Homeಮುಖಪುಟಮಾಧ್ಯಮಗಳ ಮೇಲೆ ಬೆದರಿಕೆ ಸಲ್ಲದು: ಬಿಬಿಸಿ ಮೇಲಿನ ಐಟಿ ದಾಳಿಗೆ ಎಡಿಟರ್ಸ್ ಗಿಲ್ಡ್ ಖಂಡನೆ

ಮಾಧ್ಯಮಗಳ ಮೇಲೆ ಬೆದರಿಕೆ ಸಲ್ಲದು: ಬಿಬಿಸಿ ಮೇಲಿನ ಐಟಿ ದಾಳಿಗೆ ಎಡಿಟರ್ಸ್ ಗಿಲ್ಡ್ ಖಂಡನೆ

- Advertisement -
- Advertisement -

ಗುಜರಾತ್ ಗಲಭೆಯಲ್ಲಿ ನರೇಂದ್ರ ಮೋದಿಯವರ ಪಾತ್ರದ ಕುರಿತು ಸಾಕ್ಷ್ಯಚಿತ್ರ ಬಿಡುಗಡೆ ಮಾಡಿದ ತಿಂಗಳೊಳಗೆ ಭಾರತದ ಬಿಬಿಸಿ ಕಚೇರಿಗಳ ಮೇಲೆ ಐಟಿ ದಾಳಿ ನಡೆಸಿರುವುದಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಮಾಧ್ಯಮಗಳ ಮೇಲಿನ ಬೆದರಿಕೆ ಸಲ್ಲದು ಎಂದು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ತಾಕೀತು ಮಾಡಿದೆ.

ಸರ್ಕಾರದ ನೀತಿಗಳನ್ನು ಟೀಕಿಸುವ, ಆಡಳಿತವನ್ನು ಪ್ರಶ್ನಿಸುವ ಮಾಧ್ಯಮ ಸಂಸ್ಥೆಗಳನ್ನು ಬೆದರಿಸಲು ಮತ್ತು ಕಿರುಕುಳ ನೀಡಲು ಸರ್ಕಾರಿ ಏಜೆನ್ಸಿಗಳನ್ನು ಬಳಸಿಕೊಳ್ಳುವ ಪ್ರವೃತ್ತಿಯ ಮುಂದುವರಿಕೆಯಾಗಿ ಐಟಿ ಇಲಾಖೆಯ ‘ಸಮೀಕ್ಷೆಗಳು’ ನಡೆಯುತ್ತಿವೆ ಎಂದು ಗಿಲ್ಡ್ ಹೇಳಿಕೆಯಲ್ಲಿ ತಿಳಿಸಿದೆ.

“ಸರ್ವೆ” ಎಂದು ಕರೆಯಲ್ಪಡುವ ಈ ದಾಳಿಗಳು ಸರ್ಕಾರಿ ಏಜೆನ್ಸಿಗಳ ದುರುಪಯೋಗದ ಮೂಲಕ ಬೆದರಿಸುವ ಕ್ರಿಯೆಯೇ ಹೊರತು ಬೇರೇನೂ ಅಲ್ಲ” ಎಂದು ಬಿಬಿಸಿ ದೆಹಲಿಯ ಮಾಜಿ ಡೆಪ್ಯೂಟಿ ಚೀಫ್ ಆಫ್ ಬ್ಯೂರೋ ಪತ್ರಕರ್ತ ಸತೀಶ್ ಜಾಕೋಬ್ ತಿಳಿಸಿದ್ದಾರೆ.

2002ರ ಗುಜರಾತ್ ಗಲಭೆ ಮತ್ತು ಮೋದಿಯ ಆಡಳಿತದಲ್ಲಿ ಅಲ್ಪಸಂಖ್ಯಾತರ ಪರಿಸ್ಥಿತಿಯ ಕುರಿತು ಬಿಬಿಸಿಯು 2 ಕಂತುಗಳು ಸಾಕ್ಷ್ಯಚಿತ್ರವನ್ನು ಬಿಡುಗಡೆಗೊಳಿಸಿದೆ. ಆದರೆ ಅವು ದುರುದ್ದೇಶದಿಂದ ಕೂಡಿವೆ ಎಂದು ಕೇಂದ್ರ ಸರ್ಕಾರ ಭಾರತದಲ್ಲಿ ಅವುಗಳ ಪ್ರಸಾರವನ್ನು ತಡೆಹಿಡಿದಿತ್ತು. ಇದೇ ಸಂದರ್ಭದಲ್ಲಿ ಬಿಬಿಸಿ ಕಚೇರಿಗಳ ಮೇಲೆ ಐಟಿ ದಾಳಿ ನಡೆದಿರುವುದು ಆತಂಕಕಾರಿ ಬೆಳೆವಣಿಗೆ ಎಂದು ಗಿಲ್ಡ್ ಹೇಳಿದೆ.

2021ರಲ್ಲಿ ನ್ಯೂಸ್‌ಕ್ಲಿಕ್, ನ್ಯೂಸ್‌ಲಾಂಡ್ರಿ, ದೈನಿಕ್ ಭಾಸ್ಕರ್ ಮತ್ತು ಭಾರತ್ ಸಮಾಚಾರ್ ಮಾಧ್ಯಮ ಸಂಸ್ಥೆಗಳ ಮೇಲೆ ಐಟಿ ದಾಳಿ ನಡೆಸಲಾಗಿತ್ತು. ಅವುಗಳು ಸರ್ಕಾರದ ನೀತಿಗಳ ವಿರುದ್ಧ ವಿಮರ್ಶಾತ್ಮಕ ವರದಿಗಳನ್ನು ಪ್ರಕಟಿಸಿದ ಬೆನ್ನಲ್ಲೆ ದಾಳಿಗಳು ನಡೆದಿದ್ದವು. ಈಗ ಅದೇ ಮಾದರಿಯಲ್ಲಿ ಬಿಬಿಸಿ ಮೇಲೆ ದಾಳಿ ನಡೆಸಲಾಗಿದೆ. ಇದು ಸಾಂವಿಧಾನಿಕ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವ ಪ್ರವೃತ್ತಿಯಾಗಿದೆ ಗಿಲ್ಡ್ ಕಿಡಿಕಾರಿದೆ.

ಪತ್ರಕರ್ತರು ಮತ್ತು ಮಾಧ್ಯಮ ಸಂಸ್ಥೆಗಳ ಹಕ್ಕುಗಳನ್ನು ದುರ್ಬಲಗೊಳಿಸದಂತೆ ಇಂತಹ ಎಲ್ಲಾ ತನಿಖೆಗಳಲ್ಲಿ ಹೆಚ್ಚಿನ ಕಾಳಜಿ ಮತ್ತು ಸೂಕ್ಷ್ಮತೆಯನ್ನು ತೋರಿಸಬೇಕು. ಅಂತಹ ತನಿಖೆಗಳನ್ನು ನಿಗದಿತ ನಿಯಮಗಳೊಳಗೆ ನಡೆಸಲಾಗುವುದು ಮತ್ತು ಸ್ವತಂತ್ರ ಮಾಧ್ಯಮವನ್ನು ಬೆದರಿಸುವ ಕಿರುಕುಳದ ಸಾಧನಗಳಾಗಿ ಅವು ಬಳಕೆಯಾಗುವುದಿಲ್ಲ ಎಂಬುದನ್ನು ಸರ್ಕಾರ ಖಚಿತಪಡಿಸಿಕೊಳ್ಳಬೇಕು ಗಿಲ್ಡ್ ಹೇಳಿಕೆಯಲ್ಲಿ ಒತ್ತಾಯಿಸಿದೆ.

ಇದನ್ನೂ ಓದಿ: ಭಾರತದ ಬಿಬಿಸಿ ಕಚೇರಿಗಳ ಮೇಲೆ ಐಟಿ ದಾಳಿ: ಅದಾನಿ ವಿರುದ್ಧ ಈ ಕ್ರಮ ಯಾಕೆ ಇಲ್ಲ? ಎಂದ ಮೊಯಿತ್ರಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...