Homeಮುಖಪುಟರಾಷ್ಟ್ರಕವಿ ಕುವೆಂಪುರವರಿಗೆ ಅವಮಾನ: ರೋಹಿತ್ ಚಕ್ರತೀರ್ಥ ವಿರುದ್ಧ ದೂರು ದಾಖಲು

ರಾಷ್ಟ್ರಕವಿ ಕುವೆಂಪುರವರಿಗೆ ಅವಮಾನ: ರೋಹಿತ್ ಚಕ್ರತೀರ್ಥ ವಿರುದ್ಧ ದೂರು ದಾಖಲು

- Advertisement -
- Advertisement -

ರಾಷ್ಟ್ರಕವಿ ಕುವೆಂಪು ಅವರು ಬರೆದ ನಾಡಗೀತೆಯನ್ನು ಗೇಲಿ ಮಾಡಿ, ವಿಕೃತಗೊಳಿಸಿ, ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ರೋಹಿತ್ ಚಕ್ರತೀರ್ಥ ಮತ್ತು ಲಕ್ಷಣ ಆಕಾಶೆ ಕಾರ್ಕಳ ಎಂಬುವವರ ವಿರುದ್ಧ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಲಾಗಿದೆ.

ಬೆಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷರಾದ ಎ.ಪಿ ರಂಗನಾಥ್, ವಕೀಲರಾದ ಕೆ.ಎನ್ ಜಗದೀಶ್ ಕುಮಾರ್, ಹರಿರಾಮ್ ಮತ್ತು ಸೂರ್ಯ ಮುಕುಂದರಾಜ್‌ರವರು ಇಂದು ಬೆಂಗಳೂರು ಪೊಲೀಸ್ ಆಯುಕ್ತರಾದ ಪ್ರತಾಪ ರೆಡ್ಡಿಯವರಿಗೆ ದೂರು ಸಲ್ಲಿಸಿದ್ದಾರೆ.

2017 ರಲ್ಲಿ ಜಯ ಭಾರತ ಜನನಿಯ ತುನುಜಾತೆ ಎಂದು ಆರಂಭವಾಗುವ ನಾಡಗೀತೆಯನ್ನು ತಿರುಚಿ ಅವಮಾನಕಾರಿ ರೀತಿಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿದೆ. ಅದು ಈಗಲೂ ಕೂಡ ಹರಿದಾಡುತ್ತಿದ್ದು ರಾಷ್ಟ್ರಕವಿ ಕುಂವೆಂಪು ಮತ್ತು ಕನ್ನಡ ನಾಡಿಗೆ ಅವಮಾನ ಮಾಡಲಾಗುತ್ತಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ನಾಡಗೀತೆಯಲ್ಲಿ ಕನ್ನಡ ಭಾಷೆ, ಕಲೆ, ಸಾಹಿತ್ಯ, ಜನಜೀವನ ಮತ್ತು ಕರ್ನಾಟಕದ ಸಾಂಸ್ಕೃತಿಕ ವೈಭವವನ್ನು ಅತ್ಯಂತ ಅಭಿಮಾನದಿಂದ ಕಟ್ಟಿಕೊಡಲಾಗಿದೆ. ಈ ಕಾರಣಕ್ಕೆ ಕರ್ನಾಟಕ ಸರ್ಕಾರ ಇದನ್ನು ನಾಡಗೀತೆಯಾಗಿ ಅಂಗೀಕರಿಸಿದೆ. ಇಂತಹ ನಾಡಗೀತೆಗೆ ರೋಹಿತ್ ಚಕ್ರತೀರ್ಥ ಎಂಬಾತ ಅವಮಾನ ಮಾಡಿ, ಅಸಡ್ಡೆ, ಅಸಹನೆ, ಗೇಲಿಗೆ ಒಳಪಡಿಸಿರುವುದು ಕನ್ನಡಿಗರಿಗೆ ಮತ್ತು ರಾಜ್ಯಕ್ಕೆ ಮಾಡಿದ ಅಪಮಾನ ಮಾಡಿದಂತಾಗಿದೆ ಎಂದು ದೂರಲಾಗಿದೆ.

ರೋಹಿತ್ ಚಕ್ರತೀರ್ಥ ಮತ್ತು ಲಕ್ಷಣ ಆಕಾಶೆ ಕಾರ್ಕಳ ಎಂಬುವವರ ಬರಹಗಳು ಕೂಡ ನಾಡಿನ ಜನತೆಯ ಸಹನೆ, ಸೌಹಾರ್ದತೆಯನ್ನು ಕೆಡಿಸುವಂತಹ ಉದ್ದೇಶದಿಂದಲೇ ಬರೆಯಲಾಗಿದೆ. ಹಿಂಸೆ ಪ್ರಚೋದಿಸುವಂತಿವೆ. ಹಾಆಗಿ ಈ ಇಬ್ಬರೂ ಸಮಾಜಘಾತುಕರ ವಿರುದ್ಧ ಐಪಿಸಿ ಸೆಕ್ಷನ್ 505(2)ರ ಪ್ರಕಾರ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಮನವಿ ಮಾಡಲಾಗಿದೆ.

ಇದನ್ನೂ ಓದಿ: ಪಠ್ಯ ಪರಿಶೀಲನೆಗೆ ಚಕ್ರತೀರ್ಥ: ನಾಡಗೀತೆಗೆ ಅವಮಾನ ಮಾಡಿದ್ದ ಪೋಸ್ಟ್‌ ಮತ್ತೆ ವೈರಲ್

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. ಇಲ್ಲಿ ಜಗದೀಶ್ ಅನ್ನೋರು ವಕೀಲ ಸಂಘ ,ಬಾರ್ ಕೌನ್ಸಿಲ್ ನ ಮಾನ್ಯತೆಯಿಂದ ಹೊರಗೆ ಹಾಕಲಾಗಿದೆ ,ಅಂತಾದ್ರಲ್ಲಿ ಈತನನ್ನು ವಕೀಲ ಅನ್ನೋದು ಎಷ್ಟು ಸರಿ ನಗರ ನಕ್ಸಲ್ ಮೀಡಿಯಾ ದವರೇ

LEAVE A REPLY

Please enter your comment!
Please enter your name here

- Advertisment -

Must Read

ಮುಸ್ಲಿಮರ ಬಗ್ಗೆ ಅವಹೇಳನಾಕಾರಿಯಾಗಿ ಅನಿಮೇಟೆಡ್ ವೀಡಿಯೊ ಹಂಚಿಕೊಂಡ ಬಿಜೆಪಿ: ತರಾಟೆಗೆ ತೆಗದುಕೊಂಡ ಎಕ್ಸ್‌ ಬಳಕೆದಾರರು

0
ಮುಸ್ಲಿಮರ ಬಗ್ಗೆ ಕೆಟ್ಟದಾಗಿ ಬಿಂಬಿಸುವ ಅನಿಮೇಟೆಡ್ ವೀಡಿಯೊವೊಂದನ್ನು ಬಿಜೆಪಿ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, ವ್ಯಾಪಕ ಟೀಕೆಗೆ ಗುರಿಯಾಗಿದೆ. ಎಚ್ಚರ..ಎಚ್ಚರ..ಎಚ್ಚರ.. ಎಂಬ ತಲೆ ಬರಹದಲ್ಲಿ ಬಿಜೆಪಿ ವಿಡಿಯೋವನ್ನು ಹಂಚಿಕೊಂಡಿದ್ದು, ಇದರಲ್ಲಿ ರಾಹುಲ್‌...