Homeಕರ್ನಾಟಕಒಳಮೀಸಲಾತಿ ಬೇಗುದಿ; ಮುಂದುವರಿದ ಬಂಜಾರರ ಪ್ರತಿಭಟನೆ

ಒಳಮೀಸಲಾತಿ ಬೇಗುದಿ; ಮುಂದುವರಿದ ಬಂಜಾರರ ಪ್ರತಿಭಟನೆ

- Advertisement -
- Advertisement -

ಒಳಮೀಸಲಾತಿ ವಿರೋಧಿಸಿ ಬಂಜಾರ ಸಮುದಾಯ ನಡೆಸುತ್ತಿರುವ ಹೋರಾಟ ಮುಂದುವರಿಸಿದೆ. ಶಿಕಾರಿಪುರದಲ್ಲಿ ಸೋಮವಾರ ನಡೆದ ಪ್ರತಿಭಟನೆ ವೇಳೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮನೆಗೆ ಕಲ್ಲು ತೂರಾಟ ಮಾಡಲಾಗಿತ್ತು.

ಪ್ರತಿಭಟನೆ ಮುಂದುವರಿದ ಕಾರಣ ಗೃಹ ಸಚಿವ ಆರಗ ಜ್ಞಾನೇಂದ್ರ ಶಿಕಾರಿಪುರಕ್ಕೆ ಬಂದಿದ್ದಾರೆ. ಪಟ್ಟಣದಲ್ಲಿ ಕಾನೂನು-ಸುವ್ಯವಸ್ಥೆ ಕುರಿತು ಚರ್ಚೆ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ. ಸಂಸದ ಬಿವೈ ರಾಘವೇಂದ್ರ, ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಜಿ.ಕೆ. ಹಾಜರಿದ್ದರು.

ಶಿವಮೊಗ್ಗ ತಾಲೂಕು ಕುಂಚೇನಹಳ್ಳಿಯಲ್ಲಿ ಬಂಜಾರ ಸಮುದಾಯದವರು ಒಳಮೀಸಲು ಜಾರಿ ವಿರೋಧಿಸಿ ರಸ್ತೆ ತಡೆ ನಡೆಸಿದ್ದಾರೆ. ರಸ್ತೆಯ ಎರಡೂ ಬದಿಯಲ್ಲಿ ವಾಹನಗಳು ಜಾಮ್ ಆಗಿರುವ ದೃಶ್ಯಗಳು ಕಂಡುಬಂದಿವೆ. ಪ್ರತಿಭಟನಾಕಾರರು ರಸ್ತೆಯಲ್ಲಿ ಬೆಂಕಿ ಹಚ್ಚಿದ್ದರಿಂದ ಸ್ಥಳದಲ್ಲಿ ಉದ್ವಿಗ್ನತೆ ಉಂಟಾಗಿತ್ತು.

ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, “ಶಿಕಾರಿಪುರದಲ್ಲಿ ಯಡಿಯೂರಪ್ಪ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿರುವುದು ದೃರದೃಷ್ಟಕರ. ಯಾರೋ ತಪ್ಪು ತಿಳಿವಳಿಕೆಯಿಂದ ಪ್ರಚೋದನೆ ಕೊಟ್ಟಿದ್ದು, ಘಟನೆ ಸಂಭವಿಸಿದೆ. ವಿಶೇಷವಾಗಿ ಬಿಎಸ್ ಯಡಿಯೂರಪ್ಪನವರ ರಾಜಕಾರಣವನ್ನು ನಾನು ಆರಂಭದಿಂದಲೂ ನೋಡುತ್ತಿದ್ದೇನೆ. ಬಂಜಾರ ಸಮುದಾಯದ ಎಲ್ಲಾ ಬೇಡಿಕೆಗಳನ್ನು ಯಡಿಯೂರಪ್ಪ ಈಡೇರಿಸಿಕೊಂಡು ಬಂದಿದ್ದಾರೆ” ಎಂದು ತಿಳಿಸಿದ್ದಾರೆ.

“ಇಲ್ಲೇ ಸಮೀಪದ ಸುರಗೊಂಡನ ಕೊಪ್ಪ ಅಭಿವೃದ್ಧಿಗೆ ಯಥೇಚ್ಛ ಅನುದಾನವನ್ನು ನೀಡಿದ್ದರು. ಅವರ ಶ್ರದ್ಧಾ ಕೇಂದ್ರವಾದಂತಹ ಸುರಗೊಂಡನಕೊಪ್ಪವನ್ನ ಅಭಿವೃದ್ಧಿ ಮಾಡುವ ಮೂಲಕ ಅವರ ಗೌರವ ಇನ್ನೂ ಹೆಚ್ಚಾಗುವಂತೆ ಮಾಡಿದ್ದಾರೆ. ಮನೆ ಮೇಲೆ ಕಲ್ಲು ತೂರಿದರೂ ಕೂಡ ಈ ಘಟನೆ ಕುರಿತು ಯಾವುದೇ ಕ್ರಮ ಜರುಗಿಸಬೇಡಿ ಎಂದು ಯಡಿಯೂರಪ್ಪನವರು ಹೇಳಿದ್ದಾರೆ” ಎಂದಿದ್ದಾರೆ.

ಪರಿಶಿಷ್ಟ ಸಮುದಾಯಗಳಲ್ಲಿ ಒಳ ಮೀಸಲಾತಿ ನೀಡಿಕೆಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಸದಾಶಿವ ವರದಿಯನ್ನು ರಾಜ್ಯ ಸರ್ಕಾರವು ಕೇಂದ್ರಕ್ಕೆ ಶಿಫಾರಸು ಮಾಡುವ ನಿರ್ಧಾರವನ್ನು ವಿರೋಧಿಸಿ ಶಿಕಾರಿಪುರದಲ್ಲಿ ಸೋಮವಾರ ಬಂಜಾರ ಸಮಾಜದವರು ನಡೆಸಿದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು.

ಪ್ರತಿಭಟನಾಕಾರರು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದರು. ಈ ವೇಳೆ ಪೊಲೀಸರು ಅವರನ್ನು ತಡೆದಿದ್ದರು. ದರೆ ಕೆಲವು ಕಿಡಿಗೇಡಿಗಳು ಯಡಿಯೂರಪ್ಪನವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಕಲ್ಲು ತೂರಾಟದಿಂದ ಮನೆಯ ಕಿಟಕಿ ಗಾಜಿಗೆ ಹಾನಿಯಾಗಿದೆ. ತಡೆಯಲು ಬಂದ ಪೊಲೀಸರ ಮೇಲೂ ಕಲ್ಲು ತೂರಾಟ ಮಾಡಲಾಗಿದೆ. ಯಡಿಯೂರಪ್ಪ ನಿವಾಸದ ಮುಂದೆ ಹಾಕಲಾಗಿದ್ದ ಬ್ಯಾನರ್​ಗಳನ್ನು ಸಹ ಹರಿದು ಹಾಕಲಾಗಿದೆ. ನಿವಾಸದ ಮೇಲೆ ಚಪ್ಪಲಿ ಎಸೆದು ಆಕ್ರೋಶ ಹೊರಹಾಕಿದ್ದರು.

ರಾಜ್ಯ ಸರ್ಕಾರ ಹೊರಡಿಸಿರುವ ಮೀಸಲಾತಿ ಪ್ರಮಾಣದ ವಿರುದ್ಧ ಬಂಜಾರ ಸಮುದಾಯದ ಯುವಕರು ನಗರದ ಅಂಬೇಡ್ಕರ್ ಸರ್ಕಲ್‌ನಿಂದ ತಾಲೂಕು ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ್ದರು. ಮಿನಿ ವಿಧಾನಸೌಧ, ಬಸ್ ನಿಲ್ದಾಣದ ಬಳಿ ಸರಕಾರ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆ ಕೂಗಿದ್ದರು.

ಈ ವೇಳೆ ಪಟ್ಟಣದಲ್ಲಿ ಹಾಕಲಾಗಿದ್ದ ಬಿಜೆಪಿ, ಪ್ರಧಾನಿ ಮೋದಿ, ಮುಖ್ಯಮಂತ್ರಿ ಬೊಮ್ಮಾಯಿ ಸೇರಿದಂತೆ ಬಿಜೆಪಿ ನಾಯಕರ ಬ್ಯಾನರ್, ಫ್ಲೆಕ್ಸ್‌ಗಳನ್ನು ಕಿತ್ತೊಗೆದಿದ್ದರು. ಟೈರ್‌, ಸೀರೆಗಳಿಗೆ ಬೆಂಕಿ ಹಚ್ಚಿ,  ಆಕ್ರೋಶ ವ್ಯಕ್ತಪಡಿಸಿದ್ದರು.

ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದರು. ಘಟನೆಯಲ್ಲಿ ಪ್ರತಿಭಟನಾಕಾರರು ಮತ್ತು ಕೆಲವು ಪೊಲೀಸರು ಗಾಯಗೊಂಡಿದ್ದರು ಎಂದು ತಿಳಿದು ಬಂದಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...