Homeಚಳವಳಿಸ್ಕ್ರಾಲ್.ಇನ್ ಸಂಪಾದಕಿ ಸುಪ್ರಿಯಾ ಶರ್ಮ ಬಂಧನಕ್ಕೆ ಮಧ್ಯಂತರ ತಡೆ ನೀಡಿದ ಅಲಹಾಬಾದ್ ಹೈಕೋರ್ಟ್

ಸ್ಕ್ರಾಲ್.ಇನ್ ಸಂಪಾದಕಿ ಸುಪ್ರಿಯಾ ಶರ್ಮ ಬಂಧನಕ್ಕೆ ಮಧ್ಯಂತರ ತಡೆ ನೀಡಿದ ಅಲಹಾಬಾದ್ ಹೈಕೋರ್ಟ್

ಪ್ರಧಾನಿ ನರೇಂದ್ರ ಮೋದಿಯ ಕ್ಷೇತ್ರ ವಾರಣಾಸಿಯಲ್ಲಿ ದತ್ತು ಪಡೆದ ಡೊಮರಿ ಗ್ರಾಮದ ಜನರ ಕಳಪೆ ಜೀವನದ ಪರಿಸ್ಥಿತಿಯನ್ನು ವರದಿಯನ್ನು ದಿ ಸ್ಕ್ರೋಲ್ ಮಾಡಿದ್ದಕ್ಕಾಗಿ ಸಂಪಾದಕರ ಮೇಲೆ ಪ್ರಕರಣ ದಾಖಲಿಸಲಾಗಿತ್ತು.

- Advertisement -
- Advertisement -

ಖ್ಯಾತ ಸುದ್ದಿ ಪೋರ್ಟಲ್ ಸ್ಕ್ರಾಲ್.ಇನ್ ಸಂಪಾದಕರಾದ ಸುಪ್ರಿಯಾ ಶರ್ಮಾ ಮತ್ತು ನರೇಶ್ ಫರ್ನಾಂಡಿಸ್ ತಮ್ಮ ವಿರುದ್ಧ ದಾಖಲಾದ ಎಫ್‌ಐಆರ್ ಅನ್ನು ರದ್ದುಗೊಳಿಸುವಂತೆ ಅಲಹಾಬಾದ್ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಿದ ಅಲಹಾಬಾದ್ ಹೈಕೋರ್ಟ್ ಅವರ ಬಂಧನಕ್ಕೆ ಮಧ್ಯಂತರ ತಡೆ ನೀಡಿ ಆದೇಶ ಹೊರಡಿಸಿದೆ.

ನ್ಯಾಯಮೂರ್ತಿಗಳಾದ ಮನೋಜ್ ಮಿಶ್ರಾ ಮತ್ತು ಅನಿಲ್ ಕುಮಾರ್ ಅವರನ್ನೊಳಗೊಂಡ ವಿಭಾಗೀಯ ನ್ಯಾಯಪೀಠವು, “ಪ್ರಕರಣದ ಸಂಗತಿಗಳು, ಸನ್ನಿವೇಶಗಳನ್ನು ಪರಿಗಣಿಸಿ ಮತ್ತು ಅರ್ಜಿದಾರರು ಪ್ರಕಟಣೆಗೆ ಸಂಬಂಧಿಸಿದ ಸಂದರ್ಶನದ ಆಡಿಯೊ ರೆಕಾರ್ಡಿಂಗ್ ಹೊಂದಿದ್ದಾರೆಂದು ಹೇಳಿಕೊಂಡಿದ್ದಾರೆ. ಅದರಲ್ಲಿರುವ ವಿಷಯಗಳು ಪ್ರಕಟಣೆಯಲ್ಲಿ ಪ್ರತಿಫಲಿಸುತ್ತವೆ.

ಹಾಗಾಗಿ ತನಿಖೆಯನ್ನು ಒದಗಿಸುವ ಮೂಲಕ ಈ ಅರ್ಜಿಯನ್ನು ವಿಲೇವಾರಿ ಮಾಡುವುದು ಸೂಕ್ತವೆಂದು ನಾವು ಭಾವಿಸುತ್ತೇವೆ. ಪ್ರಕರಣವು ಅದರ ತಾರ್ಕಿಕ ತೀರ್ಮಾನಕ್ಕೆ ಬರಲಿದೆ. ಆದರೆ ಸೆಕ್ಷನ್ 173 (2) ಸಿಆರ್ಪಿಸಿ ಅಡಿಯಲ್ಲಿ, ಅವರು ತನಿಖೆಯಲ್ಲಿ ಸಹಕರಿಸಿದರೆ ಪೊಲೀಸ್ ವರದಿಯನ್ನು ಸಲ್ಲಿಸುವವರೆಗೆ ಅರ್ಜಿದಾರರನ್ನು ಮೇಲಿನ ಪ್ರಕರಣದಲ್ಲಿ ಬಂಧಿಸಬಾರದು” ಎಂದು ಹೇಳಿದೆ.

ಆದರೆ, ನ್ಯಾಯಾಲಯವು ಅವರ ವಿರುದ್ಧ ಎಫ್ಐಆರ್ ರದ್ದುಗೊಳಿಸಲು ನಿರಾಕರಿಸಿದೆ.

ಇದನ್ನೂ ಓದಿ: “ಎಷ್ಟು ಸಾಧ್ಯವೋ ಅಷ್ಟು ಕೇಸ್ ಜಡಿದುಬಿಡಿ!” : ಪತ್ರಕರ್ತರ ಮೇಲಿನ ಪ್ರಭುತ್ವದ ದಮನಕ್ಕೆ ಪರಿಹಾರವೇನು?

ಪ್ರಧಾನಿ ನರೇಂದ್ರ ಮೋದಿ ತಮ್ಮ ವಾರಣಾಸಿ ಕ್ಷೇತ್ರದಲ್ಲಿ ದತ್ತು ಪಡೆದ ಡೊಮರಿ ಗ್ರಾಮದಲ್ಲಿನ ಜನರ ಕಳಪೆ ಜೀವನದ ಪರಿಸ್ಥಿತಿಗಳನ್ನು ದಿ ಸ್ಕ್ರೋಲ್ ವರದಿ ಮಾಡಿತ್ತು. ಇದಕ್ಕಾಗಿ ಸಂಪಾದಕರ ಮೇಲೆ ಪ್ರಕರಣ ದಾಖಲಿಸಲಾಗಿತ್ತು.

“ಲಾಕ್‌ಡೌನ್ ಸಮಯದಲ್ಲಿ ಜನರು ಹಸಿವಿನಿಂದ ಬಳಲುತ್ತಿದ್ದರು” ಎಂಬ ಶೀರ್ಷಿಕೆಯ ವರದಿಯಲ್ಲಿ, ಲಾಕ್‌ಡೌನ್ ಸಮಯದಲ್ಲಿ ಜನರು ಆಹಾರ ಅಥವಾ ಪಡಿತರ ಕೊರತೆ ಸೇರಿದಂತೆ ತೀವ್ರ ಸಂಕಷ್ಟಗಳನ್ನು ಎದುರಿಸಿದ್ದಾಗಿ ಮಾಲಾ ಎಂಬುವವರು ಹೇಳಿದ್ದಾರೆಂದು ಶರ್ಮಾ ಉಲ್ಲೇಖಿಸಿದ್ದರು.

ಆದರೆ, ತಾನು ವಾರಣಾಸಿ ನಗರ ಪುರಸಭೆಯಲ್ಲಿ ಹೊರಗುತ್ತಿಗೆ ನೈರ್ಮಲ್ಯ ಕಾರ್ಯಕರ್ತೆ ಎಂದು ಹೇಳಿಕೊಂಡಿದ್ದ ಅವರು, ಲಾಕ್‌ಡೌನ್ ಸಮಯದಲ್ಲಿ ತಾನು ಯಾವುದೇ ತೊಂದರೆಗಳನ್ನು ಎದುರಿಸಲಿಲ್ಲ ಎಂದು ಹೇಳುತ್ತಿದ್ದಾರೆ.

ಶರ್ಮಾ ಅವರೊಂದಿಗಿನ ಸಂದರ್ಶನವನ್ನು ನೆನಪಿಸಿಕೊಂಡ ಮಾಲಾ ದೇವಿ, “ಅವರು ನನ್ನನ್ನು ಲಾಕ್ ಡೌನ್ ಬಗ್ಗೆ ಕೇಳಿದರು; ನಾನು ಅಥವಾ ನನ್ನ ಕುಟುಂಬದ ಯಾರೊಬ್ಬರೂ ಯಾವುದೇ ಸಮಸ್ಯೆಗಳನ್ನು ಎದುರಿಸಲಿಲ್ಲ ಎಂದು ನಾನು ಅವರಿಗೆ ಹೇಳಿದ್ದೆ” ಎಂದು ಹೇಳಿದರು.

ಇದನ್ನೂ ಓದಿ: ಸರ್ವಾಧಿಕಾರಿ ಹಿಡಿತದಲ್ಲಿ ನಲುಗುತ್ತಿರುವ ಆಫ್ರಿಕಾದ ಎರಿಟ್ರಿಯಾ ದೇಶದ ಪತ್ರಕರ್ತರು, ಬರಹಗಾರರು

ಎಫ್‌ಐಆರ್‌ನಲ್ಲಿ ಮಾಲಾ ದೇವಿ, “ನಾನು ಮತ್ತು ಮಕ್ಕಳು ಹಸಿವಿನಿಂದ ಬಳಲುತ್ತಿದ್ದೇವೆ ಎಂದು ಹೇಳುವ ಮೂಲಕ, ಸುಪ್ರಿಯಾ ಶರ್ಮಾ ನನ್ನ ಬಡತನ ಮತ್ತು ನನ್ನ ಜಾತಿಯನ್ನು ಗೇಲಿ ಮಾಡಿದ್ದಾರೆ. ಅವರು ನನ್ನ ಭಾವನೆಗಳನ್ನು ನೋಯಿಸಿದ್ದಾರೆ” ಎಂದು ಹೇಳಿದರು.

ಸೆಕ್ಷನ್ 269, 501 ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯ ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಿದ್ದಾರೆ. ದೂರು ನೀಡಿದ ಮಹಿಳೆಯು ಎಫ್‌ಐಆರ್‌ನಲ್ಲಿ ತಮ್ಮ ಸಮುದಾಯವನ್ನು ಅವಮಾನಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಈ ಆರೋಪಗಳನ್ನು ನಿರಾಕರಿಸಿದ ಸುಪ್ರಿಯಾ ಶರ್ಮಾ, “ಸಂದರ್ಶನದ ಆಡಿಯೊ ರೆಕಾರ್ಡಿಂಗ್ ಮಾಡಿರುವುದಾಗಿ, ಕೆಲವು ವ್ಯಕ್ತಿಗಳ ವಾಸ್ತವಿಕ ಸ್ಥಿತಿಯನ್ನು ತೋರಿಸಲು ಸಾರ್ವಜನಿಕ ಹಿತಾಸಕ್ತಿಯಿಂದ ಇದನ್ನು ಪ್ರಕಟಿಲಾಗಿದೆ” ಎಂದು ಹೇಳಿದ್ದಾರೆ.

“ಮಾಲಾ ದೇವಿಯವರ ಹೇಳಿಕೆಗಳನ್ನು ನಿಖರವಾಗಿ ವರದಿ ಮಾಡಲಾಗಿದೆ. ಇದು ಸ್ವತಂತ್ರ ಮತ್ತು ದಿಟ್ಟತನದ ಪತ್ರಿಕೆಗೆ ಬೆದರಿಕೆಯೊಡ್ಡುವ ಪ್ರಕರಣವಾಗಿದೆ” ಎಂದು ಸ್ಕ್ರಾಲ್.ಇನ್ ಹೇಳಿಕೆ ನೀಡಿದೆ.


ಇದನ್ನೂ ಓದಿ: ಕಾನೂನಿನ ದುರುಪಯೋಗ: ಸ್ಕ್ರೋಲ್.ಇನ್ ಸಂಪಾದಕರ ಮೇಲಿನ FIR ರದ್ಧತಿಗೆ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...