Homeಕರ್ನಾಟಕಸುಸ್ತಿದಾರ ರೈತರು ಪಾವತಿಸುವ ಸಾಲದ ಬಡ್ಡಿ ಮನ್ನ, ಸರ್ಕಾರಿ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಮೀಸಲು: ಸಂಪುಟ ನಿರ್ಧಾರ

ಸುಸ್ತಿದಾರ ರೈತರು ಪಾವತಿಸುವ ಸಾಲದ ಬಡ್ಡಿ ಮನ್ನ, ಸರ್ಕಾರಿ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಮೀಸಲು: ಸಂಪುಟ ನಿರ್ಧಾರ

- Advertisement -
- Advertisement -

ರಾಜ್ಯದ ಸಹಕಾರ ಸಂಘಗಳಲ್ಲಿನ ಸುಸ್ತಿದಾರ ರೈತರು ಸಾಲದ ಅಸಲು ಪಾವತಿಸಿದಲ್ಲಿ ಅದರ ಮೇಲಿನ ಒಟ್ಟು 440.20 ಕೋಟಿ ರೂ.ಗಳ ಬಡ್ಡಿ ಮನ್ನಾ ಹಾಗೂ ರಾಜ್ಯ ಸಿವಿಲ್ ಸೇವೆಗಳ ನೇರ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಶೇಕಡ.2 ರಷ್ಟು ಮೀಸಲಾತಿ ನೀಡುವ ಬಗ್ಗೆ ಸಚಿವ ಸಂಪುಟದಲ್ಲಿ ನಿರ್ಧರಿಸಿತು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟದ ಪ್ರಮುಖ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ.

ಕರ್ನಾಟಕ ಸಿವಿಲ್ ಸೇವಾ(ಸಾಮಾನ್ಯ ನೇಮಕಾತಿ)(ತಿದ್ದುಪಡಿ)ನಿಯಮಗಳು, 2024ಕ್ಕೆ ಸಂಬಂಧಿಸಿದಂತೆ ಗೆಜೆಟ್ ಅಧಿಸೂಚನೆ ಹೊರಡಿಸಿದ ನಂತರ ಬರುವ ಆಕ್ಷೇಪಣೆಗಳನ್ನು ಪರಿಗಣಿಸಿದ ನಂತರ ರಾಜ್ಯ ಸಿವಿಲ್ ಸೇವೆಗಳ ನೇರ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಶೇಕಡ.2 ರಷ್ಟು ಮೀಸಲಾತಿ ನೀಡುವ ಬಗ್ಗೆ ಸಚಿವ ಸಂಪುಟ ನಿರ್ಧರಿಸಿತು. ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಕಟ್ಟಡ ನಿರ್ಮಾಣ ಕಾಮಗಾರಿಯ ಪರಿಷ್ಕೃತ ಅಂದಾಜು ಮೊತ್ತದ ₹142.47 ಕೋಟಿಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ರಾಯಚೂರು ವಿಶ್ವವಿದ್ಯಾಲಯ ಆವರಣದಲ್ಲಿ ‘ಕಲ್ಯಾಣ ಕರ್ನಾಟಕ ಮಾನವ ಜಿನೋಮ್ ಅಧ್ಯಯನ ಸಂಸ್ಥೆ’ ನಿರ್ಮಾಣವನ್ನು ₹47.32 ಕೋಟಿಗಳ ಅಂದಾಜು ಮೊತ್ತದಲ್ಲಿ ಕೆಕೆಆರ್ ಡಿ ಬಿ ಅನುದಾನದಲ್ಲಿ ಕೈಗೊಳ್ಳಲು ಸರ್ಕಾರದಿಂದ ಆಡಳಿತಾತ್ಮಕ ಅನುಮೋದನೆ ನೀಡಲಾಯಿತು. 2023-24ನೇ ಸಾಲಿಗೆ 93 ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳಲ್ಲಿನ 104 ‘ಕರ್ನಾಟಕ ಪಬ್ಲಿಕ್ ಶಾಲೆ;’ಳಿಗೆ ₹60 ಕೋಟಿ ಅಂದಾಜು ವೆಚ್ಚದಲ್ಲಿ ಕಲಿಕಾ ವಾತಾವರಣ ಅಭಿವೃದ್ಧಿಗೆ ಅನುಮೋದನೆ ನೀಡಲಾಯಿತು.

ಬೈಯ್ಯಪ್ಪನಹಳ್ಳಿ ಪ್ರದೇಶದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಸರ್.ಎಂ.ವಿಶ್ವೇಶ್ವರಯ್ಯ ರೈಲ್ವೆ ಟರ್ಮಿನಲ್ ಅನ್ನು ಸಂಪರ್ಕಿಸಲು ಮೇಲ್ಸೇತುವೆ ನಿರ್ಮಾಣ ಕಾಮಗಾರಿಯನ್ನು ₹263 ಕೋಟಿಗಳ ಅಂದಾಜು ಮೊತ್ತದಲ್ಲಿ ಕಾಮಗಾರಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಯಿತು. ಬೆಳಗಾವಿ ಜಿಲ್ಲೆಯ ಉಚ್ಛಗಾಂವ್ ಹಾಗೂ ಸಂತಿಬಸ್ತವಾಡ ಹೋಬಳಿಯ 20 ಕೆರೆಗಳನ್ನು ₹287.55 ಕೋಟಿ ಮೊತ್ತದಲ್ಲಿ ನಿರ್ಮಿಸುವ ಯೋಜನಾ ವರದಿಗೆ ಹಾಗೂ ಹಿರೇಬಾಗೇವಾಡಿಯ 61 ಕೆರೆಗಳನ್ನು ತುಂಬಿಸುವ ‘ಬಾಗೇವಾಡಿ ಕೆರೆ ತುಂಬಿಸುವ ಯೋಜನೆ’ಯ ₹519.10 ಕೋಟಿಗಳ ಅಂದಾಜು ಮೊತ್ತದ ಪರಿಷ್ಕೃತ ಯೋಜನಾ ವರದಿಗೆ ಸಭೆ ಅನುಮೋದನೆ ನೀಡಿದೆ.

ರಾಯಚೂರು ತಾಲ್ಲೂಕಿನ ಚಿಕ್ಕಮಂಚಾಲಿ ಗ್ರಾಮದ ಹತ್ತಿರ ತುಂಗಭದ್ರಾ ನದಿಗೆ ಅಡ್ಡಲಾಗಿ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣಕ್ಕಾಗಿ ₹158.10 ಕೋಟಿ ಯೋಜನಾ ವರದಿಗೆ ಅನುಮೋದನೆ, ಹಾವೇರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ ನಿರ್ಮಾಣ ಹಂತದಲ್ಲಿರುವ ಹೊಸ ವೈದ್ಯಕೀಯ ಕಾಲೇಜು, ಬಾಲಕ ಬಾಲಕಿಯರ ಹಾಸ್ಟೆಲ್, ಬೋಧಕ ಮತ್ತು ಬೋಧಕೇತರ ಹಾಸ್ಟೆಲ್, ಸಿಬ್ಬಂದಿಗಳ ವಸತಿ ನಿಲಯಗಳ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಲು ಪರಿಷ್ಕೃತ ಅಂದಾಜು ಮೊತ್ತ ₹499 ಕೋಟಿ ಮೊತ್ತದ ಯೋಜನೆ ಆರಂಭಕ್ಕೆ ಸರ್ಕಾರ ಒಪ್ಪಿಕೊಂಡಿದೆ.

‘ರಾಜ್ಯದ 6 ಕೈಗಾರಿಕಾ ತರಬೇತಿ ಸಂಸ್ಥೆಗಳನ್ನು, ರಾಯಚೂರು, ಬಳ್ಳಾರಿ, ವಿಜಯಪುರಗಳಲ್ಲಿ ₹52.81 ಕೋಟಿ ವೆಚ್ಚದಲ್ಲಿ ಮತ್ತು ಬೆಂಗಳೂರಿನ ಹೊಸೂರು ರಸ್ತೆ, ಕಲಬುರಗಿ, ಮೈಸೂರು ಸರ್ಕಾರಿ ಕೈಗಾರಿಕಾ ಸಂಸ್ಥೆಗಳಲ್ಲಿ ₹47.18 ಕೋಟಿ ವೆಚ್ಚದಲ್ಲಿ ಉನ್ನತೀಕರಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಕೆಲ ಮೂಲಭೂತ ಸೌಕರ್ಯ ಕಾಮಗಾರಿಗಳ ₹120 ಕೋಟಿ ಕ್ರಿಯಾ ಯೋಜನೆಗೆ ಅನುಮತಿ ನೀಡಿ, ದಿನಾಂಕ: 12-01-2024 ರಂದು ಹೊರಡಿಸಿದ ಸರ್ಕಾರಿ ಆದೇಶಕ್ಕೆ ಘಟನೋತ್ತರ ಅನುಮೋದನೆ ನೀಡಲಾಯಿತು. ಜತೆಗೆ, ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆ ಆವರಣಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ , ಲಾಂಡ್ರಿ ಕಟ್ಟಡ, ಎಸ್ ಟಿ ಪಿ ಉನ್ನತೀಕರಣ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಒಟ್ಟು ₹150 ಕೋಟಿ ಅಂದಾಜು ಮೊತ್ತದ ಕಾಮಗಾರಿಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ ವೈದ್ಯಕೀಯ ಕಾಲೇಜು, ಬಾಲಕ ಬಾಲಕಿಯರ ಹಾಸ್ಟೆಲ್, ಬೋಧಕ ಮತ್ತು ಬೋಧಕೇತರ ಹಾಸ್ಟೆಲ್, ಸಿಬ್ಬಂದಿಗಳ ವಸತಿ ನಿಲಯಗಳ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಲು ಪರಿಷ್ಕೃತ ಅಂದಾಜು ಮೊತ್ತ ₹455 ಕೋಟಿಗಳ ಕಾಮಗಾರಿಗೆ ಸಭೆ ಒಪ್ಪಿಕೊಂಡಿದೆ.

ಬಿಬಿಎಂಪಿ ವ್ಯಾಪ್ತಿಗೆ ಹೊಸದಾಗಿ ಸೇರ್ಪಡೆಗೊಂಡಿರುವ 110 ಹಳ್ಳಿಗಳಲ್ಲಿ ಬಿಟ್ಟುಹೋಗಿರುವ ಪ್ರದೇಶಗಳಿಗೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವತಿಯಿಂದ 2ನೇ ಹಂದಲ್ಲಿ ₹208.45 ಕೋಟಿ ಅಂದಾಜು ಮೊತ್ತದ ಕುಡಿಯು ನೀರಿನ ಯೋಜನೆ, ರಾಜ್ಯದ ಸಹಕಾರ ಸಂಘಗಳ ಮೂಲಕ ರೈತರು ಸಾಲ ಪಡೆದು 31-12-2023 ಕ್ಕೆ ಸುಸ್ತಿಯಾಗಿರುವ ಮಧ್ಯಾಮಾವಧಿ, ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳ ಅಸಲು ಪಾವತಿಸಿದಲ್ಲಿ ಅದರ ಮೇಲಿನ ಒಟ್ಟು ₹440.20 ಕೋಟಿಗಳ ಬಡ್ಡಿ ಮನ್ನಾ ಮಾಡುವ ಸಂಬಂಧ ಹೊರಡಿಸಿದ್ದ 20-01-2024ರ ಸರ್ಕಾರಿ ಅದೇಶಕ್ಕೆ ಘಟನೋತ್ತರ ಅನುಮೋದನೆಯನ್ನು ನೀಡಲಾಗಿದೆ.

ಇದನ್ನೂ ಓದಿ; ಬಣ್ಣಬಣ್ಣದ ಮಾತುಗಳ ಮಾಯಾಜಾಲ, ಕೇಂದ್ರದ ಬಜೆಟ್‌ನಲ್ಲಿ ಗಟ್ಟಿತನವಿಲ್ಲ: ಮಲ್ಲಿಕಾರ್ಜುನ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆನ್‌ಲೈನ್ ರೈಲು ಬುಕಿಂಗ್‌ಗಳಿಗೆ ಮಾತ್ರ ಅಪಘಾತ ವಿಮೆ ಏಕೆ: ಸುಪ್ರೀಂ ಕೋರ್ಟ್ ಪ್ರಶ್ನೆ

ಆನ್‌ಲೈನ್‌ನಲ್ಲಿ ಟಿಕೆಟ್ ಖರೀದಿಸುವ ಪ್ರಯಾಣಿಕರಿಗೆ ಮಾತ್ರ ಅಪಘಾತ ವಿಮಾ ರಕ್ಷಣೆಯನ್ನು ಏಕೆ ಒದಗಿಸಲಾಗುತ್ತಿದೆ? ಆಫ್‌ಲೈನ್ ಟಿಕೆಟ್ ಖರೀದಿಸುವವರಿಗೆ ಏಕೆ ವಿಸ್ತರಿಸುತ್ತಿಲ್ಲ ಎಂಬುದರ ಕುರಿತು ಸುಪ್ರೀಂ ಕೋರ್ಟ್ ಭಾರತೀಯ ರೈಲ್ವೆಯಿಂದ ವಿವರಣೆ ಕೇಳಿದೆ. ರೈಲ್ವೆ ವ್ಯವಸ್ಥೆ...

ಇಸ್ರೇಲ್ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶ ಕುರಿತ ವಿಶ್ವಸಂಸ್ಥೆಯ ವಿಚಾರಣಾ ಆಯೋಗದ ಅಧ್ಯಕ್ಷರಾಗಿ ಎಸ್. ಮುರಳೀಧರ್

ಪೂರ್ವ ಜೆರುಸಲೆಮ್ ಮತ್ತು ಇಸ್ರೇಲ್ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶದ ಕುರಿತಾದ ವಿಶ್ವಸಂಸ್ಥೆಯ ಸ್ವತಂತ್ರ ಅಂತರರಾಷ್ಟ್ರೀಯ ವಿಚಾರಣಾ ಆಯೋಗದ ಅಧ್ಯಕ್ಷರನ್ನಾಗಿ ಹಿರಿಯ ವಕೀಲ ಮತ್ತು ಒರಿಸ್ಸಾ ಹೈಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ಎಸ್....

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...