Homeಮುಖಪುಟಅರ್ಷದೀಪ್‌‌ಗೆ ‘ಖಾಲಿಸ್ತಾನಿ’ ಎಂದು ನಿಂದನೆ: ಕೇಂದ್ರ ಸರ್ಕಾರದಿಂದ ವಿಕಿಪೀಡಿಯಕ್ಕೆ ಸಮನ್ಸ್ ಜಾರಿ

ಅರ್ಷದೀಪ್‌‌ಗೆ ‘ಖಾಲಿಸ್ತಾನಿ’ ಎಂದು ನಿಂದನೆ: ಕೇಂದ್ರ ಸರ್ಕಾರದಿಂದ ವಿಕಿಪೀಡಿಯಕ್ಕೆ ಸಮನ್ಸ್ ಜಾರಿ

- Advertisement -
- Advertisement -

ಭಾರತೀಯ ಕ್ರಿಕೆಟ್ ತಂಡದ ಬೌಲರ್ ಅರ್ಷದೀಪ್ ಸಿಂಗ್ ಅವರ ಕುರಿತು ಅವಹೇಳನಕಾರಿಯಾಗಿ ವಿಕಿಪೀಡಿಯಾದಲ್ಲಿ ಮಾಹಿತಿ ನೀಡಲಾಗಿರುವ ಕುರಿತು ಸರ್ಕಾರ ಎಚ್ಚೆತ್ತುಕೊಂಡಿದೆ.

ಅರ್ಷದೀಪ್‌ ಸಿಂಗ್‌ ಖಾಲಿಸ್ತಾನ್‌ ಹೋರಾಟವನ್ನು ಬೆಂಬಲಿಸಿದ್ದಾರೆಂದು ಸುಳ್ಳು ಹಬ್ಬಿಸಲಾಗಿದ್ದು ಭಾರತದಲ್ಲಿನ ವಿಕಿಪೀಡಿಯಾ ಕಾರ್ಯನಿರ್ವಾಹಕರಿಗೆ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಸಮನ್ಸ್‌ ಜಾರಿ ಮಾಡಿದೆ.

ಏಷ್ಯಾ ಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯದ ವೇಳೆ, ಭಾರತೀಯ ಕ್ರಿಕೆಟ್ ತಂಡದ ವೇಗದ ಬೌಲರ್ ಅರ್ಶ್‌ದೀಪ್ ನಿರ್ಣಾಯಕ ಕ್ಯಾಚ್ ಅನ್ನು ಕೈಬಿಟ್ಟರು. ಭಾರತ ತಂಡವು ತನ್ನ ಸಂಪ್ರದಾಯಿಕ ಎದುರಾಳಿ ವಿರುದ್ಧ ಸೋತಿದ್ದರಿಂದ ಟ್ರೋಲ್‌ಗೆ ಗುರಿಯಾದರು.

ಇದರ ಬೆನ್ನಲ್ಲೇ ಅರ್ಹದೀಪ್‌ ಅವರನ್ನು ‘ಖಾಲಿಸ್ತಾನಿ’ ಎಂದು ಜರಿಯುವ ಪ್ರಯತ್ನ ಮಾಡಲಾಯಿತು. ವಿಕಿಪೀಡಿಯಾದಲ್ಲಿ ತಪ್ಪು ಮಾಹಿತಿ ಸೇರಿಸಿ, ಅರ್ಷದೀಪ್ ಅವರ ಚಾರಿತ್ರ್ಯ ವಧೆ ಮಾಡಲು ಯತ್ನಿಸಲಾಯಿತು. ಆನಂತರದಲ್ಲಿ ಈ ಮಾಹಿತಿಯನ್ನು ಪೇಜ್‌ನಿಂದ ತೆಗೆದುಹಾಕಲಾಗಿದೆ. ಅನೇಕ ಟ್ವಿಟ್ಟರ್ ಬಳಕೆದಾರರು ಅರ್ಷದೀಪ್‌ ಅವರನ್ನು ‘ಖಾಲಿಸ್ತಾನಿ’ ಎಂದು ನಿಂದಿಸಿವೆ.

ಎಲೆಕ್ಟ್ರಾನಿಕ್ಸ್ ಸಚಿವಾಲಯ ಮತ್ತು ಐಟಿ ಕಾರ್ಯದರ್ಶಿ ಅಲ್ಕೇಶ್ ಕುಮಾರ್ ಶರ್ಮಾ ನೇತೃತ್ವದ ಅಧಿಕಾರಿಗಳ ತಂಡವು ವಿಕಿಪೀಡಿಯ ಕಾರ್ಯನಿರ್ವಾಹಕರಿಗೆ ಸಮನ್ಸ್‌ ಜಾರಿ ಮಾಡಿದ್ದಾರೆ. ವಿಕಿಪೀಡಿಯಾದಲ್ಲಿ ಮಾಹಿತಿಗಳನ್ನು ಮಾರ್ಪಾಡು ಮಾಡಲು ಹೇಗೆ ಅನುಮತಿಸಲಾಗಿದೆ ಎಂದು ಪ್ರಶ್ನಿಸಿದ್ದಾರೆ.

ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ವಿಕಿಪೀಡಿಯಾಕ್ಕೆ ನೋಟಿಸ್ ಕಳುಹಿಸುವಾಗ, “ಇದು ಅರ್ಷದೀಪ್ ಸಿಂಗ್ ಅವರ ಕುಟುಂಬಕ್ಕೆ ನೀಡಿದ ಬೆದರಿಕೆಯಾಗಬಹುದು. ಇದರಿಂದ ದೇಶದ ವಾತಾವರಣವೂ ಹಾಳಾಗಬಹುದು. ಐಪಿ ವಿಳಾಸವನ್ನು ಪರಿಶೀಲಿಸಿದಾಗ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದವರೊಬ್ಬರು ಈ ಕೃತ್ಯ ಎಸಗಿರುವುದು ತಿಳಿದು ಬಂದಿದೆ” ಎಂದಿದೆ.

ಎಲೆಕ್ಟ್ರಾನಿಕ್ಸ್ ಮತ್ತು ತಂತ್ರಜ್ಞಾನ ಖಾತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಟ್ವೀಟ್ ಮಾಡಿ, “ಯಾವುದೇ ವ್ಯಕ್ತಿಯ ಮಾನಹಾನಿ ಮಾಡುವ ಇಂತಹ ತಪ್ಪು ಮಾಹಿತಿ ಮತ್ತು ಉದ್ದೇಶಪೂರ್ವಕ ಪ್ರಯತ್ನಗಳನ್ನು ಭಾರತದಲ್ಲಿ ಕಾರ್ಯನಿರ್ವಹಿಸುವ ಯಾವುದೇ ವೇದಿಕೆಯಲ್ಲಿ ಅನುಮತಿಸಲಾಗುವುದಿಲ್ಲ. ಇದು ಸುರಕ್ಷತೆ ಮತ್ತು ಇಂಟರ್‌ನೆಟ್‌ನ ವಿಶ್ವಾಸಾರ್ಹತೆಯ ಮೇಲೆ ಸರ್ಕಾರ ಇಟ್ಟಿರುವ ನಿರೀಕ್ಷೆಗಳನ್ನು ಉಲ್ಲಂಘಿಸುತ್ತದೆ” ಎಂದಿದ್ದಾರೆ.

ಮಾಜಿ ಕ್ರಿಕೆಟಿಗ ಮತ್ತು ರಾಜ್ಯಸಭಾ ಸಂಸದ ಹರ್ಭಜನ್ ಸಿಂಗ್ ಟ್ವೀಟ್ ಮಾಡುವ ಮೂಲಕ ಅರ್ಷದೀಪ್ ಸಿಂಗ್ ಅವರನ್ನು ಬೆಂಬಲಿಸಿದ್ದಾರೆ. “ಅರ್ಷದೀಪ್ ಅವರನ್ನು ಟೀಕಿಸುವುದನ್ನು ನಿಲ್ಲಿಸಬೇಕು. ಯಾರೂ ಉದ್ದೇಶಪೂರ್ವಕವಾಗಿ ಕ್ಯಾಚ್ ಬಿಡುವುದಿಲ್ಲ. ಭಾರತೀಯ ಆಟಗಾರರ ಬಗ್ಗೆ ಹೆಮ್ಮೆ ಇದೆ. ಪಾಕಿಸ್ತಾನ ಉತ್ತಮವಾಗಿ ಆಡಿದೆ. ನಮ್ಮ ತಂಡ ಮತ್ತು ಅರ್ಶ್‌‌ದೀಪ್‌ ಬಗ್ಗೆ ನಡೆಯುತ್ತಿರುವ ಕೆಟ್ಟ ಸಂಗತಿಗಳು ನಾಚಿಕೆಗೇಡಿನದ್ದಾಗಿವೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...