Homeಮುಖಪುಟಜಮ್ಮು ಕಾಶ್ಮೀರಕ್ಕೆ ಮೋದಿ ಭೇಟಿ ವೇಳೆ ವಿದೇಶಿ ಮಾಧ್ಯಮಗಳ ಪತ್ರಕರ್ತರನ್ನು ಹೊರಗಿಟ್ಟ ಸರ್ಕಾರ!

ಜಮ್ಮು ಕಾಶ್ಮೀರಕ್ಕೆ ಮೋದಿ ಭೇಟಿ ವೇಳೆ ವಿದೇಶಿ ಮಾಧ್ಯಮಗಳ ಪತ್ರಕರ್ತರನ್ನು ಹೊರಗಿಟ್ಟ ಸರ್ಕಾರ!

ವಿದೇಶಿ ಮಾಧ್ಯಮಗಳಿಗಾಗಿ ಕೆಲಸ ಮಾಡುತ್ತಿರುವ ಭಾರತೀಯರಿಗೂ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ಗುರುವಾರ (ಮಾ.7) ನಡೆಸಿದ ರ್‍ಯಾಲಿಯ ಕುರಿತು ವರದಿ ಮಾಡಲು ವಿದೇಶಿ ಪತ್ರಕರ್ತರಿಗೆ ಅವಕಾಶ ನೀಡಿರಲಿಲ್ಲ ಎಂದು ಸರ್ಕಾರ ಮತ್ತು ಮಾಧ್ಯಮ ಮೂಲಗಳನ್ನು ಉಲ್ಲೇಖಿಸಿ ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನ 370ನೇ ವಿಧಿಯ ರದ್ದತಿಯ ಬಳಿಕ ಪ್ರಧಾನಿ ಮೋದಿ ಗುರುವಾರ ಮೊದಲ ಬಾರಿಗೆ ಶ್ರೀನಗರಕ್ಕೆ ಭೇಟಿ ನೀಡಿದ್ದರು. ಆಗಸ್ಟ್ 5, 2019ರಂದು 370ನೇ ವಿಧಿಯನ್ನು ರದ್ದುಗೊಳಿಸಲಾಗಿತ್ತು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ (ಡಿಐಪಿಆರ್) ಯು ಮೋದಿ ಕಾರ್ಯಕ್ರಮದ ವರದಿ ಮಾಡಲು ಪಾಸ್‌ಗಳಿಗಾಗಿ ಪತ್ರಕರ್ತರಿಂದ 160 ಅರ್ಜಿಗಳನ್ನು

ಪ್ರಧಾನಿ ನರೇಂದ್ರ ಮೋದಿ ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ಗುರುವಾರ(ಮಾ.7) ನಡೆಸಿದ ರ್‍ಯಾಲಿಯ ಕುರಿತು ವರದಿ ಮಾಡಲು ವಿದೇಶಿ ಪತ್ರಕರ್ತರಿಗೆ ಅವಕಾಶ ನೀಡಿರಲಿಲ್ಲ ಎಂದು ಸರ್ಕಾರ ಮತ್ತು ಮಾಧ್ಯಮ ಮೂಲಗಳನ್ನು ಉಲ್ಲೇಖಿಸಿ ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನ 370ನೇ ವಿಧಿಯ ರದ್ದತಿಯ ಬಳಿಕ ಪ್ರಧಾನಿ ಮೋದಿ ಗುರುವಾರ ಮೊದಲ ಬಾರಿಗೆ ಶ್ರೀನಗರಕ್ಕೆ ಭೇಟಿ ನೀಡಿದ್ದರು. ಆಗಸ್ಟ್ 5, 2019 ರಂದು 370ನೇ ವಿಧಿಯನ್ನು ರದ್ದುಗೊಳಿಸಲಾಗಿತ್ತು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ (ಡಿಐಪಿಆರ್) ಯು ಕಾರ್ಯಕ್ರಮವನ್ನು ವರದಿ ಮಾಡಲು ಪಾಸ್‌ಗಳಿಗಾಗಿ ಪತ್ರಕರ್ತರಿಂದ 160 ಅರ್ಜಿಗಳನ್ನು ರ್‍ಯಾಲಿಗೆ ಒಂದು ವಾರ ಮೊದಲು ಸ್ವೀಕರಿಸಿತ್ತು. ಇವುಗಳಲ್ಲಿ 127 ಅನ್ನು ಅನುಮೋದಿಸಲಾಗಿದೆ. ಪಾಸ್‌ಗಳನ್ನು ನಿರಾಕರಿಸಿದವರಲ್ಲಿ ಎಪಿ, ಎಎಫ್‌ಪಿ ಮತ್ತು ರಷ್ಯಾದ ಸುದ್ದಿ ಸಂಸ್ಥೆ ಸ್ಪುಟ್ನಿಕ್‌ನಂತಹ ಮಾಧ್ಯಮಗಳು ಸೇರಿವೆ ಎಂದು ನ್ಯೂಸ್‌ ಮಿನಿಟ್ ವರದಿ ತಿಳಿಸಿದೆ.

“ಅರ್ಜಿಗಳನ್ನು ಸ್ವೀಕರಿಸಿದ ನಂತರ, ಡಿಐಪಿಆರ್ ಪರಿಶೀಲನೆಗಾಗಿ ಪೊಲೀಸ್ ಇಲಾಖೆಯೊಂದಿಗೆ ವಿವರಗಳನ್ನು ಹಂಚಿಕೊಂಡಿದೆ. ಈ ವೇಳೆ 160 ರಲ್ಲಿ 127 ಪತ್ರಕರ್ತರಿಗೆ ಅಥವಾ ಮಾಧ್ಯಮಗಳಿಗೆ ಅವಕಾಶ ನೀಡಲಾಗಿದೆ. ಯಾವುದೇ ವಿದೇಶಿ ಮಾಧ್ಯಮಕ್ಕೆ ಪಾಸ್‌ ನೀಡಲಾಗಿಲ್ಲ” ಎಂದು ಜಮ್ಮು ಕಾಶ್ಮೀರ ಆಡಳಿತದ ಮೂಲವೊಂದು ತಿಳಿಸಿರುವುದಾಗಿ ವರದಿ ಹೇಳಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಜಮ್ಮು ಕಾಶ್ಮೀರ ಡಿಐಪಿಆರ್ ನಿರ್ದೇಶಕ ಜತಿನ್ ಕಿಶೋರ್, ವಿದೇಶಿ ಮಾಧ್ಯಮಗಳಿಗೆ ಅನುಮತಿ ನಿರಾಕರಿಸಿರುವ ಬಗ್ಗೆ ಖಚಿತಡಿಸಿಲ್ಲ. ಆದರೆ, ಇದು ಸರಿಯಾದ ಕ್ರಮವಲ್ಲ. ನಮಗೆ ಪಿಐಬಿಯಿಂದ ಪಟ್ಟಿ ಬಂದಿತ್ತು ಎಂದು ಹೇಳಿದ್ದಾರೆ.

ಮತ್ತೊಂದೆಡೆ ಪಿಐಬಿಯ ಮಹಾನಿರ್ದೇಶಕ ಮನೀಶ್ ದೇಸಾಯಿ, ಶ್ರೀನಗರ ಕಾರ್ಯಕ್ರಮಕ್ಕೆ ಅನುಮತಿ ನೀಡಲಾದ ಮಾಧ್ಯಮಗಳ ಪಟ್ಟಿ ತಯಾರಿಕೆಯಲ್ಲಿ ನಾವು ತೊಡಗಿಸಿಕೊಂಡಿಲ್ಲ ಎಂದು ಜಾರಿಕೊಂಡಿದ್ದಾರೆ. ಸ್ಥಳೀಯ ಮಾಧ್ಯಮವರನ್ನು ಸಂಬಂಧಪಟ್ಟ ರಾಜ್ಯವು ನೋಡಿಕೊಳ್ಳುತ್ತದೆ ಎಂದು ಹೇಳಿದ್ದಾರೆ.

ರಾಜ್ಯಗಳು ಅಥವಾ ಕೇಂದ್ರಾಡಳಿತ ಪ್ರದೇಶಗಳಲ್ಲಿ ಪ್ರಧಾನ ಮಂತ್ರಿ ಭಾಗವಹಿಸುವ ಕಾರ್ಯಕ್ರಮಗಳಿಗೆ ಪಾಸ್‌ಗಳನ್ನು ಡಿಐಪಿಆರ್ ನೀಡುತ್ತದೆ ಎಂದು ಪತ್ರಕರ್ತರು ಹೇಳಿಕೊಂಡಿದ್ದಾರೆ.

ಗುರುವಾರ ಶ್ರೀನಗರದ ಬಕ್ಷಿ ಕ್ರೀಡಾಂಗಣದಲ್ಲಿ ‘ವಿಕಸಿತ ಭಾರತ, ವಿಕಸಿತ ಜಮ್ಮು ಕಾಶ್ಮೀರ’ ಎಂಬ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗವಹಿಸಿದ್ದರು. ಈ ವೇಳೆ 6,400 ಕೋಟಿ ರೂಪಾಯಿಗಳ ಕೃಷಿ ಮತ್ತು ಪ್ರವಾಸೋದ್ಯಮ ಯೋಜನೆಗಳಿಗೆ ಅವರು ಚಾಲನೆ ನೀಡಿದ್ದಾರೆ. ಆರ್ಟಿಕಲ್ 370ರ ರದ್ದತಿಯ ನಂತರ ಜಮ್ಮು ಕಾಶ್ಮೀರ “ಮುಕ್ತವಾಗಿ ಉಸಿರಾಡುತ್ತಿದೆ” ಎಂದು ಮೋದಿ ತಮ್ಮ ಭಾಷಣದಲ್ಲಿ ಹೇಳಿದ್ದಾರೆ.

ಪತ್ರಕರ್ತರಾಗಿ ಕೆಲಸ ಮಾಡುವ ವಿದೇಶಿ ಪ್ರಜೆಗಳು ಜಮ್ಮು ಕಾಶ್ಮೀರ, ಈಶಾನ್ಯ ರಾಜ್ಯಗಳು ಸೇರಿದಂತೆ ನಿರ್ಬಂಧಿತ ಅಥವಾ ಸಂರಕ್ಷಿತ ಪ್ರದೇಶಗಳಿಗೆ ಭೇಟಿ ನೀಡುವ ಎಂಟು ವಾರಗಳ ಮೊದಲು ಅನುಮತಿಗಾಗಿ ಅರ್ಜಿ ಸಲ್ಲಿಸಬೇಕು. ವಿದೇಶಿ ಮಾಧ್ಯಮಗಳಿಗಾಗಿ ಕೆಲಸ ಮಾಡುವ ಭಾರತೀಯ ಪ್ರಜೆಗಳಿಗೆ ಇಂತಹ ಯಾವುದೇ ನಿಯಮ ಇಲ್ಲ.

ಆದರೆ, ಮೋದಿ ಕಾರ್ಯಕ್ರಮಕ್ಕೆ ವಿದೇಶಿ ಮಾಧ್ಯಮಗಳಿಗಾಗಿ ಕೆಲಸ ಮಾಡುತ್ತಿರುವ ಭಾರತೀಯರಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

“ಪ್ರಧಾನಿ ಭಾಗವಹಿಸುವಂತಹ ಕಾರ್ಯಕ್ರಮಗಳಿಗೆ ಡಿಐಪಿಆರ್ ಮಾನ್ಯತೆ ಪಡೆದ ಪತ್ರಕರ್ತರ ವಿವರಗಳನ್ನು ಹುಡುಕುತ್ತದೆ. ಈ ಬಾರಿಯೂ ಅದೇ ನಡೆದಿದೆ. ಆದರೆ ಅವರು ವಿದೇಶಿ ಮಾಧ್ಯಮಗಳಲ್ಲಿ ಕೆಲಸ ಮಾಡುವವರನ್ನು ಹೊರತುಪಡಿಸಿ ಎಲ್ಲರಿಗೂ ಪಾಸ್ ನೀಡಿದ್ದಾರೆ” ಎಂದು ಅನುಮತಿ ನಿರಾಕರಿಸಲ್ಪಟ್ಟ ಪತ್ರಕರ್ತರೊಬ್ಬರು ಹೇಳಿರುವುದಾಗಿ ನ್ಯೂಸ್ ಮಿನಿಟ್ ತಿಳಿಸಿದೆ.

ಬುಧವಾರ, ತೆಲಂಗಾಣದಲ್ಲಿ ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೋದಿ, ತಮ್ಮ ಸಾರ್ವಜನಿಕ ಸೇವೆಯ ಬಗ್ಗೆ ಮಾಧ್ಯಮಗಳಲ್ಲಿ ಅಸಮರ್ಪಕ ಪ್ರಸಾರ ಮಾಡಲಾಗ್ತಿದೆ ಎಂದು ಹೇಳಿದ್ದರು.

ಮೋದಿ ಅವರು ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಇದುವರೆಗೆ ಒಂದು ಬಾರಿಯೂ ಸರಿಯಾದ ಪತ್ರಿಕಾಗೋಷ್ಠಿಯನ್ನು ಅವರು ನಡೆಸಿಲ್ಲ. 2019ರ ಲೋಕಸಭಾ ಚುನಾವಣೆಯ ಸಮಯದಲ್ಲಿ ಒಂದು ಬಾರಿ ಅವರು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು. ಆದರೆ, ಅಲ್ಲಿ ಪ್ರಶ್ನೆಗಳನ್ನು ಕೇಳಲು ಅವಕಾಶವೇ ಇರಲಿಲ್ಲ.

ಇತ್ತೀಚಿನ ವರದಿಗಳ ಪ್ರಕಾರ, ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕದಲ್ಲಿ ಭಾರತವು 11ನೇ ಸ್ಥಾನದಿಂದ 161 ನೇ ಸ್ಥಾನಕ್ಕೆ ಕುಸಿದಿದೆ.

ಇದನ್ನೂ ಓದಿ : ಲೋಕಸಭಾ ಚುನಾವಣೆ-2024: ಕರ್ನಾಟಕದ ಏಳು ಸ್ಥಾನ ಸೇರಿದಂತೆ ಕಾಂಗ್ರೆಸ್ ಪಕ್ಷದ ಮೊದಲ ಪಟ್ಟಿ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...