Homeಕರ್ನಾಟಕಒಳ ಮೀಸಲಾತಿ | ಜಸ್ಟೀಸ್ ನಾಗಮೋಹನ್ ದಾಸ್ ಭೇಟಿಯಾಗಿ ಹಲವು ಬೇಡಿಕೆಗಳನ್ನು ಮುಂದಿಟ್ಟ ಪ.ಜಾತಿಗಳ ಒಕ್ಕೂಟ

ಒಳ ಮೀಸಲಾತಿ | ಜಸ್ಟೀಸ್ ನಾಗಮೋಹನ್ ದಾಸ್ ಭೇಟಿಯಾಗಿ ಹಲವು ಬೇಡಿಕೆಗಳನ್ನು ಮುಂದಿಟ್ಟ ಪ.ಜಾತಿಗಳ ಒಕ್ಕೂಟ

- Advertisement -
- Advertisement -

ಪರಿಶಿಷ್ಟ ಜಾತಿಗಳಲ್ಲಿ (ಎಸ್‌ಸಿ) ಒಳ ಮೀಸಲಾತಿ ನಿಗದಿಪಡಿಸಲು ಸರ್ಕಾರ ರಚಿಸಿರುವ ಏಕ ಸದಸ್ಯ ಸಮಿತಿಯ ಅಧ್ಯಕ್ಷ ಜಸ್ಟೀಸ್ ನಾಗಮೋಹನ್ ದಾಸ್ ಅವರನ್ನು ಬುಧವಾರ (ಫೆ.12) ಭೇಟಿಯಾದ ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟದ ರಾಜ್ಯ ಸಮಿತಿ ಪ್ರಮುಖರು ವಿವಿಧ ಬೇಡಿಕೆಗಳನ್ನು ಮುಂದಿಟ್ಟರು.

ಸುಪ್ರೀಂ ಕೋರ್ಟ್ ತೀರ್ಪಿನಂತೆ ಎಸ್‌ಸಿ ಒಳ ಮೀಸಲಾತಿ ನಿಗದಿಪಡಿಸಲು ರಾಜ್ಯ ಸರ್ಕಾರ ಸಮಿತಿ ರಚಿಸಿರುವುದು ಅಭಿನಂದನಾರ್ಹ. ಒಳ ಮೀಸಲಾತಿ ಜಾರಿ ಆಗುವವರೆಗೆ ಸರ್ಕಾರ ನೇಮಕಾತಿಗಳನ್ನು ತಡೆ ಹಿಡಿದಿದೆ. ಇದು ಸ್ವಾಗತಾರ್ಹವೇ ಆದರೂ, ಹೆಚ್ಚು ಸಮಯ ನೇಮಕಾತಿ ತಡೆ ಹಿಡಿಯುವುದರಿಂದ ಇತರರಿಗೆ ಸಮಸ್ಯೆಯಾಗಲಿದೆ. ಹಾಗಾಗಿ, ನಾಗಮೋಹನ್‌ ದಾಸ್ ಸಮಿತಿ ತುರ್ತಾಗಿ ತನ್ನ ವರದಿ ನೀಡಬೇಕು ಎಂದು ಒಕ್ಕೂಟ ಒತ್ತಾಯಿಸಿದೆ.

ತಾತ್ಕಾಲಿಕ ತಡೆ ಹಿಡಿದಿರುವ ನೇಮಕಾತಿಗಳನ್ನು ತುರ್ತಾಗಿ ಅನುಷ್ಠಾನಗೊಳಿಸಲು ಅನುವಾಗುವಂತೆ ಒಳ ಮೀಸಲಾತಿ ಮಧ್ಯಂತರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಆಗ್ರಹಿಸಿದೆ.

ಇನ್ನುಳಿದಂತೆ ಈ ಕೆಳಗಿನ ಬೇಡಿಕೆಗಳನ್ನು ಒಕ್ಕೂಟ ನಾಗಮೋಹನ್ ದಾಸ್ ಅವರ ಮುಂದಿಟ್ಟಿದೆ.

  • ಯಾವುದೇ ಕಾರಣಕ್ಕೂ ಯಾವುದೇ ಸಮುದಾಯಕ್ಕೂ ಅನ್ಯಾಯವಾಗದಂತೆ ಒಳ ಮೀಸಲಾತಿ ವರ್ಗೀಕರಣ ಮಾಡಬೇಕು.
  • 2025-26ರ ಹಣಕಾಸು ವರ್ಷದ ಆಯವ್ಯಯದಲ್ಲಿ ಪರಿಶಿಷ್ಟ ಜಾತಿಗಳ ಜನಸಂಖ್ಯೆಗೆ ಅನುಗುಣವಾಗಿ ಹಣ ಮತ್ತು ಸಂಪನ್ಮೂಲವನ್ನು ಮೀಸಲಿಡಲು ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು.
  • ಹಲವು ವರ್ಷಗಳಿಂದ ಪರಿಶಿಷ್ಟರ ಜನಸಂಖ್ಯೆಯ ವಿಷಯದಲ್ಲಿ ಸಮಸ್ಯೆಯಾಗಿ ಉಳಿದಿರುವ ಎಕೆ, ಎಡಿ, ಎಎ ಜಾತಿಯಲ್ಲಿ ಮುಂದುವರಿಯುತ್ತಿರುವ ಅಸಂವಿಧಾನಿಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ತುರ್ತಾಗಿ ಆಯೋಗದಿಂದ ಈ ಸಮಸ್ಯೆಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಜಿಲ್ಲೆಗಳಲ್ಲಿ ಮರು ಸಮೀಕ್ಷೆ ನಡೆಸಿ ನಿರ್ದಿಷ್ಟ ಶಿಫಾರಸ್ಸನ್ನು ಮಾಡಬೇಕು ಮತ್ತು ಈಗಿರುವ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿಯನ್ನು ಹೆಚ್ಚಳ ಮಾಡಿ ವರ್ಗೀಕರಣವನ್ನು ಜಾರಿಗೆ ತಂದು ಪರಿಶಿಷ್ಟರ ಐಕ್ಯತೆಯನ್ನು ಕಾಪಾಡಬೇಕು.
  • ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ‘ಪ್ರಾಯೋಗಿಕ ದತ್ತಾಂಶ’ವನ್ನು ಮಾನದಂಡವನ್ನಾಗಿ ವಿಧಿಸಿರುವುದರಿಂದ ಮುಂದಿನ ಜನಗಣತಿಯವರೆಗೆ ಅವಶ್ಯಕವಿರುವ ಅಂಶಗಳಿಗೆಲ್ಲ ‘ಸ್ಯಾಂಪಲ್ ಸಮೀಕ್ಷೆ’ ಕೈಗೊಳ್ಳಬೇಕು. ಇದಕ್ಕೆ ರಾಜ್ಯ ಸರ್ಕಾರ ಶೀಘ್ರ ಅನುದಾನ ಬಿಡುಗಡೆ ಮಾಡಬೇಕು.
  • ಉದ್ಯೋಗಗಳಲ್ಲಿ ಅತಿ ಕಡಿಮೆ ಆಯ್ಕೆ/ಅವಕಾಶಗಳಿದ್ದಾಗ, ಪ.ಜಾತಿಯ ಯಾವ ಗುಂಪಿಗೆ ಮೊದಲ ಆದ್ಯತೆ ನೀಡಬೇಕೆಂಬ ಶ್ರೇಣೀಕರಣ ನಿಗದಿಗೊಳಿಸಬೇಕು.
  • ಬಡ್ತಿ ಮೀಸಲಾತಿಯಲ್ಲಿಯೂ ಒಳ ಮೀಸಲಾತಿಯನ್ನು ಪರಿಗಣಿಸಬೇಕು
  • ರಾಜಕೀಯ ಮತಕ್ಷೇತ್ರ ಮೀಸಲಾತಿಯಲ್ಲಿಯೂ ಒಳ ಮೀಸಲಾತಿಯನ್ನು ಕಡ್ಡಾಯಗೊಳಿಸಲು ಶಿಫಾರಸು ಮಾಡಬೇಕು.
  • ಗುತ್ತಿಗೆ ನೌಕರಿಗಳಲ್ಲಿಯೂ ಒಳ ಮೀಸಲಾತಿ ಪರಿಗಣಿಸಲು ಶಿಫಾರಸು ಮಾಡಬೇಕು.
  • ಒಳ ಮೀಸಲಾತಿ ಅನುಷ್ಠಾನದಲ್ಲಿನ ಕುಂದು ಕೊರತೆಗಳು ಮತ್ತು ಪ್ರಗತಿಯ ಮೇಲ್ವಿಚಾರಣೆ ಮಾಡಲು ರಾಜ್ಯ ಪರಿಶಿಷ್ಟ ಆಯೋಗದಡಿಯಲ್ಲಿ ಒಂದು ಸ್ವತಂತ್ರ ಸಮಿತಿ ರಚಿಸಬೇಕು.
  • ಇಂದಿರಾ ಸಹಾನಿ ತೀರ್ಪಿನನ್ವಯ ಮೀಸಲಾತಿಗೆ ವಿಧಿಸಿರುವ ಶೇ.50ರ ಮಿತಿಯನ್ನು ರದ್ದುಪಡಿಸಲು ರಾಜ್ಯ ಸರ್ಕಾರವು ಅಗತ್ಯ ಕ್ರಮ ಕೈಗೊಳ್ಳುವಂತೆ ಶಿಫಾರಸು ಮಾಡಬೇಕು.
  • ಉದ್ಯೋಗಾಕಾಂಕ್ಷಿಗಳಿಗೆ ಸಮಸ್ಯೆಯಾಗದಂತೆ ನಿಗದಿತ ಗಡುವಿನೊಳಗೆ ಆಯೋಗವು ವರದಿ ನೀಡಬೇಕು.

ಜಸ್ಟೀಸ್ ನಾಗಮೋಹನ್ ದಾಸ್ ಅವರನ್ನು ಭೇಟಿಯಾದ ನಿಯೋಗದಲ್ಲಿ ಬಸವರಾಜ್ ಕೌತಾಳ್, ಶ್ರೀನಾಥ್ ಪೂಜಾರಿ, ಅಂಬಣ್ಣ ಅರೋಲಿಕರ್, ಕರಿಯಪ್ಪ ಗುಡಿಮನೆ, ಡಿ.ಟಿ ವೆಂಕಟೇಶ್, ಶಿವಣ್ಣ ಕನಕಪುರ, ಚಂದ್ರು ತರಹುಣಿಸೆ, ಪ್ರಸನ್ನ ಎಸಿ, ಶಿವು (ಡಿಎಂಸಿ), ಗಂಗಾಧರ್, ಮಂಜುನಾಥ್ ಮರಾಠ, ರಘು ಕಾಮಾಕ್ಷಿಪಾಳ್ಯ ಸೇರಿದಂತೆ ಹಲವು ಇದ್ದರು.

ದರ ಹೆಚ್ಚಳ : ‘ನಮ್ಮ ಮೆಟ್ರೋ’ ಪ್ರಯಾಣಿಕರ ಸಂಖ್ಯೆ ಕುಸಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...