Homeಮುಖಪುಟರೈತರ ಅವಹೇಳನ: ದೆಹಲಿ ವಿಧಾನಸಭಾ ಪ್ಯಾನಲ್ ಮುಂದೆ ಹಾಜರಾಗದ ಕಂಗನಾ

ರೈತರ ಅವಹೇಳನ: ದೆಹಲಿ ವಿಧಾನಸಭಾ ಪ್ಯಾನಲ್ ಮುಂದೆ ಹಾಜರಾಗದ ಕಂಗನಾ

- Advertisement -
- Advertisement -

ಸಾಮಾಜಿಕ ಮಾಧ್ಯಮಗಳಲ್ಲಿ ರೈತರು ಮತ್ತು ಸಿಖ್ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಬಾಲಿವುಡ್ ನಟಿ ಕಂಗನಾ ರಣಾವತ್ ಇಂದು ದೆಹಲಿ ವಿಧಾನಸಭೆಯ ಶಾಂತಿ ಮತ್ತು ಸೌಹಾರ್ದತೆ ಸಮಿತಿ ಮುಂದೆ ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ ಸಮಯ ಕೋರಿರುವ ನಟಿ ಪ್ಯಾನಲ್ ಮುಂದೆ ಹಾಜರಾಗದ ಕಾರಣ ಸಭೆ ರದ್ದಾಗಿದೆ.

ಕಂಗನಾರವರು ಸಿಖ್ಖರನ್ನು ಖಲಿಸ್ತಾನಿ ಭಯೋತ್ಪಾದಕರು ಎಂದು ಕರೆಯುವ ಮೂಲಕ ಇಡೀ ಸಿಖ್ ಸಮುದಾಯವನ್ನು ಅವಮಾನಿಸಿದ್ದಾರೆ. ಇದು ಕೋಮು ಸೌಹಾರ್ದತೆಗೆ ದೊಡ್ಡ ಧಕ್ಕೆಯಾಗಿದ್ದು ಡಿಸೆಂಬರ್ 06 ರಂದು ಆಮ್ ಆದ್ಮಿ ಪಕ್ಷದ ಮುಖಂಡ ಮತ್ತು ಶಾಸಕ ರಾಘವ್ ಚಡ್ಡಾ ನೇತೃತ್ವದ ಸಮಿತಿ ಮುಂದೆ ಹಾಜರಾಗುವಂತೆ ಸಮನ್ಸ್ ನೀಡಲಾಗಿತ್ತು.

ವೈಯಕ್ತಿಕ ಮತ್ತು ವೃತ್ತಿ ಸಂಬಂಧಿತ ಕೆಲಸಗಳಿರುವ ಕಾರಣದಿಂದ ಪ್ಯಾನಲ್ ಮುಂದೆ ಹಾಜರಾಗಲು ಸಾಧ್ಯವಾಗುವುದಿಲ್ಲ. ಹೆಚ್ಚಿನ ಸಮಯ ಕೊಡಿ ಎಂದು ಕಂಗನಾ ಪರ ವಕೀಲರು ಪ್ಯಾನೆಲ್‌ಗೆ ಪತ್ರ ಬರೆದಿದ್ದಾರೆ. ಸಭೆ ರದ್ದುಗೊಳಿಸಿರುವ ರಾಘವ್ ಚಡ್ಡಾ, ಸಮಿತಿಯು ಈ ಕುರಿತು ತೀರ್ಮಾನ ತೆಗೆದುಕೊಳ್ಳಲಿದೆ ಎಂದಿದ್ದಾರೆ.

ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಪ್ರಧಾನಿ ನರೇಂದ್ರ ಮೋದಿಯವರ ಘೋಷಣೆಯ ನಂತರ ಕಂಗನಾ ಅವರು ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಸಿಖ್ ಸಮುದಾಯದ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದರು. 

“ಖಲಿಸ್ತಾನಿ ಭಯೋತ್ಪಾದಕರು ಸರ್ಕಾರದ ಕೈ ಹಿಂಡುತ್ತಿದ್ದಾರೆ. ಆದರೆ ನಾವು ಒಬ್ಬ ಮಹಿಳೆಯನ್ನು ಮರೆಯದಿರೋಣ. ಈ ಹಿಂದೆ ಆ ಒಬ್ಬ ಮಹಿಳೆ ಪ್ರಧಾನಿಯಾಗಿದ್ದಾಗ (ಇಂದಿರಾ ಗಾಂಧಿ) ತನ್ನ ಜೀವವನ್ನು ಲೆಕ್ಕಿಸದೆ ಇವರನ್ನು ಸೊಳ್ಳೆಗಳ ರೀತಿ ಹೊಸಕಿ ಹಾಕಿದ್ದರು. ಆ ಮಹಿಳೆ ದೇಶಕ್ಕೆ ಒಳ್ಳೆಯದು ಮಾಡದಿದ್ದರೂ ಸಹ ಇವರನ್ನು ತನ್ನ ಕಾಲಡಿಯಲ್ಲಿ ಹೊಸಕಿ ಹಾಕಿದ್ದರು ಮತ್ತು ದೇಶ ಇಬ್ಭಾಗವಾಗಲು ಬಿಡಲಿಲ್ಲ. ಈಗಲೂ ಆ ಮಹಿಳೆಯನ್ನು ಕಂಡರೆ ಇವರು ನಡುಗುತ್ತಾರೆ. ಇವರಿಗೆ ಅಂಥವರೆ ಬೇಕು” ಎಂದು ಕಂಗನಾ ರೈತರನ್ನು ಅವಮಾನಿಸಿ ಪೋಸ್ಟ್ ಹಾಕಿದ್ದರು.

ಇದಕ್ಕೆ ವಿರೋಧ ವ್ಯಕ್ತಪಡಿಸಿ ದೆಹಲಿ ಸಿಖ್ ಗುರುದ್ವಾರ ನಿರ್ವಹಣಾ ಸಮಿತಿ (ಡಿಎಸ್‌ಜಿಎಂಸಿ) ಮತ್ತು ಶಿರೋಮಣಿ ಅಕಾಲಿದಳದ ನಾಯಕ ಮಂಜಿಂದರ್ ಸಿಂಗ್ ಸಿರ್ಸಾ ಅವರು 1984 ರ ಸಿಖ್-ವಿರೋಧಿ ದಂಗೆಗಳನ್ನು ಉಲ್ಲೇಖಿಸಿ ಕಂಗನಾ “ಉದ್ದೇಶಪೂರ್ವಕವಾಗಿ ಸಿಖ್ಖರನ್ನು ಪ್ರಚೋದಿಸುತ್ತಿದ್ದಾರೆ” ಎಂದು ಆರೋಪಿಸಿ ಮುಂಬೈನ ಖಾರ್‌ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರು. ಅದರ ಆಧಾರದಲ್ಲಿ FIR ನೊಂದಾಯಿಸಲಾಗಿದೆ.


ಇದನ್ನೂ ಓದಿ: ಮರ್ಯಾದೆಗೇಡು ಹತ್ಯೆ: ಸಹೋದರಿಯ ಶಿರಚ್ಛೇದ ಮಾಡಿ ಸೆಲ್ಫಿ ತೆಗೆದುಕೊಂಡ ಬಾಲಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...