Homeರಾಷ್ಟ್ರೀಯಅಂತರ್ಜಾತಿ ವಿವಾಹ; ಹೈದರಾಬಾದ್‌ನಲ್ಲಿ ಮತ್ತೊಬ್ಬ ಯುವಕನ ಕೊಲೆ

ಅಂತರ್ಜಾತಿ ವಿವಾಹ; ಹೈದರಾಬಾದ್‌ನಲ್ಲಿ ಮತ್ತೊಬ್ಬ ಯುವಕನ ಕೊಲೆ

- Advertisement -
- Advertisement -

ಹೈದರಾಬಾದ್‌ನ ಜನನಿಬಿಡ ಬೇಗಂ ಬಜಾರ್ ಪ್ರದೇಶದಲ್ಲಿ ಶಸ್ತ್ರಸಜ್ಜಿತ ವ್ಯಕ್ತಿಗಳು 21 ವರ್ಷದ ಯುವಕನನ್ನು ಅಂತರ್ಜಾತಿ ವಿವಾಹವಾದ ಕಾರಣಕ್ಕಾಗಿ ಇರಿದು ಕೊಂದಿರುವ ಘಟನೆ ಮೇ 20ರ ಶುಕ್ರವಾರದ ಸಂಜೆ ನಡೆದಿದೆ ಎಂದು ನ್ಯೂಸ್ ಮಿನಿಟ್ ವರದಿ ಮಾಡಿದೆ.

ಕೊಲೆಯಾದ ಯುವಕನನ್ನು ನೀರಜ್ ಪನ್ವಾರ್ ಎಂದು ಗುರುತಿಸಲಾಗಿದೆ. ಹತ್ಯೆಯಲ್ಲಿ ಐವರು ಭಾಗಿಯಾಗಿದ್ದಾರೆ ಎಂದು ಹೇಳಲಾಗಿದ್ದು, ಪೊಲೀಸರು ಈಗಾಗಲೇ ನಾಲ್ವರನ್ನು ಬಂಧಿಸಿದ್ದಾರೆ. ಐದನೆಯವನು ಪರಾರಿಯಾಗಿದ್ದಾನೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನಾಲ್ವರು ದಾಳಿಕೋರರನ್ನು ರೋಹಿತ್, ರಂಜಿತ್, ಕೌಶಿಕ್ ಮತ್ತು ವಿಜಯ್ ಎಂದು ಗುರುತಿಸಲಾಗಿದೆ. ದುಷ್ಕರ್ಮಿಗಳನ್ನು ತೆಲಂಗಾಣ-ಕರ್ನಾಟಕ ಗಡಿಯಲ್ಲಿ ಬಂಧಿಸಲಾಗಿದೆ ಎಂದು ಇಂಡಿಯಾ ಟುಡೇ ವರದಿ ತಿಳಿಸಿದೆ.

ಹೈದರಾಬಾದ್‌ನಲ್ಲಿ ಇತ್ತೀಚಿಗೆ, ತನ್ನ ಕುಟುಂಬದ ಇಚ್ಛೆಗೆ ವಿರುದ್ಧವಾಗಿ ಮುಸ್ಲಿಂ ಮಹಿಳೆಯನ್ನು ಮದುವೆಯಾದ ಆರೋಪದ ಮೇಲೆ ದಲಿತ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಲಾಗಿತ್ತು. ಇದು ನಡೆದು ಸುಮಾರು ಹದಿನೈದು ದಿನಗಳ ನಂತರ ಮತ್ತೊಂದು ಅಮಾನುಷ ಘಟನೆ ಸಂಭವಿಸಿದೆ.

ಶುಕ್ರವಾರ ರಾತ್ರಿ 7:30 ರ ಸುಮಾರಿಗೆ ಬೇಗಂ ಬಜಾರ್ ಮೀನು ಮಾರುಕಟ್ಟೆಯಲ್ಲಿ ಮೃತ ನೀರಜ್ ಪನ್ವಾರ್ ಮೇಲೆ ದಾಳಿ ನಡೆಸಲಾಗಿದೆ.

ಇದನ್ನೂ ಓದಿ: ಮಾತು ಮರೆತ ಭಾರತ; ಗುಪ್ತರ ‘ಸವರ್ಣ ಯುಗ’ದಲ್ಲಿ ಅಸ್ಪೃಶ್ಯತೆಯ ಉಗಮ

ಪ್ರತ್ಯಕ್ಷದರ್ಶಿಗಳ ಪ್ರಕಾರ, ಕೊಲೆಗೀಡಾದ ಯುವಕ ತನ್ನ ತಂದೆಯೊಂದಿಗೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ದುಷ್ಕರ್ಮಿಗಳು ಚಾಕುವಿನಿಂದ ದಾಳಿ ಮಾಡಿದ್ದಾರೆ. ಇದರಿಂದ ತೀವ್ರವಾಗಿ ಗಾಯಗೊಂಡ ನೀರಜ್‌ ಅವರನ್ನು ಸಮೀಪದ ಆಸ್ಪತ್ರೆಗೆ ಸಾಗಿಸಲಾಯಿತು, ಆದರೆ ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಗಿದೆ.

ಕಳೆದ ವರ್ಷ ಏಪ್ರಿಲ್‌ನಲ್ಲಿ ನೀರಜ್‌ ಅವರು ಸಂಜನಾ ಅವರನ್ನು ಮದುವೆಯಾಗಿದ್ದರು. ಆದರೆ ಸಂಜನಾ ಅವರ ಕುಟುಂಬವು ಅವರ ಮದುವೆಯನ್ನು ವಿರೋಧಿಸಿತ್ತು. ತನ್ನ ಗಂಡನ ಹತ್ಯೆಯಲ್ಲಿ ತನ್ನ ಸೋದರಸಂಬಂಧಿಯ (ಸಹೋದರ) ಪಾತ್ರವನ್ನು ಸಂಜನಾ ಶಂಕಿಸಿದ್ದಾರೆ ಎಂದು ನ್ಯೂಸ್ ಮಿನಿಟ್‌ ವರದಿ ಮಾಡಿದ್ದು, ದಾಳಿ ಮಾಡಿರುವವರಿಗೆ ಮರಣದಂಡನೆ ವಿಧಿಸಬೇಕೆಂದು ಅವರು ಆಗ್ರಹಿಸಿದ್ದಾರೆ.

ಮಾರಣಾಂತಿಕ ದಾಳಿಗೆ ಮುನ್ನ ತನ್ನ ಮಗನಿಗೆ ಯಾವುದೇ ಬೆದರಿಕೆ ಇರಲಿಲ್ಲ ಎಂದು ನೀರಜ್ ತಂದೆ ಹೇಳಿದ್ದು, ಆದರೆ ಹತ್ಯೆಯು ಅಂತರ್ಜಾತಿ ವಿವಾಹಕ್ಕೆ ಸಂಬಂಧಿಸಿ ನಡೆದಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ನವವಿವಾಹಿತ ದಲಿತ ದಂಪತಿಗೆ ದೇವಸ್ಥಾನ ಪ್ರವೇಶ ನಿರಾಕರಣೆ; ಅರ್ಚಕನ ಬಂಧನ

“ನನ್ನ ಮಗ ಕಳೆದ ವರ್ಷ ಏಪ್ರಿಲ್‌ನಲ್ಲಿ ಬೇರೆ ಜಾತಿಯ ಯುವತಿಯನ್ನು ಮದುವೆಯಾಗಿದ್ದು, ದಂಪತಿಗೆ ಎರಡೂವರೆ ತಿಂಗಳ ಮಗನಿದ್ದಾನೆ. ಪ್ರೇಮ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ಮಗನ ಮೇಲೆ ಐವರು ಹಲ್ಲೆ ನಡೆಸಿದ್ದಾರೆ. ಅವರಿಗೆ ಯಾವುದೇ ಬೆದರಿಕೆ ಬಂದಿಲ್ಲ. ನಾವು ರಕ್ಷಣೆ ಕೋರಿ ಒಂದು ವರ್ಷದ ಹಿಂದೆ ಪೊಲೀಸರನ್ನು ಸಂಪರ್ಕಿಸಿದ್ದೆವು’’ ಎಂದು ಸಂತ್ರಸ್ತ ಯುವಕನ ತಂದೆ ಹೇಳಿರುವುದಾಗಿ ಇಂಡಿಯಾ ಟುಡೇ ವರದಿ ಮಾಡಿದೆ.

“ಇಂದು ಸಂಜೆ 7:30 ರ ಸುಮಾರಿಗೆ, ನಾವು ನಮ್ಮ ಸಂಬಂಧಿಕರ ಅಂಗಡಿಯಿಂದ ಹಿಂತಿರುಗುತ್ತಿದ್ದೆವು. ಅಲ್ಲಿಂದ ಹೊರಟ ಐದು ನಿಮಿಷಗಳ ಅಂತರದಲ್ಲಿ, ದುಷ್ಕರ್ಮಿಗಳು ನನ್ನ ಮಗನನ್ನು ಇರಿದು ಕೊಂದರು” ಎಂದು ತಂದೆ ಘಟನೆಯನ್ನು ವಿವರಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ರನ್ನು ಗುಂಡಿಕ್ಕಿ ಕೊಲ್ಲಿ: ಪಬ್ಲಿಕ್‌ ಟಿವಿಯಲ್ಲಿ ಮಾಡಲಾದ ಪ್ರಚೋದನೆಗೆ ಖಂಡನೆ

“ಮಾಜಿ ಮುಖ್ಯಮಂತ್ರಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರನ್ನು ಗುಂಡಿಕ್ಕಿ ಕೊಲ್ಲಿ”- ಹೀಗೆ ಪ್ರಚೋದನಾತ್ಮಕವಾಗಿ ವ್ಯಕ್ತಿಯೊಬ್ಬರು ಪಬ್ಲಿಕ್‌ ಟಿ.ವಿ. ಜೊತೆ ಮಾತನಾಡಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಇಬ್ಬರು ಧಾರ್ಮಿಕ...