Homeಕರ್ನಾಟಕಒಳಮೀಸಲಾತಿ ಧರಣಿ| ಆಹ್ವಾನವಿಲ್ಲದೆ ವೇದಿಕೆಗೆ ಬಂದ ಬಿಜೆಪಿ ನಾಯಕರು; ಕೆಳಗಿಳಿಸಿದ ಹೋರಾಟಗಾರರು

ಒಳಮೀಸಲಾತಿ ಧರಣಿ| ಆಹ್ವಾನವಿಲ್ಲದೆ ವೇದಿಕೆಗೆ ಬಂದ ಬಿಜೆಪಿ ನಾಯಕರು; ಕೆಳಗಿಳಿಸಿದ ಹೋರಾಟಗಾರರು

- Advertisement -
- Advertisement -

ಜಸ್ಟೀಸ್ ನಾಗಮೋಹನ್ ದಾಸ್ ಆಯೋಗದ ವರದಿ ಅನ್ವಯ ಪರಿಶಿಷ್ಟ ಜಾತಿಯ (ಎಸ್‌ಸಿ) ಅಲೆಮಾರಿ ಸಮುದಾಯಗಳಿಗೆ ಶೇ.1ರಷ್ಟು ಪ್ರತ್ಯೇಕ ಮೀಸಲಾತಿ ನೀಡುವಂತೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ನಡೆಯುತ್ತಿರುವ ಅಹೋರಾತ್ರಿ ಹೋರಾಟ ತೀವ್ರಗೊಂಡಿದ್ದು, ಆಹ್ವಾನ ಇಲ್ಲದೆಯೇ ವೇದಿಕೆಗೆ ಆಗಮಿಸಿದ ಬಿಜೆಪಿ ನಾಯಕರನ್ನು ಹೋರಾಟಗಾರರು ವಾಪಸ್ ಕಳುಹಿಸಿದರು.

‘ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟ-ರಾಜ್ಯ ಸಮಿತಿ’ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಅಹೋರಾತ್ರಿ ಅನಿರ್ಧಿಷ್ಟಾವಧಿ ಧರಣಿ ನಡೆಯುತ್ತಿದೆ. ಈಗಾಗಲೇ ಸರ್ಕಾರ 6-6-5ರ ಅನುಪಾತದಲ್ಲಿ ಒಳಮೀಸಲಾತಿ ಜಾರಿ ಮಾಡಿದ್ದರೂ, ನಾಗಮೋಹನ್ ದಾಸ್ ಆಯೋಗದ ಸಲಹೆಯಾದ ಅಲೆಮಾರಿಗಳಿಗೆ ಶೇ.1ರ ಪ್ರತ್ಯೇಕ ಮೀಸಲಾತಿಯನ್ನು ಕೈಬಿಡಲಾಗಿದೆ. ಸರ್ಕಾರದ ನಿರ್ಧಾರವನ್ನು ಪುನರ್ ಪರಿಶೀಲನಗೆಗೆ ಒಳಪಡಿಸಿ ಅಲೆಮಾರಿಗಳಿಗೆ ಮೀಸಲಾತಿ ಕಲ್ಪಿಸಬೇಕು ಎಂದು ಹೋರಾಟ ಮುಂದುವರೆದಿದೆ.

ಪ್ರತಿಭಟನೆಗೆ ಹೋರಾಟ ಸಮಿತಿಯಿಂದ ಯಾವುದೇ ಆಹ್ವಾನ ಇರದಿದ್ದರೂ ಬಿಜೆಪಿ ಶಾಸಕರಾದ ಅಶ್ವತ್ಥ ನಾರಾಯಣ ಮತ್ತು ಅರವಿಂದ್ ಬೆಲ್ಲದ್ ಅವರು ಆಗಮಿಸಿದರು. ಬಿಜೆಪಿ ನಾಯಕರ ಈ ನಡೆಯಿಂದ ಕೆಲಹೊತ್ತು ಸ್ಥಳದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಯಿತು. ಇನ್ನು ಇದೇ ವೇಳೆ, ಶಾಸಕ ಅರವಿಂದ್ ಬೆಲ್ಲದ್ ಅವರು ಸಭೆಯನ್ನುದ್ದೇಶಿ ಮಾತನಾಡಿದರು. ಅವರ ಮಾತು ಮುಗಿಯುತ್ತಿದ್ದಂತೆಯೇ ಹೋರಾಟಗಾರರು ಬಿಜೆಪಿ ನಾಯಕರನ್ನು ವೇದಿಕೆಯಿಂದ ಕೆಳಗಿಳಿಸಿದರು.

ಈ ವೇಳೆ ಬಿಜೆಪಿ ನಾಯಕರಿಗೆ ತಾಕೀತು ಮಾಡಿದ ಹೋರಾಟಗಾರರು, “ಒಳಮೀಸಲಾತಿ ವಿಚಾರವಾಗಿ ನೀವು ಸದನದಲ್ಲಿ ಏನೆಲ್ಲಾ ಮಾತನಾಡುತ್ತಿದ್ದೀರಾ ಎಂಬುದನ್ನು ನಾವು ಗಮನಿಸುತ್ತೇವೆ. ಸದನದಲ್ಲಿ ತಾವೆಲ್ಲರೂ ಒಕ್ಕೋರಲಿನಿಂದ ಮಾತನಾಡಿ, ಅಲೆಮಾರಿಗಳ ಪ್ರತ್ಯೇಕ ಮೀಸಲಾತಿಗಾಗಿ ಮುಖ್ಯಮಂತ್ರಿಗಳ ಮನವೊಲಿಸಬೇಕು. ಒಂದು ವೇಳೆ ಈ ಬಗ್ಗೆ ಸದಸನದಲ್ಲಿ ಮಾತನಾಡಲು ತಮಗೆ ಅವಕಾಶ ಸಿಗದೇ ಇದ್ದರೆ, ತಾವುಗಳು ಬೇರೆ ವಿಚಾರದಲ್ಲಿ ಸದನ ಬಹಿಷ್ಕರಿಸಿದಂತೆ, ಈವಿಚಾರದಲ್ಲಿ ಬಾಯ್ಕಾಟ್‌ ಮಾಡಬೇಕು” ಎಂದು ಆಗ್ರಹಿಸಿದರು.

ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ; ಫ್ರೀಡಂ ಪಾರ್ಕಿನಲ್ಲಿ ತೀವ್ರಗೊಂಡ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಐಪಿಎಲ್ ಪಂದ್ಯದಿಂದ ಭಾರೀ ಸಂಚಾರ ದಟ್ಟಣೆ; ಆಂಬ್ಯುಲೆನ್ಸ್‌ನಲ್ಲಿದ್ದ ಮಹಿಳೆ ಸಾವು

ಏಪ್ರಿಲ್ 5 ರ ಭಾನುವಾರ ಉಪ್ಪಳದಲ್ಲಿ ಉಂಟಾದ ಭಾರೀ ಸಂಚಾರ ದಟ್ಟಣೆಯಿಂದಾಗಿ ಒಂದು ಗಂಟೆಗೂ ಹೆಚ್ಚು ಕಾಲ ಆಂಬ್ಯುಲೆನ್ಸ್‌ನಲ್ಲಿ ಸಿಲುಕಿಕೊಂಡಿದ್ದ ಬಿಷ್ಣಾ ಎಂಬ 30 ವರ್ಷದ ಮಹಿಳೆ ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಉಪ್ಪಳದ...

ಪಶ್ಚಿಮ ಬಂಗಾಳ: ನಂದಿಗ್ರಾಮದಲ್ಲಿ ಎಸ್‌ಐಆರ್ ಪೂರಕ ಪಟ್ಟಿಯಿಂದ 95% ಮುಸ್ಲಿಂ ಮತದಾರರ ಹೆಸರು ತೆಗೆದುಹಾಕಲಾಗಿದೆ: ವರದಿ 

ಸುವೇಂದು ಅಧಿಕಾರಿ ಪ್ರತಿನಿಧಿಸುವ ಪೂರ್ವ ಮಿಡ್ನಾಪುರ ವಿಧಾನಸಭಾ ಕ್ಷೇತ್ರವಾದ ನಂದಿಗ್ರಾಮದಲ್ಲಿ ಒಂದು ಅಧ್ಯಯನವು ಆತಂಕಕಾರಿ ಅಸಮಾನತೆಯನ್ನು ಎತ್ತಿ ತೋರಿಸಿದೆ, ಅಲ್ಲಿ ಮತದಾರರಲ್ಲಿ ಕಡಿಮೆ ಪಾಲು ಇದ್ದರೂ ಎಸ್‌ಐಆರ್ ಪೂರಕ ಪಟ್ಟಿಯಿಂದ ಅಳಿಸಲಾದ ಮತದಾರರಲ್ಲಿ...

ಟೋಲ್ ಪ್ಲಾಜಾಗಳಲ್ಲಿನ ಅಶುಚಿತ್ವ ಶೌಚಾಲಯಗಳ ಬಗ್ಗೆ ವರದಿ ಮಾಡಿದರೆ ಬಹುಮಾನ: ಕೇಂದ್ರ ಸರ್ಕಾರ

ರಾಷ್ಟ್ರೀಯ ಹೆದ್ದಾರಿಗಳಲ್ಲಿನ ನೈರ್ಮಲ್ಯದ ಬಗ್ಗೆ ದೀರ್ಘಕಾಲದ ಕಳವಳಗಳನ್ನು ಪರಿಹರಿಸುವ ಪ್ರಯತ್ನದಲ್ಲಿ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (MoRTH) ಟೋಲ್ ಪ್ಲಾಜಾಗಳಲ್ಲಿ ಅಶುಚಿಯಾದ ಶೌಚಾಲಯ ಸೌಲಭ್ಯಗಳ ಬಗ್ಗೆ ವರದಿ ಮಾಡಲು ಪ್ರಯಾಣಿಕರನ್ನು ಪ್ರೋತ್ಸಾಹಿಸುವ...

ಮಣಿಪುರ: ಬಾಂಬ್ ದಾಳಿಗೆ ಇಬ್ಬರು ಮಕ್ಕಳು ಬಲಿ; ಕುಕಿ ದಂಗೆಕೋರರಿಂದ ದಾಳಿ ಆರೋಪ; ಇದು ಅನಾಗರಿಕ ಕೃತ್ಯ ಎಂದ ಸಿಎಂ 

ಗುವಾಹಟಿ: ಮಣಿಪುರದ ಮೈತೇಯಿ ಪ್ರಾಬಲ್ಯದ ಬಿಷ್ಣುಪುರ ಜಿಲ್ಲೆಯಲ್ಲಿ ಮಂಗಳವಾರ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಘಟನೆಯಲ್ಲಿ ಐದು ತಿಂಗಳ ಗಂಡು ಮಗು ಸೇರಿದಂತೆ ಇಬ್ಬರು ಅಪ್ರಾಪ್ತ ವಯಸ್ಕರು ಸಾವನ್ನಪ್ಪಿರುವ ಘಟನೆ ನಡೆದಿದೆ.  ಮೊಯಿರಾಂಗ್...

ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ವಿಪಕ್ಷಗಳಿಂದ ನೋಟಿಸ್‌ : ಕಾರಣ ನೀಡದೆ ತಿರಸ್ಕರಿಸಿದ ಸಂಸತ್ತಿನ ಉಭಯ ಸದನಗಳ ಮುಖ್ಯಸ್ಥರು-ವರದಿ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸಲು ವಿಪಕ್ಷ ಸಂಸದರು ಸಲ್ಲಿಸಿದ್ದ ನಿಲುವಳಿ ನೋಟಿಸ್ ಅನ್ನು ರಾಜ್ಯಸಭಾ ಅಧ್ಯಕ್ಷ ಸಿ.ಪಿ. ರಾಧಾಕೃಷ್ಣನ್ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ತಿರಸ್ಕರಿಸಿದ್ದಾರೆ. ಉಭಯ...

ಎನ್‌ಸಿಪಿ ನಾಯಕನ ಕೊಲೆ ಪ್ರಕರಣ : ಛತ್ತೀಸ್‌ಗಢ ಮಾಜಿ ಸಿಎಂ ಅಜಿತ್ ಜೋಗಿ ಮಗ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ

2003ರ ಕೊಲೆ ಪ್ರಕರಣದಲ್ಲಿ ಛತ್ತೀಸ್‌ಗಢ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ಅವರ ಪುತ್ರ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ದಿ ಹಿಂದೂ ಸೋಮವಾರ (ಏ.6) ವರದಿ ಮಾಡಿದೆ. ರಾಷ್ಟ್ರೀಯವಾದಿ ಕಾಂಗ್ರೆಸ್...

ಪ. ಬಂಗಾಳ | ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಸೂಕ್ತ ಕಾರಣ ನೀಡದ ಚುನಾವಣಾ ಆಯೋಗ : ಕಾಂಗ್ರೆಸ್ ಅಭ್ಯರ್ಥಿ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲ್ಪಟ್ಟವರ ಅರ್ಜಿಗಳ ವಿಚಾರಣೆಗಾಗಿ ಕೋಲ್ಕತ್ತಾದಲ್ಲಿ ಸ್ಥಾಪಿಸಲಾದ ಮೇಲ್ಮನವಿ ನ್ಯಾಯಮಂಡಳಿಯು, ಮುಂಬರುವ ವಿಧಾನಸಭಾ ಚುನಾವಣೆಯ ಫರಕ್ಕಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊತಾಬ್ ಶೇಖ್ ಅವರ ಹೆಸರನ್ನು ಭಾನುವಾರ...

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....