Homeಮುಖಪುಟಜಾಗತಿಕ ಮಾದ್ಯಮಗಳಲ್ಲಿ ಸುದ್ದಿಯಾದ ಪ್ರಧಾನಿಯ ದ್ವೇಷ ಭಾಷಣ: ಅಂತರಾಷ್ಟ್ರೀಯ ಮಟ್ಟದಲ್ಲಿ ಮತ್ತೆ ಟೀಕೆಗೆ ಗುರಿಯಾದ ಮೋದಿ

ಜಾಗತಿಕ ಮಾದ್ಯಮಗಳಲ್ಲಿ ಸುದ್ದಿಯಾದ ಪ್ರಧಾನಿಯ ದ್ವೇಷ ಭಾಷಣ: ಅಂತರಾಷ್ಟ್ರೀಯ ಮಟ್ಟದಲ್ಲಿ ಮತ್ತೆ ಟೀಕೆಗೆ ಗುರಿಯಾದ ಮೋದಿ

- Advertisement -
- Advertisement -

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ರಾಜಸ್ಥಾನದ ಬನ್ಸ್ವಾರಾದಲ್ಲಿ ಮುಸ್ಲಿಮರ ವಿರುದ್ಧ ಮಾಡಿದ್ದ ದ್ವೇಷ ಭಾಷಣ ಜಾಗತಿಕ ಮಾದ್ಯಮಗಳಲ್ಲಿ ಭಾರೀ ಸುದ್ದಿಯಾಗಿದ್ದು, ಮೋದಿ ಮತ್ತೆ ಅಂತರಾಷ್ಟ್ರೀಯ ಮಟ್ಟದಲ್ಲಿ ಟೀಕೆಗೆ ಗುರಿಯಾಗಿದ್ದಾರೆ.

‘ಕೊಳಕು ಭಾಷಣ’ ಆದರೆ ಅಚ್ಚರಿಯೇನಿಲ್ಲ: ಪ್ರಚಾರದ ವೇಳೆ ಮೋದಿಯಿಂದ ಮುಸ್ಲಿಂ ವಿರೋಧಿ ಮಾತುಗಳ ಆರೋಪ’ ಈ ರೀತಿ ಶೀರ್ಷಿಕೆ ನೀಡಿ ಪ್ರಾನ್ಸ್‌ 24 ಮಾಧ್ಯಮವು ವರದಿ ಮಾಡಿದೆ. ವರದಿಯಲ್ಲಿ ಮೋದಿ ಮುಸ್ಲಿಮರನ್ನು  “ಒಳನುಸುಳುವವರು” ಮತ್ತು “ಹೆಚ್ಚು ಮಕ್ಕಳನ್ನು ಹೊಂದಿರುವವರು” ಎಂದು ಹೇಳಿರುವ ಬಗ್ಗೆ ಉಲ್ಲೇಖಿಸಲಾಗಿದೆ. ಕಾಂಗ್ರೆಸ್‌ನ್ನು ಉದ್ದೇಶಿಸಿ, ಈ ‘ನಗರ ನಕ್ಸಲ್’ ಮನಸ್ಥಿತಿಯಿಂದ ತಾಯಂದಿರೇ ಮತ್ತು ಸಹೋದರಿಯರೇ, ಅವರು ನಿಮ್ಮ ‘ಮಂಗಲಸೂತ್ರ’ವನ್ನು ಸಹ ಬಿಡುವುದಿಲ್ಲ. ಅವರು ಆ ಮಟ್ಟಕ್ಕೆ ಹೋಗಬಹುದು. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಅವರು ತಾಯಿ ಮತ್ತು ಸಹೋದರಿಯರ ಚಿನ್ನವನ್ನು ಲೆಕ್ಕ ಹಾಕುತ್ತಾರೆ ಎಂದು ಹೇಳಲಾಗಿದೆ, ಆದರೆ ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಹಿಂದೂ ಅಥವಾ ಮುಸ್ಲಿಂ ಪದ ಬಳಕೆ ಮಾಡಲಾಗಿಲ್ಲ ಎಂದು ಉಲ್ಲೇಖಿಸಿದೆ.

ಭಾರತದ ಚುನಾವಣಾ ರ್ಯಾಲಿಯಲ್ಲಿ ಮುಸ್ಲಿಮರನ್ನು ‘ನುಸುಳುಕೋರರು’ ಎಂದು ಕರೆದಿದ್ದಕ್ಕಾಗಿ ಮೋದಿ ವಿರುದ್ಧ ದ್ವೇಷದ ಭಾಷಣದ ಆರೋಪ ಎಂಬ ಶೀರ್ಷಿಕೆಯ ಸುದ್ದಿಯನ್ನು ಅಮೆರಿಕಾದ ಟೆಲಿವಿಷನ್‌ ನೆಟ್‌ವರ್ಕ್‌ ಎಬಿಸಿ ನ್ಯೂಸ್‌ ವರದಿ ಮಾಡಿದೆ. ಭಾರತದ ಇತಿಹಾಸದಲ್ಲಿ, ಯಾವುದೇ ಪ್ರಧಾನಿ ಮೋದಿಯಷ್ಟು ತಮ್ಮ ಹುದ್ದೆಯ ಘನತೆಯನ್ನು ಕಡಿಮೆ ಮಾಡಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಖರ್ಗೆ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌ನಲ್ಲಿ ಬರೆದಿರುವ ಪೋಸ್ಟ್‌ನ್ನು ಎಬಿಸಿ ನ್ಯೂಸ್‌ ತನ್ನ ವರದಿಯಲ್ಲಿ ಉಲ್ಲೇಖಿಸಿದೆ.

ಕತಾರ್‌ ಮೂಲದ ಅಲ್‌ ಜಝೀರಾ ಮಾಧ್ಯಮವು ಈ ಕುರಿತು ವರದಿಯನ್ನು ಮಾಡಿದ್ದು, ‘ಒಳನುಸುಳುಕೋರರು’: ಭಾರತದ ಚುನಾವಣೆಯ ಮಧ್ಯೆ ಮೋದಿ ವಿರುದ್ಧ ಮುಸ್ಲಿಂ ವಿರೋಧಿ ದ್ವೇಷ ಭಾಷಣವನ್ನು ಆರೋಪ’ ಎಂದು ಶೀರ್ಷಿಕೆಯಲ್ಲಿ ಸುದ್ದಿಯನ್ನು ಬಿತ್ತರಿಸಿದೆ.

ಮೋದಿ ಭಾಷಣದ ಬಗ್ಗೆ ನ್ಯೂಯಾರ್ಕ್‌ ಟೈಮ್ಸ್‌ ಮುಸ್ಲಿಮರನ್ನು ‘ನುಸುಳುಕೋರರು’ ಎಂದ ಮೋದಿ ಎಂದು ವರದಿಯನ್ನು ಮಾಡಿದೆ. ವರದಿಯಲ್ಲಿ ಮೋದಿ ಮುಸ್ಲಿಮರನ್ನು  “ಒಳನುಸುಳುವವರು” ಮತ್ತು “ಹೆಚ್ಚು ಮಕ್ಕಳನ್ನು ಹೊಂದಿರುವವರು” ಎಂದು ಹೇಳಿರುವ ಬಗ್ಗೆ ಉಲ್ಲೇಖಿಸಲಾಗಿದೆ.

ಅಮೆರಿಕ ಮೂಲದ ‘ಟೈಮ್‌ ಮ್ಯಾಗಝಿನ್‌’ ಈ ಕುರಿತು ವರದಿಯನ್ನು ಮಾಡಿದೆ, ಭಾರತದ ಪ್ರಧಾನಿ ಮೋದಿ ಮುಸ್ಲಿಮರ ವಿರುದ್ಧ ಪ್ರಚಾರ ರ‍್ಯಾಲಿಯಲ್ಲಿ ದ್ವೇಷಪೂರಿತ ಭಾಷಣ ಮಾಡಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಿದೆ.

ಇದಲ್ಲದೆ ವಾಷಿಂಗ್ಟನ್‌ ಪೋಸ್ಟ್‌, ಸಿಎನ್‌ಎನ್‌, ಸೇರಿದಂತೆ ವಿವಿಧ ಜಾಗತಿಕ ಮಾಧ್ಯಮಗಳು ಮೋದಿಯ ಮುಸ್ಲಿಮರ ವಿರುದ್ಧದ ದ್ವೇಷದ ಭಾಷಣವನ್ನು ವರದಿ ಮಾಡಿದ್ದು, ಮೋದಿ ಅಂತರಾಷ್ಟ್ರೀಯ ಮಟ್ಟದಲ್ಲಿ ಟೀಕೆಗೆ ಗುರಿಯಾಗಿದ್ದಾರೆ.

ಇದನ್ನು ಓದಿ: ಕೇರಳ: ಚುನಾವಣಾ ಪ್ರಚಾರದ ವೇಳೆ ಬಿಜೆಪಿ ಅಭ್ಯರ್ಥಿಗೆ ಹಲ್ಲೆ ನಡೆಸಿದ ಸ್ವಪಕ್ಷದ ಮುಖಂಡ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...