Homeಕರ್ನಾಟಕಕುವೆಂಪು, ಕೆಂಪೇಗೌಡರಿಗೆ ಅವಮಾನ ಆರೋಪ; ಕಾಳಿ ಸ್ವಾಮೀಜಿ ಮುಖಕ್ಕೆ ಮಸಿ ಬಳಿದು ಆಕ್ರೋಶ

ಕುವೆಂಪು, ಕೆಂಪೇಗೌಡರಿಗೆ ಅವಮಾನ ಆರೋಪ; ಕಾಳಿ ಸ್ವಾಮೀಜಿ ಮುಖಕ್ಕೆ ಮಸಿ ಬಳಿದು ಆಕ್ರೋಶ

- Advertisement -
- Advertisement -

ರಾಷ್ಟ್ರಕವಿ ಕುವೆಂಪು ಹಾಗೂ ಬೆಂಗಳೂರು ನಿರ್ಮಾತೃ ಕೆಂಪೇಗೌಡರ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ ಆರೋಪದ ಮೇಲೆ ಕಾಳಿ ಸ್ವಾಮಿ (ಋಷಿ ಕುಮಾರ ಸ್ವಾಮೀಜಿ) ಅವರಿಗೆ ಮಸಿ ಬಳಿಯಲಾಗಿದೆ.

ಶಿವರಾಮೇಗೌಡ ಬಣದ ಕನ್ನಡ ರಕ್ಷಣಾ ವೇದಿಕೆಯ ಕಾರ್ಯಕರ್ತರು ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಲ್ಲೇಶ್ವರದ ಗಂಗಮ್ಮ ದೇವಾಲಯಕ್ಕೆ ಋಷಿಕುಮಾರ ಸ್ವಾಮಿ ಬಂದಿದ್ದ ವೇಳೆ ಕನ್ನಡ ಪರ ಸಂಘಟನೆಯ ಕಾರ್ಯಕರ್ತರು ಋಷಿಕುಮಾರ ಸ್ವಾಮೀಜಿಗೆ ಧಿಕ್ಕಾರ ಕೂಗಿ ಮುಖಕ್ಕೆ ಕಪ್ಪುಮಸಿ ಬಳಿದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನಾಡಗೀತೆಯ ಕುರಿತು ಋಷಿಕುಮಾರ ಸ್ವಾಮೀಜಿ ಅವಹೇಳನಕಾರಿಯಾಗಿ ಮಾತನಾಡಿದ್ದಾರೆಂದು ಆರೋಪಿಸಲಾಗಿದೆ. ಘಟನೆಯನ್ನು ಶಿವರಾಮೇಗೌಡರ ಬಣದ ಕರವೇ ಸಮರ್ಥಿಸಿಕೊಂಡಿದೆ.

ಘಟನೆ ಕುರಿತು ಕಾಳಿ ಸ್ವಾಮೀಜಿ ಪ್ರತಿಕ್ರಿಯೆ ನೀಡಿದ್ದು, “ನಾನು ಯಾರನ್ನು ಅವಮಾನಿಸಿಲ್ಲ. ದಾಖಲೆಗಳಿದ್ದರೆ ಕೋರ್ಟ್‌ನಲ್ಲಿ ದಾವೆ ಹೂಡಲಿ. ಇದರಿಂದ ನಾನೇನು ವಿಚಲಿತನಾಗಿಲ್ಲ” ಎಂದಿದ್ದಾರೆ.

ಋಷಿ ಕುಮಾರ ಸ್ವಾಮೀಜಿ ಕಾಲಿಗೆ ಪೆಟ್ಟು ಬಿದ್ದಿದೆ ಎಂದು ಆರೋಪಿಸಲಾಗಿದ್ದು, ಖಾಸಗಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದಾರೆ ಎನ್ನಲಾಗಿದೆ.

“ನಾಡಗೀತೆಯನ್ನು ಅನುಸರಿಸುತ್ತಿರುವ ಕನ್ನಡಪರ ಹೋರಾಟಗಾರರನ್ನು ಗುಂಡಿಕ್ಕಿ ಕೊಲ್ಲಬೇಕು” ಎಂದು ಕಾಳಿ ಸ್ವಾಮೀಜಿ ಹೇಳಿದ್ದರೆಂದು ದೂರಲಾಗುತ್ತಿದೆ.

ಸ್ವಾಮೀಜಿ ಹೇಳಿದ್ದೇನು?

“ಕಾಳಿಕಾ ಸೇನೆಯ ವತಿಯಿಂದ ಮಲ್ಲೇಶ್ವರಂನಲ್ಲಿ ಗಂಗಮ್ಮ ದೇವಾಲಯದಲ್ಲಿ ವಿಶೇಷ ಪೂಜೆ ಇತ್ತು. ಪೂಜೆ ಬಹಳ ಚೆನ್ನಾಗಿ ಆಯ್ತು. ನನಗೆ ಬಹಳ ಖುಷಿ ಆಯ್ತು. ಪೂಜೆ ಮುಗಿಸಿ ಹೊರ ಬರುವ ವೇಳೆ ಕೆಲವರು ಬಂದು ನೀವು ಕುವೆಂಪು ಅವರನ್ನು ಮತ್ತು ಕನ್ನಡ ಪಡೆಗಳನ್ನು ನಿಂದಿಸಿದ್ದೀರಾ ಎಂದು ಸೃಷ್ಟಿ ಮಾಡಿಕೊಂಡು ನನ್ನ ಬಳಿ ಜಗಳ ಮಾಡಿದ್ರು. ಕುವೆಂಪು ಅವರನ್ನು ಕನ್ನಡ ಪಡೆಗಳನ್ನು ನಾನು ಯಾವತ್ತಿಗೂ ನಿಂದಿಸಿಲ್ಲ. ನಿಮ್ಮ ಬಳಿ ದಾಖಲೆಗಳಿದ್ರೆ ಅದನ್ನು ತರಬೇಕು. ಅದನ್ನು ಬಿಟ್ಟು ಕಪ್ಪು ಮಸಿ ಬಳಿದ್ರೆ ಹೇಗೆ” ಎಂದು ಕಾಳಿ ಸ್ವಾಮೀಜಿ ಕೇಳಿದ್ದಾರೆ.

ಇದನ್ನೂ ಓದಿರಿ: ದೇಶದಲ್ಲಿ ಹಿಜಾಬ್‌ ನಿಷೇಧಿಸಬೇಕು: ಕಾಳಿ ಸ್ವಾಮೀಜಿ ಮತ್ತೆ ವಿವಾದಾತ್ಮಕ ಹೇಳಿಕೆ

ವಿವಾದಗಳನ್ನು ಸೃಷ್ಟಿಸುತ್ತಿರುವ ಕಾಳಿ ಸ್ವಾಮೀಜಿ

ಕನ್ನಡ ನಾಡನ್ನು ರಾಷ್ಟ್ರಕವಿ ಕುವೆಂಪು ಅವರು “ಸರ್ವ ಜನಾಂಗದ ಶಾಂತಿ ತೋಟ” ಎಂದು ಕರೆದಿದ್ದಾರೆ. ನಾಡಗೀತೆಯ ಎಲ್ಲ ಜನವರ್ಗವನ್ನು ಸೌಹಾರ್ದತೆಯಿಂದ ಬದುಕಲು ಪ್ರೇರೇಪಿಸುತ್ತದೆ. ಅನೇಕ ಮಹನೀಯರು ಇದನ್ನೇ ಸಾರಿದ್ದಾರೆ. ಆದರೆ ಕಾಳಿ ಸ್ವಾಮೀಜಿ ಒಂದಲ್ಲ ಒಂದು ವಿವಾದವನ್ನು ಸೃಷ್ಟಿಸುತ್ತಾ “ಸರ್ವಜನಾಂಗದ ಶಾಂತಿಯ ತೋಟ”ವನ್ನು ಹದಗೆಡಿಸುತ್ತಿರುವುದು ಮತ್ತೆ ಮತ್ತೆ ಸಾಬೀತಾಗುತ್ತಿದೆ. ಹಿಂದೂ ಮುಸ್ಲಿಂ ಸಮುದಾಯದ ನಡುವೆ ಬೆಂಕಿ ಹಚ್ಚುವ ಕೆಲಸವನ್ನು ಕಾಳಿ ಸ್ವಾಮೀಜಿ ಎಗ್ಗಿಲ್ಲದೆ ಮಾಡುತ್ತಿರುವುದು ಕಂಡು ಬರುತ್ತಿದೆ ಎಂಬ ಆರೋಪಗಳು ಬರುತ್ತಿದ್ದರೂ ಸರ್ಕಾರ ಯಾವುದೇ ಕ್ರಮ ಜರುಗಿಸುತ್ತಿಲ್ಲ.

“ಬಾಬ್ರಿ ಮಸೀದಿಯಂತೆ ಶ್ರೀರಂಗಪಟ್ಟಣದ ಮಸೀದಿಯನ್ನೂ ಕೆಡವಬೇಕು” ಎಂದು ಕಾಳಿ ಸ್ವಾಮೀಜಿ ಹೇಳಿಕೆ ನೀಡಿ ಸಮಾಜದ ಸ್ವಾಸ್ಥ್ಯ ಹಾಳು ಮಾಡುವ ಕೆಲಸ ಮಾಡಿದ್ದರು. ಪ್ರಕರಣ ಕೂಡ ದಾಖಲಾಗಿತ್ತು. ನಂತರದಲ್ಲೂ ಕೋಮುದ್ವೇಷವನ್ನು ಮುಂದುವರಿಸಿದ ಸ್ವಾಮೀಜಿ, “ಅದಾನ್‌ ವಿರುದ್ಧ ಸುಪ್ರಬಾತ” ಎಂಬ ವಿವಾದದಲ್ಲೂ ಪಾಲ್ಗೊಂಡಿದ್ದರು. “ಹಲಾಲ್‌ ಕಟ್‌ಗೆ ವಿರೋಧ ವ್ಯಕ್ತಪಡಿಸಿ ಜಟ್ಕಾ ಕಟ್‌” ಎಂದು ಕೋಳಿಯನ್ನು ಕೊಯ್ದು ಪ್ರಚಾರ ಪಡೆದಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...