Homeಮುಖಪುಟಮುಸ್ಲಿಮರ ವಿರುದ್ಧ ಪೋಸ್ಟ್‌ ಹಾಕಿದ ಹಿಂದುತ್ವ ಸಂಘಟನೆಯ ಕಾರ್ಯಕರ್ತನ ಬಂಧನ: ಆರೋಪಿ ಪರ ನಿಂತ ಸಚಿವ...

ಮುಸ್ಲಿಮರ ವಿರುದ್ಧ ಪೋಸ್ಟ್‌ ಹಾಕಿದ ಹಿಂದುತ್ವ ಸಂಘಟನೆಯ ಕಾರ್ಯಕರ್ತನ ಬಂಧನ: ಆರೋಪಿ ಪರ ನಿಂತ ಸಚಿವ ಸಿ.ಟಿ ರವಿ – ಪೊಲೀಸರ ವಿರುದ್ದವೇ ತನಿಖೆ!

ಹಾಸನದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಾದ ಆರ್‌ ಶ್ರೀನಿವಾಸಗೌಡರವರು ಆಕ್ಷೇಪಾರ್ಹ ಪೋಸ್ಟ್‌ ಹಾಕಿದ ಹಿಂದೂ ಕಾರ್ಯಕರ್ತರನ್ನು ಬಂಧಿಸಿದ ಬೇಲೂರು ಸಿಪಿಐ ಸಿದ್ಧರಾಮೇಶ್ವರ್, ಅರೇಹಳ್ಳಿ ಪಿಎಸ್ಐ ಬಾಲು ಎಂಬ ಇಬ್ಬರು ಪೊಲೀಸ್‌ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶಿಸಿದ್ದಾರೆ.

- Advertisement -
- Advertisement -

ಸಾಮಾಜಿಕ ಜಾಲತಾಣಗಳಲ್ಲಿ ನಿರಂತರವಾಗಿ ಮುಸ್ಲಿಂ ಸಮುದಾಯದ ವಿರುದ್ಧ ಕೋಮುದ್ವೇಷಪೂರಿತ ಪೋಸ್ಟ್‌ ಹಾಕಿದ ಆರೋಪದ ಮೇಲೆ ಏಪ್ರಿಲ್‌ 10ರಂದು ಹಾಸನ ಜಿಲ್ಲೆಯ ಬಿಕ್ಕೋಡಿನ ತೇಜಕುಮಾರ್ ಶೆಟ್ಟಿ ಎಂಬುವವರನ್ನು ಬಂಧಿಸಿದ್ದ ಪೊಲೀಸರ ವಿರುದ್ಧವೇ ತನಿಖೆ ನಡೆಯುವಂತ ಪರಿಸ್ಥಿತಿ ಎದುರಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಧರ್ಮ ಹಾಗೂ ವ್ಯಕ್ತಿಯ ನಿಂದನೆಯಾಗಲಿ ಮಾಡಬಾರದು ಎಂದು ಈಗಾಗಲೇ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳ ಆದೇಶ ಇದ್ದರೂ ಸಹ ಅದನ್ನು ಲೆಕ್ಕಿಸದೆ ಅವಹೇಳನಕಾರಿ ಪೋಸ್ಟ್ ಮಾಡಿದ್ದರಿಂದ, ಕಲಂ 152ರ ಅಡಿಯಲ್ಲಿ ಸ್ವಯಂ ಪ್ರೇರಿತ ದೂರು ದಾಖಲಿಸಿ ಬಂಧಿಸಲಾಗಿದೆ ಎಂದು ಬೇಲೂರು ಸಿಪಿಐ ಸಿದ್ಧರಾಮೇಶ್ವರ್, ಅರೇಹಳ್ಳಿ ಪಿಎಸ್ಐ ಬಾಲು ತಿಳಿಸಿದ್ದರು. ಬಂಧಿತ ವ್ಯಕ್ತಿಯೊಂದಿಗಿನ ಅವರ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು.

ಇದೇ ಸಮುಯದಲ್ಲಿ ಕರ್ನಾಟಕದ ಮುಖ್ಯಮಂತ್ರಿಗಳು ಸಹ ಎರಡು ಖಾಸಗಿ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿಯೂ ಅಲ್ಪಸಂಖ್ಯಾತ ಮುಸ್ಲಿಂ ಬಾಂಧವರ ವಿರುದ್ಧ ಸುಳ್ಳು ಸುದ್ದಿ ಹರಡಿದವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಖಡಕ್‌ ಎಚ್ಚರಿಕೆ ಸಹ ನೀಡಿದ್ದರು.


ಇದನ್ನೂ ಓದಿ: ಯಾರೂ ಸಹ ಅಲ್ಪಸಂಖ್ಯಾತ ಮುಸ್ಲಿಂ ಬಂಧುಗಳ ಮೇಲೆ ಒಂದು ಶಬ್ಧ ಮಾತಾಡಕೂಡದು: ಯಡಿಯೂರಪ್ಪ


ಘಟನೆ ನಡೆದ ಎರಡು ದಿನಗಳ ನಂತರ ಪ್ರವಾಸೋಧ್ಯಮ ಸಚಿವ ಸಿ.ಟಿ ರವಿರವರು ಆರೋಪಿಯ ರಕ್ಷಣೆಗೆ ಮುಂದಾಗಿದ್ದರು. ಅವರು ಟ್ವಿಟ್ಟರ್‌ನಲ್ಲಿ “ಕೊರೊನ ಸಂಬಂಧ ತಬ್ಲೀಘಿಜಮಾತ್ ಬಗ್ಗೆ ಪೋಸ್ಟ್ ಶೇರ್ ಮಾಡಿದರೆ ತಪ್ಪೇನು? ಇದಕ್ಕಾಗಿ ಬೇಲೂರಿನ ನಮ್ಮ ಕಾರ್ಯಕರ್ತ ತೇಜ್ ಕುಮಾರ್ ಶೆಟ್ಟಿ ಅವರ ಮೇಲೆ ಕೇಸ್ ಹಾಕಿದ್ದಾರೆ. ಈ ವಿಷಯದಲ್ಲಿ ಅತಿರೇಕದ ವರ್ತನೆ ತೋರಿಸಿದ ಅರೇಹಳ್ಳಿ ಠಾಣೆಯ ಪೊಲೀಸ್ ಅಧಿಕಾರಿ ವಿರುದ್ಧ ಕ್ರಮಕೈಗೊಳ್ಳಬೇಕೆಂದು ನನ್ನ ಸಹೋದ್ಯೋಗಿಗಳಾದ ಗೃಹಸಚಿವ ಬಸವರಾಜ ಬೊಮ್ಮಾಯಿ ಅವರಲ್ಲಿ ವಿನಂತಿಸಿದ್ದೇನೆ”. ಎಂದು ಬರೆದುಕೊಂಡಿದ್ದರು.

ಸಿ.ಟಿ ರವಿರವರು ಟ್ವೀಟ್‌ ಮಾಡಿದ ಕೆಲವೇ ಗಂಟೆಗಳಲ್ಲಿ ಹಾಸನದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಾದ ಆರ್‌ ಶ್ರೀನಿವಾಸಗೌಡರವರು ಆಕ್ಷೇಪಾರ್ಹ ಪೋಸ್ಟ್‌ ಹಾಕಿದ ಹಿಂದೂ ಕಾರ್ಯಕರ್ತರನ್ನು ಬಂಧಿಸಿದ ಬೇಲೂರು ಸಿಪಿಐ ಸಿದ್ಧರಾಮೇಶ್ವರ್, ಅರೇಹಳ್ಳಿ ಪಿಎಸ್ಐ ಬಾಲು ಎಂಬ ಇಬ್ಬರು ಪೊಲೀಸ್‌ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಅನ್ಯಧರ್ಮದ ವಿರುದ್ಧ ಪೋಸ್ಟ್‌ ಹಾಕಿದ್ದಕ್ಕೆ ಬಂಧಿಸಿರುವ ಪ್ರಕರಣದಲ್ಲಿ ಆರೋಪಿಯೊಂದಿಗಿನ ಫೋಟೊವನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಬೇಕಿರುವ ಅಗತ್ಯವಿರಲಿಲ್ಲ. ಈ ಕುರಿತು ಆ ಇಬ್ಬರು ಪೊಲೀಸ್‌ ಅಧಿಕಾರಿಗಳ ವಿರುದ್ಧ ತನಿಖೆ ನಡಸುತ್ತೇವೆ ಎಂದು ಶ್ರೀನಿವಾಸಗೌಡರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಈ ತನಿಖೆ ಮತ್ತು ಸಚಿವ ಸಿ.ಟಿ ರವಿಯವರ ನಡೆಯ ಕುರಿತು ಸಾಮಾಜಿಕ ಜಾಲಾತಾಣದಲ್ಲಿ ತೀವ್ರ ಟೀಕೆ ವ್ಯಕ್ತವಾಗಿದೆ. ಸಾಮಾಜಿಕ ಚಿಂತಕರಾದ ಶ್ರೀನಿವಾಸ ಕಾರ್ಕಳರವರು ” ಗೌರವಾನ್ವಿತ ಸಚಿವರಾದ ಸಿ ಟಿ ರವಿಯವರೇ, ನೀವು ಯಾವುದೋ ಒಂದು ರಾಜಕೀಯ ಪಕ್ಷಕ್ಕೆ ಮಂತ್ರಿಯಲ್ಲ. ಇಡೀ ರಾಜ್ಯಕ್ಕೆ ಮಂತ್ರಿ. ಮಂತ್ರಿಯಾಗಿ ಸಂವಿಧಾನಕ್ಕೆ ಬದ್ಧರಾಗಿರಬೇಕಾದುದು, ಕಾನೂನು ಆಧರಿಸಿದ ಆಡಳಿತವನ್ನು ಬೆಂಬಲಿಸಬೇಕಾದುದು ತಮ್ಮ ಆದ್ಯ ಕರ್ತವ್ಯ. ಜವಾಬ್ದಾರಿಯುತ ಸ್ಥಾನದಲ್ಲಿರುವ ತಾವು ಹೀಗೆ ಪೊಲೀಸರ ಕರ್ತವ್ಯದಲ್ಲಿ ಹಸ್ತಕ್ಷೇಪ ನಡೆಸುವುದು ತಪ್ಪಲ್ಲವೇ? ಇದು ತಪ್ಪು ಸಂದೇಶ ರವಾನಿಸುವುದಿಲ್ಲವೇ? ಇದು ಪೊಲೀಸರ ನೈತಿಕ ಬಲ ಕುಂದಿಸುವುದಿಲ್ಲವೇ? “ನಮ್ಮ ಕಾರ್ಯಕರ್ತರು” ಎಂಬ ನೆಲೆಯಲ್ಲಿ ನೀವು ಅಪರಾಧಿಗಳನ್ನು ರಕ್ಷಿಸಹೊರಟರೆ ಇನ್ನಷ್ಟು ಅಪರಾಧ ಎಸಗಲು ಅದು ನಿಮ್ಮ ಕಾರ್ಯಕರ್ತರಿಗೆ ಕುಮ್ಮಕ್ಕು ನೀಡುವುದಿಲ್ಲವೇ? ನಿಮ್ಮ ಕಾರ್ಯಕರ್ತರಿಗೂ ಇತರ ಕಾರ್ಯಕರ್ತರಿಗೂ ರಾಜ್ಯದಲ್ಲಿ ಬೇರೆ ಬೇರೆ ಕಾನೂನುಗಳಿವೆಯೇ? ಇಂತಹ ಕೆಲಸ ಮಾಡುವ ಮೊದಲು ರಾಜ್ಯದ ಒಟ್ಟು ಹಿತಾಸಕ್ತಿ ಮತ್ತು ದೂರಗಾಮಿ ಪರಿಣಾಮಗಳ ಹಿನ್ನೆಲೆಯಲ್ಲಿ ತಾವು ಎರಡೆರಡು ಬಾರಿ ಯೋಚಿಸಬೇಕಾಗಿ ವಿನಂತಿ” ಎಂದು ಫೇಸ್‌ಬುಕ್‌ನಲ್ಲಿ ಮನವಿ ಮಾಡಿದ್ದಾರೆ.

ಇಂತಹ ಕಷ್ಟಕಾಲದಲ್ಲಿ ವೈಯಕ್ತಿಕ ಸುರಕ್ಷತೆಗೆ ಸೂಕ್ತ ವ್ಯವಸ್ಥೆ ಇಲ್ಲದೆ ದುಡಿಯುತ್ತಿರುವವರು ಪೊಲೀಸರು. ಅವರ ಸ್ಥೈರ್ಯ ಕುಂದಿಸುವಂತಹ ಕೆಲಸವನ್ನು ಸರಕಾರದ ಮಂತ್ರಿಗಳೇ ಮಾಡುತ್ತಿದ್ದಾರೆ. ಈ ಟ್ವೀಟ್ ಮಾಡಿದ ಎರಡು ತಾಸಿನಲ್ಲೇ ಅಧಿಕಾರಿಗಳ ಮೇಲೆ ಕ್ರಮ ಆಗಿದೆ. ಒಂದು ಕೋಮಿನ ವಿರುದ್ಧ ಸುಳ್ಳು ಬರೆದು ಶಾಂತಿ ಕದಡುವವರಿಗೆ ಧೈರ್ಯ ತುಂಬುತ್ತಿದ್ದಾರೆ ಎಂದು ಪತ್ರಕರ್ತರಾದ ಜಿ.ಟಿ ಸತೀಶ್‌ರವರು ಆತಂಕ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘168 ಮಕ್ಕಳನ್ನು ಕೊಂದವರ ನೆನಪಿಡಿ’ : ಇರಾನ್‌ನಿಂದ ಅಮೆರಿಕ ಅಧಿಕಾರಿಗಳ ಫೋಟೋ ಬಿಡುಗಡೆ

ಬರೋಬ್ಬರಿ 168 ಕಂದಮ್ಮಗಳ ಸಾವಿಗೆ ಕಾರಣವಾದ, ಮಿನಾಬ್‌ನ ಶಾಲೆ ಮೇಲಿನ ಕ್ಷಿಪಣಿ ದಾಳಿಗೆ ಅಮೆರಿಕದ ನೌಕಾಪಡೆಯ ಅಧಿಕಾರಿಗಳಾದ ಕಮಾಂಡರ್ ಲೀ ಆರ್. ಟೇಟ್ ಮತ್ತು ಯುಎಸ್ಎಸ್ ಸ್ಪ್ರೂಯನ್ಸ್‌ನ ಎಕ್ಸಿಕ್ಯೂಟಿವ್ ಆಫೀಸರ್ ಜೆಫ್ರಿ ಇ....

ಕೇರಳ ವಿಧಾನಸಭಾ ಚುನಾವಣೆ 2026 | ‘ಎಲ್‌ಡಿಎಫ್, ಯುಡಿಎಫ್ ದಶಕಗಳಿಂದ ರಾಜ್ಯವನ್ನು ಲೂಟಿ ಮಾಡಿವೆ’: ಪ್ರಧಾನಿ ಮೋದಿ

ಕೇರಳ ವಿಧಾನಸಭಾ ಚುನಾವಣೆ 2026 ರ ಹಿನ್ನೆಲೆಯಲ್ಲಿ ಪಾಲಕ್ಕಾಡ್‌ನಲ್ಲಿ ಭಾನುವಾರ ಬೃಹತ್ ಚುನಾವಣಾ ರ್ಯಾಲಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಯುಡಿಎಫ್ ಮತ್ತು ಎಲ್‌ಡಿಎಫ್ ಎರಡರ ಮೇಲೂ ತೀವ್ರ ದಾಳಿ ನಡೆಸಿದ್ದಾರೆ. ಈ...

ದಕ್ಷಿಣ ಲೆಬನಾನ್‌ನಲ್ಲಿ ಇಸ್ರೇಲ್ ವೈಮಾನಿಕ ದಾಳಿ : ಮೂವರು ಪತ್ರಕರ್ತರು, 9 ಪ್ಯಾರಾಮೆಡಿಕಲ್ ಸಿಬ್ಬಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿ ಶನಿವಾರ (ಮಾ.28) ಇಸ್ರೇಲ್ ನಡೆಸಿದ ವೈಮಾನಿಕ ದಾಳಿಗಳಲ್ಲಿ ಮೂವರು ಪತ್ರಕರ್ತರು ಮತ್ತು ಒಂಬತ್ತು ಅರೆವೈದ್ಯಕೀಯ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ. ಜೆಝೈನ್ ರಸ್ತೆಯಲ್ಲಿ ಪತ್ರಕರ್ತರ...

ಉತ್ತರ ಪ್ರದೇಶ: 25 ವರ್ಷದ ಐಸ್ ಕ್ರೀಮ್ ಮಾರಾಟಗಾರನ ತಲೆ ಕತ್ತರಿಸಿ, ಮನೆಗೆ ತೆಗೆದುಕೊಂಡು ಹೋಗಿದ್ದ ವ್ಯಕ್ತಿ ಬಂಧನ 

ಬಾರಾಬಂಕಿ: ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಶನಿವಾರ 25 ವರ್ಷದ ಐಸ್ ಕ್ರೀಮ್ ಮಾರಾಟಗಾರನ ಶಿರಚ್ಛೇದ ಮಾಡಲಾಗಿತ್ತು. 50 ವರ್ಷದ ಕೊಲೆಗಾರ, ಆ ವ್ಯಕ್ತಿಯ ಗಂಟಲು ಕತ್ತರಿಸಿ, ತಲೆ ಕತ್ತರಿಸಿ, ನಂತರ ಅದನ್ನು ತನ್ನ...

ಗ್ಯಾಸ್‌ ಸಿಲಿಂಡರ್‌ಗಾಗಿ ಸುಡು ಬಿಸಿಲಿನಲ್ಲಿ 4 ಗಂಟೆ ಕಾದ ವ್ಯಕ್ತಿ : ಕುಸಿದು ಬಿದ್ದು ಸ್ಥಳದಲ್ಲೇ ಸಾವು!

ಎಲ್‌ಪಿಜಿ ಸಿಲಿಂಡರ್ ಪಡೆಯಲು 41.2 ಡಿಗ್ರಿ ಸೆಲ್ಸಿಯಸ್ ಸುಡು ಬಿಸಿಲಿನಲ್ಲಿ 4 ಗಂಟೆ ಕಾದ 55 ವರ್ಷದ ವ್ಯಕ್ತಿ, ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ ಅಕೋಲಾ ಬಳಿ ನಡೆದಿದೆ. ಅಕೋಲಾದಿಂದ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ: ಆರ್‌ಎಸ್‌ಎಸ್ ನಾಯಕ ಸೇರಿ 30 ಮಂದಿ ಬಂಧನ, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದ ಪೊಲೀಸರು

ಶುಕ್ರವಾರ ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ಹಿಂದೂತ್ವ ಗುಂಪುಗಳು ನಡೆಸಿದ ರಾಮನವಮಿ ಮೆರವಣಿಗೆಯಲ್ಲಿ ಮುಸ್ಲಿಂ ಅಂಗಡಿಗಳು ಮತ್ತು ಆಸ್ತಿಗಳನ್ನು ಗುರಿಯಾಗಿಸಿಕೊಂಡು ನಡೆದ ದಾಳಿಯಲ್ಲಿ ಸುಮಾರು 30 ಜನರು ಗಾಯಗೊಂಡು, ಆ ಪ್ರದೇಶದಲ್ಲಿ...

ಅತ್ಯಾಚಾರ ಪ್ರಕರಣ: ಸ್ವಘೋಷಿತ ‘ದೇವಮಾನವ’ ಅಶೋಕ್ ಖರತ್ ಪೊಲೀಸ್ ಕಸ್ಟಡಿಯನ್ನು ಏಪ್ರಿಲ್ 1 ರವರೆಗೆ ವಿಸ್ತರಿಸಿದ ನಾಸಿಕ್ ಕೋರ್ಟ್

ನಾಸಿಕ್: ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾಗಿರುವ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಪೊಲೀಸ್ ಕಸ್ಟಡಿಯನ್ನು ನಾಸಿಕ್ ನ್ಯಾಯಾಲಯವು ಭಾನುವಾರ ಏಪ್ರಿಲ್ 1 ರವರೆಗೆ ವಿಸ್ತರಿಸಿ ಆದೇಶ ನೀಡಿದೆ. ನಾಶಿಕ್ ಜಿಲ್ಲೆಯ ಮಿರ್ಗಾಂವ್‌ನಲ್ಲಿರುವ ದೇವಾಲಯ...

ಚೊಚ್ಚಲ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಟಿವಿಕೆ : ಎರಡು ಕ್ಷೇತ್ರಗಳಿಂದ ನಟ ವಿಜಯ್ ಸ್ಪರ್ಧೆ

ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡಲಿದ್ದಾರೆ. ಚೆನ್ನೈ ಜಿಲ್ಲೆಯ ಪೆರಂಬೂರು ಮತ್ತು ತಿರುಚಿರಾಪಳ್ಳಿ...

ಲೈಂಗಿಕ ಪ್ರಕರಣದ ಆರೋಪಿ ಅಶೋಕ್ ಖರತ್ ಅವರನ್ನು ರಕ್ಷಣೆಯಲ್ಲಿ ಇಡಬೇಕು; ಕಸ್ಟಡಿಯಲ್ಲಿ ಕೊಲೆಯಾಗುವ ಸಾಧ್ಯತೆ ಹೆಚ್ಚಿದೆ: ಪ್ರಕಾಶ್ ಅಂಬೇಡ್ಕರ್

ಮುಂಬೈ: ಕಾಂಗ್ರೆಸ್ ನಂತರ, ವಂಚಿತ್ ಬಹುಜನ ಅಘಾಡಿ ಸ್ಥಾಪಕ-ಅಧ್ಯಕ್ಷ ಪ್ರಕಾಶ್ ಅಂಬೇಡ್ಕರ್ ಅವರು, ಲೈಂಗಿಕ ದೌರ್ಜನ್ಯ ಪ್ರಕರಣಗಳ ಸರಣಿಯಲ್ಲಿ ಬಂಧಿಸಲ್ಪಟ್ಟಿರುವ ಸ್ವಯಂ ಘೋಷಿತ ದೇವಮಾನವ 'ಕ್ಯಾಪ್ಟನ್' ಅಶೋಕ್ ಖರತ್ ಅವರನ್ನು ಪೊಲೀಸ್ ಮತ್ತು...

ಇಸ್ರೇಲ್‌ನ ಹಲವೆಡೆ ಯುದ್ಧ ವಿರೋಧಿ ಪ್ರತಿಭಟನೆ : ನೆತನ್ಯಾಹು ಆಡಳಿತದ ವಿರುದ್ಧ ಭುಗಿಲೆದ್ದ ಜನಾಕ್ರೋಶ

ಪಶ್ಚಿಮ ಏಷ್ಯಾ ಸಂಘರ್ಷವು ಎರಡನೇ ತಿಂಗಳಿಗೆ ಕಾಲಿಡುತ್ತಿದ್ದಂತೆ, ಇಸ್ರೇಲ್‌ನಲ್ಲಿ ನೆತನ್ಯಾಹು ಆಡಳಿತದ ವಿರುದ್ದ ಜನಾಕ್ರೋಶ ಭುಗಿಲೆದ್ದಿದೆ. ಪ್ರಮುಖ ನಗರಗಳಾದ ಟೆಲ್ ಅವಿವ್, ಜೆರುಸಲೇಂ ಮತ್ತು ಹೈಫಾದಲ್ಲಿ ಸಾವಿರಾರು ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ....