Homeಮುಖಪುಟಪಂಜಾಬ್‌- ಆಡಳಿತರೂಢ ಕಾಂಗ್ರೆಸ್‌ ಆಂತರಿಕ ಕಚ್ಚಾಟ ಬೀದಿಗೆ: ಬೆಂಬಲಿಗರ ಪೋಸ್ಟರ್‌ ಯುದ್ಧ

ಪಂಜಾಬ್‌- ಆಡಳಿತರೂಢ ಕಾಂಗ್ರೆಸ್‌ ಆಂತರಿಕ ಕಚ್ಚಾಟ ಬೀದಿಗೆ: ಬೆಂಬಲಿಗರ ಪೋಸ್ಟರ್‌ ಯುದ್ಧ

ರಾಜ್ಯದಲ್ಲಿ ಮುಂದಿನ ವರ್ಷ ವಿಧಾನಸಭಾ ಚುನಾವಣೆ ನಡೆಯಲಿದೆ

- Advertisement -
- Advertisement -

ಪಂಜಾಬ್ ವಿಧಾನಸಭಾ ಚುನಾವಣೆ ಮುಂದಿನ ವರ್ಷ ನಡೆಯಲಿದ್ದು, ಆಡಳಿತರೂಢ ಕಾಂಗ್ರೆಸ್‌ನಲ್ಲಿ ಆಂತರಿಕ ಕಚ್ಚಾಟ ಹೆಚ್ಚಾಗುತ್ತಿದೆ. ಇದರ ಪರಿಣಾಮ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಹಾಗೂ ಶಾಸಕ, ಮಾಜಿ ಸಚಿವ ನವಜೋತ್ ಸಿಂಗ್ ಸಿಧು ಬೆಂಬಲಿಗರ ನಡುವೆ ಪೋಸ್ಟರ್ ಯುದ್ಧ ಭುಗಿಲೆದ್ದಿದೆ. ಸಿಧು ಅವರನ್ನು ಒಳಗೊಂಡ ಹಲವಾರು ಪೋಸ್ಟರ್‌ಗಳನ್ನು ಅಮರಿಂದರ್ ಅವರ ತವರೂರಾದ ಪಟಿಯಾಲದಲ್ಲಿ ಹಾಕಲಾಗಿದೆ. ಹಾಗೆಯೆ ಮುಖ್ಯಮಂತ್ರಿಯ ಪೋಸ್ಟರ್‌ಗಳು ಅಮೃತಸರದ ಅನೇಕ ಸ್ಥಳಗಳಲ್ಲಿ ಕಾಣಿಸಿಕೊಂಡಿವೆ.

ಪಕ್ಷದ ಆಂತರಿಕ ಬೇಗುದಿ ಶಮನಕ್ಕಾಗಿ ಹೈಕಮಾಂಡ್‌ ಕಸರತ್ತು ನಡೆಸುತ್ತಿದೆ ಎನ್ನಲಾಗಿದೆ. ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ರಚಿಸಿದ್ದ ಕಾಂಗ್ರೆಸ್ ಸಮಿತಿಯು ಪಕ್ಷದ ಶಾಸಕರು ಮತ್ತು ರಾಜ್ಯದ ಮುಖಂಡರ ಜೊತೆ ಕೆಲವು ದಿನಗಳ ಹಿಂದೆ ಸಭೆ ನಡೆಸಿತ್ತು. ಆದರೂ, ಕಾಂಗ್ರೆಸ್‌ನೊಳಗಿನ ಕಿತ್ತಾಟ ಇನ್ನೂ ಬಗೆಹರಿದಿಲ್ಲ.

ಇದನ್ನೂ ಓದಿ: ಬಹುಶಃ ಸಚಿನ್ ತೆಂಡೂಲ್ಕರ್ ಜೊತೆ ಮಾತನಾಡಿರಬಹುದು: ಸಚಿನ್ ಪೈಲಟ್ ಗರಂ

ಈ ಇಬ್ಬರೂ ನಾಯಕರ ನಡುವಿನ ಆಂತರಿಕ ಭಿನ್ನಾಭಿಪ್ರಾಯವನ್ನು ತಾರ್ಕಿಕವಾಗಿ ಅಂತ್ಯಕ್ಕೆ ಕೊಂಡೊಯ್ಯದಿದ್ದರೆ ಮುಂದಿನ ಚುನಾವಣೆಯಲ್ಲಿ ಅಮರಿಂದರ್‌ ನೇತೃತ್ವದ ಸರ್ಕಾರ ಸಾರ್ವಜನಿಕರನ್ನು ಎದುರಿಸುವುದು ಕಷ್ಟವಾಗುತ್ತದೆ ಎಂದು ಪಕ್ಷದ ಒಂದು ವಿಭಾಗವು ಹೇಳುತ್ತಿದೆ.

ಅಲ್ಲದೆ, ಅಧಿಕಾರಕ್ಕೆ ಬರುವ ಮೊದಲು ನೀಡಿದ ಹಲವು ಭರವಸೆಗಳನ್ನು ಈಡೇರಿಸುವಲ್ಲಿ ಸರ್ಕಾರ ವಿಫಲವಾಗಿದೆ. ವಿದ್ಯುತ್ ಖರೀದಿ ಒಪ್ಪಂದಗಳ ಬಗ್ಗೆ ಮರು ಮಾತುಕತೆ ನಡೆಸುವುದು ಹಾಗೂ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನಲ್ಲಿ ಸಲ್ಲಿಸಿದ ಡ್ರಗ್‌‌ ಮಾಫಿಯಾ ಕುರಿತ ವರದಿಯನ್ನು ಸಾರ್ವಜನಿಕರಿಗೆ ನೀಡುವುದು ಸೇರಿದಂತೆ ಹಲವು ವಿಚಾರಗಳಲ್ಲಿ ಸರ್ಕಾರವು ವಿಫಲಾವಾಗಿದೆ ಎಂದು ಆ ವಿಭಾಗ ಒಪ್ಪಿಕೊಂಡಿದೆ.

ಅಸಮಾಧಾನಗೊಂಡ ಬಣವು ರಾಜ್ಯದಲ್ಲಿ ಪಕ್ಷದ ನಾಯಕತ್ವವನ್ನು ಬದಲಿಸಲು ಪಕ್ಷದ ಹೈಕಮಾಂಡ್ ಮೇಲೆ ಒತ್ತಡ ಹೇರಲು ಪ್ರಯತ್ನಿಸುತ್ತಿದೆ ಎಂದು ಹೆಸರು ಹೇಳಲು ಇಚ್ಚಿಸದ ಕಾಂಗ್ರೆಸ್‌ನ ಹಿರಿಯ ಮುಖಂಡರೊಬ್ಬರನ್ನು ಉಲ್ಲೇಖಿಸಿ TNIE ವರದಿ ಮಾಡಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಒಂದು ವಾರ ಭಾರಿ ಮಳೆ: ಹವಾಮಾನ ಇಲಾಖೆ ಮಾಹಿತಿ

ಇದೀಗ ಬೆಂಬಲಿಗರ ಪೋಸ್ಟರ್ ಯುದ್ಧವು ಪಕ್ಷದೊಳಗಿನ ಉದ್ವಿಗ್ನತೆಯನ್ನು ಹೆಚ್ಚಿಸಿದೆ. ಪಟಿಯಾಲದಲ್ಲಿ ‘ಇಡೀ ಪಂಜಾಬ್ ಸಿಧು ಜೊತೆ ಇದೆ’ ಎಂದು ಹೇಳುವ ಪೋಸ್ಟರ್‌ಗಳು ಕಾಣಿಸಿಕೊಂಡಿದೆ. ಅವರನ್ನು ‘ರೈತರ ಧ್ವನಿ’ ಎಂದು ಬಣ್ಣಿಸುವ ಪೋಸ್ಟರ್‌ಗಳು ಸಹ ರಾರಾಜಿಸುತ್ತಿವೆ. ಜೊತೆಗೆ ಅಮರೀಂದರ್ ಬೆಂಬಲಿಗರು ಸಿಖ್ಖರ ಪವಿತ್ರ ನಗರವಾದ ಅಮೃತಸರದ ಅನೇಕ ಪ್ರದೇಶಗಳಲ್ಲಿ ‘2022 ರ ಕ್ಯಾಪ್ಟನ್’ ಮತ್ತು ‘ಏಕೈಕ ಕ್ಯಾಪ್ಟನ್’ ಎಂಬ ಸಂದೇಶಗಳೊಂದಿಗೆ ಪೋಸ್ಟರ್‌ಗಳನ್ನು ಹಾಕಿದ್ದಾರೆ.

ಈ ಎಲ್ಲದರ ಮಧ್ಯೆ, ಅಮರಿಂದರ್ ಅವರನ್ನು ಟೀಕಿಸಿದ ರಾಜ್ಯ ತಾಂತ್ರಿಕ ಶಿಕ್ಷಣ ಸಚಿವ ಚರಣಜಿತ್ ಸಿಂಗ್ ಚನ್ನಿ ಅವರು ತಮ್ಮದೇ ಆದ ಪೋಸ್ಟರ್ ಅನ್ನು ಹಾಕಿಕೊಂಡಿದ್ದು, ಅದರಲ್ಲಿ “ಪ್ರತಿ ಮನೆಯಲ್ಲೂ ಎಲ್ಲರ ಸಮಸ್ಯೆಗಳನ್ನು ಚನ್ನಿ ಪರಿಹರಿಸುತ್ತಾರೆ” ಎಂದು ಬರೆದುಕೊಂಡಿದ್ದಾರೆ.

ಪಂಜಾಬ್‌ನಲ್ಲಿ ಮುಂದಿನ ವರ್ಷ ವಿಧಾನಸಭಾ ಚುನಾವಣೆ ನಡೆಯಲಿದ್ದು, ಒಕ್ಕೂಟ ಸರ್ಕಾರದಲ್ಲಿ ಬಿಜೆಪಿಯ ಮೈತ್ರಿ ಪಕ್ಷವಾಗಿದ್ದ ಶಿರೋಮಣಿ ಅಕಾಲಿ ದಳ (ಎಸ್‌ಎಡಿ) ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷದೊಂದಿಗೆ (ಬಿಎಸ್‌ಪಿ) ಮೈತ್ರಿ ಮಾಡಿಕೊಂಡಿದೆ. ಅಕಾಲಿ ದಳವು ಕೇಂದ್ರದ ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಿರೋಧಿಸಿ ಬಿಜೆಪಿಯೊಂದಿಗೆ ಕಳೆದ ವರ್ಷ ಸಂಬಂಧವನ್ನು ಮುರಿದುಕೊಂಡಿತ್ತು.

ಇದನ್ನೂ ಓದಿ: ಮುಂದಿನ 2 ವರ್ಷ ನಾನೇ ಮುಖ್ಯಮಂತ್ರಿ ಎಂದ ಬಿ.ಎಸ್.ಯಡಿಯೂರಪ್ಪ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ: ಸುಪ್ರೀಂ ಮೊರೆ ಹೋಗಲಿರುವ ವಕ್ಪ್‌‌ ಮಂಡಳಿ | Naanu Gauri

ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ: ಸುಪ್ರೀಂ ಮೊರೆ ಹೋಗಲಿರುವ ವಕ್ಪ್‌‌ ಮಂಡಳಿ

0
ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನವು ತಮ್ಮ ಮಾಲೀಕತ್ವದಲ್ಲಿ ಇಲ್ಲ ಎಂದು ಬಿಬಿಎಂಪಿ ಹೇಳಿದ ನಂತರವೂ ಬಿಜೆಪಿ ಸರ್ಕಾರ ವಿವಾದವನ್ನು ಜೀವಂತವಾಗಿಡಲು ಶ್ರಮಿಸುತ್ತಿವೆ. ಇದೀಗ ಈದ್ಗಾ ಮೈದಾನವನ್ನು ಕಂದಾಯ ಭೂಮಿ ಎಂದು ಸರ್ಕಾರ ಹೇಳಿದೆ....