Homeಮುಖಪುಟಜಮ್ಮು ಕಾಶ್ಮೀರ: ಸೇನೆಯಿಂದ ನಾಗರಿಕರ ಹತ್ಯೆ ವದಂತಿ; ಮುನ್ನೆಚ್ಚರಿಕೆ ಕ್ರಮವಾಗಿ ಇಂಟರ್‌ನೆಟ್ ಸ್ಥಗಿತ

ಜಮ್ಮು ಕಾಶ್ಮೀರ: ಸೇನೆಯಿಂದ ನಾಗರಿಕರ ಹತ್ಯೆ ವದಂತಿ; ಮುನ್ನೆಚ್ಚರಿಕೆ ಕ್ರಮವಾಗಿ ಇಂಟರ್‌ನೆಟ್ ಸ್ಥಗಿತ

- Advertisement -
- Advertisement -

ಸೇನಾ ಸಿಬ್ಬಂದಿ ವಿಚಾರಣೆಗೆಂದು ಕರೆದುಕೊಂಡು ಹೋಗಿ ಮೂವರು ನಾಗರಿಕರಿಗೆ ಚಿತ್ರಹಿಂಸೆ ನೀಡಿ ಸಾಯಿಸಿದ್ದಾರೆ ಎಂಬ ವದಂತಿ ಹಬ್ಬಿದ ಹಿನ್ನೆಲೆ ಜಮ್ಮು ಕಾಶ್ಮೀರದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಇಂದು (ಡಿ.23) ಬೆಳಿಗ್ಗೆಯಿಂದ ಪೂಂಚ್ ಮತ್ತು ರಾಜೌರಿ ಜಿಲ್ಲೆಗಳಲ್ಲಿ ಇಂಟರ್‌ನೆಟ್‌ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

ಭಯೋತ್ಪಾದಕ ದಾಳಿಯ ಬಳಿಕ ಮೂವರು ನಾಗರಿಕರು ಶವವಾಗಿ ಪತ್ತೆಯಾಗಿದ್ದರು. ವಿಚಾರಣೆಗಾಗಿ ಸೇನಾ ಸಿಬ್ಬಂದಿ ಕರೆದುಕೊಂಡು ಹೋದ ಮೂವರು ವ್ಯಕ್ತಿಗಳು ಶವವಾಗಿ ಪತ್ತೆಯಾಗಿದ್ದಾರೆ. ಇವರಿಗೆ ಸೇನಾ ಸಿಬ್ಬಂದಿ ಚಿತ್ರಹಿಂಸೆ ನೀಡಿ ಸಾಯಿಸಿದ್ದಾರೆ ಎಂದು ಆರೋಪಿಸಲಾದ ವಿಡಿಯೋವೊಂದು ಇಂಟರ್‌ನೆಟ್‌ನಲ್ಲಿ ಹರಿದಾಡಿದೆ. ಇದರಿಂದ ಜನರು ಉದ್ರಿಕ್ತಗೊಂಡಿದ್ದಾರೆ. ಪರಿಸ್ಥಿತಿ ಹತೋಟಿಯಲ್ಲಿಡಲು ಇಂಟರ್‌ನೆಟ್ ಸ್ಥಗಿತಗೊಳಿಸಲಾಗಿದೆ.

ಸೇನೆ ಮತ್ತು ಪೊಲೀಸರು ಪೂಂಚ್ ಮತ್ತು ರಾಜೌರಿ ಜಿಲ್ಲೆಗಳಲ್ಲಿ ಬಿಗಿ ಭದ್ರತೆ ಕೈಗೊಂಡಿದ್ದಾರೆ. ಭದ್ರತಾ ಪಡೆಗಳ ಮೇಲೆ ಕೋಪಗೊಂಡಿರುವ ಜನರು ಯಾವುದೇ ಕಾರಣಕ್ಕೂ ಕಾನೂನು ಕೈಗೆತ್ತಿಕೊಳ್ಳದಂತೆ ಹದ್ದಿಣ ಕಣ್ಣಿಟ್ಟಿದ್ದಾರೆ.

ಸೇನೆ ಮತ್ತು ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಭದ್ರತೆಯ ಉಸ್ತುವಾರಿ ವಹಿಸಿದ್ದಾರೆ. ಹೆಚ್ಚುವರಿ ಪೊಲೀಸ್ ಮತ್ತು ಅರೆಸೈನಿಕ ಸಿಬ್ಬಂದಿಯನ್ನು ಎರಡೂ ಜಿಲ್ಲೆಗಳ ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತೆಗಾಗಿ ನಿಯೋಜಿಸಲಾಗಿದೆ.

ಭಯೋತ್ಪಾದಕ ದಾಳಿ ನಡೆದ ಬೆನ್ನಲ್ಲೇ ಸೇನೆ ಮತ್ತು ಪೊಲೀಸರು ಹುಡುಕಾಟ ಕಾರ್ಯಾಚರಣೆ ನಡೆಸಿದ್ದರು. ಈ ನಡುವೆ ಮೂವರು ನಿಗೂಢವಾಗಿ ಸಾವನ್ನಪ್ಪಿದ್ದರು. ಇವರನ್ನು ಸೇನೆಯವರು ವಿಚಾರಣೆಗೆಂದು ಕರೆದುಕೊಂಡು ಹೋಗಿದ್ದರು. ಚಿತ್ರಹಿಂಸೆ ಕೊಟ್ಟು ಕೊಂದಿದ್ದಾರೆ ಎಂದು ಸುದ್ದಿ ಹಬ್ಬಿದೆ. ಮೂವರ ಮೃತದೇಹಗಳನ್ನು ಬಿಗಿ ಭದ್ರತೆಯ ನಡುವೆ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.

ಮೃತರನ್ನು ಬುಫ್ಲಿಯಾಝ್‌ನ ಟೋಪಾ ಪೀರ್ ಗ್ರಾಮದ ಸಫೀರ್ ಹುಸೇನ್ (43), ಮೊಹಮ್ಮದ್ ಶೋಕೆಟ್ (27) ಮತ್ತು ಶಬೀರ್ ಅಹ್ಮದ್ (32) ಎಂದು ಗುರುತಿಸಲಾಗಿದೆ. ಇವರ ಸಾವಿಗೆ ಕಾರಣ ತಿಳಿದು ಬಂದಿಲ್ಲ. ಕುಟುಂಬಸ್ಥರು ಸೇನೆಯವರೇ ಹತ್ಯೆ ಮಾಡಿರುವುದಾಗಿ ಆರೋಪಿಸಿದ್ದಾರೆ.

ಸೇನಾ ಸಿಬ್ಬಂದಿ ಮೇಲಿ ಭಯೋತ್ಪಾದಕ ದಾಳಿ ನಡೆಸಿದವರನ್ನು ಪತ್ತೆ ಹಚ್ಚಲು ಭದ್ರತಾ ಪಡೆಗಳು ತೀವ್ರ ಹುಡುಕಾಟ ಮುಂದುವರೆಸಿವೆ. ದಾಳಿಯ ಬಳಿಕ ಭಯೋತ್ಪಾದಕರು ಇಬ್ಬರು ಸೇನಾ ಸಿಬ್ಬಂದಿಯ ಮೃತದೇಹಗಳನ್ನು ವಿರೋಪಗೊಳಿಸಿ ಅವರಿಂದ ಶಸ್ತ್ರಾಸ್ತ್ರಗಳನ್ನು ಕದ್ದೊಯ್ದಿದ್ದಾರೆ ಎಂದು ಹೇಳಲಾಗ್ತಿದೆ.

ಜಮ್ಮು ಕಾಶ್ಮೀರದ ರಾಜೌರಿ ಜಿಲ್ಲೆಯಯಲ್ಲಿ ಗುರುವಾರ ಭಾರತೀಯ ಸೇನೆಯ ಎರಡು ವಾಹನಗಳ ಮೇಲೆ ಭಯೋತ್ಪಾದಕ ಗುಂಪು ನಡೆಸಿದ ಹೊಂಚು ದಾಳಿಯಲ್ಲಿ ಐವರು ಸೈನಿಕರು ಮೃತಪಟ್ಟಿದ್ದಾರೆ. ದೇರಾ ಕಿ ಗಾಲಿ ಮತ್ತು ಬಲ್ಫಿಯಾಜ್ ನಡುವಿನ ಧಾತ್ಯರ್ ಮೊರಹ್ ಎಂಬಲ್ಲಿ ಕಡಿದಾದ ತಿರುವಿನಲ್ಲಿ ಚಲಿಸುತ್ತಿದ್ದ ವಾಹನಗಳ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದರು.

ಇದನ್ನೂ ಓದಿ : ಕೇರಳ: ಕಾಂಗ್ರೆಸ್‌ ಆಯೋಜಿಸಿದ್ದ ಪ್ರತಿಭಟನೆ ವೇಳೆ ಉದ್ವಿಗ್ನ: ಪೊಲೀಸರಿಂದ ಅಶ್ರುವಾಯು ಪ್ರಯೋಗ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...