Homeಮುಖಪುಟರಾಷ್ಟ್ರಧ್ವಜಕ್ಕೆ ಅವಮಾನ: BJP ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ವಿರುದ್ದ ಪ್ರಕರಣ

ರಾಷ್ಟ್ರಧ್ವಜಕ್ಕೆ ಅವಮಾನ: BJP ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ವಿರುದ್ದ ಪ್ರಕರಣ

- Advertisement -
- Advertisement -

ಇತ್ತೀಚೆಗಷ್ಟೆ ಮೃತಪಟ್ಟ ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರ ಪಾರ್ಥಿವ ಶರೀರಕ್ಕೆ ಗೌರವ ಸಲ್ಲಿಸುವಾಗ ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ವಿರುದ್ಧ ಪ್ರಕರಣ ದಾಖಲಾಗಿದೆ.

ಆಗಸ್ಟ್ 22 ರಂದು ಮೃತಪಟ್ಟ ಕಲ್ಯಾಣ್ ಸಿಂಗ್ ಅವರಿಗೆ ನಮನ ಸಲ್ಲಿಸುವ ವೇಳೆ ರಾಷ್ಟ್ರ ಧ್ವಜಕ್ಕೆ ನಡ್ಡಾ ಅವರು ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ಸಿಕಂದರ್‌ಪುರದ ನಿವಾಸಿ ಚಂದ್ರ ಕಿಶೋರ್ ಪರಾಶರ್ ಅವರು ಮುಝಫರ್‌ಪುರ ಮುಖ್ಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಸಮ್ಮುಖದಲ್ಲೇ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಬಿಜೆಪಿ

ಕಲ್ಯಾಣ್ ಸಿಂಗ್ ಅವರ ಅಂತಿಮ ದರ್ಶನಕ್ಕೆ ಪ್ರಧಾನಿ ಮೋದಿ ಕೂಡಾ ಆಗಮಿಸಿದ್ದರು. ಈ ವೇಳೆ ಪ್ರಧಾನಿ ಸಮ್ಮುಖದಲ್ಲೇ ಕಲ್ಯಾಣ್‌ ಸಿಂಗ್‌ ಪಾರ್ಥಿವ ಶರೀರದ ಮೇಲೆ ಇದ್ದ ಭಾರತದ ತ್ರಿವರ್ಣ ಧ್ವಜದ ಮೇಲೆ ಬಿಜೆಪಿ ಪಕ್ಷದ ಧ್ವಜವನ್ನು ಹೊದಿಸಲಾಗಿದೆ.

ಇದರ ನಂತರ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡ, ಯುಪಿ ಮುಖ್ಯಮಂತ್ರಿ ಆದಿತ್ಯನಾಥ್‌ ಸೇರಿದಂತೆ ಹಲವರು ಪಾರ್ಥಿವ ಶರೀರಕ್ಕೆ ಗೌರವ ಸಲ್ಲಿಸಿದ್ದರು. ಇದು ಭಾರತದ ತ್ರಿವರ್ಣ ಧ್ವಜಕ್ಕೆ ಮಾಡಿದ ಅಪಮಾನವಾಗಿದೆ ಎಂದು ಆಕ್ರೋಶ ವ್ಯಕ್ತವಾಗಿತ್ತು.

“ಬಿಜೆಪಿ ಇದನ್ನು ಉದ್ದೇಶಪೂರ್ವಕವಾಗಿ ಮಾಡಿದೆ. ನಡ್ಡಾ ಕೃತ್ಯವು ರಾಷ್ಟ್ರ ಧ್ವಜಕ್ಕೆ ಮಾಡಿದ ಅವಮಾನ” ಎಂದು ದೂರುದಾರರು ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ, ಘಟನೆಗೆ ಸಂಬಂಧಿಸಿದ ಕೆಲವು ಚಿತ್ರಗಳನ್ನು ಸಹ ದೂರಿನೊಂದಿಗೆ ಸಲ್ಲಿಸಿದ್ದಾರೆ. ನ್ಯಾಯಾಲಯವು ಪ್ರಕರಣದ ಬಗ್ಗೆ ಗಮನಹರಿಸಬೇಕಿದ್ದು, ವಿಚಾರಣೆಗೆ ದಿನಾಂಕವನ್ನು ಇನ್ನಷ್ಟೇ ನಿಗದಿಪಡಿಸಬೇಕಿದೆ.

ರಾಷ್ಟ್ರಧ್ವಜದ ‘ಧ್ವಜ ಸಂಹಿತೆ’ ಹೇಳುವುದು ಏನು?

  • ಇತರ ಯಾವುದೇ ಧ್ವಜವನ್ನು ರಾಷ್ಟ್ರಧ್ವಜಕ್ಕಿಂತ ಎತ್ತರದಲ್ಲಿ ಹಾರಿಸಬಾರದು.
  • ಇತರ ಯಾವುದೇ ಧ್ವಜವನ್ನು ರಾಷ್ಟ್ರಧ್ವಜದ ಮೇಲೆ ಇಡಬಾರದು.
  • ಇತರ ಯಾವುದೇ ಧ್ವಜವನ್ನು ರಾಷ್ಟ್ರಧ್ವಜಕ್ಕೆ ಸರಿಸಮಾನವಾಗಿ ಇಡಬಾರದು.

ಇದನ್ನೂ ಓದಿ: ಬಾಬರಿ ಮಸೀದಿ ಒಡೆದ ಆರೋಪಿಗಳನ್ನು ಖುಲಾಸೆಗೊಳಿಸಿ ತೀರ್ಪು ನೀಡಿದ್ದ ನ್ಯಾಯಾಧೀಶ ಯುಪಿ ಉಪಲೋಕಾಯುಕ್ತರಾಗಿ ನೇಮಕ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಗೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ: ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

0
ಲೋಕಸಭೆ ಚುನಾವಣೆಯಲ್ಲಿ ಕೊಪ್ಪಳ ಕ್ಷೇತ್ರದ ಟಿಕೆಟ್‌ ಕೈತಪ್ಪಿದ ಹಿನ್ನೆಲೆ ಬಿಜೆಪಿ ವಿರುದ್ದ ಮುನಿಸಿಕೊಂಡಿದ್ದ ಹಾಲಿ ಸಂಸದ ಸಂಗಣ್ಣ ಕರಡಿ ಅವರು ತಮ್ಮ ಸಂಸದ ಸ್ಥಾನಕ್ಕೆ ಮತ್ತು ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ...