Homeಕರ್ನಾಟಕಮಜಾಭಾರತ ಷೋನಲ್ಲಿ ಟ್ರಾನ್ಸ್‌ಜೆಂಡರ್‌ಗಳಿಗೆ ಅಪಹಾಸ್ಯ: ಹೋರಾಟಗಾರ್ತಿ ಆಕ್ಷೇಪ

ಮಜಾಭಾರತ ಷೋನಲ್ಲಿ ಟ್ರಾನ್ಸ್‌ಜೆಂಡರ್‌ಗಳಿಗೆ ಅಪಹಾಸ್ಯ: ಹೋರಾಟಗಾರ್ತಿ ಆಕ್ಷೇಪ

ಅಕ್ಕೈ ಪದ್ಮಶಾಲಿಯವರ ಜೀವನಾಧಾರಿತ ‘ಅಕ್ಕಯ್‌’ ನಾಟಕ ಭಾನುವಾರ ಪ್ರದರ್ಶನ ಕಂಡಿತು. ಲೈಂಗಿಕ ಅಲ್ಪಸಂಖ್ಯಾತ ಸಮುದಾಯದ ನೋವುಗಳು ಎಳೆಎಳೆಯಾಗಿ ರಂಗದ ಮೇಲೆ ತೆರೆದುಕೊಂಡವು...

- Advertisement -
- Advertisement -

ಖಾಸಗಿ ಮನರಂಜನಾ ಮಾಧ್ಯಮವೊಂದರ ‘ಮಜಾಭಾರತ’ ಕಾಮಿಡಿ ಷೋನಲ್ಲಿ ಟ್ರಾನ್ಸ್‌ಜೆಂಡರ್‌ ಸಮುದಾಯವನ್ನು ಅಪಹಾಸ್ಯ ಮಾಡಲಾಗಿದೆ ಎಂದು ಲೈಂಗಿಕ ಅಲ್ಪಸಂಖ್ಯಾತ ಸಮುದಾಯದ ನಾಯಕಿ ಸೌಮ್ಯಾ ಬೇಸರ ವ್ಯಕ್ತಪಡಿಸಿದರು.

ಕಾಜಾಣ ಮತ್ತು ರಂಗಪಯಣ ಸಹಯೋಗದಲ್ಲಿ ಭಾನುವಾರ ಬೆಂಗಳೂರಿನ ರವೀಂದ್ರ ಕಲಾಕೇತ್ರದಲ್ಲಿ ಆಯೋಜಿಸಲಾಗಿದ್ದ ಸಾಮಾಜಿಕ ಹೋರಾಟಗಾರ್ತಿ ಅಕ್ಕಯ್‌ ಪದ್ಮಶಾಲಿಯವರ ಜೀವನ ಆಧಾರಿತ, ಬೇಲೂರು ರಘುನಂದನ್‌ ನಿರ್ದೇಶನದ ‘ಅಕ್ಕಯ್‌’ ಏಕವ್ಯಕ್ತಿ ನಾಟಕ ಪ್ರದರ್ಶನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ಮಜಾಭಾರತ ಷೋನಲ್ಲಿ ಟ್ರಾನ್ಸ್‌ಜೆಂಡರ್‌ಗಳ ವೇಷಧರಿಸಿ ಅಭಿನಯಿಸುತ್ತಾರೆ. ಒಳ್ಳೆಯ ಟಿಆರ್‌ಪಿ ಬಂದಿರುವ ಷೋ ಅದು. ಆದರೆ ಪ್ರಾಮಾಣಿಕವಾಗಿ ನೋಡಿದರೆ ನಮ್ಮ ಸಮುದಾಯದ ಕುರಿತು ಎಷ್ಟು ತಾರತಮ್ಯ ಮಾಡುತ್ತಾರೆಂಬುದು ತಿಳಿಯುತ್ತದೆ; ನಮ್ಮ ಸಮುದಾಯವನ್ನು ಎಷ್ಟು ತಾತ್ಸಾರದಿಂದ ಕಾಣುತ್ತಾರೆ ಎಂಬುದು ಕಾಣುತ್ತದೆ” ಎಂದು ವಿವರಿಸಿದರು.

“ಟ್ರಾನ್ಸ್‌ಜೆಂಡರ್‌ ಸಮುದಾಯದ ಕುರಿತು ಅಭಿಮಾನ, ಗೌರವವಿಲ್ಲ. ಈ ಸಮುದಾಯವನ್ನು ಮೂಲೆಗುಂಪು ಮಾಡಿದ್ದೇವೆ; ಇಂತಹ ಸಮುದಾಯವನ್ನು ಸಮಾಜವನ್ನು ಮುಖ್ಯವಾಹಿನಿಗೆ ತರಬೇಕೆಂಬ ಭಾವನೆ ಯಾರಿಗೂ ಇಲ್ಲ. ಎಲ್ಲರಿಗೂ ಮಜಾ ತಗೆದುಕೊಳ್ಳಬೇಕು, ತಮಾಷೆ ಮಾಡಬೇಕು, ಗೇಲಿ ಮಾಡಬೇಕೆಂಬ ಮನಸ್ಥಿತಿ ಇದೆ” ಎಂದು ಬೇಸರ ವ್ಯಕ್ತಪಡಿಸಿದರು.

“ಮಜಾ ಭಾರತ ತೀರ್ಪುಗಾರರು ಕೂಡ ತಲೆ ಬಗ್ಗಿಸಿಕೊಂಡು ನಗುತ್ತಾರೆ. ಅದೇ ರೀತಿಯಲ್ಲಿ ಇದನ್ನು ನೋಡುವ ಜನರೂ ನಗುತ್ತಾರೆ. ಎಷ್ಟು ಚೆನ್ನಾಗಿ ಅಭಿನಯಿಸುತ್ತಾನೆ ನೋಡು, ನೋಡಲಿಕ್ಕೆ ಥೇಟ್ ಹುಡುಗಿ ಥರನೇ ಇದ್ದಾನೆ ಎಂದು ಬಣ್ಣಿಸುತ್ತಾರೆ. ಅವನು ಎಲ್ಲಿಯಾದರೂ ಸಿಕ್ಕರೆ ಸೆಲ್ಫಿ ತೆಗೆದುಕೊಳ್ಳುತ್ತಾರೆ. ಒಳ್ಳೆಯ ಆಕ್ಟಿಂಗ್ ಮಾಡ್ತೀರಿ. ನಿಮ್ಮ ಅಭಿಮಾನಿ ನಾವು ಅಂತಾರೆ.  ಆದರೆ ತಮ್ಮ ಕುಟುಂಬದಲ್ಲಿನ ಒಂದು ಮಗು ಟ್ರಾನ್ಸ್‌ಜೆಂಡರ್‌ ಆಗಿದ್ದರೆ ಇವರು ಒಪ್ಪಿಕೊಳ್ಳುತ್ತಾರಾ?” ಎಂದು ಪ್ರಶ್ನಿಸಿದರು.

ಇದನ್ನೂ ಓದಿರಿ: ಅಂಬೇಡ್ಕರ್‌‌ ವಿಚಾರಧಾರೆಯೇ ಪ್ರೇರಣೆ: ಮೈಸೂರು ವಿವಿಯಲ್ಲಿ ಪಿಎಚ್‌.ಡಿ ಮಾಡುತ್ತಿರುವ ಟ್ರಾನ್ಸ್‌ಜೆಂಡರ್‌ ಮಹಿಳೆಯ ಮನದಾಳ

“ಸಿನಿಮಾಗಳಲ್ಲೂ ನೋಡಿರುತ್ತೀರಿ. ನಮ್ಮ ಸಮುದಾಯವನ್ನು ಹಾಸ್ಯಕ್ಕಲ್ಲ, ಅಪಹಾಸ್ಯಕ್ಕೆ ಹೆಚ್ಚು ಬಳಸುತ್ತಾರೆ. ಒಂದು ಮೆಸೇಜ್‌‌ ಸಮಾಜಕ್ಕೆ ಕೊಡೋಣ ಎಂಬ ಕಾಳಜಿ ಯಾರಿಗೂ ಇಲ್ಲ. ಆದರೆ ನಿರ್ದೇಶಕ ಬೇಲೂರು ರಘುನಂದನ್‌ ಅವರು ಎಲ್ಲರ ರೀತಿಯಲ್ಲಿ ನಮ್ಮನ್ನು ನೋಡಿ ಒಂದು ಸ್ಮೈಲ್‌ ಮಾಡಿ ಯಾಕೆ ಸುಮ್ಮನಾಗಲಿಲ್ಲ? ಏಕೆ ಈ ಕಥೆಯನ್ನು ಆಯ್ಕೆ ಮಾಡಿಕೊಂಡು ನಾಟಕ ಮಾಡುತ್ತಿದ್ದೀರಿ ಎಂದು ಬೇಲೂರು ರಘುನಂದನ್‌ ಅವರನ್ನು ಎಷ್ಟೋ ಜನ ಕೇಳಿರುತ್ತಾರೆ” ಎಂದು ಅಭಿಪ್ರಾಯಪಟ್ಟರು.

`ಅಕ್ಕಯ್‌’ ನಾಟಕದ ಒಂದು ದೃಶ್ಯ (ಚಿತ್ರ: ತಾಯಿ ಲೋಕೇಶ್‌‌)

ಲೈಂಗಿಕ ಅಲ್ಪಸಂಖ್ಯಾತ ಸಮುದಾಯದ ಹೋರಾಟಗಾರ್ತಿ ಕೋಲ್ಕತ್ತದ ಅನಿಂದ್ಯಾ ಹಾಜ್ರ ಮಾತನಾಡಿ, “ಸಮಾಜದಲ್ಲಿನ ವ್ಯವಸ್ಥೆ ಬದಲಾಗುವವರೆಗೂ ಲೈಂಗಿಕ ಅಲ್ಪಸಂಖ್ಯಾತರು ಹೋರಾಟ ನಡೆಸಬೇಕು. ಹೋರಾಟದ ಮೂಲಕವೇ ಪ್ರತಿರೋಧ ತೋರಬೇಕು. ಲೈಂಗಿಕ ಅಲ್ಪಸಂಖ್ಯಾತರಿಗೆ ಅನುಕಂಪ ಬೇಕಾಗಿಲ್ಲ. ಘನತೆಯಿಂದ ಬದುಕುವ  ಅವಕಾಶ ಕಲ್ಪಿಸಬೇಕು. ಸಮಾಜದ ಮುಖ್ಯವಾಹಿನಿಗೆ ತರಬೇಕು” ಎಂದು ಹೇಳಿದರು.

“ಲೈಂಗಿಕ ಅಲ್ಪಸಂಖ್ಯಾತರ ಬದುಕು ಮತ್ತು ಸಾವಿಗೂ ಮಾನ್ಯತೆ ಇಲ್ಲದಂತಾಗಿದೆ. ಆದರೆ ಇದನ್ನು ಬದಲಾಯಿಸಲು ಶ್ರಮಿಸಬೇಕಿದೆ. ನಮ್ಮ ಅಸ್ತಿತ್ವ ಸ್ಥಾಪನೆಗೆ ರಾಜಕೀಯ ಕ್ಷೇತ್ರವೂ ಪ್ರಮುಖ ವೇದಿಕೆಯಾಗಿದೆ. ಲೈಂಗಿಕ ಅಲ್ಪಸಂಖ್ಯಾತರನ್ನು ಒಳಗೊಳ್ಳುವಂತೆ ಸಮಾಜದ ಮನಸ್ಥಿತಿ ಬದಲಿಸಬೇಕು” ಎಂದರು.

ನಾಟಕದ ನಿರ್ದೇಶಕ ಬೇಲೂರು ರಘುನಂದನ್ ಮಾತನಾಡಿ, “ಅಕ್ಕಯ್‌‌ ಅವರ ಜೀವನದ ಕುರಿತು ಓದಿದರೆ ನಾವು ಅತ್ತು ಬಿಡುತ್ತೇವೆ. ನಮ್ಮಲ್ಲಿ ಕಣ್ಣೀರು ಬರದಿದ್ದರೆ ನಾವು ಮನುಷ್ಯರಾಗಿರುವುದಿಲ್ಲ” ಎಂದು ಅಭಿಪ್ರಾಯಪಟ್ಟರು.

ಪತ್ರಕರ್ತ ರವೀಂದ್ರ ಭಟ್ಟ ಅವರು ಮಾತನಾಡಿ, “ಕುರುಡುನೊಬ್ಬನ ಕಷ್ಟಕ್ಕೆ ನೆರವಾಗದಿದ್ದರೆ ಸಮಾಜ ಕುರುಡಾಗಿರುತ್ತದೆಯೇ ಹೊರತು, ಹುಟ್ಟಿನಿಂದ ಕುರುಡನಾದವನು ನಿಜವಾದ ಕುರುಡನಲ್ಲ. ಹಾಗೆಯೇ ಲೈಂಗಿಕ ಅಲ್ಪಸಂಖ್ಯಾತರನ್ನು ಒಳಗೊಳ್ಳದ ಸಮಾಜ ನಾಗರಿಕವಾಗಿರುವುದಿಲ್ಲ” ಎಂದು ತಿಳಿಸಿದರು.

ಹೋರಾಟಗಾರ್ತಿ ಅಕ್ಕಯ್‌‌ ಪದ್ಮಶಾಲಿ, ಬೆಂಗಳೂರು ಉತ್ತರ ವಿಶ್ವವಿದ್ಯಾನಿಲಯದ ಕುಲಸಚಿವ (ಮೌಲ್ಯಮಾಪನ) ಡಾ.ಡಿ.ಡೊಮಿನಿಕ್‌, ಬೇಲೂರು ತಹಸೀಲ್ದಾರ್‌ ಉಲಿವಾಲ ಮೋಹನ್‌ಕುಮಾರ್‌‌, ಅಕ್ಕಯ್‌ ಪದ್ಮಶಾಲಿ ಅವರ ಸಹೋದರ ಪ್ರದೀಪ್‌ ವೇದಿಕೆ ಕಾರ್ಯಕ್ರಮದಲ್ಲಿ ಹಾಜರಿದ್ದರು.

`ಅಕ್ಕಯ್‌’ ನಾಟಕದ ಒಂದು ದೃಶ್ಯ (ಚಿತ್ರ: ತಾಯಿ ಲೋಕೇಶ್‌‌)

ಅಕ್ಕೈ ಕಥನಕ್ಕೆ ಕಂಬನಿ ಮಿಡಿದ ಪ್ರೇಕ್ಷಕರು; ಅಭಿನೇತ್ರಿಗೆ ಚಪ್ಪಾಳೆಯ ಮಹಾಪೂರ

ಅಕ್ಕಯ್‌ ಪದ್ಮಶಾಲಿಯವರ ಜೀವನ ಕಥನವನ್ನು ರಂಗದ ಮೇಲೆ ನೋಡಿ ಪ್ರೇಕ್ಷಕರು ಕಂಬನಿ ಮಿಡಿದರು. ಅಕ್ಕಯ್‌ ಅವರು ತಮ್ಮ ಜೀವನದುದ್ದಕ್ಕೂ ಕಂಡ ನೋವಿನ ಘಟನೆಗಳು ರಂಗದ ಮೇಲೆ ಎಳೆಎಳೆಯಾಗಿ ತೆರೆದುಕೊಂಡವು. ನಾಗರಿಕ ಸಮಾಜದೊಳಗಿನ ಕ್ರೌರ್ಯ ಮನಸ್ಸುಗಳನ್ನು ದುಃಖದ ಕಡಲಿಗೆ ದೂಡಿತು. ಅಕ್ಕೈ ಪಾತ್ರವಾಗಿ ಅಭಿನಯಿಸಿದ ನಯನ ಸೂಡ ಅವರ ಅಭಿನಯಕ್ಕೆ ಪ್ರೇಕ್ಷಕರು ಭರಪೂರ ಮೆಚ್ಚುಗೆ ಸೂಚಿಸಿದರು. ನಾಟಕ ಮುಗಿದ ಕೆಲವು ನಿಮಿಷಗಳ ಕಾಲ ಇಡೀ ಸಭಾಂಗಣ ಕರತಾಡನ ಮಾಡುತ್ತಲೇ ಇತ್ತು.

ಈ ನಾಟಕ ನಮ್ಮನ್ನು ಮತ್ತೊಂದು ಜಗತ್ತಿಗೆ ಕರೆದುಕೊಂಡು ಹೋಗಿ, ನಾವು ಮಾಡುತ್ತಿರುವ ಅಸಮಾನತೆ, ಅನ್ಯಾಯಗಳನ್ನೂ ಬೊಟ್ಟು ಮಾಡಿ ತೋರಿಸಿತು. ಇದು ಅಕ್ಕಯ್‌‌ ಒಬ್ಬರ ಜೀವನ ಕಥೆಯಲ್ಲ. ಆ ಸಮುದಾಯದ ಲಕ್ಷಾಂತರ ಜಗದೀಶರ ಕಥೆ (ಜಗದೀಶ ಎಂಬುದು ಅಕ್ಕಯ್‌ ಅವರ ಮೊದಲ ಹೆಸರು). ಸಿಗ್ನಲ್‌‌ಗಳಲ್ಲಿ, ರಸ್ತೆ ಬದಿಯಲ್ಲಿ, ಸಾರ್ವಜನಿಕ ಸಾರಿಗೆಗಳಲ್ಲಿ ಅವರನ್ನೂ ಕಂಡು ಕಣ್ಣು ತಪ್ಪಿಸಿ ಹೋಗುವುದನ್ನು ಬಿಟ್ಟು ಅವರು ನಮ್ಮವರೇ ಎಂಬುದು ಕೆಲವರಿಗೆ ಬಂದರೂ ಸಾಕು, ಅವರು ಭಿಕ್ಷೆ ಬೇಡಲು, ಲೈಂಗಿಕ ಕಾರ್ಯಕರ್ತೆಯರಾಗಲು ನಮ್ಮ ಪಾಲು ಇದೆ ಎಂಬ ಸತ್ಯ ಅರಿವಾಗಬೇಕು ಎಂಬ ಸಂದೇಶವನ್ನು ನಾಟಕ ದಾಟಿಸಿತು.

`ಅಕ್ಕಯ್‌’ ನಾಟಕದ ಒಂದು ದೃಶ್ಯ (ಚಿತ್ರ: ತಾಯಿ ಲೋಕೇಶ್‌‌)

ಇದನ್ನೂ ಓದಿರಿ: ’ಕರುಣೆ ಬೇಡ, ಘನತೆಯಿಂದ ಬದುಕುವ ಹಕ್ಕು ಬೇಕು’: ರಂಗದ ಮೇಲೆ ಇಂದು ’ಅಕ್ಕಯ್’ ಕಥನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...