Homeಚಳವಳಿತೀವ್ರಗೊಂಡ ಹೋರಾಟ: ಟೋಲ್‌ ಪ್ಲಾಜಾಗಳನ್ನು ವಶಕ್ಕೆ ಪಡೆದ ರೈತರು

ತೀವ್ರಗೊಂಡ ಹೋರಾಟ: ಟೋಲ್‌ ಪ್ಲಾಜಾಗಳನ್ನು ವಶಕ್ಕೆ ಪಡೆದ ರೈತರು

ಈ ಹಿಂದೆ ಕಳೆದ ನವೆಂಬರ್ 27 ರಿಂದ ಮೂರು ದಿನಗಳವರೆಗೆ ದೆಹಲಿ- ಹರಿಯಾಣ ಗಡಿಯ ಎಲ್ಲಾ ಟೋಲ್ ಪ್ಲಾಜಾಗಳನ್ನು ವಾಹನಗಳಿಗೆ ಉಚಿತವಾಗಿಸಲು ರೈತರು ಕರೆ ನೀಡಿದ್ದರು.

- Advertisement -
- Advertisement -

ಕಳೆದ 30 ದಿನದಿಂದ ಕೇಂದ್ರ ಸರ್ಕಾರದ ವಿರುದ್ದ ರೈತರು ನಡೆಸುತ್ತಿರುವ ಆಂದೋಲನವನ್ನು ಇನ್ನೂ ತೀವ್ರಗೊಳಿಸಲು ತೀರ್ಮಾನಿಸಿದ್ದು, ರೈತ ಸಂಘಗಳ ಸದಸ್ಯರು ಶುಕ್ರವಾರ ಬೆಳಿಗ್ಗೆ ಹರಿಯಾಣದಲ್ಲಿ ಹಲವಾರು ಟೋಲ್ ಪ್ಲಾಜಾಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಹಿಂದೆ ಕಳೆದ ನವೆಂಬರ್ 27 ರಿಂದ ಮೂರು ದಿನಗಳವರೆಗೆ ದೆಹಲಿ- ಹರಿಯಾಣ ಗಡಿಯ ಎಲ್ಲಾ ಟೋಲ್ ಪ್ಲಾಜಾಗಳನ್ನು ವಾಹನಗಳಿಗೆ ಉಚಿತವಾಗಿಸಲು ರೈತರು ಕರೆ ನೀಡಿದ್ದರು.

ಈಗಾಗಲೇ ದೆಹಲಿಯನ್ನು ಬೇರೆ ಬೇರೆ ಉತ್ತರದ ರಾಜ್ಯಗಳೊಂದಿಗೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 44 ರಲ್ಲಿರುವ ಕಾರ್ನಾಲ್‌ನಲ್ಲಿರುವ ಬಸ್ತಾರಾ ಟೋಲ್ ಪ್ಲಾಜಾ, ಅಸ್ಸಂಧ್-ಕರ್ನಾಲ್ ಹೆದ್ದಾರಿಯಲ್ಲಿನ ಗುಲ್ಲರ್‌ಪುರ ಟೋಲ್ ಪ್ಲಾಜಾ ಮತ್ತು ಹಿಸಾರ್-ಚಂಡೀಗಡ ಹೆದ್ದಾರಿಯಲ್ಲಿರುವ ಕುರುಕ್ಷೇತ್ರದ ಥೋನಾ ಟೋಲ್ ಪ್ಲಾಜಾದಲ್ಲಿ ಹಾಕಿದ್ದ ಬ್ಯಾರಿಕೇಡ್‌ಗಳನ್ನು ರೈತರು ಬಲವಂತವಾಗಿ ಸರಿಸಿದ್ದಾರೆ. ಅಲ್ಲದೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ತೆರೆದ ಪಾಣಿಪತ್ ಟೋಲ್ ಪ್ಲಾಜಾ ಮತ್ತು ಪಾಣಿಪತ್-ರೋಹ್ಟಕ್ ಹೆದ್ದಾರಿಯ ದಹಾರ್ ಟೋಲ್ ಪ್ಲಾಜಾವನ್ನು ಸರಿಸಲು ರೈತರ ಸಂಘದ ಮುಖಂಡರು ಯೋಜಿಸುತ್ತಿದ್ದಾರೆ ಎಂದು ಹಿಂದುಸ್ಥಾನ್ ಟೈಮ್ಸ್‌‌ ವರದಿ ಮಾಡಿದೆ.

ಇದನ್ನೂ ಓದಿ: ರೈತ ಹೋರಾಟದಲ್ಲಿ ಗಾಂಧಿ- ಅಂಬೇಡ್ಕರ್ ವಿಚಾರಗಳು

ಪ್ರತಿಭಟನಾ ನಿರತ ರೈತರು ಟೋಲ್‌ ಗೇಟ್‌ಗಳನ್ನು ತೆರೆಯುವಾಗ ಅಲ್ಲಿಯೇ ಇದ್ದ ಪೊಲೀಸರು ಅವರನ್ನು ತಡೆಯದೆ, ಎಲ್ಲಾ ವಾಹನಗಳ ಶುಲ್ಕ ರಹಿತ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು. ಸಿಂಘು ಮತ್ತು ಟಿಕ್ರಿ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತ ಮುಖಂಡರ ಸೂಚನೆಯಂತೆ ಮುಂದಿನ ಮೂರು ದಿನಗಳವರೆಗೂ ಎಲ್ಲಾ ಟೋಲ್ ಪ್ಲಾಜಾಗಳಲ್ಲಿ ಪ್ರತಿಭಟನೆ ನಡೆಸುವುದಾಗಿ ಹೇಳಿದ್ದಾರೆ.

ಹರಿಯಾಣದ ಟೋಲ್ ಪ್ಲಾಜಾಗಳಿಗೆ ಭಾರತೀಯ ಕಿಸಾನ್ ಯೂನಿಯನ್ (ಚಾರುನಿ) ಅಧ್ಯಕ್ಷ ಗುರುನಮ್ ಸಿಂಗ್ ಚಾರುನಿ ಭೇಟಿ ನೀಡಲಿದ್ದಾರೆ ಎನ್ನಲಾಗಿದೆ. ಪ್ರತಿಭಟನೆಯನ್ನು ಶಾಂತಿಯುತವಾಗಿ ನಡೆಸಬೇಕು ಮತ್ತು ಯಾವುದೇ ಹಿಂಸಾಚಾರದಲ್ಲಿ ಪಾಲ್ಗೊಳ್ಳಬಾರದು ಎಂದು ಶುಕ್ರವಾರ ಬೆಳಿಗ್ಗೆ ತನ್ನ ವಿಡಿಯೋ ಸಂದೇಶದಲ್ಲಿ ಚಾರುಣಿ ರೈತರಿಗೆ ಹೇಳಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ: ಜಿಯೋ ಟವರ್‌ಗಳ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಿದ ರೈತರು

ನಿನ್ನೆ ಮೊನ್ನೆವರೆಗೂ ಅನ್ನದಾತರು. ಇಂದು ಪ್ರಶ್ನಿಸಿದ್ದಕ್ಕೆ ಭಯೋತ್ಪಾದಕರ? ಪ್ರಧಾನಿ ಮೋದಿಗೆ ರೈತರ ದಿಟ್ಟ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...