Homeಚಳವಳಿನ್ಯಾಯ ಕೇಳಿದ ಒಳಮೀಸಲಾತಿ ಹೋರಾಟಗಾರರ ಬಂಧನ

ನ್ಯಾಯ ಕೇಳಿದ ಒಳಮೀಸಲಾತಿ ಹೋರಾಟಗಾರರ ಬಂಧನ

- Advertisement -
- Advertisement -

ಒಳಮೀಸಲು ಜಾರಿಗೆ ಒತ್ತಾಯಿಸಿ ಸಿಎಂ ಮನೆಯೆಡೆಗೆ ಪಾದಯಾತ್ರೆ ಹೊರಟ ‘ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿ’ಯ ಮುಖಂಡರ ಮೇಲೆ ಲಾಠಿ ಚಾರ್ಜ್ ಮಾಡಲಾಗಿದ್ದು, ಹಲವರನ್ನು ಬಂಧಿಸಲಾಗಿದೆ.

ಒಳಮೀಸಲಾತಿ ಹೋರಾಟಗಾರ ಕರಿಯಪ್ಪ ಗುಡಿಮನಿಯವರ ತಲೆಗೆ ಪೆಟ್ಟಾಗಿದ್ದು ಅವರನ್ನು ಕೆ.ಸಿ ಜನರಲ್ ಆಸ್ಪತ್ರೆಗೆ ಸೇರಿಸಲಾಗಿದೆ. 62 ವರ್ಷ ವಯಸ್ಸಿನ ಅವರು ನವೆಂಬರ್ 28 ರಿಂದಲೂ ಹರಿಹರದಿಂದ ಪಾದಯಾತ್ರೆಯಲ್ಲಿ ನಡೆದು ಬೆಂಗಳೂರು ತಲುಪಿದ್ದರು. ಅವರ ಮೇಲಿನ ಹಲ್ಲೆ ನಡೆಸಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಉಳಿದಂತೆ ಅಂಬಣ್ಣ ಅರೋಲಿಕರ್ ಸೇರಿದಂತೆ ನೂರಾರು ಹೋರಾಟಗಾರರನ್ನು ಆಡುಗೋಡಿ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ.

ಇಂದು ಬೆಳಿಗ್ಗೆಯಿಂದಲೇ ಸಾವಿರಾರು ಜನರು ಒಳಮೀಸಲಾತಿ ಜಾರಿಗಾಗಿ ಹೋರಾಟ ಆರಂಭಿಸಿದ್ದರು. ಮಳೆ-ಚಳಿ-ಗಾಳಿ ಲೆಕ್ಕಿಸದೆ ಸದಾಶಿವ ಆಯೋಗದ ವರದಿ ಚರ್ಚೆ ಮತ್ತು ಜಾರಿಗೊಳಿಸಬೇಕೆಂದು ಒತ್ತಾಯಿಸಿದ್ದರು. ಸಚಿವ ವಿ.ಸೋಮಣ್ಣ ಮನವಿ ಆಲಿಸಲು ಬಂದಾಗ ಧಿಕ್ಕಾರ ಕೂಗಿ ಸಿಎಂ ಬೊಮ್ಮಾಯಿಯವರೆ ಬರಬೇಕೆಂದು ಪಟ್ಟು ಹಿಡಿದಿದ್ದರು.

ಸಂಜೆ 6 ಗಂಟೆಯಾದರೂ ಸಹ ಪ್ರತಿಭಟನಾ ಸ್ಥಳಕ್ಕೆ ಸಿಎಂ ಬರಲಿಲ್ಲ. ಪೊಲೀಸರು ಹೋರಾಟ ನಿಲ್ಲಿಸಲು ಮನವಿ ಮಾಡಿದರು. ಆದರೆ ಹೋರಾಟಗಾರರು ಸಿಎಂ ಮನೆ ಕಡೆ ಪಾದಯಾತ್ರೆಗೆ ಮುಂದಾದರು. ಆಗ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆದಿದೆ. ಗುಂಪು ಚದುರಿಸಲು ಲಾಠೀಚಾರ್ಜ್ ಮಾಡಿದ ಪೊಲೀಸರು ಮುಖಂಡರನ್ನು ಬಂಧಿಸಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಕರಿಯಪ್ಪ ಗುಡಿಮನಿಯವರು, “ಸಮುದಾಯ 35 ವರ್ಷದಿಂದ ಒಳಮೀಸಲಾತಿಗಾಗಿ ಹೋರಾಡುತ್ತಿದೆ. 13 ದಿನದಿಂದ ಹರಿಹರದಿಂದ ನಡೆದಿದ್ದೇವೆ. ಇಂದು 50 ಸಾವಿರದಷ್ಟು ಜನ ಸೇರಿದ್ದಾರೆ. ಆದರೆ ನಮ್ಮ ಅಳಲು ಆಲಿಸುವ ಬದಲು ಸರ್ಕಾರ ನಮ್ಮ ಮೇಲೆ ಲಾಠೀ ಚಾರ್ಜ್ ಮಾಡಿದೆ. ನಮ್ಮನ್ನು ಬಂಧಿಸಿದೆ. ಈ ಹಿಂದೆ ಬೆಳಗಾವಿಯಲ್ಲಿಯೂ ಸಹ ನಮ್ಮ ಮೇಲೆ ಲಾಠೀ ಚಾರ್ಜ್ ಮಾಡಿತ್ತು ಬಿಜೆಪಿ ಸರ್ಕಾರ. ನನ್ನ ತಲೆಗೆ ಪಟ್ಟಾಗಿದೆ. ಆಸ್ಪತ್ರೆಯಲ್ಲಿದ್ದೇನೆ. ನನ್ನ ಪ್ರಾಣ ಹೋದರೂ ಚಿಂತೆ ಇಲ್ಲ. ಹೋರಾಟ ನಿಲ್ಲಬಾರದು. ಸಮುದಾಯ ಸೋಲಬಾರದು. ನಾಳೆ ಇನ್ನೂ ಬಿರುಸಿನ ಹೋರಾಟ ನಡೆಯಲಿದೆ. ಎಲ್ಲಾ ಬಂಧುಗಳು ಗೆಲ್ಲುವ ಹೋರಾಟಕ್ಕೆ ಸಿದ್ಧರಾಗೋಣ” ಎಂದರು.

ಬಂಧನಕ್ಕೆ ತೀವ್ರ ಖಂಡನೆ

ಒಳ ಮೀಸಲಾತಿ ಹೋರಾಟಗಾರರನ್ನು ಬಂಧಿಸಿದ ಹೇಡಿ ಸರ್ಕಾರ, ಪೋಲೀಸರ ಮೂಲಕ ದಲಿತರ ರಕ್ತ ಹರಿಸಿದ ಬೊಮ್ಮಾಯಿ ಸರ್ಕಾರ ಎಂದು ಹಲವರು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಇದನ್ನೂ ಓದಿ: ರಕ್ತವನ್ನು ಚೆಲ್ಲುತ್ತೇವೆ, ಒಳಮೀಸಲಾತಿ ಪಡೆಯುತ್ತೇವೆ: ಬೆಂಗಳೂರಿನಲ್ಲಿ ಭೀಮಸೈನಿಕರ ಘರ್ಜನೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನೀವು ಮೊದಲು ವೋಟ್ ಕೊಟ್ಟಿದ್ದೀರಲ್ಲ ಬಿಜೆಪಿಗೆ ಅದಕ್ಕೆ ಹೀಗೆ ಆಗಿದೆ ಬಿಜೆಪಿ ಹಣೆಬರ ಗೊತ್ತಿದ್ದು ನೀವು ದಲಿತರಾಗಿ ಬಿಜೆಪಿಗೆ ವೋಟು ಕೊಡ್ತೀರಲ್ಲ …..ದಲಿತ ವಿರೋಧಿ ಸರಕಾರ ಅಲ್ವಾ ನನ್ನ ಬಂಧುಗಳೇ …. ಕಾಂಗ್ರೆಸ್ ಸರಕಾರ ಇರುವಾಗ ಶಿಸ್ತು ಇತ್ತು….ಸರಕಾರದಲ್ಲಿ ಬರೀ ಕೋಮುಗಲಭೆ ಹಗರಣ ರೌಡಿಸಂ ಬಿಟ್ರೆ ಇನ್ನೇನಿದೆ ಹೇಳಿ ಅಭಿವೃದ್ಧಿಯನ್ನು ಕಂಡಿದ್ದೀರಾ …..ಮುಂದಕ್ಕೆ ಆರಿಸಬೇಡಿ ಇಂತಹ ಸರಕಾರವನ್ನು ದಲಿತರು …..ಇದು ಶ್ರೀಮಂತರ ಸರಕಾರ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...