Homeಚಳವಳಿಪರಿಶಿಷ್ಟರ ಒಳಮೀಸಲಾತಿ: ಬಿಜೆಪಿ ಗಿಮಿಕ್

ಪರಿಶಿಷ್ಟರ ಒಳಮೀಸಲಾತಿ: ಬಿಜೆಪಿ ಗಿಮಿಕ್

- Advertisement -
- Advertisement -

ರಾಜ್ಯ ಬಿಜೆಪಿ ಸರ್ಕಾರ ಎಂದಿನಂತ ಚುನಾವಣೆಯ ಹೊಸ್ತಿಲಲ್ಲಿ ಒಳಮೀಸಲಾತಿ ವರ್ಗೀಕರಣ ಮಾಡಿ ಕೇಂದ್ರಕ್ಕೆ ಶಿಫಾರಸ್ಸು ಮಾಡುವುದಾಗಿ ಹೇಳಿದೆ. ಆದರೆ ಒಳಮೀಸಲಾತಿ ಜಾರಿ ಎಂದೇ ಸುಳ್ಳು ಪ್ರಚಾರ ಮಾಡುತ್ತಿದೆ. ಇದರ ಹಿನ್ನೆಲೆಯಲ್ಲಿ ದಲಿತ ಬಾಂಧವರು ಕುಣಿದು ಕುಪ್ಪಳಿಸಿದ್ದಾರೆ. ಸಂತೋಷ. ಆದರೆ ಈ ಒಳಮೀಸಲಾತಿ ಶಿಫಾರಸ್ಸು ಜಾರಿಯಾಗುವುದೇ ಅಥವಾ ಕೇವಲ ಬಿಜೆಪಿ ಗಿಮಿಕ್ ಮಾತ್ರವೇ ಎಂಬುದನ್ನು ತಿಳಿಯಬೇಕಿದೆ.

1. ಒಳಮೀಸಲಾತಿ ವರ್ಗೀಕರಣ ಶಿಫಾರಸ್ಸು ಮಾದಿಗ ಸಮುದಾಯ ನಡೆಸಿದ 30 ವರ್ಷಗಳ ಹೋರಾಟದ ಪ್ರತಿಫಲವೇ ಹೊರತು ಯಾವುದೋ ಒಂದು ಸರ್ಕಾರದ ಸಾಧನೆಯಲ್ಲ.

2. ಜಸ್ಟೀಸ್ ಸದಾಶಿವ ಆಯೋಗ ಮಾಡಿದ ವರ್ಗೀಕರಣವು ಶೇ. 15 ರ ಮೀಸಲಾತಿಯನ್ನು ಆಧರಿಸಿತ್ತು. ಹಲವು ವರ್ಷಗಳ ಕಾಲ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ ಮಾಡಿ ಎಡಗೈ ಸಂಬಂಧಿತ ಜಾತಿಗಳಿಗೆ 6%, ಬಲಗೈ ಸಂಬಂಧಿತ ಜಾತಿಗಳಿಗೆ 5%, ಸ್ಪೃಶ್ಯ ಜಾತಿಗಳಿಗೆ 3%, ಇತರೆ ಪರಿಶಿಷ್ಟರಿಗೆ 1% ಮೀಸಲಾತಿ ನಿಗಧಿಗೊಳಿಸಿತ್ತು. ಈಗ ಬಿಜೆಪಿ ಸರ್ಕಾರ ಪರಿಶಿಷ್ಟರಿಗೆ ಹೆಚ್ಚಳಗೊಳಿಸಬೇಕೆಂದಿರುವ 17% ಮೀಸಲಾತಿಯಲ್ಲಿ ಮೇಲಿನಂತೆ ಕ್ರಮವಾಗಿ 6%, 5.5%, 4.5% ಮತ್ತು 1% ವರ್ಗೀಕರಿಸಿ ಆದೇಶಿಸಿದೆ. ಇದಕ್ಕೆ‌ಯಾವುದೇ ಸಮೀಕ್ಷೆಗಳು ಆಗಿಲ್ಲ. ಅದಕ್ಕೆ ಪುರಾವೆಗಳನ್ನೂ ಸಹ ಸರ್ಕಾರ ನೀಡಿಲ್ಲ. ಯಾವ ಆಧಾರದಲ್ಲಿ ಸ್ಪೃಶ್ಯ ಜಾತಿಗಳಿಗೆ ಹೆಚ್ಚುವರಿಯಾಗಿ 1.5% ನೀಡಿತೋ ತಿಳಿಯದಾಗಿದೆ. ಈ ಅನ್ಯಾಯವನ್ನು ಮುಚ್ಚಿಡಲು ಹೊಲೆಯರ ಮೂಗಿಗೆ 0.5% ಹೆಚ್ಚುವರಿ ತುಪ್ಪ ಸವರಿದೆ. ಹೆಚ್ಚಳ ಮಾಡುತ್ತೇವೆ ಎಂದಿರುವ 17% ನಲ್ಲಿ ಮಾದಿಗರಿಗೆ ಬಹುದೊಡ್ಡ ಅನ್ಯಾಯವಾಗಿದೆ.

3. ಆಯ್ತು, ಈಗಾಗಿರುವ ವರ್ಗೀಕರಣವನ್ನೇ ಒಪ್ಪಿಕೊಂಡರೂ ಅದು ಜಾರಿಯಾಗುತ್ತದೆಯೇ? ನೋಡೋಣ ಬನ್ನಿ. ಪರಿಶಿಷ್ಟರ ಮೀಸಲಾತಿಯನ್ನು 15% ನಿಂದ 17% ಗೆ ಹೆಚ್ಚಿಸಬೇಕೆಂದು ಆದೇಶ ಮಾಡಿರುವ ಬಿಜೆಪಿ ಸರ್ಕಾರದ ನಡೆ ಸಂಪೂರ್ಣ ವಂಚನೆಯಿಂದ ಕೂಡಿದೆ. ಪರಿಶಿಷ್ಟರಿಗೆ 17% ಗೆ ಮೀಸಲಾತಿ ಹೆಚ್ಚಳವಾದರೆ ಅದು ಸುಪ್ರೀಂ ಕೋರ್ಟ್ ವಿಧಿಸಿರುವ 50% ಮಿತಿ ದಾಟುತ್ತದೆ. ಹಾಗಾಗಿ 17% ಊರ್ಜಿತವಾಗಬೇಕೆಂದರೆ ದೆಹಲಿಯ ಸಂಸತ್ತಿನಲ್ಲಿ ಸಂವಿಧಾನದ 9 ನೇ ಶೆಡ್ಯೂಲಿಗೆ ಕಾಯ್ದೆ ಮಾಡಿ ಸೇರಿಸಬೇಕಿದೆ. ತಮಿಳುನಾಡು ಹೀಗೇ ಜಾರಿ ಮಾಡಿಕೊಂಡದ್ದು. ಮಹಾವಂಚನೆ ಏನೆಂದರೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಈ ಪ್ರಸ್ತಾವವನ್ನೇ ಕಳಿಸಿಲ್ಲ. ಕೇಂದ್ರ ಮಂತ್ರಿ ಎ.ನಾರಾಯಣಸ್ವಾಮಿ ಪರಿಶಿಷ್ಟರ ಮೀಸಲಾತಿ ಹೆಚ್ಚಳದ ಪ್ರಸ್ತಾವ ಕೇಂದ್ರ ಸರ್ಕಾರದ ಮುಂದೆ ಇಲ್ಲವೆಂದು ಹೇಳಿದ್ದಾರೆ. ಅಲ್ಲಿಗೆ 17% ಕತೆ ಮುಗಿಯಿತು. 17% ಗೇ ಮೀಸಲಾತಿ ಹೆಚ್ಚಳವಾಗಲ್ಲ ಎಂದರೆ 17% ವರ್ಗೀಕರಣ ಮಾಡಿರುವ ಒಳಮೀಸಲಾತಿ ಹೇಗೆ ಜಾರಿಯಾಗುತ್ತದೆ? ಸಾಧ್ಯವಿಲ್ಲ.

4. ಒಳಮೀಸಲಾತಿ ಜಾರಿ ಮಾಡಲು ರಾಜ್ಯ ಸರ್ಕಾರದ ಕೈಯಲ್ಲಿಲ್ಲವೇ? ಹೌದು ರಾಜ್ಯ ಸರ್ಕಾರ ಒಳಮೀಸಲಾತಿ ಜಾರಿಗೊಳಿಸುವುದು ಅಸಾಧ್ಯ. ಹಿಂದೆ ಪಂಬಾಬ್ ನ ಧರ್ವಿಂದರ್ ಸಿಂಗ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನ 5 ಜನ ನ್ಯಾಯಾಧೀಶರ ಪೀಠ ಒಳಮೀಸಲಾತಿ ಜಾರಿಗೊಳಿಸುವ ಹಕ್ಕು ರಾಜ್ಯಗಳಿಗಿಲ್ಲ ಎಂದಿತ್ತು. ಆದರೆ 2020 ರಲ್ಲಿ ಅರುಣ್ ಮಿಶ್ರಾ ಅವರನ್ನು ಒಳಗೊಂಡ 5 ಜನ ನ್ಯಾಯಾಧೀಶರ ಪೀಠವು ಒಳಮೀಸಲಾತಿ ಜಾರಿಗೊಳಿಸುವ ಹಕ್ಕು ರಾಜ್ಯಕ್ಕಿದೆ ಎಂದು ತೀರ್ಪು ನೀಡಿದೆ. ಇಲ್ಲಿ ಗಮನಿಸಬೇಕಾದ ಅಂಶವೇನೆಂದರೆ 5 ಜನ ನ್ಯಾಯಾಧೀಶರು ನೀಡಿದ ತೀರ್ಪನ್ನು ಮತ್ತೊಂದು 5 ಜನ ನ್ಯಾಯಾಧೀಶರ ಪೀಠವು ಅನೂರ್ಜಿತಗೊಳಿಸಲಾರದು. ಹಾಗಾಗಿ 7 ಜನ‌ ನ್ಯಾಯಾಧೀಶರ ಪೀಠದ ಮುಂದೆ ಈ ವಿಷಯ ಹೋಗಬೇಕು. ದುರಂತವೆಂದರೆ ಮೂರು ವರ್ಷವಾದರೂ 7 ಜನ ನ್ಯಾಯಾಧೀಶರ ಪೀಠವನ್ನು ರಚಿಸಿಲ್ಲ.

5. ಹಾಗಾದರೆ ಒಳಮೀಸಲಾತಿ ಜಾರಿ ಅಸಾಧ್ಯವೇ? ಇಲ್ಲ ಸಾಧ್ಯವಾಗುತ್ತದೆ. 2008 ರಲ್ಲಿ ಉಷಾ ಮೆಹ್ರಾ ಸಮಿತಿಯು ಸಂವಿಧಾನ ವಿಧಿ 341 ಕ್ಕೆ 3 ನೇ ತಿದ್ದುಪಡಿ ತರುವ ಮೂಲಕ ಒಳಮೀಸಲಾತಿಯನ್ನು ಜಾರಿಗೆ ತರಬಹುದಾಗಿದೆ ಎಂದು ವರದಿ‌ ನೀಡಿದೆ. EWS ಮಾದರಿಯಲ್ಲಿ ಮೂರೇ ದಿನದಲ್ಲಿ ಈ ಕೆಲಸವನ್ನು ಮೋದಿ ಸರ್ಕಾರ ಮಾಡಬಹುದು. ಆದರೆ ಪ್ರತಿಯೊಂದಕ್ಕೂ ಚುನಾವಣೆಯ ಗಿಮಿಕ್ ಮಾಡುವ ಮೋದಿ ಸರ್ಕಾರ ಇದನ್ನು 2024 ರ ಲೋಕಸಭಾ ಚುನಾವಣೆಯವರೆಗೆ ತಳ್ಳುತ್ತ ಬ್ಲಾಕ್‌ಮೇಲ್ ಮಾಡುತ್ತದೆ. 2024 ಕ್ಕೆ ಮೋದಿ ಸರ್ಕಾರ ಬಂದರೆ ಅಂಬೇಡ್ಕರ್ ಸಂವಿಧಾನವನ್ನೇ ಬದಲಾಯಿಸುವುದು ಖಚಿತ. ಆಗ ಒಳಮೀಸಲಾತಿ ಮಾತ್ರವಲ್ಲ ಮೀಸಲಾತಿಯೇ ಇರುವುದಿಲ್ಲ.

ಒಟ್ಟಾರೆ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಒಳಮೀಸಲಾತಿ ಹೋರಾಟಗಾರರಿಗೆ ಅದರಲ್ಲೂ ಮಾದಿಗ ಸಂಬಂಧಿ ಜಾತಿಗಳ ಮೂರು ದಶಕದ ಹೋರಾಟಕ್ಕೆ ಮೋಸ ಮಾಡಿದೆ. ಚುನಾವಣಾ ಹೊಸ್ತಿಲಲ್ಲಿ ಓಟಿನ‌ ಮೇಲೆ ಕಣ್ಣಿಟ್ಟು ಒಳಮೀಸಲಾತಿ ಹೋರಾಟಗಾರರನ್ನು ಕಣ್ಕಟ್ಟಿನ ಮೂಲಕ ವಂಚಿಸಲು ಹವಣಿಸಿದೆ. 2023 ರ ವಿಧಾನಸಭೆ ಚುನಾವಣೆ ಮತ್ತು 2024 ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಬ್ಲಾಕ್‌ಮೇಲ್ ತಂತ್ರಕ್ಕೆ ಕೈ ಹಾಕಿದೆ. ದಲಿತರೇ ಎಚ್ಚರ. ಸುಳ್ಳು ಹೇಳುವುದು ಹಾಗೂ ಬರಿಗೈ ಮ್ಯಾಜಿಕ್ ಮಾಡುವುದೇ ಬಿಜೆಪಿಯ ಚಾಣಕ್ಯ ತಂತ್ರ.

– ಸಾಕ್ಯ ಸಮಗಾರ

ಇದನ್ನೂ ಓದಿ; ಒಳಮೀಸಲಾತಿ: ಮಾದಿಗ ಸಮುದಾಯಕ್ಕೆ ಮತ್ತೆ ಮೋಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...