Homeಮುಖಪುಟಬೀದಿಬದಿಯಲ್ಲಿ ಚಿಪ್ಸ್, ಬಿಸ್ಕತ್ ಮಾರಾಟ ಮಾಡುತ್ತಿರುವ, ದೇಶಕ್ಕಾಗಿ 28 ಚಿನ್ನದ ಪದಕ ಗೆದ್ದ ಅಂತರರಾಷ್ಟ್ರೀಯ ಮಹಿಳಾ...

ಬೀದಿಬದಿಯಲ್ಲಿ ಚಿಪ್ಸ್, ಬಿಸ್ಕತ್ ಮಾರಾಟ ಮಾಡುತ್ತಿರುವ, ದೇಶಕ್ಕಾಗಿ 28 ಚಿನ್ನದ ಪದಕ ಗೆದ್ದ ಅಂತರರಾಷ್ಟ್ರೀಯ ಮಹಿಳಾ ಕ್ರೀಡಾಪಟು!

- Advertisement -
- Advertisement -

ಅಂದು ಭಾರತದ ಮೊದಲ ಮಹಿಳಾ ಪ್ಯಾರಾ ಶೂಟರ್ ಆಗಿ, ದೇಶಕ್ಕಾಗಿ ಅಂತರರಾಷ್ಟ್ರೀಯ ಮಟ್ಟದಲ್ಲಿ 8 ಚಿನ್ನ, 5 ಬೆಳ್ಳಿ ಮತ್ತು 6 ಕಂಚಿನ ಪದಕಗಳನ್ನು ಗೆದ್ದು ತಂದಿದ್ದ ಕ್ರೀಡಾಪಟು, ಇಂದು ಕುಟುಂಬವನ್ನು ನಿರ್ವಹಿಸಲು, ಹೊಟ್ಟೆ ತುಂಬಿಸಿಕೊಳ್ಳಲು ಬೀದಿಬದಿಯಲ್ಲಿ ಚಿಪ್ಸ್, ಬಿಸ್ಕತ್ ಸೇರಿದಂತೆ ಕುರುಕಲು ತಿಂಡಿ ಮಾರಾಟ ಮಾಡುತ್ತಿದ್ದಾರೆ.

ಹೌದು, ಉತ್ತರಾಖಂಡದ 38 ವರ್ಷದ ದಿಲ್‌ರಾಜ್ ಕೌರ್, ತಮ್ಮ 17 ವರ್ಷಗಳ ವೃತ್ತಿಜೀವನದಲ್ಲಿ 28 ಚಿನ್ನ, 5 ಬೆಳ್ಳಿ ಮತ್ತು 6 ಕಂಚಿನ ಪದಕಗಳನ್ನು ಗೆದ್ದಿದ್ದಾರೆ, ಇದರಲ್ಲಿ 2007 ರಲ್ಲಿ ತೈವಾನ್‌ನಲ್ಲಿ ನಡೆದ ವಿಶ್ವ ಕ್ರೀಡಾಕೂಟ ಮತ್ತು 2015 ಬೆಂಗಳೂರಿನಲ್ಲಿ ನಡೆದ ಕ್ರೀಡಾಕೂಡಗಳು ಸೇರಿವೆ.

ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟು ದಿಲ್‌ರಾಜ್ ಕೌರ್ ಮತ್ತು ಆಕೆಯ ತಾಯಿ ಪ್ರತಿದಿನ ಡೆಹ್ರಾಡೂನ್‌ನ ಗಾಂಧಿ ಪಾರ್ಕ್‌ನ ಹೊರಗಡೆ ಬಿಸ್ಕತ್ತು, ಚಿಪ್ಸ್ ಸೇರಿದಂತೆ ಇತರೆ ಕುರುಕಲು ತಿಂಡಿಗಳನ್ನು ಮಾರಾಟ ಮಾಡುತ್ತಾರೆ.

“ನಾವು ನನ್ನ ತಂದೆ, ಸಹೋದರ, ನನ್ನ ವೃತ್ತಿಜೀವನ ಎಲ್ಲವನ್ನೂ ಕಳೆದುಕೊಂಡಿದ್ದೇವೆ. ಆದರೆ ನನ್ನ ಕುಟುಂಬ ಯಾವತ್ತೂ ಛಲದಿಂದ ಬದುಕುವುದನ್ನು ಬಿಟ್ಟುಕೊಡುವುದಿಲ್ಲ. ಯಾವ ಕೆಲಸವು ಚಿಕ್ಕದಲ್ಲ ಎಂದು ನಾವು ನಂಬಿರುವುದರಿಂದ ಬೀದಿಗಳಲ್ಲಿ ಈ ವಸ್ತುಗಳನ್ನು ಮಾರಾಟ ಮಾಡಲು ನನಗೆ ಮುಜುಗರವಿಲ್ಲ” ಎಂದು ದಿಲ್‌ರಾಜ್ ಕೌರ್‌ ಹೇಳುತ್ತಾರೆ.

ಇದನ್ನೂ ಓದಿ: ಕೊರೊನಾ ಭಯ: ಕರ್ನೂಲ್‌ನಲ್ಲಿ ವಿಷ ಸೇವಿಸಿ ಸಾವನ್ನಪ್ಪಿದ ಒಂದೆ ಕುಟುಂಬದ ನಾಲ್ವರು

ದಿಲ್‌ರಾಜ್ ಕೌರ್‌ 2019 ರಲ್ಲಿ ತನ್ನ ತಂದೆಯನ್ನು ಮತ್ತು ಆಕೆಯ ಸಹೋದರನನ್ನು ಕಳೆದುಕೊಂಡಿದ್ದಾರೆ. ಆಕೆಯ ತಾಯಿ ಗುರುದೀಪ್ ಕೌರ್,  ಉತ್ತರಾಖಂಡದ ರಾಜ್ಯತ್ವಕ್ಕಾಗಿ ನಡೆದ ಚಳವಳಿಯಲ್ಲಿ ಸಕ್ರಿಯ ಹೋರಾಟಗಾರರಾಗಿದ್ದರು.

PC: Express

ಸಹೋದರ ಮತ್ತು ತಂದೆಯ ಚಿಕಿತ್ಸೆಗಾಗಿ ದಿಲ್‌ರಾಜ್ ಕೌರ್‌ ತಮ್ಮ ಮನೆಯನ್ನು ಮಾರಾಟ ಮಾಡಿದ್ದು, ಸದ್ಯ  ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದಾರೆ. ಕೋವಿಡ್ ಸಾಂಕ್ರಾಮಿಕ ಮತ್ತು ಲಾಕ್‌ಡೌನ್ ನಮ್ಮವರನ್ನು, ನಮ್ಮ ಕೆಲಸಗಳನ್ನು ಕಸಿದುಕೊಂಡಿದೆ ಎಂದು ಆಕೆ ತಮ್ಮ ಅಸಹಾಯಕತೆ ವ್ಯಕ್ತಪಡಿಸುತ್ತಾರೆ. ಇನ್ನು ಪತಿಯ ಮಾದಕ ವ್ಯಸನದಿಂದಾಗಿ ದಿಲ್‌ರಾಜ್ ಕೌರ್‌  ವೈವಾಹಿಕ ಜೀವನ ಮುರಿದು ಬಿದ್ದಿದೆ.

ಸಾಮಾಜಿಕ ಜಾಲತಾಣಗಳಲ್ಲಿ ದಿಲ್‌ರಾಜ್ ಕೌರ್‌ ಅವರ ಸಹಾಯಕ್ಕೆ ನಿಲ್ಲಿ ಎಂಬ ಪೋಸ್ಟ್‌ಗಳು ಹರಿದಾಡುತ್ತಿವೆ.

ತಮ್ಮ ಕೆಲಸವನ್ನು, ಸಾಧನೆಯನ್ನು ಗುರುತಿಸಿ ಸರ್ಕಾರ ಉದ್ಯೋಗ ನೀಡುತ್ತದೆ ಎಂದು ಹಲವು ಬಾರಿ ಪ್ರಯತ್ನಿಸಿದರೂ ಕೆಲಸ ಸಿಕ್ಕಿಲ್ಲ. ಅನಿವಾರ್ಯವಾಗಿ ರಸ್ತೆ ಬದಿಯಲ್ಲಿ ಚಿಪ್ಸ್, ಬಿಸ್ಕತ್, ಕುರುಕಲು ತಿಂಡಿ ಮಾರಾಟ ಮಾಡುತ್ತಿದ್ದೇನೆ ಎಂದು ದಿಲ್‌ರಾಜ್ ಕೌರ್‌ ತಿಳಿಸಿದ್ದಾರೆ.


ಇದನ್ನೂ ಓದಿ: ಅಬಕಾರಿ ಸಚಿವ ಗೋಪಾಲಯ್ಯ ವಿರುದ್ಧ ಎಸಿಬಿಯಲ್ಲಿ ದೂರು ದಾಖಲು: ವಲಸೆ ಸಚಿವರಿಗೆ ನಡುಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಯಾವ ಕ್ರೀಡಾಪಟುವಿಗೂ ಇಂತಹ ಸ್ಥಿತಿ ‌ಬರಬಾರದು. ಸರ್ಕಾರಗಳು ಕೂಡಲೇ ಇವರಿಗೆ ನೆರವು ನೀಡಬೇಕು.

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...