದ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದರು. 

“ಖಲಿಸ್ತಾನಿ ಭಯೋತ್ಪಾದಕರು ಸರ್ಕಾರದ ಕೈ ಹಿಂಡುತ್ತಿದ್ದಾರೆ. ಆದರೆ ನಾವು ಒಬ್ಬ ಮಹಿಳೆಯನ್ನು ಮರೆಯದಿರೋಣ. ಈ ಹಿಂದೆ ಆ ಒಬ್ಬ ಮಹಿಳೆ ಪ್ರಧಾನಿಯಾಗಿದ್ದಾಗ (ಇಂದಿರಾ ಗಾಂಧಿ) ತನ್ನ ಜೀವವನ್ನು ಲೆಕ್ಕಿಸದೆ ಇವರನ್ನು ಸೊಳ್ಳೆಗಳ ರೀತಿ ಹೊಸಕಿ ಹಾಕಿದ್ದರು. ಆ ಮಹಿಳೆ ದೇಶಕ್ಕೆ ಒಳ್ಳೆಯದು ಮಾಡದಿದ್ದರೂ ಸಹ ಇವರನ್ನು ತನ್ನ ಕಾಲಡಿಯಲ್ಲಿ ಹೊಸಕಿ ಹಾಕಿದ್ದರು ಮತ್ತು ದೇಶ ಇಬ್ಭಾಗವಾಗಲು ಬಿಡಲಿಲ್ಲ. ಈಗಲೂ ಆ ಮಹಿಳೆಯನ್ನು ಕಂಡರೆ ಇವರು ನಡುಗುತ್ತಾರೆ. ಇವರಿಗೆ ಅಂಥವರೆ ಬೇಕು” ಎಂದು ಕಂಗನಾ ರೈತರನ್ನು ಅವಮಾನಿಸಿ ಪೋಸ್ಟ್ ಹಾಕಿದ್ದರು.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 295-ಎ ಅಡಿಯಲ್ಲಿ ಸಮುದಾಯದ ಧಾರ್ಮಿಕ ಭಾವನೆಗಳನ್ನು ಉದ್ದೇಶಪೂರ್ವಕವಾಗಿ ಘಾಸಿಗೊಳಿಸಿದ ಆರೋಪದ ಮೇಲೆ ಪೊಲೀಸರು ನಟಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಖಾರ್ ಪೊಲೀಸ್ ಠಾಣೆಯಲ್ಲಿ ತನ್ನ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಅನ್ನು ರದ್ದುಗೊಳಿಸುವಂತೆ ಕೋರಿ ನಟಿ ಹೈಕೋರ್ಟ್‌ಗೆ ಮೊರೆ ಹೋಗಿದ್ದರು.


ಇದನ್ನೂ ಓದಿ: ನಾನು ಯಾವುದೇ ಪಕ್ಷಕ್ಕೆ ಸೇರಿಲ್ಲ; ರಾಷ್ಟ್ರೀಯವಾದಿಗಳ ಪರ ಕೆಲಸ ಮಾಡುವೆ: ಕಂಗನಾ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯ ಅಧಿಕೃತ ‘ಎಕ್ಸ್’ ಖಾತೆ ವಿರುದ್ಧ ಎಫ್‌ಐಆರ್‌ ದಾಖಲಿಸಿದ ಚುನಾವಣಾ ಆಯೋಗ

0
ವಿವಿಧ ಗುಂಪುಗಳು ಮತ್ತು ವರ್ಗಗಳ ನಡುವೆ ದ್ವೇಷ ಹರಡಲು ಮತ್ತು ಉತ್ತೇಜಿಸಲು ಯತ್ನಿಸುತ್ತಿರುವ ಆರೋಪದ ಮೇಲೆ ಬಿಜೆಪಿಯ ಅಧಿಕೃತ ಎಕ್ಸ್ ಖಾತೆ ವಿರುದ್ಧ ಚುನಾವಣಾ ಆಯೋಗ ಎಫ್‌ಐಆರ್‌ನ್ನು ದಾಖಲಿಸಿದೆ. ಈ ಕುರಿತು ಚುನಾವಣಾ ಆಯೋಗ...