Homeಕರ್ನಾಟಕಮುಸ್ಲಿಮ್ ಮಹಿಳೆಯರ ಅವಹೇಳನ: ಕಲ್ಲಡ್ಕ ಭಟ್ ವಿರುದ್ಧ ಶ್ರೀರಂಗಪಟ್ಟಣ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ ನಜ್ಮಾ

ಮುಸ್ಲಿಮ್ ಮಹಿಳೆಯರ ಅವಹೇಳನ: ಕಲ್ಲಡ್ಕ ಭಟ್ ವಿರುದ್ಧ ಶ್ರೀರಂಗಪಟ್ಟಣ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ ನಜ್ಮಾ

- Advertisement -
- Advertisement -

ಶ್ರೀರಂಗಪಟ್ಟಣದಲ್ಲಿ ಕಳೆದ ತಿಂಗಳು ನಡೆದ ಹನುಮ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್, ಮುಸ್ಲಿಮ್ ಮಹಿಳೆಯರ ಕುರಿತು ಅವಹೇಳನ ಮಾಡಿ, ಧಾರ್ಮಿಕ ದ್ವೇಷ ಬಿತ್ತುವ ಭಾಷಣ ಮಾಡಿದ್ದರು. ಭಟ್ಟರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ದೂರು ದಾಖಲಿಸಿರುವ ಸಾಮಾಜಿಕ ಕಾರ್ಯಕರ್ತೆ ನಜ್ಮಾ ನಜೀರ್ ಈಗ ಶ್ರೀರಂಗಪಟ್ಟಣ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ‘ಪ್ರಭಾಕರ್ ಭಟ್ ಜಾಮೀನು ಅರ್ಜಿಗೆ ವಿರೋಧಿಸಲು ತನ್ನ ಇಚ್ಛೆಯ ವಕೀಲರನ್ನು ನೇಮಸಿಕೊಳ್ಳಲು ಅನುಮತಿ ನೀಡುವಂತೆ’ ಕೋರಿ ಅವರು ಬುಧವಾರ ಅರ್ಜಿ ಸಲ್ಲಿಸಿದ್ದಾರೆ ಎಂದು ‘ಬಾರ್ ಅಂಡ್ ಬೆಂಚ್’ ವರದಿ ಮಾಡಿದೆ.

ನಜ್ಮಾ ನಜೀರ್ ಅವರ ಪರವಾಗಿ ಖ್ಯಾತ ವಕೀಲ ಎಸ್. ಬಾಲಕೃಷ್ಣನ್ ಅವರು ಸಿಆರ್‌ಪಿಸಿ ಸೆಕ್ಷನ್ 301 ಮತ್ತು 302 ಅಡಿ ಅರ್ಜಿ ಸಲ್ಲಿಸಿದ್ದು, ಜಾಮೀನು ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ತಮ್ಮ ವಾದವನ್ನು ಆಲಿಸಬೇಕು ಎಂದು ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಗೋಪಾಲ ಕೃಷ್ಣ ರೈ ಟಿ ಅವರನ್ನು ಕೋರಿದ್ದಾರೆ. ಪ್ರಕರಣ ಸಂಬಂಧದ ವಿಚಾರಣೆಯನ್ನು ಜನವರಿ 5ಕ್ಕೆ ಮುಂದೂಡಲ್ಪಟ್ಟಿದೆ ಎನ್ನಲಾಗಿದೆ.

‘ಆರೋಪಿ ಪ್ರಭಾಕರ್ ಭಟ್ ಈ ಹಿಂದೆಯೂ ಇದೇ ರೀತಿಯ ವರ್ತನೆ ತೋರಿದ್ದಾರೆ. ದೊಂಬಿ ಸೃಷ್ಟಿಸುವುದು, ಮಹಿಳೆಯರನ್ನು ಅವಮಾನಿಸುವುದು, ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸುವ ಕೆಲಸ ಮಾಡಿದ್ದಾರೆ. ಈ ಆರೋಪಗಳ ಮೇಲೆ ಪ್ರಕರಣಗಳು ದಾಖಲಾಗಿವೆ’ ದೂರುದಾರೆ ತಮ್ಮ ಅರ್ಜಿಯಲ್ಲಿ ಆಕ್ಷೇಪಿಸಿದ್ದಾರೆ.

‘ಪ್ರಭಾಕರ್ ಭಟ್ ಜಾಮೀನು ಅರ್ಜಿಗೆ ಸರ್ಕಾರಿ ಅಭಿಯೋಜಕರ ಜೊತೆ ತಾವೂ ಅದನ್ನು ವಿರೋಧಿಸಲು ಅನುಮತಿಸಬೇಕು’ ಎಂದು ಮನವಿ ಮಾಡಿದ್ದಾರೆ.

ಆರೋಪಿ ಪ್ರಭಾಕರ್ ಭಟ್ ಗಂಭೀರ ಹೃದ್ರೋಗ ಸಮಸ್ಯೆಯಿಂದ ಬಳಲುತಿದ್ದಾರೆ ಎಂದು ಅವರ ಪರ ವಕೀಲರು ವಾದ ಮಂಡಿಸಿದ ನಂತರ, ಡಿಸೆಂಬರ್ 28ರಂದು ಶ್ರೀರಂಗಪಟ್ಟಣ ನ್ಯಾಯಾಲಯವು ಅವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಪ್ರಕರಣದ ಹಿನ್ನೆಲೆ:

ಹನುಮ ಜಯಂತಿ ಪ್ರಯುಕ್ತ ಡಿಸೆಂಬರ್ 24ರಂದು ಶ್ರೀರಂಗಪಟ್ಟಣದಲ್ಲಿ ಹಿಂದೂ ಜಾಗರಣಾ ವೇದಿಕೆ ಆಯೋಜಿಸಿದ್ದ ‘ಸಂಕೀರ್ತನಾ ಯಾತ್ರೆ’ಯಲ್ಲಿ ಪ್ರಭಾಕರ್ ಭಟ್ ಮಾತನಾಡಿದ್ದರು. ‘ಅವರು ಮುಸ್ಲಿಮರ ವಿರುದ್ಧ ಧಾರ್ಮಿಕ ದ್ವೇಷಕಾರಿದ್ದಾರೆ’ ಎಂದು ಸಾಮಾಜಿಕ ಕಾರ್ಯಕರ್ತೆ ನಜ್ಮಾ ನಜೀರ್ ನೀಡಿದ್ದ ದೂರಿನ ಅನ್ವಯ ಶ್ರೀರಂಗಪಟ್ಟಣ ಟೌನ್ ಠಾಣೆಯ ಪೊಲೀಸರು ಪ್ರಭಾಕರ್ ಭಟ್ ವಿರುದ್ಧ ಐಪಿಸಿ ಸೆಕ್ಷನ್ಗಳಾದ 294 (ಸಾರ್ವಜನಿಕ ಸ್ಥಳದಲ್ಲಿ ಅಶ್ಲೀಲ ಮಾತುಗಳನ್ನು ಆಡುವುದು), 509 (ಮಹಿಳೆಯ ಖಾಸಗಿತನಕ್ಕೆ ಸಂಬಂಧಿಸಿದ ಮಾತುಗಳನ್ನಾಡುವುದು), 153ಎ (ಧರ್ಮದ ಆಧಾರದಲ್ಲಿ ಸಮುದಾಯಗಳ ನಡುವೆ ದ್ವೇಷ ಹರಡುವುದು) ಮತ್ತು 298 (ಉದ್ದೇಶಪೂರ್ವಕವಾಗಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡುವುದು) ಅಡಿ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣ ರದ್ದು ಕೋರಿ ಪ್ರಭಾಕರ್ ಭಟ್ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ; ‘ಭಗವಾನ್ ರಾಮನು ಮಾಂಸಾಹಾರಿ..’; ವಿವಾದ ಹುಟ್ಟುಹಾಕಿದ ಎನ್‌ಸಿಪಿ ನಾಯಕ ಅವ್ಹಾದ್ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...