Homeಕರ್ನಾಟಕಒಳ ಮೀಸಲಾತಿ| ಮಧ್ಯಂತರ ವರದಿ ಅಂಗೀಕರಿಸಿದ ಸರ್ಕಾರ; ಆಯೋಗದ ಅವಧಿ 60 ದಿನಕ್ಕೆ ವಿಸ್ತರಣೆ

ಒಳ ಮೀಸಲಾತಿ| ಮಧ್ಯಂತರ ವರದಿ ಅಂಗೀಕರಿಸಿದ ಸರ್ಕಾರ; ಆಯೋಗದ ಅವಧಿ 60 ದಿನಕ್ಕೆ ವಿಸ್ತರಣೆ

- Advertisement -
- Advertisement -

ಒಳ ಮೀಸಲಾತಿ ಜಾರಿಗೊಳಿಸಲು ಪರಿಶಿಷ್ಟ ಜಾತಿಗಳಲ್ಲಿರುವ ಉಪ ಜಾತಿಗಳ ವರ್ಗೀಕರಣಕ್ಕೆ ಹೊಸದಾಗಿ ಸಮೀಕ್ಷೆ ನಡೆಸಿ ದತ್ತಾಂಶ ಸಂಗ್ರಹಿಸಬೇಕು ಎಂದು ನಿವೃತ್ತ ನ್ಯಾಯಮೂರ್ತಿ ಹೆಚ್‌.ಎನ್‌ ನಾಗಮೋಹನದಾಸ್ ಅವರ ಏಕಸದಸ್ಯ ಆಯೋಗ ಗುರುವಾರ (ಮಾ.27) ಸರ್ಕಾರಕ್ಕೆ ಸಲ್ಲಿಸಿರುವ ತನ್ನ ಮಧ್ಯಂತರ ವರದಿಯಲ್ಲಿ ಶಿಫಾರಸ್ಸು ಮಾಡಿದೆ.

ಹಾಗಾಗಿ, ಹೊಸದಾಗಿ ಸಮೀಕ್ಷೆ ನಡೆಸುವ ಜವಾಬ್ದಾರಿಯನ್ನು ನಾಗಮೋಹನದಾಸ್ ಆಯೋಗಕ್ಕೇ ನೀಡಿರುವ ಸರ್ಕಾರ, ಆಯೋಗದ ಅವಧಿಯನ್ನು 60 ದಿನಗಳಿಗೆ ವಿಸ್ತರಣೆ ಮಾಡಿದೆ.

ಸಚಿವ ಸಂಪುಟ ಸಭೆಯ ಬಳಿಕ ಗುರುವಾರ ಮಾಧ್ಯಮಗಳಿಗೆ ಮಾಹಿತಿ ನೀಡಿದ ಕಾನೂನು ಸಚಿವ ಹೆಚ್‌.ಕೆ ಪಾಟೀಲ್ “ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಕಲ್ಪಿಸುವ ಸಂಬಂಧ ನಾಗಮೋಹನದಾಸ್ ಆಯೋಗ ನೀಡಿರುವ ಮಧ್ಯಂತರ ವರದಿಯನ್ನು ಸಚಿವ ಸಂಪುಟ ಅಂಗೀಕರಿಸಿದೆ. ವರದಿಯಲ್ಲಿ ಉಪ ಜಾತಿಗಳ ವರ್ಗೀಕರಣಕ್ಕೆ ಹೊಸದಾಗಿ ಸಮೀಕ್ಷೆ ನಡೆಸಿ ದತ್ತಾಂಶ ಸಂಗ್ರಹಿಸುವಂತೆ ಶಿಫಾರಸ್ಸು ಮಾಡಲಾಗಿದೆ. ಹಾಗಾಗಿ, ಹೊಸ ಸಮೀಕ್ಷೆ ನಡೆಸುವ ಜವಾಬ್ದಾರಿಯನ್ನು ನಾಗಮೋಹನದಾಸ್ ಆಯೋಗಕ್ಕೇ ನೀಡಲು ಸಂಪುಟ ಸಭೆ ನಿರ್ಣಯ ಮಾಡಿದೆ. ಈ ಕಾರ್ಯ ಮುಗಿಸಲು ಅವರು 40 ದಿನಗಳ ಕಾಲಾವಕಾಶ ಕೇಳಿದ್ದಾರೆ. ನಾವು 60 ದಿನಗಳ ಕಾಲಾವಕಾಶ ಕೊಟ್ಟು ಆಯೋಗದ ಅವಧಿಯನ್ನು ವಿಸ್ತರಿಸಿದ್ದೇವೆ ಎಂದು ತಿಳಿಸಿದ್ದಾರೆ.

ನಾಗಮೋಹನದಾಸ್ ಆಯೋಗದ ಶಿಫಾರಸ್ಸುಗಳಲ್ಲಿ ಹೊಸ ವಿಷಯಗಳೇನಿದೆ ಹಾಗೂ ಎರಡು ತಿಂಗಳ ಕಾಲಾವಧಿಯಲ್ಲಿ ಹೊಸ ಸಮೀಕ್ಷೆ ಕೈಗೊಳ್ಳಲು ಸಾಧ್ಯವೇ? ಎಂಬ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು, “ರಾಜ್ಯದಲ್ಲಿ ಆರು ಸಾವಿರ ಗ್ರಾಮ ಪಂಚಾಯತ್‌ ಹಾಗೂ 300ಕ್ಕೂ ಹೆಚ್ಚು ವಾರ್ಡ್‌ಗಳಿವೆ. ಈ ಕಾರ್ಯವನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಉಸ್ತುವಾರಿಯಲ್ಲಿ ಆಧುನಿಕ ತಂತ್ರಜ್ಞಾನ ಬಳಸಿ ತೀವ್ರಗತಿಯಲ್ಲಿ ಕೈಗೊಳ್ಳಲು ಸಚಿವ ಸಂಪುಟ ಸೂಚನೆ ನೀಡಿದೆ. ಆಯೋಗವು ಸಮೀಕ್ಷೆ ಕೈಗೊಳ್ಳಲು ಬೇಕಿರುವ ಸೌಲಭ್ಯಗಳನ್ನು ಒದಗಿಸಲಾಗುವುದು. ಇದಕ್ಕೆ ಸಂಬಂಧಿಸಿದಂತೆ ಕಾರ್ಯದರ್ಶಿಗಳ ಸಭೆ ನಡೆಸಲಾಗುವುದು. ಕಾಂಗ್ರೆಸ್ ಸರ್ಕಾರ ಮೀಸಲಾತಿ ಸೌಲಭ್ಯಗಳನ್ನು ನೀಡಲು ಬದ್ದವಾಗಿದ್ದು, ಭವಿಷ್ಯದಲ್ಲಿ ಯಾವುದೇ ಗೊಂದಲಗಳಾಗದಂತೆ ದತ್ತಾಂಶಗಳು ಕರಾರುವಕ್ಕಾಗಿ ಪಡೆಯಲು ಹಾಗೂ ಜನರಿಗೆ ಮೀಸಲಾತಿಯ ಅನುಕೂಲ ಕಲ್ಪಿಸುವ ಉದ್ದೇವನ್ನು ಸರ್ಕಾರ ಹೊಂದಿದೆ” ಎಂದು ಹೇಳಿದ್ದಾರೆ.

“ಈ ಹಿಂದೆ ನಡೆಸಲಾಗಿರುವ ಜನಗಣತಿಯಲ್ಲಿ ಆದಿ ಕರ್ನಾಟಕ, ಆದಿ ದ್ರಾವಿಡ, ಆದಿ ಆಂಧ್ರ ಎಸ್‌ಸಿ ವರ್ಗಗಳ ಮಾಹಿತಿಗಳು ವರದಿಯಲ್ಲಿ ಇರುವುದಿಲ್ಲ. ಈ ದತ್ತಾಂಶಗಳಲಿಲ್ಲದೇ ಹೋದರೆ ಕಾನೂನಿನಡಿ ಮಾನ್ಯವಾಗಲು ಸಾಧ್ಯವಿಲ್ಲ. ಆದ್ದರಿಂದ ಎರಡು ತಿಂಗಳ ಕಾಲಾವಧಿಯಲ್ಲಿ ಹೊಸ ಸಮೀಕ್ಷೆ ಮಾಡಲು ನಿರ್ಧರಿಸಲಾಗಿದೆ” ಎಂದು ಸಮಾಜ ಕಲ್ಯಾಣ ಸಚಿವ ಹೆಚ್‌.ಸಿ ಮಹದೇವಪ್ಪ ವಿವರಿಸಿದ್ದಾರೆ.

ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಕಲ್ಪಿಸುವ ಸಂಬಂಧ ನೇಮಿಸಿರುವ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್ ನಾಗಮೋಹನದಾಸ್ ನೇತೃತ್ವದ ಆಯೋಗ ಗುರುವಾರ ರಾಜ್ಯ ಸರ್ಕಾರಕ್ಕೆ ತನ್ನ ಮಧ್ಯಂತರ ವರದಿ ಸಲ್ಲಿಸಿದೆ.

ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ನ್ಯಾ.ನಾಗಮೋಹನದಾಸ್ ಅವರು ವರದಿ ಸಲ್ಲಿಸಿದ್ದಾರೆ.

ಈ ವರದಿಯಲ್ಲಿ ನಾಲ್ಕು ಶಿಫಾರಸ್ಸುಗಳನ್ನು ಮಾಡಲಾಗಿದೆ. ಅವುಗಳನ್ನು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರ ಒಪ್ಪಿಕೊಂಡಿದೆ. ಆ ಶಿಫಾರಸ್ಸುಗಳು ಹೀಗಿವೆ…

1. ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿಯಲ್ಲಿರುವ ಉಪಜಾತಿಗಳ ವೈಜ್ಞಾನಿಕ ವರ್ಗೀಕರಣಕ್ಕೆ ಹೊಸದಾಗಿ ಸಮೀಕ್ಷೆ ನಡೆಸಿ ದತ್ತಾಂಶ ಸಂಗ್ರಹಿಸಬೇಕು.

2.ಆಧುನಿಕ ವಿಜ್ಞಾನ ಮತ್ತು ತಂತ್ರಜ್ಞಾನದ ಸಾಧನಗಳನ್ನು ಬಳಸಿ 30-40 ದಿನಗಳೊಳಗೆ ಹೊಸ ಸಮೀಕ್ಷೆ ನಡೆಸಬಹುದು ಎಂಬುದು ತಜ್ಞರ ಅಭಿಪ್ರಾಯ

3. ಹೊಸದಾದ ಸಮೀಕ್ಷೆ ನಡೆಸಲು ಅಗತ್ಯವಿರುವ ಪ್ರಶ್ನಾವಳಿ ಸಿದ್ಧಪಡಿಸುವುದು, ಯಾವ ಸಂಸ್ಥೆಯಿಂದ ಸಮೀಕ್ಷೆ ನಡೆಸಬೇಕು, ಸಿಬ್ಬಂದಿಗೆ ತರಬೇತಿ, ಸಂಪನ್ಮೂಲಗಳ ಕ್ರೂಢೀಕರಣದ ಇತ್ಯಾದಿ ಉಸ್ತುವಾರಿ ನೋಡಿಕೊಳ್ಳಲು ಉನ್ನತ ಮಟ್ಟದ ಸಮಿತಿ ರಚನೆ ಮಾಡಬೇಕು

4. ಹೊಸ ಸಮೀಕ್ಷೆಯಿಂದ ಸಂಗ್ರಹಿಸಿದ ದತ್ತಾಂಶದ ಆಧಾರದ ಮೇಲೆ ವರದಿಯಲ್ಲಿ ತಿಳಿಯಪಡಿಸಿರುವ ಮಾನದಂಡದಂತೆ ಪರಿಶಿಷ್ಟ ಜಾತಿಯ ಉಪಜಾತಿಗಳ ವರ್ಗೀಕರಣ ಮಾಡಿ ಲಭ್ಯವಿರುವ ಮೀಸಲಾತಿ ಪ್ರಮಾಣವನ್ನು ಆದ್ಯತೆ ಮೇಲೆ ಹಂಚಿಕೆ ಮಾಡಬೇಕು

ಕಾಂಗ್ರೆಸ್ ಸರ್ಕಾರವು ಒಳ ಮೀಸಲಾತಿ ಜಾರಿಗೆ ತರುವ ರಾಜಕೀಯ ಇಚ್ಛಾಶಕ್ತಿ ಹೊಂದಿದೆ: ಜಸ್ಟೀಸ್ ನಾಗಮೋಹನ್‌ ದಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...