Homeಕರ್ನಾಟಕಒಳ ಮೀಸಲಾತಿ | ಜನಗಣತಿ ಅಂಕಿ-ಅಂಶ ಆಧರಿಸಿ ಬದಲಾವಣೆಗೆ ಬದ್ದ: ಸಿಎಂ ಸಿದ್ದರಾಮಯ್ಯ

ಒಳ ಮೀಸಲಾತಿ | ಜನಗಣತಿ ಅಂಕಿ-ಅಂಶ ಆಧರಿಸಿ ಬದಲಾವಣೆಗೆ ಬದ್ದ: ಸಿಎಂ ಸಿದ್ದರಾಮಯ್ಯ

"ಪರಿಶಿಷ್ಟ ಜಾತಿಗಳ ಶಾಶ್ವತ ಆಯೋಗ ರಚನೆ, ಶೀಘ್ರ ನೇಮಕಾತಿ ಪ್ರಕ್ರಿಯೆ ಆರಂಭ, ಒಂದು ಬಾರಿಗೆ ವಯೋಮಿತಿ ಸಡಿಲಿಸಲು ತೀರ್ಮಾನ"

- Advertisement -
- Advertisement -

ಒಳ ಮೀಸಲಾತಿಗೆ ಸಂಬಂಧಿಸಿದಂತೆ ಸರ್ಕಾರ ಈಗ ಕೈಗೊಂಡಿರುವ ತೀರ್ಮಾನದಲ್ಲಿ ಯಾವುದಾದರೂ ಮಾರ್ಪಾಡುಗಳ ಅಗತ್ಯತೆ ಕಂಡುಬಂದರೆ, ಅವುಗಳನ್ನು ಮುಂದಿನ ರಾಷ್ಟ್ರೀಯ ಜನಗಣತಿಯಲ್ಲಿನ ಅಂಕಿ-ಅಂಶಗಳನ್ನು ಆಧರಿಸಿ ಬದಲಾವಣೆಗೆ ಒಳಪಡಿಸುವ ಷರತ್ತಿಗೆ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಗೆ ಸಂಬಂಧಿಸಿದಂತೆ ಸರ್ಕಾರದ ತೀರ್ಮಾನದ ಕುರಿತು ಬುಧವಾರ (ಆ.20) ಅವರು ವಿಧಾನಸಭೆಯಲ್ಲಿ ಹೇಳಿಕೆ ನೀಡಿದರು.

ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್ ನಾಗಮೋಹನ್‌ದಾಸ್ ಅವರ ಆಯೋಗವು ರಾಜ್ಯದ 101 ಪರಿಶಿಷ್ಟ ಜಾತಿಗಳನ್ನು ಸಮಗ್ರವಾಗಿ ಅಧ್ಯಯನ ಮಾಡಿ 1 ಆಗಸ್ಟ್ 2025ರಂದು ವರದಿ ನೀಡಿತ್ತು. ಆಯೋಗವು ಪರಿಶಿಷ್ಟ ಜಾತಿಗಳಿಗೆ ಸೇರಿದ 1,05,09,871 ಜನರ ದತ್ತಾಂಶಗಳನ್ನು ಸಂಗ್ರಹಿಸಿದೆ. ಶೇ.93ರಷ್ಟು ಪರಿಶಿಷ್ಟ ಜಾತಿಗಳ ಜನಸಂಖ್ಯೆಯು ಈ ಸಮೀಕ್ಷೆಗೆ ಲಭ್ಯವಾಗಿದೆ. ಸಚಿವ ಸಂಪುಟವು ಈ ವರದಿಯನ್ನು ಕೂಲಂಕುಶವಾಗಿ ಪರಿಶೀಲಿಸಿದೆ ಎಂದು ಸಿಎಂ ತಿಳಿಸಿದರು.

19 ಆಗಸ್ಟ್ 2025ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ಆಯೋಗದ ಶಿಫಾರಸ್ಸುಗಳನ್ನು ಕೆಲವು ಮಾರ್ಪಾಟುಗಳೊಂದಿಗೆ ಅಂಗೀಕರಿಸಿದ್ದೇವೆ. ​ಎಡಗೈ ಸಂಬಂಧಿತ ಜಾತಿಗಳೆಂದು ಆಯೋಗವು ಗುರುತಿಸಿರುವ ಸಮುದಾಯಗಳಿಗೆ ಶೇ.6ರಷ್ಟು ಒಳಮೀಸಲಾತಿ ಕಲ್ಪಿಸಲು ತೀರ್ಮಾನಿಸಿದ್ದೇವೆ ಎಂದು ಹೇಳಿದರು.

ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗವು ಪರಯ, ಮೊಗೇರ ಮುಂತಾದ ಬಲಗೈ ಸಂಬಂಧಿತ ಜಾತಿಗಳನ್ನು ಎಡಗೈ ಸಂಬಂಧಿತ ಜಾತಿಗಳ ಜೊತೆ ಸೇರಿಸಿದೆ ಎಂಬುವುದನ್ನು ಗಮನಿಸಿದ ಸಚಿವ ಸಂಪುಟವು, ಈ ಜಾತಿಗಳನ್ನು ಬಲಗೈ ಸಂಬಂಧಿತ ಜಾತಿಗಳ ಜೊತೆ ಸೇರಿಸಿ ಬಲಗೈ ಸಂಬಂಧಿತ ಜಾತಿಗಳ ಸಮೂಹಕ್ಕೆ ಶೇ.6 ರಷ್ಟು ಮೀಸಲಾತಿ ಕಲ್ಪಿಸಲು ತೀರ್ಮಾನಿಸಿದ್ದೇವೆ ಎಂದು ಸಿಎಂ ವಿವರಿಸಿದರು.

ಇದರ ಜೊತೆಯಲ್ಲಿ ಆದಿ ಕರ್ನಾಟಕ, ಆದಿ ಆಂಧ್ರ, ಆದಿ ದ್ರಾವಿಡ ಗುಂಪುಗಳಲ್ಲಿನ 4,74,954 ಜನಸಂಖ್ಯೆಯನ್ನು ಎಡಗೈ ಸಂಬಂಧಿತ ಮತ್ತು ಬಲಗೈ ಸಂಬಂಧಿತ ಜಾತಿಗಳ ಜೊತೆ ಸಮಾನವಾಗಿ ಹಂಚಿಕೆ ಮಾಡಲು ತೀರ್ಮಾನಿಸಿದ್ದೇವೆ ಎಂದು ಮಾಹಿತಿ ನೀಡಿದರು.

​ಸ್ಪೃಶ್ಯ ಜಾತಿಗಳ ಗುಂಪಿಗೆ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರು ಶೇ. 4ರಷ್ಟು ಮೀಸಲಾತಿಯನ್ನು ಶಿಫಾರಸ್ಸು ಮಾಡಿದ್ದರು. ಹಾಗೆಯೇ, 59 ಜಾತಿಗಳ 5,22,099 ಜನಸಂಖ್ಯೆಯನ್ನು ಪ್ರವರ್ಗ-ಎ ಎಂದು ತೀರ್ಮಾನಿಸಿ ಶೇ.1 ರಷ್ಟು ಮೀಸಲಾತಿಯನ್ನು ಶಿಫಾರಸ್ಸು ಮಾಡಿದ್ದರು. ಕೆಲವು ತಾಂತ್ರಿಕ ಕಾರಣಗಳಿಂದ ಈ ಎರಡೂ ಗುಂಪುಗಳನ್ನು ಒಟ್ಟಿಗೆ ಸೇರಿಸಿ ಶೇ.5 ರಷ್ಟು ಮೀಸಲಾತಿ ನೀಡಲು ತೀರ್ಮಾನಿಸಿದ್ದೇವೆ ಎಂದು ಹೇಳಿದರು.

ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗವು ಎ,ಬಿ,ಸಿ,ಡಿ,ಇ ಎಂದು ಪ್ರವರ್ಗಗಳನ್ನಾಗಿ ವಿಭಾಗೀಕರಿಸಿ ಮಾಡಿದ್ದ ಶಿಫಾರಸ್ಸನ್ನು ಸಚಿವ ಸಂಪುಟವು ಎ,ಬಿ,ಸಿ ಎಂದು ಮೂರು ಪ್ರವರ್ಗಗಳನ್ನಾಗಿ ವಿಭಾಗೀಕರಿಸಲು ಹಾಗೂ ಎಡಗೈ ಸಂಬಂಧಿತ ಜಾತಿಗಳುಳ್ಳ ಎ ಪ್ರವರ್ಗಕ್ಕೆ – ಶೇ.6, ಬಲಗೈ ಸಂಬಂಧಿತ ಜಾತಿಗಳುಳ್ಳ ಬಿ ಪ್ರವರ್ಗಕ್ಕೆ – ಶೇ.6 ಹಾಗೂ ಸಿ ಪ್ರವರ್ಗಕ್ಕೆ – ಶೇ.5 ರಷ್ಟು ಒಳಮೀಸಲಾತಿ ನೀಡಲು ತೀರ್ಮಾನಿಸಿದ್ದೇವೆ ಎಂದರು.

ಪರಿಶಿಷ್ಟ ಜಾತಿಗಳಲ್ಲಿರುವ ಎಲ್ಲಾ 101 ಜಾತಿಗಳಿಗೆ ಶಿಕ್ಷಣ, ಉದ್ಯೋಗಾವಕಾಶ ಹಾಗೂ ಇನ್ನಿತರೆ ವಿಷಯಗಳಲ್ಲಿ ಅವಕಾಶಗಳನ್ನು ಒದಗಿಸುವಲ್ಲಿ ಸಮಾನತೆ ಮತ್ತು ನ್ಯಾಯ ಸಮ್ಮತತೆಯನ್ನು ಖಚಿತಪಡಿಸಿಕೊಳ್ಳುವ ದೃಷ್ಟಿಯಿಂದ ಈ ಮಾರ್ಪಾಡುಗಳನ್ನು ಮಾಡಲಾಗಿದೆ. ಈ ರೀತಿ ನಿರ್ಧಾರ ಮಾಡುವಾಗ ಸಚಿವ ಸಂಪುಟವು ಗೌರವಾನ್ವಿತ ಸರ್ವೋಚ್ಛ ನ್ಯಾಯಾಲಯದ ತೀರ್ಪಿನಲ್ಲಿ ನಮೂದಿಸಲಾದ ತತ್ವಗಳನ್ನು ಗಮನದಲ್ಲಿಟ್ಟುಕೊಂಡಿದೆ ಎಂದು ಹೇಳಿದರು.

​ಪರಿಶಿಷ್ಟ ಜಾತಿಗಳಲ್ಲಿನ ಚಲನಶೀಲತೆಯನ್ನು ಹಾಗೂ ಲಭ್ಯವಾಗುವ ದತ್ತಾಂಶಗಳನ್ನು ಪರಿಶೀಲಿಸಿಕೊಂಡು, ಕಾಲಕಾಲಕ್ಕೆ ಈ ಜಾತಿಗಳನ್ನು ಅಧ್ಯಯನ ಮಾಡಿ ವರದಿ ನೀಡಲು ಶಾಶ್ವತ ಪರಿಶಿಷ್ಟ ಜಾತಿಗಳ ಆಯೋಗವನ್ನು ರಚಿಸಲು ತೀರ್ಮಾನಿಸಿದ್ದೇವೆ. ​ಒಳ ಮೀಸಲಾತಿಯ ಕುರಿತಂತೆ ಆದೇಶ ಹೊರಡಿಸಿದ ಕೂಡಲೇ ನೇಮಕಾತಿ ಪ್ರಕ್ರಿಯೆಗಳನ್ನು ಪ್ರಾರಂಭಿಸಲು ಹಾಗೂ ಒಂದು ಬಾರಿಗೆ ವಯೋಮಿತಿ ಸಡಿಲಿಸಲು ತೀರ್ಮಾನಿಸಿದ್ದೇವೆ ಎಂದರು.

ಒಳ ಮೀಸಲಾತಿ ಹೋರಾಟಗಾರರ ಮೇಲಿನ ಮೊಕದ್ದಮೆಗಳನ್ನು ಹಿಂಪಡೆಯಲು ತೀರ್ಮಾನಿಸಿದ್ದೇವೆ ಎಂದು ಇದೇ ಸಂದರ್ಭದಲ್ಲಿ ಹೇಳಿದರು.

ನಮ್ಮ ಈ ತೀರ್ಮಾನವು ಒಳ ಮೀಸಲಾತಿ ಕುರಿತ ದಶಕಗಳ ಹೋರಾಟಕ್ಕೆ ನ್ಯಾಯ ಕಲ್ಪಿಸುವಲ್ಲಿ ಯಶಸ್ವಿಯಾಗಿದೆ ಎಂದು ಭಾವಿಸಿದ್ದೇವೆ. ಅಭಿವೃದ್ಧಿಶೀಲ ರಾಜ್ಯವಾದ ಕರ್ನಾಟಕವು ಸಾಮಾಜಿಕ ನ್ಯಾಯದ ವಿಚಾರದಲ್ಲೂ ಮುಂಚೂಣಿಯಲ್ಲಿದೆ ಎಂಬುದನ್ನು ನಮ್ಮ ಸರ್ಕಾರವು ಸಾಬೀತು ಮಾಡಿದೆ ಎಂದರು.

ಅಲೆಮಾರಿಗಳಿಗೆ ನ್ಯಾಯ ಸಿಗುವವರೆಗೂ ಹೋರಾಟ ಮುಂದುವರೆಯುತ್ತದೆ: ಒಳಮೀಸಲಾತಿ ಹೋರಾಟ ಸಮಿತಿ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...