Homeಅಂತರಾಷ್ಟ್ರೀಯಇಂಟರ್ನೆಟ್ ಸ್ಥಗಿತ | ಮಿಲಿಟರಿ ಆಡಳಿತದ ಮ್ಯಾನ್ಮಾರ್ 1ನೇ, ಭಾರತ 2ನೇ ಸ್ಥಾನ!

ಇಂಟರ್ನೆಟ್ ಸ್ಥಗಿತ | ಮಿಲಿಟರಿ ಆಡಳಿತದ ಮ್ಯಾನ್ಮಾರ್ 1ನೇ, ಭಾರತ 2ನೇ ಸ್ಥಾನ!

- Advertisement -
- Advertisement -

ಜಗತ್ತಿನ ಅತೀ ದೊಡ್ಡ ಪ್ರಜಾಪ್ರಭುತ್ವ ದೇಶ ಎಂದು ಹೇಳಲಾಗುವ ಭಾರತದಾದ್ಯಂತ 2024ರಲ್ಲಿ 84 ಬಾರಿ ಇಂಟರ್ನೆಟ್ ಸ್ಥಗಿತಗಳು ದಾಖಲಾಗಿವೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ವಿಶ್ವದಾದ್ಯಂತ ಇರುವ ಪ್ರಜಾಪ್ರಭುತ್ವ ರಾಷ್ಟ್ರಗಳಲ್ಲಿ ಇದು ಅತ್ಯಂತ ಹೆಚ್ಚು ಎಂದು ವರದಿ ಹೇಳಿದ್ದು, ಮ್ಯಾನ್ಮಾರ್ ದೇಶ ಮಾತ್ರ ಇದನ್ನು ಮೀರಿಸಿದೆ ಎಂದು ತಿಳಿಸಿದೆ. ಅದಾಗ್ಯೂ, ಮ್ಯಾನ್ಮಾರ್‌ನಲ್ಲಿ ಮಿಲಿಟರಿ ಆಡಳಿತವಿದ್ದು, ಅಲ್ಲಿ 85 ಬಾರಿ ಇಂಟರ್‌ನೆಟ್ ಸ್ಥಗಿತಗೊಳಿಸಲಾಗಿದೆ ಎಂದು ಡಿಜಿಟಲ್ ಹಕ್ಕುಗಳ ಸಂಸ್ಥೆ ಆಕ್ಸೆಸ್ ನೌ ವರದಿ ಮಾಡಿದೆ. ಇಂಟರ್ನೆಟ್ ಸ್ಥಗಿತ

ಕಳೆದ ಆರು ವರ್ಷಗಳಲ್ಲಿ ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಇಂಟರ್ನೆಟ್ ಸ್ಥಗಿತಗೊಳಿಸುವಿಕೆಯನ್ನು ಕಂಡ ದೇಶವೆಂದು ಹೆಸರು ಮಾಡದಿರುವುದು ಇದೇ ಮೊದಲು ಎಂದು ವರದಿ ಹೇಳಿದೆ.

“2023 ರಿಂದ [116 ಇಂಟರ್ನೆಟ್ ಸ್ಥಗಿತಗೊಳಿಸುವಿಕೆಗಳು] ಇಂಟರ್‌ನೆಟ್ ಸ್ಥಗಿತಗೊಳಿಸುವಿಕೆ ಸಾಧಾರಣ ಇಳಿಕೆಯ ಹೊರತಾಗಿಯೂ, ಭಾರತವು 2024 ರಲ್ಲಿ 84 ಇಂಟರ್‌ನೆಟ್ ಸ್ಥಗಿತವನ್ನು ಕಂಡಿದೆ. ಇದು ಕಳೆದ ವರ್ಷದ ಪ್ರಜಾಪ್ರಭುತ್ವ ದೇಶಗಳಲ್ಲಿ ಕಂಡ ಅತಿ ಹೆಚ್ಚು ಸ್ಥಗಿತಗಳಾಗಿವೆ” ಎಂದು ವರದಿಯಲ್ಲಿ ಹೇಳಲಾಗಿದೆ.

84 ಸ್ಥಗಿತಗೊಳಿಸುವಿಕೆಗಳಲ್ಲಿ 41 ಘಟನೆಗಳು ಪ್ರತಿಭಟನೆಗಳಿಗೆ ಸಂಬಂಧಿಸಿದ್ದಾಗಿದ್ದರೆ, 23 ಸ್ಥಗಿತಗಳು ಕೋಮು ಹಿಂಸಾಚಾರದಿಂದ ಉಂಟಾಗಿವೆ ಎಂದು ವರದಿ ತಿಳಿಸಿದೆ. ಕಳೆದ ವರ್ಷ ಸರ್ಕಾರಿ ಉದ್ಯೋಗ ನೇಮಕಾತಿ ಪರೀಕ್ಷೆಗಳ ಸಮಯದಲ್ಲಿ ಅಧಿಕಾರಿಗಳು ಐದು ಇಂಟರ್ನೆಟ್ ಸ್ಥಗಿತಗೊಳಿಸುವಿಕೆಯನ್ನು ವಿಧಿಸಿದ್ದರು. ಭಾರತದ 16 ಕ್ಕೂ ಹೆಚ್ಚು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಕನಿಷ್ಠ ಒಂದು ಇಂಟರ್ನೆಟ್ ಸ್ಥಗಿತಗೊಳಿಸುವಿಕೆಯನ್ನು ವಿಧಿಸಲಾಗಿದೆ ಎಂದು ವರದಿ ಉಲ್ಲೇಖಸಿದೆ.

ರಾಜ್ಯವಾರು ಅಂಕಿ ಅಂಶಗಳ ಪ್ರಕಾರ ದೇಶದಲ್ಲಿ ಅತಿ ಹೆಚ್ಚು ಸ್ಥಗಿತಗೊಳಿಸುವಿಕೆ ನಡೆದಿದ್ದು ಮಣಿಪುರದಲ್ಲಾಗಿದ್ದು, ಅಲ್ಲಿ 21 ಬಾರಿ ಇಂಟರ್‌ನೆಟ್‌ ಸ್ಥಗಿತಗೊಳಿಸಲಾಗಿದೆ, ನಂತರದ ಸ್ಥಾನದಲ್ಲಿ ಹರಿಯಾಣ (12), ಮತ್ತು ಜಮ್ಮು ಕಾಶ್ಮೀರ (12) ಇವೆ.

“ಇಂಟರ್‌ನೆಟ್‌ ಸ್ಥಗಿತಗೊಳಿಸುವಿಕೆಯು ಭಾರತದ ಜಾಗತಿಕ ನಾಯಕತ್ವದ ಮಹತ್ವಾಕಾಂಕ್ಷೆಗಳಿಗೆ ಹೊಂದಿಕೆಯಾಗುವುದಿಲ್ಲ. ಬೇರೆ ಯಾವುದೇ ಪ್ರಜಾಪ್ರಭುತ್ವದಲ್ಲಿ ಮೇಲ್ವಿಚಾರಣೆ ಅಥವಾ ಹೊಣೆಗಾರಿಕೆ ಇಲ್ಲದೆ ಜನರು ಸಂಪರ್ಕದಿಂದ ವರ್ಷಾನುವರ್ಷ ಕಡಿತಗೊಳ್ಳುವುದಿಲ್ಲ” ಎಂದು ಆಕ್ಸೆಸ್ ನೌನ ಹಿರಿಯ ನೀತಿ ಸಲಹೆಗಾರ ನಮ್ರತಾ ಮಹೇಶ್ವರಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ದೂರಸಂಪರ್ಕ ಕಾಯ್ದೆ 2023 ಮತ್ತು ಟೆಲಿಕಾಂ ಅಮಾನತು ನಿಯಮಗಳು 2024 ರಲ್ಲಿ ಸುರಕ್ಷತಾ ಕ್ರಮಗಳ ಕೊರತೆಯನ್ನು ಸೂಚಿಸುತ್ತಾ, “ಹಕ್ಕುಗಳನ್ನು ಉಲ್ಲಂಘಿಸುವ ಕಾನೂನುಗಳನ್ನು ರದ್ದುಗೊಳಿಸಲು ಮತ್ತು 2025 ಅನ್ನು ಭಾರತದ ಎಲ್ಲಾ ಜನರಿಗೆ ಸ್ಥಗಿತಗೊಳಿಸುವಿಕೆ ಮುಕ್ತ ವರ್ಷವನ್ನಾಗಿ ಮಾಡಲು” ಮಹೇಶ್ವರಿ ಅವರು ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

ಸರ್ಕಾರಿ ಆದೇಶದ ಇಂಟರ್ನೆಟ್ ಸ್ಥಗಿತಗೊಳಿಸುವಿಕೆಗಾಗಿ ಭಾರತವು 1885 ರ ಟೆಲಿಗ್ರಾಫ್ ಕಾಯ್ದೆಯ ವಸಾಹತುಶಾಹಿ ಯುಗದ ನಿಬಂಧನೆಗಳನ್ನು ಉಳಿಸಿಕೊಂಡಿದ್ದು, ಇದರ ಬಗ್ಗೆ ಹಲವಾರು ಜನರು ಟೀಕೆಗಳನ್ನು ವ್ಯಕ್ತಪಡಿಸುತ್ತಲೆ ಇದ್ದಾರೆ. ಈ ವರೆಗೆ ಸ್ಥಗಿತಗೊಳಿಸುವ ಆದೇಶಗಳನ್ನು ಪರಿಶೀಲಿಸಲು ಸ್ವತಂತ್ರ ಮೇಲ್ವಿಚಾರಣಾ ಕಾರ್ಯವಿಧಾನದಂತಹ ಸುರಕ್ಷತಾ ಕ್ರಮಗಳನ್ನು ಸೇರಿಸದೆ ಇವುಗಳನ್ನು ಮಾಡಲಾಗುತ್ತಿದೆ ಎಂದು ಟೀಕಾಕಾರರ ಆಕ್ಷೇಪವಾಗಿದೆ.

ಪ್ರಸ್ತುತ, ಸ್ಥಗಿತಗೊಳಿಸುವ ಆದೇಶಗಳ ಕಾನೂನು ಸಿಂಧುತ್ವವನ್ನು ಕೇಂದ್ರ ಮತ್ತು ರಾಜ್ಯಗಳಲ್ಲಿ ಕಾರ್ಯದರ್ಶಿ ಮಟ್ಟದ ಅಧಿಕಾರಿಗಳನ್ನು ಒಳಗೊಂಡ ಮೂವರು ಸದಸ್ಯರ ಸಮಿತಿಯು ಪರಿಶೀಲಿಸುತ್ತದೆ.

ಜಗತ್ತಿನಾದ್ಯಂತ ಇಂಟರ್ನೆಟ್ ಸ್ಥಗಿತಗೊಳಿಸುವಿಕೆ

ಕಳೆದ ವರ್ಷ 54 ದೇಶಗಳಲ್ಲಿ 296 ಕ್ಕೂ ಹೆಚ್ಚು ಸರ್ಕಾರ ವಿಧಿಸಿದ ಇಂಟರ್ನೆಟ್ ಸ್ಥಗಿತಗೊಳಿಸುವಿಕೆಗಳು ಕಂಡುಬಂದವು. ಏಷ್ಯಾ ಪೆಸಿಫಿಕ್‌ನ 11 ದೇಶಗಳು ಅಥವಾ ಪ್ರದೇಶಗಳಲ್ಲಿ ಇಂತಹ 202 ಅಡಚಣೆಗಳು ದಾಖಲಾಗಿವೆ. “ಮ್ಯಾನ್ಮಾರ್, ಭಾರತ ಮತ್ತು ಪಾಕಿಸ್ತಾನ ಒಟ್ಟಾಗಿ 2024 ರಲ್ಲಿ ದಾಖಲಾದ ಎಲ್ಲಾ ಸ್ಥಗಿತಗೊಳಿಸುವಿಕೆಗಳಲ್ಲಿ ಶೇಕಡಾ 64 ಕ್ಕಿಂತ ಹೆಚ್ಚು” ಎಂದು ಆಕ್ಸೆಸ್ ನೌ ಹೇಳಿದೆ.

ಹಿಂಸಾಚಾರ ಮತ್ತು ಸಂಘರ್ಷದ ಸಂದರ್ಭಗಳಲ್ಲಿ ಅಧಿಕಾರಿಗಳು ಹೆಚ್ಚಿನ ಇಂಟರ್ನೆಟ್ ಸ್ಥಗಿತಗೊಳಿಸಿದ್ದರು. ಭಾರತ ಸೇರಿದಂತೆ 11 ದೇಶಗಳಲ್ಲಿ 103 ಕ್ಕೂ ಹೆಚ್ಚು ಸಂಘರ್ಷ-ಸಂಬಂಧಿತ ಸ್ಥಗಿತಗೊಳಿಸುವಿಕೆಗಳು ಸಂಭವಿಸಿವೆ. ಪ್ರತಿಭಟನೆಗಳು ಮತ್ತು ಅಸ್ಥಿರತೆ, ಪರೀಕ್ಷೆಗಳು, ಚುನಾವಣೆಗಳ ಸಮಯದಲ್ಲಿ ಸ್ಥಗಿತಗೊಳಿಸುವಿಕೆಗಳು ಮತ್ತು ಗಂಭೀರ ಮಾನವ ಹಕ್ಕುಗಳ ಉಲ್ಲಂಘನೆಯನ್ನು ಮುಚ್ಚಿಹಾಕಲು ಇವುಗಳನ್ನು ಮಾಡಲಾಗುತ್ತದೆ ಎಂದು ವರದಿಯಲ್ಲಿ ಹೇಳಲಾಗಿದೆ.

“ಇಂಟರ್‌ನೆಟ್ ಸ್ಥಗಿತಗೊಳಿಸುವಿಕೆಯು ಸಮಾಜಗಳನ್ನು ಅಸ್ಥಿರಗೊಳಿಸುತ್ತದೆ, ಡಿಜಿಟಲ್ ಪ್ರಗತಿಯನ್ನು ದುರ್ಬಲಗೊಳಿಸುತ್ತದೆ ಮತ್ತು ಇಡೀ ಸಮುದಾಯಗಳನ್ನು ಅಪಾಯಕ್ಕೆ ಸಿಲುಕಿಸುತ್ತದೆ ಹಾಗೂ ಮಾನವ ಹಕ್ಕುಗಳ ಉಲ್ಲಂಘನೆಗೆ ಶಿಕ್ಷೆಯ ರಕ್ಷಣೆಯ ಮುಸುಕನ್ನು ಒದಗಿಸುತ್ತದೆ. ಮ್ಯಾನ್ಮಾರ್‌ನಿಂದ ಪಾಕಿಸ್ತಾನದವರೆಗಿನ ಅಧಿಕಾರಿಗಳು ಪ್ರಪಂಚದ ಉಳಿದ ಭಾಗಗಳಿಂದ ಜನರನ್ನು ನಿರ್ಭಯದಿಂದ ಪ್ರತ್ಯೇಕಿಸುತ್ತಿದ್ದಾರೆ, ಇದು ಏಷ್ಯಾದಲ್ಲಿ ಹೆಚ್ಚುತ್ತಿರುವ ಡಿಜಿಟಲ್ ಸರ್ವಾಧಿಕಾರತ್ವವನ್ನು ಪ್ರತಿಬಿಂಬಿಸುತ್ತದೆ” ಎಂದು ಆಕ್ಸೆಸ್ ನೌ ಸಂಸ್ಥೆಯ ಏಷ್ಯಾ ಪೆಸಿಫಿಕ್ ನೀತಿ ನಿರ್ದೇಶಕ ರಾಮನ್ ಜಿತ್ ಸಿಂಗ್ ಚಿಮಾ ಹೇಳಿದ್ದಾರೆ. ಇಂಟರ್ನೆಟ್ ಸ್ಥಗಿತ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ: ಯೋಗಿ ಆದಿತ್ಯನಾಥ್ ಅವರ ‘ಉರ್ದು ವಿರೋಧಿ’ ಹೇಳಿಕೆ: ಮೌಲಾನಾ ವಿವಿಯ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಯೋಗಿ ಆದಿತ್ಯನಾಥ್ ಅವರ ‘ಉರ್ದು ವಿರೋಧಿ’ ಹೇಳಿಕೆ: ಮೌಲಾನಾ ವಿವಿಯ ವಿದ್ಯಾರ್ಥಿಗಳಿಂದ ಪ್ರತಿಭಟನೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯುಎಪಿಎ ಕಾಯಿದೆಯಡಿ ಆರೋಪ ಹೊರಿಸಿದ ಮಾತ್ರಕ್ಕೆ ವಿದೇಶ ಪ್ರಯಾಣದ ಹಕ್ಕು ಕಸಿಯಲಾಗದು: ನತಾಶಾ ನರ್ವಾಲ್‌ಗೆ ದೆಹಲಿ ಹೈಕೋರ್ಟ್ ಅಭಯ

ಒಬ್ಬ ವ್ಯಕ್ತಿಯ ವಿರುದ್ಧ ‘ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ’ (UAPA) ಯಂತಹ ಕಠಿಣ ಕಾಯಿದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂಬ ಒಂದೇ ಕಾರಣಕ್ಕೆ, ಅವರ ವಿದೇಶ ಪ್ರಯಾಣದ ಮೂಲಭೂತ ಹಕ್ಕನ್ನು ಸಂಪೂರ್ಣವಾಗಿ ಕಸಿದುಕೊಳ್ಳಲು...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ಅಭಿಜಿತ್ ದೀಪ್ಕೆಗೆ ‍‍ಜಾಮೀನು : ಪೊಲೀಸ್ ಕಸ್ಟಡಿಯಿಂದ ಬಿಡುಗಡೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ಶನಿವಾರ (ಅಕ್ಟೋಬರ್ 17) ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದ್ದು, ದೆಹಲಿಯ ಮಂದಿರ್ ಮಾರ್ಗ್ ಠಾಣೆ ಪೊಲೀಸರ ಕಸ್ಟಡಿಯಿಂದ ಬಿಡುಗಡೆಯಾಗಿದ್ದಾರೆ ಎಂದು...

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...

ಸಿಜೆಐ ಸೂರ್ಯಕಾಂತ್ ವಿರುದ್ಧದ ಪೋಸ್ಟ್: ಕೇರಳ ಕಾಂಗ್ರೆಸ್ ಅಧ್ಯಕ್ಷರಿಗೆ ಎಸ್‌ಸಿಬಿಎ ಜಂಟಿ ಕಾರ್ಯದರ್ಶಿಯಿಂದ ಲೀಗಲ್ ನೋಟಿಸ್!

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರನ್ನು ಗುರಿಯಾಗಿಸಿ ಕೇರಳ ಕಾಂಗ್ರೆಸ್‌ನ ಅಧಿಕೃತ ಎಕ್ಸ್ (X) ಖಾತೆಯಿಂದ ಮಾಡಲಾಗಿತ್ತು ಎನ್ನಲಾದ ಪೋಸ್ಟ್‌ಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ (SCBA) ಜಂಟಿ...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ನೇಹಾ ಬೋರಾ ಬಿಡುಗಡೆ : ಅಭಿಜಿತ್ ದೀಪ್ಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿರುವ ಪೊಲೀಸರು

ಶುಕ್ರವಾರ (ಅಕ್ಟೋಬರ್ 16) ಬಂಧಿತರಾಗಿದ್ದ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಅಧ್ಯಕ್ಷೆ ನೇಹಾ ಬೋರಾ ಅವರನ್ನು ಶನಿವಾರ (ಅ.17) ಮುಂಜಾನೆ ಬಿಡುಗಡೆ ಮಾಡಲಾಗಿದ್ದು, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...