ಜಸ್ಟೀಸ್ ನಾಗಮೋಹನ್ ದಾಸ್ ಆಯೋಗದ ವರದಿ ಅನ್ವಯ ಪರಿಶಿಷ್ಟ ಜಾತಿಗಳಿಗೆ (ಎಸ್‌ಸಿ) ಒಳಮೀಸಲಾತಿ ಕಲ್ಪಿಸಬೇಕು ಎಂದು ಆಗ್ರಹಿಸಿ, ಬೆಂಗಳೂರಿನ ಫ್ರೀಂಡಂ ಪಾರ್ಕಿನಲ್ಲಿ ನಡೆಯಿತ್ತಿರುವ ಹೋರಾಟ ಇಂದು ಆರನೇ ದಿನಕ್ಕೆ ಕಾಲಿಟ್ಟಿದೆ. ಕೊಪ್ಪಳ-ರಾಯಚೂರು ಸೇರಿದಂತೆ ವಿವಿಧ ಜಿಲ್ಲೆಗಳ ನೂರಾರು ಜನ ಕಾರ್ಯಕರ್ತರು ಇಂದು ಬೆಂಗಳೂರಿಗೆ ಆಗಮಿಸಿ, ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ.
ಜಸ್ಟೀಸ್ ನಾಗಮೋಹನ್ ದಾಸ್ ವರದಿಯನ್ನು ಯಥಾವತ್ತಾಗಿ ಜಾರಿ ಮಾಡಬೇಕು ಎಂದು ಆಗ್ರಹಿಸಿ ಹಿರಿಯ ಸಾಹಿತಿ ದೇವನೂರ ಮಹಾದೇವ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಆಗಸ್ಟ್ 14 ರಂದು, ಹಿರಿಯ ಸಾಹಿತಿ ಕೋಟಿಗಾನಹಳ್ಳಿ ರಾಮಯ್ಯ ಅವರ ನೇತೃತ್ವದಲ್ಲಿ ‘ನಟ್ಟಿರುಳ ನಾದ’ ಹೆಸರಿನಲ್ಲಿ ಸ್ವತಂತ್ರ್ಯ ದಿನದ ಇಡೀ ರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ರಾಜ್ಯದ ಹಿರಿಯ ಸಾಹಿತಿಗಳು, ಬುದ್ದಿ ಜೀವಿಗಳು, ಪ್ರಾಧ್ಯಾಪಕರು ಸೇರಿದಂತೆ ವಿವಿಧ ವಲಯಗಳ ಚಿಂತಕರು ನಾಗಮೋಹನ್ ದಾಸ್ ಆಯೋಗದ ವರದಿ ಜಾರಿಗೊಳಿಸುವಂತೆ ಆಗ್ರಹಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ ಮತ್ತಿಗೆ
ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಜಿಲ್ಲಾ ಕೇಂದ್ರಗಳಿಗೆ ಆಗಮಿಸಿದ್ದ ಉಸ್ತುವಾರಿ ಸಚಿವರುಗಳಿಗೆ ಒಳಮೀಸಲಾತಿ ಹೋರಾಗಾರರು ಮುತ್ತಿಗೆ ಹಾಕಿದರು. ಆಗಸ್ಟ್ 19 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ನಿರ್ಣಾಯಕ ತೀರ್ಮಾನ ತೆಗೆದುಕೊಳ್ಳುವಂತೆ ಹೋರಾಟಗಾರರು ಒತ್ತಾಯಿಸಿದರು.

ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ, ಕೊಪ್ಪಳ, ದಾವಣಗೆರೆ ಸೇರಿದಂತೆ 15 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಹೋರಾಟಗಾರರು ಮುತ್ತಿಗೆ ಹಾಕಿದರು. ದಾವಣಗೆರೆಯಲ್ಲಿ ಮುತ್ತಿಗೆ ಹಾಕಿದ ಒಳಮೀಸಲಾತಿ ಹೋರಾಟಗಾರರನ್ನು ಪೋಲೀಸರು ಬಂಧಿಸಿದ್ದರು.
ಒಳಮೀಸಲಾತಿ ತಕ್ಷಣ ಜಾರಿಗೆ ಆಗ್ರಹ: ಮುಖ್ಯಮಂತ್ರಿಯವರಿಗೆ ದೇವನೂರು ಮಹಾದೇವ ಬಹಿರಂಗ ಪತ್ರ


