Homeಮುಖಪುಟಅಲ್ಪಸಂಖ್ಯಾತರ ಮೇಲಿನ ಅಸಹಿಷ್ಣುತೆಯೇ ಮಣಿಪುರ ಹಿಂಸಾಚಾರಕ್ಕೆ ಕಾರಣ: ಯುರೋಪಿಯನ್ ಪಾರ್ಲಿಮೆಂಟ್ ನಿರ್ಣಯ

ಅಲ್ಪಸಂಖ್ಯಾತರ ಮೇಲಿನ ಅಸಹಿಷ್ಣುತೆಯೇ ಮಣಿಪುರ ಹಿಂಸಾಚಾರಕ್ಕೆ ಕಾರಣ: ಯುರೋಪಿಯನ್ ಪಾರ್ಲಿಮೆಂಟ್ ನಿರ್ಣಯ

- Advertisement -
- Advertisement -

ಮಣಿಪುರ ಹಿಂಸಾಚಾರಕ್ಕೆ ಅಲ್ಪಸಂಖ್ಯಾತರ ಬಗೆಗಿನ ಅಸಹಿಷ್ಣುತೆ ಕಾರಣವಾಗಿದೆ ಮತ್ತು ಎಲ್ಲಾ ಅಲ್ಪಸಂಖ್ಯಾತರನ್ನು ಭಾರತ ಸರ್ಕಾರ ರಕ್ಷಿಸಬೇಕು ಎಂದು ಒತ್ತಾಯಿಸುವ ನಿರ್ಣಯವನ್ನು ಯುರೋಪಿಯನ್ ಪಾರ್ಲಿಮೆಂಟ್ ಸದಸ್ಯರು ಗುರುವಾರ ಅಂಗೀಕರಿಸಿದರು.

”ಯುರೋಪಿಯನ್ ಸಂಸತ್ತಿನ ಸದಸ್ಯರು (MEP) ಹಿಂಸಾಚಾರವನ್ನು ಪರಿಶೀಲಿಸಲು ಸ್ವತಂತ್ರ ತನಿಖೆಗಳಿಗೆ ಅವಕಾಶ ನೀಡಬೇಕು. ಆ ರಾಜ್ಯದಲ್ಲಿ ನಿರ್ಭಯದ ವಾತಾವರಣ ನಿರ್ಮಿಸಲು ಇಂಟರ್ನೆಟ್ ನಿಷೇಧವನ್ನು ತೆಗೆದುಹಾಕಬೇಕು” ಎಂದು ಶಾಸಕರು ನಿರ್ಣಯದಲ್ಲಿ ತಿಳಿಸಿದ್ದಾರೆ.

ಮಣಿಪುರವು ಮೇ 3 ರಿಂದ ಕುಕಿ ಮತ್ತು ಬಹುಸಂಖ್ಯಾತ ಮೈತಿ ಸಮುದಾಯಗಳ ನಡುವೆ ಜನಾಂಗೀಯ ಘರ್ಷಣೆ ನಡೆಯುತ್ತಿದೆ. ವ್ಯಾಪಕವಾದ ಹಿಂಸಾಚಾರ ಮತ್ತು ಬೆಂಕಿ ಹಚ್ಚುವ ಘಟನೆಗಳು ರಾಜ್ಯದಲ್ಲಿ ಬಿಕ್ಕಟ್ಟನ್ನು ಇನ್ನಷ್ಟು ಹೆಚ್ಚಿಸುತ್ತಿವೆ. 140ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 60,000 ಜನರು ತಮ್ಮ ಮನೆಗಳಿಂದ ಸ್ಥಾಳಾಂತರಗೊಂಡಿದ್ದಾರೆ.

ಹಿಂಸಾಚಾರ ಪ್ರಾರಂಭವಾದಾಗಿನಿಂದ ರಾಜ್ಯದಾದ್ಯಂತ ಇಂಟರ್ನೆಟ್ ನಿಷೇಧಿಸಲಾಗಿದೆ, ರಾಜ್ಯದ ಆರ್ಥಿಕತೆಯು ನೆಲಕಚ್ಚಿದೆ. ಇಂಟರ್ನೆಟ್ ಮೇಲಿನ ನಿಷೇಧವನ್ನು ಕಳೆದ ವಾರ ಭಾಗಶಃ ತೆಗೆದುಹಾಕಲಾಗಿದೆ.

ಭಾರತದಲ್ಲಿ ರಾಜಕೀಯವಾಗಿ ಪ್ರೇರಿತಗೊಂಡು ಹಿಂದೂ ಬಹುಸಂಖ್ಯಾತತೆಯನ್ನು ಉತ್ತೇಜಿಸುವ ವಿಭಜಕ ನೀತಿಗಳನ್ನು ಅನುಸರಿಸುತ್ತಿದೆ ಎಂದು ಯುರೋಪಿಯನ್ ಪಾರ್ಲಿಮೆಂಟ್‌ನಲ್ಲಿನ ನಿರ್ಣಯದಲ್ಲಿ ಕಳವಳ ವ್ಯಕ್ತಪಡಿಸಿದೆ.

ಭದ್ರತಾ ಪಡೆಗಳು ಹತ್ಯೆಯಲ್ಲಿ ಭಾಗಿ

”ಮಣಿಪುರ ರಾಜ್ಯ ಸರ್ಕಾರವು ಇಂಟರ್ನೆಟ್ ಸಂಪರ್ಕಗಳನ್ನು ಸ್ಥಗಿತಗೊಳಿಸಿದೆ ಮತ್ತು ಮಾಧ್ಯಮಗಳಿಗೂ ವರದಿ ಮಾಡಲು ಅಡ್ಡಿಪಡಿಸಿದೆ. ಇಲ್ಲಿ ಇತ್ತೀಚೆಗೆ ನಡೆದ ಹತ್ಯೆಗಳಲ್ಲಿ ಭದ್ರತಾ ಪಡೆಗಳು ಭಾಗಿಯಾಗಿವೆ, ಇದು ಅಧಿಕಾರಿಗಳ ಮೇಲಿನ ಅವಿಶ್ವಾಸವನ್ನು ಮತ್ತಷ್ಟು ಹೆಚ್ಚಿಸಿದೆ” ಎಂದು ಅದು ಹೇಳಿದೆ.

ಭದ್ರತಾ ಪಡೆಗಳು ನಾಗರಿಕರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 11ರಂದು ನಡೆದ ಗುಂಡಿನ ದಾಳಿಯಲ್ಲಿ ಓರ್ವ ಪೊಲೀಸ್ ಅಧಿಕಾರಿ ಮೃತಪಟ್ಟು, ಆರು ಮಂದಿ ಗಾಯಗೊಂಡಿದ್ದರು. ಉಗ್ರರು ತಮ್ಮ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಸೇನೆ ಹೇಳಿದರೆ, ಗ್ರಾಮ ರಕ್ಷಣಾ ಸ್ವಯಂಸೇವಕರ ಗುಂಪು ತಮ್ಮ ಮೇಲೆ ಗುಂಡು ಹಾರಿಸಿದ್ದು ಭದ್ರತಾ ಸಿಬ್ಬಂದಿ ಎಂದು ಹೇಳಿಕೊಂಡಿದ್ದು, ಅವರು ಪ್ರತಿದಾಳಿ ನಡೆಸಿದರು.

ಮತ್ತೊಂದು ನಿದರ್ಶನದಲ್ಲಿ, ”ಬೆಂಕಿ ಹಚ್ಚಲಾದ ಕಟ್ಟಡದ ದೃಶ್ಯಗಳನ್ನು ರೆಕಾರ್ಡ್ ಮಾಡುತ್ತಿದ್ದಾಗ ಮೂವರು ಪತ್ರಕರ್ತರ ಮೇಲೆ ಭದ್ರತಾ ಸಿಬ್ಬಂದಿ ಲಾಠಿಗಳಿಂದ ಹಲ್ಲೆ ನಡೆಸಿದ ಘಟನೆ ಇಂಫಾಲ್‌ನ ನ್ಯೂ ಚೆಕ್‌ಕಾನ್ ಪ್ರದೇಶದಲ್ಲಿ ನಡೆದಿದೆ” ಎಂದು ಆರೋಪಿಸಲಾಗಿದೆ.

”ಇರೋಪಿಯನ್ ಒಕ್ಕೂಟ-ಭಾರತದ ಮಾನವ ಹಕ್ಕುಗಳ ಸಂವಾದವನ್ನು ಬಲಪಡಿಸಬೇಕು. ಇರೋಪಿಯನ್ ಒಕ್ಕೂಟ ಮತ್ತು ಅದರ ಸದಸ್ಯ ರಾಷ್ಟ್ರಗಳಲ್ಲಿ ವ್ಯವಸ್ಥಿತವಾಗಿ ಮತ್ತು ಸಾರ್ವಜನಿಕವಾಗಿ ಮಾನವ ಹಕ್ಕುಗಳ ಕಾಳಜಿಯನ್ನು ಹೆಚ್ಚಿಸಲು ಪ್ರೋತ್ಸಾಹಿಸಲು ಸಹ ಸಲಹೆ ನೀಡುತ್ತವೆ. ವಿಶೇಷವಾಗಿ ಅಭಿವ್ಯಕ್ತಿ ಸ್ವಾತಂತ್ರ್ಯ, ಧರ್ಮ ಮತ್ತು ನಾಗರಿಕ ಸಮಾಜಕ್ಕೆ ಕುಗ್ಗುತ್ತಿರುವ ಸ್ಥಳಗಳ ಬಗ್ಗೆ ಕಾಳಜಿ ವಹಿಸುತ್ತದೆ..” ಎಂದು ಯುರೋಪಿಯನ್ ಸಂಸತ್ತಿನ ಸದಸ್ಯರು ಹೇಳಿದ್ದಾರೆ.

ಜೂನ್ 11 ರಂದು ಯುರೋಪಿಯನ್ ಪಾರ್ಲಿಮೆಂಟ್‌ನಲ್ಲಿ ಮಣಿಪುರದ ನಿರ್ಣಯದ ಪ್ರಸ್ತಾಪವನ್ನು ಆರು ಸಂಸದೀಯ ಗುಂಪುಗಳು – ಎಡ ಗುಂಪು, ವರ್ಟ್ಸ್ / ಎಎಲ್ಇ ಗುಂಪು, ಎಸ್ & ಡಿ ಗ್ರೂಪ್, ರಿನ್ಯೂ ಗ್ರೂಪ್, ಇಸಿಆರ್ ಗ್ರೂ ಮತ್ತು ಪಿಪಿಇ ಗ್ರೂಪ್ ಮೂಲಕ ಮಂಡಿಸಲಾಯಿತು.

ಆರು ಸಂಸದೀಯ ಗುಂಪುಗಳು ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರವು ಮಾನವ ಹಕ್ಕುಗಳನ್ನು ಉಲ್ಲಂಘಿಸುತ್ತಿದೆ ಮತ್ತು ಭಿನ್ನಾಭಿಪ್ರಾಯ ವ್ಯಕ್ತಪಡಿಸುವ ನಾಗರಿಕ ಸಮಾಜ ಮತ್ತು ಪತ್ರಕರ್ತರನ್ನು ದಮನ ಮಾಡಿದೆ ಎಂದು ಆರೋಪಿಸಿದೆ. ಈ ನಿರ್ಣಯವು ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರ, ಜೀವಹಾನಿ ಮತ್ತು ಆಸ್ತಿ ನಾಶವನ್ನು ಖಂಡಿಸಿದೆ.

ಕೇಂದ್ರ ಮತ್ತು ಮಣಿಪುರದ ಬಿಜೆಪಿ ಸರ್ಕಾರಗಳು ರಾಜ್ಯಗಳಲ್ಲಿನ ಹಿಂಸಾಚಾರವನ್ನು ತಡೆಯಲು ಸಾಕಷ್ಟು ಪ್ರಯತ್ನಗಳನ್ನು ಮಾಡಿಲ್ಲ ಎಂದು ವಿರೋಧ ಪಕ್ಷಗಳು ಟೀಕಿಸಿವೆ. ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಭೇಟಿ ನೀಡಿಲ್ಲ ಅಥವಾ ಅಲ್ಲಿನ ಪರಿಸ್ಥಿತಿಯ ಬಗ್ಗೆ ಪ್ರತಿಕ್ರಿಯಿಸಿಲ್ಲ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಇನ್ನೂ ಸುಡುತ್ತಿರುವ ಮಣಿಪುರ; ಸಣ್ಣಸಣ್ಣ ಸಮುದಾಯಗಳ ಬಗ್ಗೆ ಪ್ರಭುತ್ವದ ನಿರ್ಲಜ್ಜ ನಿರ್ಲಕ್ಷ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...