Homeಮುಖಪುಟಸ್ಟಾಂಡ್‌ಅಪ್‌ ಹಾಸ್ಯ ಕಲಾವಿದ ಮುನಾವರ್‌ ಫಾರೂಕಿಗೆ ಮಧ್ಯಂತರ ಜಾಮೀನು

ಸ್ಟಾಂಡ್‌ಅಪ್‌ ಹಾಸ್ಯ ಕಲಾವಿದ ಮುನಾವರ್‌ ಫಾರೂಕಿಗೆ ಮಧ್ಯಂತರ ಜಾಮೀನು

- Advertisement -
- Advertisement -

ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿದ್ದಾರೆ ಎಂಬ ಆರೋಪದಲ್ಲಿ ಬಂಧಿತನಾಗಿದ್ದ ಸ್ಟಾಂಡ್‌ಅಪ್‌ ಹಾಸ್ಯ ಕಲಾವಿದ ಮುನಾವರ್‌ ಫಾರೂಕಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ಅಲ್ಲದೆ ಸುಪ್ರೀಂ ಮಧ್ಯಪ್ರದೇಶ ಸರ್ಕಾರಕ್ಕೆ ನೋಟಿಸ್ ನೀಡಿದೆ.

ಮುನಾವರ್‌ ಫಾರೂಕಿ ಬಂಧನಕ್ಕೂ ಮುನ್ನ ನಿಯಮಾವಳಿಗಳನ್ನು ಅನುಸರಿಸಲಾಗಿಲ್ಲ ಮತ್ತು ಎಫ್‌ಐಆರ್ ಅಸ್ಪಷ್ಟವಾಗಿದೆ ಎಂದು ಸುಪ್ರೀಂ ಕೋರ್ಟ್ ಮಧ್ಯಪ್ರದೇಶ ಸರ್ಕಾರಕ್ಕೆ ನೋಟಿಸ್ ನೀಡಿದೆ. ಉತ್ತರ ಪ್ರದೇಶ ಪೊಲೀಸರು ಫಾರೂಕಿ ವಿರುದ್ಧ ಹೊರಡಿಸಿದ ಪ್ರೊಡಕ್ಷನ್ ವಾರಂಟ್ ಅನ್ನು ಸಹ ನ್ಯಾಯಾಲಯ ತಡೆಹಿಡಿದಿದೆ.

“ಅವರನ್ನು ಬಂಧಿಸುವ ಮೊದಲು ಅರ್ನೇಶ್ ಕುಮಾರ್ ತೀರ್ಪಿನ ನಿಯಮಗಳನ್ನು ಪಾಲಿಸದಿರುವುದು ಸರಿಯೇ? ಎಫ್‌ಐಆರ್‌ನಲ್ಲಿರುವ ಆರೋಪಗಳು ಸಾಕಷ್ಟು ಅಸ್ಪಷ್ಟವಾಗಿರುವುದನ್ನು ಹೊರತುಪಡಿಸಿಯೂ ನಮ್ಮ ತೀರ್ಪಿನಲ್ಲಿ ಸೂಚಿಸಲಾದ ಕಾರ್ಯವಿಧಾನವನ್ನು ಅನುಸರಿಸಲಾಗಿಲ್ಲ” ಎಂದು ನ್ಯಾಯಮೂರ್ತಿ ಆರ್.ಎಫ್.ನಾರಿಮನ್ ಹೇಳಿದ್ದಾರೆ.

ಮುನಾವರ್‌ ಫಾರೂಕಿ ಮತ್ತು ಸಹ ಆರೋಪಿ ನಳಿನ್ ಯಾದವ್ ಅವರು ಮೂರು ಬಾರಿ ಜಾಮೀನು ಅರ್ಜಿ ಹಾಕಿದ್ದರೂ ಸಹ ತಿರಸ್ಕೃತಗೊಂಡಿದ್ದವು. ಜನವರಿ 28 ರಂದು ಜಾಮೀನು ಅರ್ಜಿಯನ್ನು ಮಧ್ಯಪ್ರದೇಶದ ಹೈಕೋರ್ಟ್‌ನ ಇಂದೋರ್ ನ್ಯಾಯಪೀಠ ಗುರುವಾರ ತಿರಸ್ಕರಿಸಿತ್ತು.

ಹೊಸ ವರ್ಷಾಚರಣೆಯ ಕಾರ್ಯಕ್ರಮವೊಂದರಲ್ಲಿ ಹಿಂದೂ ದೇವತೆಗಳನ್ನು ಹಾಗೂ ಒಕ್ಕೂಟದ ಸರ್ಕಾರದ ಗೃಹ ಸಚಿವ ಅಮಿತ್‌ ಶಾ ಅವರನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿ ಹಾಸ್ಯ ಕಲಾವಿದ ಮತ್ತು ಇತರೆ ನಾಲ್ಕು ಜನ ಕಾರ್ಯಕ್ರಮ ಸಂಘಟಕರನ್ನು ಪೊಲೀಸರು ಜನವರಿ 2 ರಂದು ಬಂಧಿಸಿದ್ದರು. ಬಂಧನದ ಸಮಯದಲ್ಲಿ ಪೊಲೀಸರ ಸಮ್ಮುಖದಲ್ಲೇ ವ್ಯಕ್ತಿಯೊಬ್ಬರು ಥಳಿಸುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿ ಭಾರಿ ಆಕ್ರೋಶ ಉಂಟು ಮಾಡಿತ್ತು.

ಮುನಾವರ್‌ ಫಾರೂಕಿ ಸ್ಥಳೀಯ ರೆಸ್ಟೋರೆಂಟ್‌ವೊಂದರಲ್ಲಿ ತಮ್ಮ ಪ್ರದರ್ಶನವನ್ನು ಪ್ರಾರಂಭಿಸುವ ಮುನ್ನ ಇಂದೋರ್‌ನ ಬಿಜೆಪಿ ಶಾಸಕ ಮಾಲಿನಿ ಸಿಂಗ್ ಗೌಡ್ ಅವರ ಪುತ್ರ, ಹಿಂದೂ ರಕ್ಷಕ ಸಂಘಟನ್ ಮುಖ್ಯಸ್ಥ ಏಕಲವ್ಯ ಸಿಂಗ್ ಗೌಡ್ ದೂರಿನ ಮೇರೆಗೆ ಪೊಲೀಸರು ಬಂಧಿಸಿದ್ದರು.

ಅವರು ಇತರ ನಾಲ್ವರು ಸಹ ಆರೋಪಿಗಳೊಂದಿಗೆ ಜನವರಿ 2 ರಿಂದ ಜೈಲಿನಲ್ಲಿದ್ದಾರೆ. ನ್ಯಾಯಾಲಯವು ಅವರ ಜಾಮೀನು ಅರ್ಜಿಯನ್ನು ಜನವರಿ 25 ರಂದು ವಿಚಾರಣೆ ನಡೆಸಿದ್ದು ಆದೇಶವನ್ನು ಕಾಯ್ದಿರಿಸಿತ್ತು. ಇಂದು ಕೊನೆಗೂ ಅವರಿಗೆ ಮಧ್ಯಂತರ ಜಾಮೀನು ಲಭಿಸಿದೆ.


ಇದನ್ನೂ ಓದಿ: ಹಿಂದೂ ದೇವತೆಗಳ ಅಪಹಾಸ್ಯ: ಹಾಸ್ಯ ನಟನ ವಿರುದ್ದ ಯಾವುದೇ ಪುರಾವೆಯಿಲ್ಲ ಎಂದ ಪೊಲೀಸರು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...