Homeಚಳವಳಿಒಳಮೀಸಲಾತಿ: 101 ಜಾತಿ ಸಮೀಕ್ಷೆಗೆ ಸಚಿವ ಮುನಿಯಪ್ಪ ಸೂಚನೆ

ಒಳಮೀಸಲಾತಿ: 101 ಜಾತಿ ಸಮೀಕ್ಷೆಗೆ ಸಚಿವ ಮುನಿಯಪ್ಪ ಸೂಚನೆ

- Advertisement -
- Advertisement -

ಬೆಂಗಳೂರು: ಒಳಮೀಸಲಾತಿ ಕಲ್ಪಿಸುವ ಸಂಬಂಧ ಪರಿಶಿಷ್ಟ ಜಾತಿಯಲ್ಲಿನ 101 ಜಾತಿಗಳ ದತ್ತಾಂಶ ಸಂಗ್ರಹಕ್ಕೆ ಸಮೀಕ್ಷೆ ನಡೆಸಲು 54 ಸಾವಿರ ಶಿಕ್ಷಕರು ಮತ್ತು ಅಂಗನವಾಡಿ ಕಾರ್ಯಕರ್ತೆಯರನ್ನು ಬಳಸಿಕೊಂಡು ನಿಗದಿತ ಸಮಯದಲ್ಲಿ ಪೂರ್ಣಗೊಳಿಸಲು ಆಹಾರ ಸಚಿವ ಕೆ ಎಚ್‌ ಮುನಿಯಪ್ಪ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಪ್ರಜಾವಾಣಿ ವರದಿ ತಿಳಿಸಿದೆ.

ವಿಧಾನಸೌಧದ ತಮ್ಮ ಕಚೇರಿಯಲ್ಲಿ ಈ ಸಂಬಂಧ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ಅಭಿವೃದ್ಧಿ ಆಯುಕ್ತೆ ಉಮಾ ಮಹಾದೇವನ್ ಅವರನ್ನು ಈ ಕಾರ್ಯದ ಉಸ್ತುವಾರಿಯನ್ನಾಗಿ ಪ್ರಕಟಿಸಿದರು.

ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಮುನಿಯಪ್ಪ ಅವರು,101 ಜಾತಿಗಳಿಗೆ ಅನ್ಯಾಯ ಆಗದಂತೆ ಯಾವ ರೀತಿ ಒಳ ಮೀಸಲಾತಿ ನೀಡಬೇಕು ಎಂಬ ಕುರಿತು ಚರ್ಚಿಸಲಾಯಿತು. ಆದಿ ಕರ್ನಾಟಕ ಮತ್ತು ಆದಿ ದ್ರಾವಿಡ ಕುರಿತು ಇರುವ ಗೊಂದಲ ನಿವಾರಿಸಲು ಏನು ಮಾಡಬೇಕು ಎಂಬುದರ ಬಗ್ಗೆ ಅಧಿಕಾರಿಗಳಿಗೆ ಮಾರ್ಗದರ್ಶನ ನೀಡಲಾಯಿತು ಎಂದರು.

ಎರಡು ತಿಂಗಳಲ್ಲಿ ವರದಿ ಪಡೆಯಲು ಸೂಚಿಸಿದ್ದು, ಈಗಾಗಲೇ 15 ದಿನಗಳು ಕಳೆದಿವೆ. ತ್ವರಿತಗತಿಯಲ್ಲಿ ಮತ್ತು ಕಾಲ ಮಿತಿಯಲ್ಲಿ ಸಮೀಕ್ಷೆ ನಡೆಸಲು ಸೂಚಿಸಲಾಗಿದೆ ಎಂದರು.

ನಿವೃತ್ತ ನ್ಯಾಯಮೂರ್ತಿ ನಾಗ ಮೋಹನ್‌ದಾಸ್‌ ನೇತೃತ್ವದ ಆಯೋಗವು ಮಾರ್ಚ್‌ನಲ್ಲಿ ಮಧ್ಯಂತರ ವರದಿ ಸಲ್ಲಿಸಿ, ಒಳಮೀಸಲಾತಿ ನೀಡುವುದಕ್ಕಾಗಿ ಪರಿಶಿಷ್ಟ ಜಾತಿಯಲ್ಲಿನ 101 ಉಪಜಾತಿಗಳ ದತ್ತಾಂಶ ಸಂಗ್ರಹಿಸುವು ದಕ್ಕೆ ಹೊಸ ಸಮೀಕ್ಷೆ ನಡೆಸಬೇಕು ಎಂದು ಶಿಫಾರಸು ಮಾಡಿತ್ತು.

ಒಳಮೀಸಲಾತಿ ವರ್ಗೀಕರಣವನ್ನು ತ್ವರಿತವಾಗಿ ಮತ್ತು ವೈಜ್ಞಾನಿಕವಾಗಿ ಕೈಗೊಳ್ಳುವ ಸಂಬಂಧ, ಹೊಸ ಸಮೀಕ್ಷೆ ನಡೆಸುವ ಕಾರ್ಯವನ್ನು ನಾಗಮೋಹನ್‌ದಾಸ್‌ ಆಯೋಗಕ್ಕೇ ವಹಿಸಲು ಸಚಿವ ಸಂಪುಟ ಸಭೆ ನಿರ್ಣಯಿಸಿತ್ತು. ಸಮೀಕ್ಷಾ ಕಾರ್ಯವನ್ನು 60 ದಿನಗಳೊಳಗೆ ಪೂರ್ಣಗೊಳಿಸಿ ವರದಿ ಸಲ್ಲಿಸಲು ಅನುಕೂಲವಾಗುವಂತೆ ಆಯೋಗದ ಅವಧಿಯನ್ನು ಎರಡು ತಿಂಗಳವರೆಗೆ ವಿಸ್ತರಿಸಲಾಗಿತ್ತು.

ಸಭೆಯಲ್ಲಿ ಮಾಜಿ ಸಚಿವ ಎಚ್‌.ಆಂಜನೇಯ, ಮಾಜಿ ಸಂಸದ ಬಿ.ಎನ್. ಚಂದ್ರಪ್ಪ, ಸಮಾಜಕಲ್ಯಾಣ ಇಲಾಖೆ ಪ್ರಧಾನಕಾರ್ಯದರ್ಶಿ ಪಿ. ಮಣಿವಣ್ಣನ್, ಆಯುಕ್ತ ರಾಕೇಶ್ ಕುಮಾರ್‌, ನಿವೃತ್ತ ಐಎಎಸ್ ಅಧಿಕಾರಿಗಳಾದ ಗೋನಾಳ ಭೀಮಪ್ಪ, ತೇಗನೂರು, ಭೀಮಾಶಂಕರ್ ಇದ್ದರು.

ನಾಳೆ ಜಾತಿ ಗಣತಿ ವರದಿ ಬಹಿರಂಗವಾಗಲಿ: ಕಾಂಗ್ರೆಸ್‌ ಅಹಿಂದ ನಾಯಕರ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...