Homeಮುಖಪುಟಅಮಿತ್ ಶಾ & ಹಿಂದೂ ದೇವತೆಗಳಿಗೆ ಅವಮಾನ ಆರೋಪ: ಹಾಸ್ಯ ಕಲಾವಿದನ ಬಂಧನ

ಅಮಿತ್ ಶಾ & ಹಿಂದೂ ದೇವತೆಗಳಿಗೆ ಅವಮಾನ ಆರೋಪ: ಹಾಸ್ಯ ಕಲಾವಿದನ ಬಂಧನ

ಹಿಂದೂ ರಕ್ಷಕ ಸಂಘಟನೆಯ ಮುಖಂಡ ಮತ್ತು ಬಿಜೆಪಿ ಶಾಸಕ ಮಾಲಿನಿ ಗೌರ್ ಅವರ ಪುತ್ರ ಏಕಲವ್ಯ ಗೌರ್ ನೀಡಿದ ದೂರಿನ ಆಧಾರದ ಮೇಲೆ ಈ ಪ್ರಕರಣ ದಾಖಲಿಸಲಾಗಿದೆ.

- Advertisement -
- Advertisement -

ಮಧ್ಯಪ್ರದೇಶದ ಇಂಧೋರ್‌ನಲ್ಲಿ ನಡೆದ ಹೊಸ ವರ್ಷಾಚರಣೆಯ ಕಾರ್ಯಕ್ರಮವೊಂದರಲ್ಲಿ ‘ಹಿಂದೂ ಧಾರ್ಮಿಕ ನಂಬಿಕೆಗೆ ಧಕ್ಕೆಯುಂಟು ಮಾಡಿದ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಅವಮಾನಿಸಿದ್ದಾರೆ’ ಎಂದು ಆರೋಪಿಸಿ ಹಾಸ್ಯ ಕಲಾವಿದ ಮತ್ತು ಇತರೆ ನಾಲ್ಕು ಜನ ಕಾರ್ಯಕ್ರಮ ಸಂಘಟಕರನ್ನು ಬಂಧಿಸಲಾಗಿದೆ.

ಕಾರ್ಯಕ್ರಮದ ಮೇಲ್ವಿಚಾರಣೆಗಾಗಿ ಹಿಂದೂ ಕಾರ್ಯಕರ್ತರ ಗುಂಪೊಂದು ಕಾರ್ಯಕ್ರಮದಲ್ಲಿ ಹಾಜರಿತ್ತು. ಈ ವೇಳೆ ಇವರಿಗೆ ಇಷ್ಟವಿಲ್ಲದ ಹೇಳಿಕೆಗಳನ್ನು ಕಲಾವಿದರು ನೀಡಿದ್ದಕ್ಕಾಗಿ ಕಾರ್ಯಕ್ರಮವನ್ನು ಸ್ಥಗಿತಗೊಳಿಸಿದ ಹಿಂದೂ ಕಾರ್ಯಕರ್ತರು ಕಲಾವಿದರನ್ನು ಬಂಧಿಸುವಂತೆ ಒತ್ತಾಯಿಸಿದ್ದರು.

ಇದನ್ನೂ ಓದಿ: ಮಧ್ಯ ಪ್ರದೇಶ: ಮಸೀದಿ ಮೇಲೆ ಕೇಸರಿ ಧ್ವಜ ನೆಟ್ಟು ಹಿಂಸಾಚಾರ ನಡೆಸಿದ ಸಂಘ ಪರಿವಾರದ…

ಇಂಧೋರ್‌ನ ಡುಕಾನ್ ಪ್ರದೇಶದ ಕೆಫೆಯೊಂದರಲ್ಲಿ ಕಾರ್ಯಕ್ರಮ ನೀಡಿದ್ದ ಹಾಸ್ಯ ಕಲಾವಿದ ಮುನ್ವರ್ ಫಾರುಕಿ ಅವರನ್ನು ಶುಕ್ರವಾರ ಬಂಧಿಸಲಾಯಿತು. ಇವರ ಜೊತೆಗೆ ಪ್ರಖರ್ ವ್ಯಾಸ್, ಪ್ರಿಯಮ್ ವ್ಯಾಸ್, ನಳಿನ್ ಯಾದವ್ ಮತ್ತು ಕಾರ್ಯಕ್ರಮ ಸಂಯೋಜಕ ಎಡ್ವಿನ್ ಆಂಥೋನಿ ಎಂಬುವವರನ್ನು ಬಂಧಿಸಲಾಗಿದೆ.

“ಬಂಧನಕ್ಕೊಳಗಾದವರ ಮೇಲೆ ಐಪಿಸಿ ಸೆಕ್ಷನ್ 188, 269, 34 ಮತ್ತು 295 (ಎ) ಅಡಿಯಲ್ಲಿ ಈವೆಂಟ್ ಆಯೋಜನೆಗೆ ಅನುಮತಿ, ಕೊರೊನಾ ಸುರಕ್ಷತಾ ಮಾನದಂಡಗಳ ಉಲ್ಲಂಘನೆ ಮತ್ತು ಧಾರ್ಮಿಕ ಭಾವನೆಗಳಿಗೆ ಧಕ್ಕೆ” ಎನ್ನುವ ಪ್ರಕರಣಗಳಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ ಎಂದು ಇಂಧೋರ್‌ನ ಟುಕೊಗಂಜ್ ಪೊಲೀಸ್ ಠಾಣೆಯ ಉಸ್ತುವಾರಿ ಕಲ್ಮೇಶ್ ಶರ್ಮಾ ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ಮೇಲೆ ನಂಬಿಕೆಯಿಲ್ಲ, ಕೊರೊನಾ ಲಸಿಕೆ ತೆಗೆದುಕೊಳ್ಳುವುದಿಲ್ಲ: ಅಖಿಲೇಶ್ ಯಾದವ್

ಹಿಂದೂ ರಕ್ಷಕ ಸಂಘಟನೆಯ ಮುಖಂಡ ಮತ್ತು ಬಿಜೆಪಿ ಶಾಸಕ ಮಾಲಿನಿ ಗೌರ್ ಅವರ ಪುತ್ರ ಏಕಲವ್ಯ ಗೌರ್ ನೀಡಿದ ದೂರಿನ ಆಧಾರದ ಮೇಲೆ ಈ ಪ್ರಕರಣ ದಾಖಲಿಸಲಾಗಿದೆ.

“ಮುನ್ವರ್ ಫಾರುಕಿಯ ಮೇಲೆ ಸರಣಿ ಆರೋಪಗಳಿದ್ದು, ಈ ಹಿಂದೆ ತಮ್ಮ ಪ್ರದರ್ಶನಗಳಲ್ಲಿ ಹಿಂದೂ ದೇವತೆಗಳನ್ನು ಅವಮಾನ ಮಾಡಿದ್ದರು. ಇದರ ಬಗ್ಗೆ ತಿಳಿದುಕೊಳ್ಳಲು ನಾವು ಕೂಡ ಟಿಕೆಟ್ ಖರೀದಿಸಿ ಕಾರ್ಯಕ್ರಮಕ್ಕೆ ಹೋಗಿದ್ದೆವು. ಅಲ್ಲಿ ಪ್ರದರ್ಶನ ನೀಡಿದವರು ಒಕ್ಕೂಟ ವ್ಯವಸ್ಥೆಯ ಬಗ್ಗೆ ವ್ಯಂಗ್ಯ ಮಾಡಿದ್ದಾರೆ. ಗೋಧ್ರಾ ಹತ್ಯಾಕಾಂಡದಲ್ಲಿ ಗೃಹ ಸಚಿವ ಅಮಿತ್ ಶಾ ಅವರ ಹೆಸರನ್ನು ವಿನಾಃಕಾರಣ ಬಳಸಿದ್ದಾರೆ” ಎಂದು ಮಾಲಿನಿ ಗೌರ್ ಹೇಳಿದರು.

“ನಾವು ಕಾರ್ಯಕ್ರಮವನ್ನು ತಕ್ಷಣವೇ ನಿಲ್ಲಿಸಿದೆವು. ನಂತರ ಪ್ರೇಕ್ಷಕರನ್ನು ಹೊರಗೆ ಕಳುಹಿಸಿ, ಕಲಾವಿದರನ್ನು ಮತ್ತು ಕಾರ್ಯಕ್ರಮ ಸಂಘಟಕರನ್ನು ಸ್ಥಳೀಯ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿದ್ದೇವೆ” ಎಂದು ಹೇಳಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.


ಇದನ್ನೂ ಓದಿ: ರೈತ ಹೋರಾಟದ ಕುರಿತು ವಿವಾದಾತ್ಮಕ ಹೇಳಿಕೆಯ ಆರೋಪ: ಕಾಂಗ್ರೆಸ್ ಸಂಸದನ ವಿರುದ್ಧ FIR

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಶಿವಸೇನೆಯನ್ನು ವಿಭಜಿಸಿ, ಇಲ್ಲವೇ ಬಂಧನ ಎದುರಿಸಿ ಎಂದು ಏಕನಾಥ್ ಶಿಂದೆಗೆ ಕೇಂದ್ರ ಸರ್ಕಾರ ಬೆದರಿಕೆ...

0
ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ ಸರ್ಕಾರದಲ್ಲಿ ಏಕನಾಥ್ ಶಿಂದೆ ಸಚಿವರಾಗಿದ್ದಾಗ, ಅವರನ್ನು ಬಂಧಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಯೋಜಿಸಿತ್ತು ಎಂದು ಮಂಗಳವಾರ ಶಿವಸೇನೆ (ಯುಬಿಟಿ) ನಾಯಕ...