Homeಕರ್ನಾಟಕಒಳಮೀಸಲಾತಿ: 60 ದಿನದಲ್ಲಿ ವರದಿ ಸಲ್ಲಿಕೆಗೆ ಸಮಾಜ ಕಲ್ಯಾಣ ಇಲಾಖೆ ಆದೇಶ

ಒಳಮೀಸಲಾತಿ: 60 ದಿನದಲ್ಲಿ ವರದಿ ಸಲ್ಲಿಕೆಗೆ ಸಮಾಜ ಕಲ್ಯಾಣ ಇಲಾಖೆ ಆದೇಶ

- Advertisement -
- Advertisement -

ಬೆಂಗಳೂರು: ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಕಲ್ಪಿಸುವ ಸಂಬಂಧ ಸೂಕ್ತ ಶಿಫಾರಸುಗಳೊಂದಿಗೆ ವರದಿ ಸಲ್ಲಿಸಲು ನಿವೃತ್ತ ನ್ಯಾ. ಎಚ್.ಎನ್. ನಾಗಮೋಹನ್ ದಾಸ್ ಅಧ್ಯಕ್ಷತೆಯ ಏಕ ಸದಸ್ಯ ಆಯೋಗಕ್ಕೆ ನಿಯಮ ಮತ್ತು ನಿಬಂಧನೆ ನಿಗದಿಪಡಿಸಿ, 2 ತಿಂಗಳ ಒಳಗಾಗಿ ವರದಿ ಸಲ್ಲಿಸುವಂತೆ ಸಮಾಜ ಕಲ್ಯಾಣ ಇಲಾಖೆ ಆದೇಶಿಸಿದೆ.

ಆಯೋಗಕ್ಕೆ ನಿಗದಿ ಮಾಡಿರುವ ಹೊಣೆಗಾರಿಕೆಯನ್ನು ನಿಭಾಯಿಸಲು ಅನುಕೂಲವಾಗುವಂತೆ ಕಚೇರಿ ವ್ಯವಸ್ಥೆ, ವಾಹನ, ಸಿಬ್ಬಂದಿ ಮತ್ತು ಇತರ ವ್ಯವಸ್ಥೆಗಳನ್ನು ಸಮಾಜ ಕಲ್ಯಾಣ ಇಲಾಖೆ ಆಯುಕ್ತರು ಒದಗಿಸಿಕೊಡಲಿದ್ದಾರೆ ಎಂದು ಆದೇಶ ಹೇಳಿದೆ.

ವರದಿ ಸಿದ್ದಪಡಿಸಲು ಅಗತ್ಯವಿರುವ ದಾಖಲೆಗಳನ್ನು ಮತ್ತು ಪುರಾವೆಗಳನ್ನು ವಿಚಾರಣಾ ಆಯೋಗಕ್ಕೆ ಸಂಬಂಧಪಟ್ಟ ಎಲ್ಲ ಅಧಿಕಾರಿಗಳು ಸಲ್ಲಿಸಬೇಕು ಮತ್ತು ಅಗತ್ಯ ಸಹಕಾರ ನೀಡಬೇಕು ಎಂದು ಸೂಚಿಸಿದೆ.

ನಿಯಮ ಮತ್ತು ನಿಬಂಧನೆಗಳಲ್ಲಿ ಉಲ್ಲೇಖಿಸಲಾದ ಎಲ್ಲ ಅಂಶಗಳ ಬಗ್ಗೆ ದತ್ತಾಂಶಗಳು ಮತ್ತು ಅಗತ್ಯ ಶಿಫಾರಸುಗಳನ್ನು ನೀಡಬೇಕು. ಆಯೋಗವು ಅಧಿಕಾರ ವಹಿಸಿಕೊಂಡ 60 ದಿನಗಳೊಳಗೆ ವರದಿ ಸಲ್ಲಿಸಬೇಕು ಎಂದಿದೆ.

ರಾಜ್ಯದಲ್ಲಿ ಲಭ್ಯವಿರುವ ದತ್ತಾಂಶ ಮತ್ತು 2011ರ ಜನಗಣತಿ ಆಧಾರದಲ್ಲಿ ಪರಿಶಿಷ್ಟ ಜಾತಿಗಳಲ್ಲಿ ವೈಜ್ಞಾನಿಕ ಮತ್ತು ತರ್ಕಬದ್ಧ  ಒಳಮೀಸಲಾತಿ ನೀಡುವ ಬಗ್ಗೆ ಪರಿಶೀಲನೆ ಮಾಡಬೇಕು. ಸರಕಾರಿ ಉದ್ಯೋಗ ಮತ್ತು ಶಿಕ್ಷಣ ಸಂಸ್ಥೆಗಳ ಪ್ರವೇಶಾತಿಯಲ್ಲಿ ಎಸ್ ಸಿಯಲ್ಲಿನ ಉಪ ಗುಂಪುಗಳಲ್ಲಿ ‘ಅಂತರ ಹಿಂದುಳಿದಿರುವಿಕೆ’ ಕುರಿತು ದತ್ತಾಂಶ  ಸಂಗ್ರಹಿಸಬೇಕು. ಆದಿ ಕರ್ನಾಟಕ, ಆದಿ ದ್ರಾವಿಡ ಮತ್ತು ಆದಿ ಆಂಧ್ರ ಎಂಬ ಹೆಸರುಗಳಷ್ಟೇ ರಾಜ್ಯದ  ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿವೆ. ಜನಸಂಖ್ಯೆಯನ್ನು ಹೀಗೆ ವಿಂಗಡಿಸಲಾಗಿದೆ. ಈ ಮೂರೂ ಹೆಸರುಗಳಡಿ ಇರುವ ಉಪ ಜಾತಿಗಳ ಹೆಸರು ಮತ್ತು ಅವುಗಳ ಜನಸಂಖ್ಯೆಯ ಪರಿಣಾಮಕಾರಿ ಅನುಷ್ಠಾನ ವಿಧಾನದ ಪರಿಶೀಲನೆ ಹಾಗೂ ಪರಿಶಿಷ್ಟ ಜಾತಿಗಳ ವಿವಿಧ ಉಪ ಗುಂಪುಗಳು ಮೀಸಲು ಪ್ರಯೋಜನವನ್ನು ಸಮಾನವಾಗಿ ಪಡೆಯುತ್ತಿವೆಯೇ ಎಂಬುದರ ಪರಿಶೀಲನೆ ಮಾಡಬೇಕು ಎಂದು ಸೂಚಿಸಲಾಗಿದೆ.

ನಿಯಮ ನಿಬಂಧನೆಗಳು

*ರಾಜ್ಯದಲ್ಲಿ ಲಭ್ಯವಿರುವ ದತ್ತಾಂಶ ಮತ್ತು 2011ರ ಜನಗಣತಿ ಆಧಾರದಲ್ಲಿ, ಪರಿಶಿಷ್ಟ ಜಾತಿಗಳಲ್ಲಿ ವೈಜ್ಞಾನಿಕ ಮತ್ತು ತರ್ಕಬದ್ಧ ಒಳಮೀಸಲಾತಿ ನೀಡುವ ಬಗ್ಗೆ ಪರಿಶೀಲನೆ

*ಪರಿಶಿಷ್ಟ ಜಾತಿಗಳ ಉಪುಗುಂಪುಗಳಲ್ಲಿ ‘ಅಂತರ್‌ ಹಿಂದುಳಿದಿರುವಿಕೆ’’ಗುರುತಿಸುವುದು ಮತ್ತು ಇದಕ್ಕಾಗಿ ದತ್ತಾಂಶ ಸಂಗ್ರಹ

*ಮೀಸಲಾತಿ ಪ್ರಮಾಣ ನಿಗದಿಪಡಿಸುವ ಬಗ್ಗೆ ಪರಿಶೀಲನೆ

*ಆದಿ ಕರ್ನಾಟಕ, ಆದಿ ದ್ರಾವಿಡ ಮತ್ತು ಆದಿ ಆಂಧ್ರ ಎಂಬ ಹೆಸರುಗಳ ಅಡಿ ಇರುವ ಉಪ ಜಾತಿಗಳ ಹೆಸರು ಮತ್ತು ಅವುಗಳ ಜನಸಂಖ್ಯೆಯ ದತ್ತಾಂಶಗಳ ಸಂಗ್ರಹ

*ಒಳಮೀಸಲಾತಿಯ ಪರಿಣಾಮಕಾರಿ ಜಾರಿಯ ಪರಿಶೀಲನೆ

*ಪರಿಶಿಷ್ಟ ಜಾತಿಯಲ್ಲಿ  ಉಪ ಗುಂಪುಗಳ ಮೀಸಲಾತಿಯ ಪ್ರಯೋಜನ ಪಡೆಯುತ್ತಿರುವ ಕುರಿತು ಪರಿಶೀಲನೆ

ಇದನ್ನೂ ಓದಿ…ಸರಕಾರಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಲೈಂಗಿಕ ದೌರ್ಜನ್ಯ: ಆಂತರಿಕ ದೂರು ಸಮಿತಿ ರಚಿಸಿ: ಸುಪ್ರೀಂ ಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...