Homeಮುಖಪುಟರೈತರ ಅವಹೇಳನ ಪ್ರಕರಣ: ಮುಂಬೈ ಪೊಲೀಸರ ಎದುರು ಹಾಜರಾದ ನಟಿ ಕಂಗನಾ ರಣಾವತ್

ರೈತರ ಅವಹೇಳನ ಪ್ರಕರಣ: ಮುಂಬೈ ಪೊಲೀಸರ ಎದುರು ಹಾಜರಾದ ನಟಿ ಕಂಗನಾ ರಣಾವತ್

- Advertisement -
- Advertisement -

ರೈತರು ಮತ್ತು ಸಿಖ್ ಸಮುದಾಯದ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ ಆರೋಪದಲ್ಲಿ ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ವಿಚಾರಣೆಯಿಂದ ಹಲವು ಬಾರಿ ತಪ್ಪಿಸಿಕೊಂಡಿದ್ದ ನಟಿ ಇಂದು ಮುಂಬೈ ಪೊಲೀಸರ ಮುಂದೆ ಹಾಜರಾಗಿದ್ದಾರೆ.

ರೈತರ ಪ್ರತಿಭಟನೆ ಪ್ರತ್ಯೇಕತಾವಾದಿ ಗುಂಪಿನೊಂದಿಗೆ ಜೋಡಿಸಲಾಗಿದೆ ಎಂದು ಆರೋಪಿಸಿ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಾಗಿ ತನ್ನ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಸಂಬಂಧಿಸಿದಂತೆ ನಟಿ ಕಂಗನಾ ರಣಾವತ್ ಗುರುವಾರ, ಡಿಸೆಂಬರ್ 23, 2021 ರಂದು ಮುಂಬೈ ಪೊಲೀಸರ ಮುಂದೆ ಹಾಜರಾಗಿದ್ದಾರೆ ಎಂದು ಅವರ ವಕೀಲರು ತಿಳಿಸಿದ್ದಾರೆ.

ರನೌತ್ ಅವರು 11 ಗಂಟೆಗೆ ಖಾರ್ ಪೊಲೀಸ್ ಠಾಣೆಯನ್ನು ತಲುಪಿದರು.

ಸಿಖ್ ಸಂಘಟನೆಯೊಂದರ ದೂರಿನ ಮೇರೆಗೆ ಕಳೆದ ತಿಂಗಳು ಆಕೆಯ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಅವರು ತಮ್ಮ ಹೇಳಿಕೆಯನ್ನು ದಾಖಲಿಸಲು ಪೊಲೀಸ್ ಠಾಣೆಗೆ ಬಂದಿದ್ದಾರೆ ಎಂದು ಕಂಗನಾ ರಣಾವತ್ ಪರ ವಕೀಲ ರಿಜ್ವಾನ್ ಸಿದ್ದಿಕಿ ಹೇಳಿದ್ದಾರೆ.

ಈ ತಿಂಗಳ ಆರಂಭದಲ್ಲಿ ಪೊಲೀಸರು ಕಂಗನಾ ರಣಾವತ್ ವಿಚಾರಣೆಗೆ ಹಾಜರಾಗಬೇಕು ಎಂದು ನೋಟಿಸ್ ನೀಡಿದ್ದರು.

ಇದನ್ನೂ ಓದಿ: ಮರ್ಯಾದೆಗೇಡು ಹತ್ಯೆ: ಸಹೋದರಿಯ ಶಿರಚ್ಛೇದ ಮಾಡಿ ಸೆಲ್ಫಿ ತೆಗೆದುಕೊಂಡ ಬಾಲಕ!

ಪ್ರಧಾನಿ ನರೇಂದ್ರ ಮೋದಿ ವಿವಾದಿತ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿದ ಬಳಿಕ ನಟಿ ಕಂಗನಾ ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಸಿಖ್ ಸಮುದಾಯದ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದರು. 

“ಖಲಿಸ್ತಾನಿ ಭಯೋತ್ಪಾದಕರು ಸರ್ಕಾರದ ಕೈ ಹಿಂಡುತ್ತಿದ್ದಾರೆ. ಆದರೆ ನಾವು ಒಬ್ಬ ಮಹಿಳೆಯನ್ನು ಮರೆಯದಿರೋಣ. ಈ ಹಿಂದೆ ಆ ಒಬ್ಬ ಮಹಿಳೆ ಪ್ರಧಾನಿಯಾಗಿದ್ದಾಗ (ಇಂದಿರಾ ಗಾಂಧಿ) ತನ್ನ ಜೀವವನ್ನು ಲೆಕ್ಕಿಸದೆ ಇವರನ್ನು ಸೊಳ್ಳೆಗಳ ರೀತಿ ಹೊಸಕಿ ಹಾಕಿದ್ದರು. ಆ ಮಹಿಳೆ ದೇಶಕ್ಕೆ ಒಳ್ಳೆಯದು ಮಾಡದಿದ್ದರೂ ಸಹ ಇವರನ್ನು ತನ್ನ ಕಾಲಡಿಯಲ್ಲಿ ಹೊಸಕಿ ಹಾಕಿದ್ದರು ಮತ್ತು ದೇಶ ಇಬ್ಭಾಗವಾಗಲು ಬಿಡಲಿಲ್ಲ. ಈಗಲೂ ಆ ಮಹಿಳೆಯನ್ನು ಕಂಡರೆ ಇವರು ನಡುಗುತ್ತಾರೆ. ಇವರಿಗೆ ಅಂಥವರೆ ಬೇಕು” ಎಂದು ಕಂಗನಾ ರೈತರನ್ನು ಅವಮಾನಿಸಿ ಪೋಸ್ಟ್ ಹಾಕಿದ್ದರು.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 295-ಎ ಅಡಿಯಲ್ಲಿ ಸಮುದಾಯದ ಧಾರ್ಮಿಕ ಭಾವನೆಗಳನ್ನು ಉದ್ದೇಶಪೂರ್ವಕವಾಗಿ ಘಾಸಿಗೊಳಿಸಿದ ಆರೋಪದ ಮೇಲೆ ಪೊಲೀಸರು ನಟಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಖಾರ್ ಪೊಲೀಸ್ ಠಾಣೆಯಲ್ಲಿ ತನ್ನ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಅನ್ನು ರದ್ದುಗೊಳಿಸುವಂತೆ ಕೋರಿ ನಟಿ ಹೈಕೋರ್ಟ್‌ಗೆ ಮೊರೆ ಹೋಗಿದ್ದರು.


ಇದನ್ನೂ ಓದಿ: ನಾನು ಯಾವುದೇ ಪಕ್ಷಕ್ಕೆ ಸೇರಿಲ್ಲ; ರಾಷ್ಟ್ರೀಯವಾದಿಗಳ ಪರ ಕೆಲಸ ಮಾಡುವೆ: ಕಂಗನಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...