Homeಕರ್ನಾಟಕಜಾತ್ಯಾತೀತ ಮತದಾರರ ಹಿತಕ್ಕಿಂತ ಕುಟುಂಬದ ಹಿತವೇ ಮುಖ್ಯವಾಯ್ತೆ?: ಜೆಡಿಎಸ್‌ಗೆ ಕಾಂಗ್ರೆಸ್ ಪ್ರಶ್ನೆ

ಜಾತ್ಯಾತೀತ ಮತದಾರರ ಹಿತಕ್ಕಿಂತ ಕುಟುಂಬದ ಹಿತವೇ ಮುಖ್ಯವಾಯ್ತೆ?: ಜೆಡಿಎಸ್‌ಗೆ ಕಾಂಗ್ರೆಸ್ ಪ್ರಶ್ನೆ

- Advertisement -
- Advertisement -

ಕೇವಲ ಕುಟುಂಬದ ಹಿತಾಸಕ್ತಿಗಾಗಿ ಜಾತ್ಯಾತೀತತೆಯನ್ನು ವಿಸರ್ಜಿಸಿರುವ ಜೆಡಿಎಸ್, ತನ್ನ ಅಲ್ಪಸಂಖ್ಯಾತ ಮತದಾರರಿಗೆ ಏನೆಂದು ಉತ್ತರಿಸುತ್ತದೆ? ಎಂದು ಕಾಂಗ್ರೆಸ್, ಜೆಡಿಎಸ್ ವಿರುದ್ಧ ಪ್ರಶ್ನೆ ಮಾಡಿದೆ.

ಶುಕ್ರವಾರ ಬಿಜೆಪಿಯ ಎನ್‌ಡಿಎ ಮೈತ್ರಿಕೂಟವನ್ನು ಜೆಡಿಎಸ್ ಪಕ್ಷ ಅಧಿಕೃತವಾಗಿ ಸೇರ್ಪಡೆಯಾದ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂದಿರುವ ಕಾಂಗ್ರೆಸ್, ”ಕೇವಲ ಕುಟುಂಬದ ಹಿತಾಸಕ್ತಿಗಾಗಿ ಜಾತ್ಯಾತೀತತೆಯನ್ನು ವಿಸರ್ಜಿಸಿರುವ ಜೆಡಿಎಸ್ ತನ್ನ ಅಲ್ಪಸಂಖ್ಯಾತ ಮತದಾರರಿಗೆ ಏನೆಂದು ಉತ್ತರಿಸುತ್ತದೆ? ಬಿಜೆಪಿಯ ಅಲ್ಪಸಂಖ್ಯಾತ ಹಾಗೂ ದಲಿತ ವಿರೋಧಿ ನೀತಿಗಳಿಗೆ ಜೆಡಿಎಸ್ ನ ಸಮ್ಮತಿಯೂ ಇದೆಯೇ? ಹಿಂದೆ ಜೆಡಿಎಸ್ ಪಕ್ಷದಲ್ಲೇ ಇದ್ದ ಸಂಸದ ಡ್ಯಾನಿಷ್ ಅಲಿ ಅವರ ಬಗ್ಗೆ ಅತ್ಯಂತ ತುಚ್ಛವಾಗಿ ಮಾತಾಡಿದ ಬಿಜೆಪಿ ಸಂಸದನ ಮಾತನ್ನು ಜೆಡಿಎಸ್ ಕೂಡ ಅನುಮೋದಿಸುತ್ತದೆಯೇ? ಜಾತ್ಯಾತೀತ ಮತದಾರರ ಹಿತಕ್ಕಿಂತ ಕುಟುಂಬದ ಹಿತವೇ ಮುಖ್ಯವಾಯ್ತೆ?” ಎಂದು ಕೇಳಿದೆ.

”ಬಿಜೆಪಿ ಅಧಿಕಾರದಲ್ಲಿ ಇದ್ದಾಗಲೂ ಜೆಡಿಎಸ್ ಬಿಜೆಪಿಯ ಬಿ ಟೀಮ್ ಆಗಿಯೇ ವರ್ತಿಸುತ್ತಿತ್ತು, ವಿರೋಧ ಪಕ್ಷವಾಗಿದ್ದರೂ ಬಿಜೆಪಿಯ ದುರಾಡಳಿತವನ್ನು ಪ್ರಶ್ನಿಸುವ, ವಿರೋಧಿಸುವ ಕೆಲಸ ಮಾಡಿರಲೇ ಇಲ್ಲ. ಕದ್ದು ಮುಚ್ಚಿ ಲವ್ವಿಡವ್ವಿ ಮಾಡುತ್ತಿದ್ದ ಜೆಡಿಎಸ್ ಹಾಗೂ ಬಿಜೆಪಿ ಈಗ ಅಧಿಕೃತವಾಗಿ ಹಾರ ಬದಲಿಸಿಕೊಂಡಿವೆ ಅಷ್ಟೇ. ಜೆಡಿಎಸ್‌ನವರ ಕಣ್ಣೀರಿನಂತೆ ಅವರ ಜಾತ್ಯತೀತತೆಯ ಮುಖವಾಡವೂ ನಕಲಿ” ಎಂದು ಟೀಕಿಸಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. Your assessment is real. For short gain JDS has taken a huge risk. Here Muslims will desert JDS and large chunk of communal minded Hindus anyway will be with BJP. Here looser will be JDS. Congress votes will remain unaffected.

LEAVE A REPLY

Please enter your comment!
Please enter your name here

- Advertisment -

Must Read

ಹಮಾಸ್ ನಾಯಕ ಸಿನ್ವಾರ್, ಇಸ್ರೇಲ್ ಪ್ರಧಾನಿ ನೆತನ್ಯಾಹು ವಿರುದ್ದ ಬಂಧನ ವಾರೆಂಟ್‌ಗೆ ಆಗ್ರಹ

0
ಗಾಝಾದ ಹಮಾಸ್ ನಾಯಕ ಯಾಹ್ಯಾ ಸಿನ್ವಾರ್ ಮತ್ತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ (ಐಸಿಸಿ) ಕೋರ್ಟ್‌ನಿಂದ ಬಂಧನ ವಾರೆಂಟ್ ಕೋರುವುದಾಗಿ ನ್ಯಾಯಾಲಯದ ಪ್ರಾಸಿಕ್ಯೂಟರ್ ಕರೀಮ್ ಖಾನ್ ಸೋಮವಾರ ಸಿಎನ್‌ಎನ್‌ಗೆ...