Homeಚಳವಳಿತೀವ್ರಗೊಂಡ ಬಿಹಾರ ನಾಗರಿಕ ಸೇವಾ ಪರೀಕ್ಷೆಯ ವಿರುದ್ಧದ ಪ್ರತಿಭಟನೆ

ತೀವ್ರಗೊಂಡ ಬಿಹಾರ ನಾಗರಿಕ ಸೇವಾ ಪರೀಕ್ಷೆಯ ವಿರುದ್ಧದ ಪ್ರತಿಭಟನೆ

- Advertisement -
- Advertisement -

ಡಿಸೆಂಬರ್ 13 ರಂದು ನಡೆದ ಪರೀಕ್ಷೆಯನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಬಿಹಾರ ಲೋಕಸೇವಾ ಆಯೋಗದ (BPSC) ಅಭ್ಯರ್ಥಿಗಳು ನಡೆಸುತ್ತಿರುವ ಪ್ರತಿಭಟನೆ ತೀವ್ರಗೊಂಡಿದೆ. ಈ ನಡುವೆ ಜನ್ ಸುರಾಜ್ ಪಕ್ಷದ ಸಂಸ್ಥಾಪಕ ಪ್ರಶಾಂತ್ ಕಿಶೋರ್ ಶುಕ್ರವಾರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನಾಕಾರರಿಗೆ ಬೆಂಬಲ ನೀಡಿದ್ದಾರೆ. ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪದ ಬಗ್ಗೆ ವಿದ್ಯಾರ್ಥಿಗಳ ಬೇಡಿಕೆಯನ್ನು ಮನ್ನಿಸಿ ಸಮಸ್ಯೆ ಬಗೆಹರಿಸಲು ಸಮಿತಿ ರಚಿಸುವಂತೆ ಕಿಶೋರ್ ಅವರು ಸಿಎಂ ನಿತೀಶ್ ಕುಮಾರ್ ಅವರಿಗೆ ಒತ್ತಾಯಿಸಿದ್ದಾರೆ. ತೀವ್ರಗೊಂಡ ಬಿಹಾರ

ಖಾನ್ ಸರ್ ಎಂದೆ ಜನಪ್ರಿಯರಾಗಿರುವ ಖ್ಯಾತ ಶಿಕ್ಷಣತಜ್ಞ ಫೈಝಲ್ ಖಾನ್ ಅವರು ಕಳೆದ ಒಂಬತ್ತು ದಿನಗಳಿಂದ ಧರಣಿ ನಡೆಸುತ್ತಾ ಮರು ಪರೀಕ್ಷೆಗೆ ಒತ್ತಾಯಿಸುತ್ತಿರುವ ವಿದ್ಯಾರ್ಥಿಗಳ ಬೇಡಿಕೆಯನ್ನು ಬೆಂಬಲಿಸಿದ್ದಾರೆ. ಗರ್ದಾನಿಬಾಗ್ ಪ್ರದೇಶದಲ್ಲಿ ಪ್ರತಿಭಟನಾನಿರತ ಅಭ್ಯರ್ಥಿಗಳನ್ನು ಭೇಟಿ ಮಾಡಿದ ಖಾನ್ ಸರ್, “ಆಯೋಗವು ಸಾಕ್ಷ್ಯ ಮತ್ತು ಸಿಸಿಟಿವಿ ದೃಶ್ಯಗಳನ್ನು ಏಕೆ ಮರೆಮಾಚುತ್ತಿದೆ?” ಎಂದು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಬಿಪಿಎಸ್‌ಸಿ ನಡೆಸಿದ ಪೂರ್ವಭಾವಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಮತ್ತು ರಾಜ್ಯಾದ್ಯಂತ ಮರುಪರೀಕ್ಷೆ ನಡೆಸುವಂತೆ ಒತ್ತಾಯಿಸಿ ಹಲವು ಬಿಪಿಎಸ್‌ಸಿ ಅಭ್ಯರ್ಥಿಗಳು ಡಿಸೆಂಬರ್ 13ರಂದು ಪ್ರತಿಭಟನೆ ಆರಂಭಿಸಿದ್ದರು. ಹಲವಾರು ಅಭ್ಯರ್ಥಿಗಳು ಸುಮಾರು ಒಂದು ಗಂಟೆ ತಡವಾಗಿ ಪ್ರಶ್ನೆ ಪತ್ರಿಕೆ ಪಡೆದಿದ್ದಾರೆ ಎಂದು ಆರೋಪಿಸಿದ್ದು, ಇತರ ವಿದ್ಯಾರ್ಥಿಗಳು ಉತ್ತರ ಪತ್ರಿಕೆಗಳು ಹರಿದಿತ್ತು ಎಂದು ಹೇಳಿದ್ದಾರೆ. ಜೊತೆಗೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿವೆ ಎಂದು ಅನುಮಾನಗಳನ್ನು ಮುಂದಿಟ್ಟಿದ್ದಾರೆ. ತೀವ್ರಗೊಂಡ ಬಿಹಾರ

ಪ್ರತಿಭಟನಾ ಸ್ಥಳದಲ್ಲಿ ಮಾತನಾಡಿದ ಖಾನ್ ಸರ್,”ನಾವು ಆಯೋಗದಿಂದ ಮರು ಪರೀಕ್ಷೆಗೆ ಒತ್ತಾಯಿಸುತ್ತೇವೆ. ಆಯೋಗವು ಸಾಕ್ಷ್ಯ ಮತ್ತು ಸಿಸಿಟಿವಿ ದೃಶ್ಯಾವಳಿಗಳನ್ನು ಏಕೆ ಮರೆಮಾಚುತ್ತಿದೆ? ಈ ಬಗ್ಗೆ ತನಿಖೆ ಮಾಡಬೇಕು… ನಾವು ಸುಪ್ರೀಂ ಕೋರ್ಟ್‌ಗೆ ಹೋಗುತ್ತೇವೆ. ಬಿಹಾರದಲ್ಲಿ ನಡೆಯುತ್ತಿರುವುದನ್ನು ರಾಷ್ಟ್ರಪತಿಯವರಿಗೂ ಹೇಳುತ್ತೇವೆ… ಮೊದಲು ದೇಶದ ಜಿಡಿಪಿ ಕುಸಿಯಿತು, ನಂತರ ಬಿಹಾರದಲ್ಲಿ ಸೇತುವೆ ಕುಸಿದಿದೆ ಮತ್ತು ಈಗ ಬಿಪಿಎಸ್‌ಸಿ ಕುಸಿದಿದೆ” ಎಂದು ಹೇಳಿದ್ದಾರೆ.

ಮತ್ತೊಬ್ಬ ಜನಪ್ರಿಯ ಶಿಕ್ಷಕ ಮತ್ತು ಕೋಚಿಂಗ್ ಸೆಂಟರ್ ಮಾಲೀಕ ಗುರು ರೆಹಮಾನ್ ಕೂಡ ಅಭ್ಯರ್ಥಿಗಳನ್ನು ಬೆಂಬಲಿಸಿ ಧರಣಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಕೋಚಿಂಗ್ ಸೆಂಟರ್‌ಗಳು ತಮ್ಮ ಆಂದೋಲನವನ್ನು ‘ಹೈಜಾಕ್’ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಅಭ್ಯರ್ಥಿಗಳು ಆರೋಪಿಸಿದ ನಂತರ ಖಾನ್ ಸರ್ ಮತ್ತು ಗುರು ರೆಹಮಾನ್ ಇಬ್ಬರೂ ಸ್ಥಳವನ್ನು ತೊರೆದಿದ್ದಾರೆ. ಇದಕ್ಕೂ ಮುನ್ನ ಧರಣಿ ಸತ್ಯಾಗ್ರಹದಲ್ಲಿ ಪಕ್ಷೇತರ ಸಂಸದ ಪೂರ್ಣೆ ರಾಜೇಶ್ ರಂಜನ್ ಅಲಿಯಾಸ್ ಪಪ್ಪು ಯಾದವ್ ಭಾಗವಹಿಸಿದ್ದರು.

ಅದಾಗ್ಯೂ, BPSC ಪರೀಕ್ಷಾ ನಿಯಂತ್ರಕ ರಾಜೇಶ್ ಕುಮಾರ್ ಸಿಂಗ್ ಅವರು, 70 ನೇ ಇಂಟಿಗ್ರೇಟೆಡ್ ಕಂಬೈನ್ಡ್ ಸ್ಪರ್ಧಾತ್ಮಕ ಪರೀಕ್ಷೆ (CCE) 2024 ಅನ್ನು ರದ್ದುಗೊಳಿಸಲಾಗುವುದಿಲ್ಲ ಎಂದು ಹೇಳಿದ್ದಾರೆ. ಅಭ್ಯರ್ಥಿಗಳು ಅಕ್ರಮಗಳು ಎಸಗಿದ್ದಾರೆ ಎಂಬ ಆರೋಪವನ್ನು ಸಾಬೀತುಪಡಿಸಲು ಯಾವುದೇ ಪುರಾವೆಗಳಿಲ್ಲ ಎಂದು ಅವರು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಅದಾಗ್ಯೂ, BPSC ಬಾಪು ಪರೀಕ್ಷಾ ಪರಿಸರ್‌ ಕೇಂದ್ರದಲ್ಲಿ ಪರೀಕ್ಷೆ ಬರೆದ ಅಭ್ಯರ್ಥಿಗಳ ಪೂರ್ವಭಾವಿ ಪರೀಕ್ಷೆಯನ್ನು ರದ್ದುಗೊಳಿಸಿದೆ. ಡಿಸೆಂಬರ್ 13 ರಂದು ನಡೆಸಲಾದ ಪರೀಕ್ಷೆಯ ವೇಳೆ ಕೇಂದ್ರದಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದರು. ಈ ವೇಳೆ ಉಂಟಾದ ಗೊಂದಲದ ಸಮಯದಲ್ಲಿ ಕೇಂದ್ರದಲ್ಲಿ ಅಭ್ಯರ್ಥಿಗಳಿಂದ “ಅಶಿಸ್ತು” ನಡೆದಿದೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ರೈತ ನಾಯಕ ದಲ್ಲೆವಾಲ್‌ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ – ಪಂಜಾಬ್ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...