Homeಮುಖಪುಟ'ನಿಮಗೆ ಆತ್ಮಸಾಕ್ಷಿ ಇದ್ದರೆ ಆತ್ಮಾವಲೋಕನ ಮಾಡಿಕೊಳ್ಳಿ..'; ಪ್ರಧಾನಿ ಮೋದಿ ವಿರುದ್ಧ ಸಿಎಂ ಟೀಕಾಪ್ರಹಾರ

‘ನಿಮಗೆ ಆತ್ಮಸಾಕ್ಷಿ ಇದ್ದರೆ ಆತ್ಮಾವಲೋಕನ ಮಾಡಿಕೊಳ್ಳಿ..’; ಪ್ರಧಾನಿ ಮೋದಿ ವಿರುದ್ಧ ಸಿಎಂ ಟೀಕಾಪ್ರಹಾರ

ನಿಮ್ಮ ಮೂರ್ಖತನದ ನಿರ್ಧಾರದಿಂದಾಗಿ ಎರಡು ವರ್ಷಗಳ ಅವಧಿಯಲ್ಲಿ ಬಡವರ ಕಲ್ಯಾಣಕ್ಕಾಗಿ ವ್ಯಯವಾಗಬೇಕಾಗಿದ್ದ ಹಣ ಕಾರ್ಪೋರೇಟ್ ದೊರೆಗಳ ಜೇಬು ಸೇರಿದೆ

- Advertisement -
- Advertisement -

ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಉತ್ತರ ಕರ್ನಾಟಕಕ್ಕೆ ಆಗಮಿಸುತ್ತಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಾಪ್ರಹಾರ ನಡೆಸಿದ್ದು, ‘ಸತ್ಯದ ನಾಡಾಗಿರುವ ಕರ್ನಾಟಕಕ್ಕೆ ಆಗಮಿಸಲಿರುವ ಸುಳ್ಳಿನ ಸರದಾರರಾದ ಸನ್ಮಾನ್ಯ ನರೇಂದ್ರ ಮೋದಿ ಅವರಿಗೆ ಸ್ವಾಗತ’ ಎಂದು ಲೇವಡಿ ಮಾಡಿದ್ದಾರೆ.

ಈ ಕುರಿತು ತಮ್ಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ‘ಸತ್ಯದ ನಾಡಾಗಿರುವ ಕರ್ನಾಟಕಕ್ಕೆ ಆಗಮಿಸಲಿರುವ ಸುಳ್ಳಿನ ಸರದಾರರಾದ ಸನ್ಮಾನ್ಯ ನರೇಂದ್ರ ಮೋದಿ ಅವರಿಗೆ ಸ್ವಾಗತ. ಕಾನೂನು ಪ್ರಕಾರ ಶಿಕ್ಷಾರ್ಹವಾಗಿರುವ ನಿಮ್ಮ ಸುಳ್ಳುಗಳ ಬಗ್ಗೆ ಯಾರೂ, ಯಾವುದೇ ಕ್ರಮ ಕೈಗೊಳ್ಳುವ ಸ‍್ಥಿತಿಯಲ್ಲಿ ಇಲ್ಲ ಎನ್ನುವುದು ನಮಗೂ ಗೊತ್ತಾಗಿದೆ. ಆದ್ದರಿಂದ ನಿಮಗೆ ಆತ್ಮಸಾಕ್ಷಿ ಇದ್ದರೆ ಆತ್ಮಾವಲೋಕನ ಮಾಡಿಕೊಳ್ಳಿ ಎಂದು ಕೋರುತ್ತೇನೆ. ನಿಮ್ಮ ಇತ್ತೀಚಿನ ಅತಿದೊಡ್ಡ ಸುಳ್ಳಿನ ಬಗ್ಗೆ ಕೆಲವು ಪ್ರಶ್ನೆಗಳನ್ನು ನಿಮಗೆ ಕೇಳಬೇಕೆಂದಿದ್ದೇನೆ, ನಿಮ್ಮ ಇಂದಿನ ಭಾಷಣದಲ್ಲಿ ಆ ಪ್ರಶ್ನೆಗಳಿಗೆ ಉತ್ತರಿಸುವಿರೆಂದು ನಂಬಿದ್ದೇನೆ’ ಎಂದಿದ್ದಾರೆ.

“ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಸಂಪತ್ತಿನ ಸಮೀಕ್ಷೆ ನಡೆಸಿ ಹಿಂದೂಗಳ ಸಂಪತ್ತನ್ನು ಏಳೇಳು ಮಕ್ಕಳು ಹುಟ್ಟಿಸುವ ಮುಸ್ಲಿಮರಿಗೆ ಹಂಚಿಕೆ ಮಾಡುತ್ತಾರೆ ಎಂಬ ಅಪ್ಪಟ ಸುಳ್ಳನ್ನು ನಿರ್ಲಜ್ಜವಾಗಿ ಸಾರ್ವಜನಿಕ ಭಾಷಣದಲ್ಲಿ ಹೇಳಿದ್ದಿರಲ್ಲಾ? ಇದಕ್ಕೆ ನಿಮ್ಮಲ್ಲಿ ಆಧಾರ ಏನಿದೆ? ಲೋಕಸಭಾ ಚುನಾವಣೆಗಾಗಿ ಕಾಂಗ್ರೆಸ್ ಪಕ್ಷ ಬಿಡುಗಡೆ ಮಾಡಿದ ಪ್ರಣಾಳಿಕೆಯ ಯಾವ ಪುಟದಲ್ಲಿ ಈ ಭರವಸೆ ಇದೆ. ಯಾವ ಹಿರಿಯ ನಾಯಕರು ಇದನ್ನು ಹೇಳಿದ್ದಾರೆ? ದಯವಿಟ್ಟು ತಿಳಿಸಿ ಇಲ್ಲವಾದರೆ ಸುಳ್ಳು ಆರೋಪಕ್ಕಾಗಿ ಕನಿಷ್ಠ ವಿಷಾದವನ್ನಾದರೂ ಸೂಚಿ” ಎಂದು ಆಗ್ರಹಿಸಿದ್ದಾರೆ.

“ಪಿತ್ರಾರ್ಜಿತ ಆಸ್ತಿ ತೆರಿಗೆ ಹೇರುವ ಬಗ್ಗೆ ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಎಲ್ಲಿಯೂ ಹೇಳಿಲ್ಲ. ಪಕ್ಷದ ವೇದಿಕೆಯಲ್ಲಿಯೂ ಚರ್ಚೆಯಾಗಿಲ್ಲ. ಆ ಚರ್ಚೆಯನ್ನು ಪಕ್ಷ ನಡೆಸಿದ್ದರೆ ಅದಕ್ಕೆ ಆಧಾರ ಕೊಡಿ. ಸ್ಯಾಮ್ ಪಿತ್ರೋಡಾ ಅವರು ಇದನ್ನು ಪ್ರಸ್ತಾಪಿಸಿ ಈ ಬಗ್ಗೆ ಚರ್ಚೆಯಾಗಬೇಕೆಂದು ಹೇಳಿರುವುದು ನಿಜ, ಅದು ಅವರ ವೈಯಕ್ತಿಕ ಅಭಿಪ್ರಾಯವಾಗಿತ್ತು. ಪಿತ್ರಾರ್ಜಿತ ಆಸ್ತಿ ತೆರಿಗೆ ವಿಚಾರದ ಚರ್ಚೆ ಶುರುಮಾಡಿರುವುದೇ ನಿಮ್ಮ ಸಹದ್ಯೋಗಿಯಾಗಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2019ರ ಬಜೆಟ್ ನಲ್ಲಿ ಇದನ್ನು ಸೇರಿಸುವ ಬಗ್ಗೆ ಚರ್ಚೆ ನಡೆದಿರುವುದಕ್ಕೆ ಆ ಕಾಲದ ಪತ್ರಿಕೆಗಳ ವರದಿಗಳೇ ಸಾಕ್ಷಿ. ಇದು ನಿಮ್ಮ ಗಮನಕ್ಕೆ ಬಂದಿರಲಿಲ್ಲವೇ? ಈಗ ನಿರ್ಮಲಾ ಸೀತಾರಾಮನ್ ಅವರನ್ನೂ ದೇಶದ್ರೋಹಿ ಪಟ್ಟಿಗೆ ಸೇರಿಸುವಿರಾ” ಎಂದು ಸಿಎಂ ಪ್ರಶ್ನಿಸಿದ್ದಾರೆ.

“ಸಂಪತ್ತಿನ ಸಮಾನ ಹಂಚಿಕೆ ಎನ್ನವುದು ಒಂದು ಉದಾತ್ತ ಚಿಂತನೆಯಾಗಿದೆ. ಇದು ನಮ್ಮ ಸಂವಿಧಾನದ ಆಶಯವೂ ಆಗಿದೆ. ನಮ್ಮ ದೇಶದಲ್ಲಿ 1953ರಲ್ಲಿಯೇ ಎಸ್ಟೇಟ್ ತೆರಿಗೆ ಹೇರಲಾಗಿತ್ತು. ಅದನ್ನು ರದ್ದು ಮಾಡಿದವರು ದಿವಂಗತ ಪ್ರಧಾನಿ ರಾಜೀವ್ ಗಾಂಧಿಯವರು. 1998ರ ವರೆಗೆ ಚಾಲ್ತಿಯಲ್ಲಿದ್ದ ಗಿಫ್ಟ್ ತೆರಿಗೆಯನ್ನು ರದ್ದು ಮಾಡಿದವರು ಆಗಿನ ಪ್ರಧಾನಿ ಹೆಚ್.ಡಿ.ದೇವೇಗೌಡರು. ಮೋದಿಯವರೇ ನಿಮ್ಮದೇ ಸರ್ಕಾರ 2015ರಲ್ಲಿ ಸಂಪತ್ತಿನ ಮೇಲಿನ ತೆರಿಗೆಯನ್ನೂ ರದ್ದು ಮಾಡಿದೆ. ಇದು ನಿಮ್ಮ ಗಮನಕ್ಕೆ ಬಂದಿರಲಿಲ್ಲವೇ” ಎಂದು ಅವರು ಗಮನ ಸೆಳೆದಿದ್ದಾರೆ.

“ನಿಮ್ಮದು ಸೂಟುಬೂಟು ಸರ್ಕಾರ, ಶ್ರೀಮಂತರ ಪರ ಮತ್ತು ಬಡವರ ವಿರೋಧಿ ಸರ್ಕಾರ ಎನ್ನುವ ನಮ್ಮ ಆರೋಪ ಆಧಾರರಹಿತವಾದುದೇನಲ್ಲ. 2019ರಲ್ಲಿ ನಿಮ್ಮದೇ ಸರ್ಕಾರ ಶೇಕಡಾ 30ರಷ್ಟಿದ್ದ ಕಾರ್ಪೋರೇಟ್ ತೆರಿಗೆಯನ್ನು ಶೇಕಡಾ 22ಕ್ಕೆ ಇಳಿಸಿದೆ ಎನ್ನುವುದು ನಿಮಗೆ ತಿಳಿದಿರಲಿ. ಈ ಮೂರ್ಖತನದ ನಿರ್ಧಾರದಿಂದಾಗಿ ಎರಡು ವರ್ಷಗಳ ಅವಧಿಯಲ್ಲಿ ಸರ್ಕಾರ ಕಳೆದುಕೊಂಡ ಆದಾಯ 1.81 ಲಕ್ಷ ಕೋಟಿ ರೂಪಾಯಿ. ದೇಶದ ಬಡವರ ಕಲ್ಯಾಣಕ್ಕಾಗಿ ವ್ಯಯವಾಗಬೇಕಾಗಿದ್ದ ಈ ಹಣ ಕಾರ್ಪೋರೇಟ್ ದೊರೆಗಳ ಜೇಬಿಗೆ ಸೇರಿದೆ. ಅವರ ಲಾಭದಲ್ಲಿ ಯಾರ ಪಾಲು ಎಷ್ಟು? ಪ್ರಧಾನಿ ಮೋದಿಯವರೇ, ಇದೇನಾ ನಿಮ್ಮ ಕಲ್ಪನೆಯ ಸಮಾನ ಆಸ್ತಿ ಹಂಚಿಕೆ” ಎಂದು ಪ್ರಶ್ನಿಸಿದ್ದಾರೆ.

“ಸಂಪತ್ತಿನ ಸಮಾನ ಹಂಚಿಕೆಯಾಗಬೇಕೆಂಬುದು ನಮ್ಮ ಸಂವಿಧಾನದ ಆಶಯವೂ ಆಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ನಡೆಸಿದಂತೆ ದೇಶದಲ್ಲಿ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ನಡೆಸುವುದಕ್ಕೆ ನಮ್ಮ ಪಕ್ಷ ಬದ್ಧವಾಗಿದೆ. ರಾಜಕೀಯ ಪ್ರಜಾಪ್ರಭುತ್ವ ಉಳಿಯಬೇಕಾದರೆ ಆರ್ಥಿಕ ಮತ್ತು ಸಾಮಾಜಿಕ ಪ್ರಜಾಪ್ರಭುತ್ವ ಸ್ಥಾಪನೆಯಾಗಬೇಕೆಂಬುದು ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಖಚಿತ ಅಭಿಪ್ರಾಯವಾಗಿತ್ತು. ಪ್ರಧಾನಿ ಮೋದಿಯವರೇ ನೀವು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದ್ದರೆ ಧೈರ್ಯದಿಂದ ಹಾಗೆಂದು ಹೇಳಿಬಿಡಿ. ಇದು ನಿಮ್ಮಿಂದ ಸಾಧ್ಯವೇ” ಎಂದು ಸಿಎಂ ಸವಾಲು ಹಾಕಿದ್ದಾರೆ.

“ಸಂಪತ್ತಿನ ಸಮಾನ ಹಂಚಿಕೆಯ ನಮ್ಮ ಆಶಯವನ್ನೇ ತಿರುಚಿ ಅದಕ್ಕೆ ಕೋಮುವಾದಿ ಬಣ್ಣ ಬಳಿಯಲು ಮುಂದಾಗಿರುವ ಜಾಣ ಪ್ರಧಾನಿಯವರೇ, ಕೆಲವೇ ಕೆಲವು ಕುಟುಂಬಗಳ ಕೈಯಲ್ಲಿರುವ ದೇಶದ ಸಂಪತ್ತನ್ನು ಸಮಾನವಾಗಿ ಹಂಚುವುದಾಗಿ ರಾಹುಲ್ ಗಾಂಧಿಯವರು ಹೇಳಿದ ಕೂಡಲೇ ನಿಮ್ಮ ಹೊಟ್ಟೆ ಉರಿಯುತ್ತಿರುವುದು ಯಾಕೆ? ರಾಷ್ಟ್ರೀಕೃತ ಬ್ಯಾಂಕ್ ಗಳಿಗೆ ಲಕ್ಷಾಂತರ ಕೋಟಿ ರೂಪಾಯಿ ಸಾಲವನ್ನು ಪಾವತಿ ಮಾಡದೆ ನಿಮ್ಮ ಉದ್ಯಮ ಮಿತ್ರರು ವಿದೇಶಕ್ಕೆ ಪರಾರಿಯಾದಾಗ ನಿಮಗೆ ಹೊಟ್ಟೆ ಉರಿಯಲಿಲ್ಲವೇ? ಇದೇನಾ ನಿಮ್ಮ ಸಮಾನ ಆಸ್ತಿ ಹಂಚಿಕೆ? ದೇಶದ ರೈತರು ರಾಷ್ಟ್ರೀಕೃತ ಬ್ಯಾಂಕಿನಲ್ಲಿರುವ ಸಾಲವನ್ನು ಮನ್ನಾ ಮಾಡಬೇಕೆಂದು ಕಳೆದ ಹತ್ತು ವರ್ಷಗಳಿಂದ ಕೇಂದ್ರ ಬಿಜೆಪಿ ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ. ಆ ಬೇಡಿಕೆಯನ್ನು ತಳ್ಳಿ ಹಾಕುತ್ತಲೇ ಬಂದಿರುವ ಪ್ರಧಾನಿ ನರೇಂದ್ರ ಮೋದಿಯವರೇ ಉದ್ಯಮಿಗಳಿಗೆ ಸೇರಿರುವ 16 ಲಕ್ಷ ಕೋಟಿ ರೂಪಾಯಿಯನ್ನು ಒಂದೇ ಏಟಿಗೆ ಮನ್ನಾ ಮಾಡಿದಾಗ ದೇಶದ ಆಸ್ತಿಯನ್ನು ಸಮಾನ ಹಂಚಿಕೆಮಾಡಬೇಕೆಂದು ನಿಮಗೆ ಅನಿಸಲಿಲ್ಲವೇ” ಎಂದು ವಾಗ್ದಾಳಿ ನಡೆಸಿದ್ದಾರೆ.

“ಹಿಂದಿನ ಪ್ರಧಾನಿಗಳಾದ ಜವಾಹರಲಾಲ್ ನೆಹರೂ 33, ಲಾಲ್ ಬಹದ್ದೂರ್ ಶಾಸ್ತ್ರಿ 5, ಇಂದಿರಾ ಗಾಂಧಿಯವರು 66, ರಾಜೀವ್ ಗಾಂಧಿಯವರು 16, ವಿ.ಪಿ.ಸಿಂಗ್ ಅವರು 2, ಐ.ಕೆ.ಗುಜ್ರಾಲ್ ಅವರು 3, ವಾಜಪೇಯಿ ಅವರು 17 ಮತ್ತು ಮನಮೋಹನ್ ಸಿಂಗ್ ಅವರು 23 ಸಾರ್ವಜನಿಕ ಸ್ವಾಮ್ಯದ ಸಂಸ್ಥೆಗಳನ್ನು ಸ್ಥಾಪಿಸಿದ್ದರು. ನೀವು ಒಂದೇ ಒಂದು ಸಾರ್ವಜನಿಕ ಸ್ವಾಮ್ಯದ ಸಂಸ್ಥೆಯನ್ನು ಸ್ಥಾಪಿಸಿಲ್ಲ. ನಿಮ್ಮ ಹತ್ತು ವರ್ಷಗಳ ಆಡಳಿತಾವಧಿಯಲ್ಲಿ 23 ಸಾರ್ವಜನಿಕ ಸ್ವಾಮ್ಯದ ಸಂಸ್ಥೆಗಳನ್ನು ಖಾಸಗಿಯವರಿಗೆ ಮಾರಾಟ ಮಾಡಿದ್ದೀರಿ. ನಿಮ್ಮ ಕಲ್ಪನೆಯ ಸಮಾನ ಆಸ್ತಿ ಹಂಚಿಕೆ ಎಂದರೆ ಇದೇನಾ” ಎಂದು ಟೀಕಿಸಿದ್ದಾರೆ.

“ನಮ್ಮ ಕಾಂಗ್ರೆಸ್ ಪಕ್ಷ ಭೂ ಸುಧಾರಣೆ ಕಾಯ್ದೆಯ ಮೂಲಕ ಉಳುವವನನ್ನೇ ಭೂಮಿಯ ಒಡೆಯರನ್ನಾಗಿ ಮಾಡಿ, ಭೂ ರಹಿತರಿಗೆ ಭೂಮಿ ಹಂಚಿಕೆ ಮಾಡಿತು. ಮನೆ ಇಲ್ಲದವರಿಗೆ ಮನೆ, ಶಿಕ್ಷಣಕ್ಕಾಗಿ ಶಾಲೆ, ಆನಾರೋಗ್ಯ ಹೋಗಲಾಡಿಸಲು ಆಸ್ಪತ್ರೆಗಳನ್ನು ನಿರ್ಮಿಸಿತು. ನಿಮ್ಮ ಹತ್ತು ವರ್ಷಗಳಲ್ಲಿ ನೀವು ಆಸ್ತಿಮಾಡಿಕೊಟ್ಟಿದ್ದು ಅದಾನಿ-ಅಂಬಾನಿಗಳಿಗೆ ಮಾತ್ರ ಅಲ್ಲವೇ? ವಿಮಾನ ನಿಲ್ದಾಣಗಳು, ಬಂದರುಗಳು, ಕಲ್ಲಿದ್ದಲು ಗಣಿಗಳು, ಅನಿಲ-ತೈಲ ನಿಕ್ಷೇಪಗಳು, ಹೆದ್ದಾರಿ ಟೋಲುಗಳು, ವಿದ್ಯುತ್ ನಿಗಮಗಳು ಒಂದೇ ಎರಡೇ ಇವೆಲ್ಲವೂ ನಿಮ್ಮ ಕಾಲದಲ್ಲಿಯೇ ಅಲ್ಲವೇ ಅದಾನಿ-ಅಂಬಾನಿ ಮಡಿಲು ಸೇರಿದ್ದು? ಇದೇನಾ ನಿಮ್ಮ ಸಮಾನ ಆಸ್ತಿ ಹಂಚಿಕೆ” ಎಂದು ಅವರು ಪ್ರಧಾನಿ ಮೋದಿ ಮುಂದೆ ಸಾಲುಸಾಲು ಪ್ರಶ್ನೆಗಳನ್ನಿಟ್ಟಿದ್ದಾರೆ.

ಇದನ್ನೂ ಓದಿ; ಬರಪರಿಹಾರ: ಮೋದಿಗೆ ಶ್ಲಾಘಿಸಿ ಕನ್ನಡಿಗರಿಂದ ಉಗಿಸಿಕೊಂಡ ಬಿಜೆಪಿ ನಾಯಕರು: ರಿಪೋರ್ಟ್ ಓದಿ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಛತ್ತೀಸ್‌ಗಢ| ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿ ಗುಂಪಿನಿಂದ ಹಲ್ಲೆ; ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯ

ಛತ್ತೀಸ್‌ಗಢದ ಜಂಜ್‌ಗೀರ್-ಚಂಪಾ ಜಿಲ್ಲೆಯಲ್ಲಿ ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿಗಳ ಗುಂಪೊಂದು ಹಲ್ಲೆ ನಡೆಸಿ, ಜೈಶ್ರೀರಾಮ್ ಎಂದು ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದೆ ಎಂಬ ಆರೋಪ ಕೇಳಿಬಂದಿದೆ. ಇಂದು (ಮಾ.18) ನಡೆದಿದೆ ಎನ್ನಲಾದ ಈ ಘಟನೆಯ...

ಯುಪಿಎಸ್‌ಸಿ 440 ನೇ ರ‍್ಯಾಂಕ್ ಎಂದು ಸುಳ್ಳು ಹೇಳಿ ಸಂಭ್ರಮಾಚರಣೆ ಮಾಡಿದ್ದ ಬಿಹಾರದ ಯುವಕನ ಬಂಧನ

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಾಗರಿಕ ಸೇವಾ ಪರೀಕ್ಷೆ (ಸಿಎಸ್‌ಇ) 2025 ರಲ್ಲಿ ಅಖಿಲ ಭಾರತ ರ‍್ಯಾಂಕ್ (ಎಐಆರ್) 440 ಗಳಿಸಿದ್ದೇನೆ ಎಂದು ಸುಳ್ಳು ಹೇಳಿಕೊಂಡ ಕೆಲವು ದಿನಗಳ ನಂತರ, ಬಿಹಾರದ ಶೇಖ್‌ಪುರ...

‘ಜೈ ಬಾಂಗ್ಲಾ’ ಘೋಷಣೆ ಕೂಗಿದ ಆರೋಪ: ಮಹಿಳೆಗೆ ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರಿನ ಹೆಬ್ಬಗೂಡಿಯಲ್ಲಿ ಅಕ್ರಮ ಎನ್ನಲಾದ ಶೆಡ್‌ಗಳ ತೆರವು ಕಾರ್ಯಾಚರಣೆ ವೇಳೆ 'ಜೈ ಬಾಂಗ್ಲಾ' ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾದ ಪಶ್ಚಿಮ ಬಂಗಾಳದ ಮಹಿಳೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಎಸ್.ರಾಚಯ್ಯ...

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಡಿಜೆ, ಐಟಂ ಹಾಡು ನಿಷೇಧಿಸಲು ಕರ್ನಾಟಕ ಯೋಜನೆ; ವಿಧಾನಸಭೆಯಲ್ಲಿ ಸಂತೋಷ್ ಲಾಡ್ ಪ್ರಸ್ತಾಪ

ಬೆಂಗಳೂರು: ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಧಾರ್ಮಿಕ ಮೆರವಣಿಗೆಗಳಲ್ಲಿ ಅಬ್ಬರದ ಸಂಗೀತ ಮತ್ತು "ಐಟಂ ಹಾಡುಗಳನ್ನು" ನುಡಿಸುವ ಡಿಸ್ಕ್ ಜಾಕಿಗಳನ್ನು (ಡಿಜೆ) ನಿಷೇಧಿಸುವ ಪರವಾಗಿ ಕರ್ನಾಟಕ ಸರ್ಕಾರವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ...

ದೆಹಲಿಯ ಪಾಲಂನಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ಮಕ್ಕಳು ಸೇರಿ ಏಳು ಮಂದಿ ಸಾವು

ರಾಷ್ಟ್ರ ರಾಜಧಾನಿಯ ಪಾಲಂ ಪ್ರದೇಶದ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ...

ವಾರಣಾಸಿ: ಗಂಗಾ ನದಿಯ ದೋಣಿಯಲ್ಲಿ ‘ಇಫ್ತಾರ್’ ಕೂಟ ಆಯೋಜಿಸಿದ್ದಕ್ಕಾಗಿ 14 ಜನರ ಬಂಧನ 

ವಾರಣಾಸಿಯಲ್ಲಿ ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ 'ಇಫ್ತಾರ್' (ರಂಜಾನ್ ಸಮಯದಲ್ಲಿ ಸೂರ್ಯಾಸ್ತದ ನಂತರ ತಿನ್ನುವ ಊಟ) ಕೂಟವನ್ನು ಆಯೋಜಿಸಿದ್ದಕ್ಕಾಗಿ ಹದಿನಾಲ್ಕು ಮುಸ್ಲಿಂ ಯುವಕರನ್ನು ಬಂಧಿಸಲಾಗಿದೆ.  ದೈನಂದಿನ ಮುಸ್ಲಿಂ ಜೀವನವನ್ನು ಅಪರಾಧೀಕರಿಸುವ ಮತ್ತೊಂದು ಪ್ರಕರಣ ಇದಾಗಿದ್ದು,...

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ತಮ್ಮ ಸ್ಥಾನಗಳಿಗೆ ಮಂಗಳವಾರ (ಮಾ.17) ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ಹಿರಿಯ ನಾಯಕ ಹಾಗೂ ನೌಗಾಂಗ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರದ್ಯುತ್ ಬೋರ್ಡೊಲೊಯ್...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಮೂವರು ಶಾಸಕರನ್ನು ಅಮಾನತುಗೊಳಿಸಿದ ಒಡಿಶಾ ಕಾಂಗ್ರೆಸ್

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಒಡಿಶಾ ಕಾಂಗ್ರೆಸ್ ಮೂವರು ಶಾಸಕರಾದ ಸೋಫಿಯಾ ಫಿರ್ದೌಸ್, ರಮೇಶ್ ಜೆನಾ ಮತ್ತು ದಾಸರಥಿ ಗೊಮಾಂಗೊ ಅವರನ್ನು ಅಮಾನತುಗೊಳಿಸಿದೆ. ಒಡಿಶಾ ವಿಧಾನಸಭೆಯಲ್ಲಿ ಕಾಂಗ್ರೆಸ್ 14 ಶಾಸಕರನ್ನು ಹೊಂದಿದ್ದು, ನಾಲ್ಕನೇ...

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...