Homeಮುಖಪುಟಆಪರೇಷನ್ ಕಮಲದ ಬಗ್ಗೆ ಹೈಕೋರ್ಟ್ ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಸಿ: ಸಿದ್ದರಾಮಯ್ಯ

ಆಪರೇಷನ್ ಕಮಲದ ಬಗ್ಗೆ ಹೈಕೋರ್ಟ್ ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಸಿ: ಸಿದ್ದರಾಮಯ್ಯ

ಯೋಗೀಶ್ವರ್ ಕೋಟ್ಯಂತರ ರೂಪಾಯಿ ಸಾಲ ಮಾಡಿದ್ದಾರೆ ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳುವ ಮೂಲಕ ಈವರೆಗಿನ ನಮ್ಮ ಆರೋಪಕ್ಕೆ ಪುರಾವೆ ಒದಗಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

- Advertisement -
- Advertisement -

ಆಪರೇಷನ್ ಕಮಲಕ್ಕೆ ಯೋಗೀಶ್ವರ್ ಕೋಟ್ಯಂತರ ರೂಪಾಯಿ ಸಾಲ ಮಾಡಿದ್ದಾರೆ ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳುವ ಮೂಲಕ ಈವರೆಗಿನ ನಮ್ಮ ಆರೋಪಕ್ಕೆ ಪುರಾವೆ ಒದಗಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆಪರೇಷನ್ ಕಮಲದ ಬಗ್ಗೆ ಹೈಕೋರ್ಟ್ ನ ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಸಿ ಸತ್ಯ ಸಂಗತಿಯನ್ನು ಬಹಿರಂಗಪಡಿಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, “ಪ್ರತಿಫಲಾಪೇಕ್ಷೆ ಇಲ್ಲದೆ ನಮ್ಮ ಶಾಸಕರು ಬಿಜೆಪಿ ಸೇರಿದ್ದರೆ ಯೋಗೀಶ್ವರ್ 9 ಕೋಟಿ ರೂಪಾಯಿ ಸಾಲ ಮಾಡುವ ಅಗತ್ಯವೇನಿತ್ತು? ಈ ಆರೋಪವನ್ನು ನಾವು ಮಾಡಿದ್ದರೆ ವಿರೋಧ ಪಕ್ಷಗಳು ಸುಳ್ಳು ಹೇಳುತ್ತಿವೆ ಎಂದು ನಿರಾಕರಿಸಬಹುದಿತ್ತು. ಅವರದ್ದೇ ಪಕ್ಷದ ಸಚಿವರು ಹೇಳಿದ್ದಾರಲ್ಲಾ, ಇದಕ್ಕೆ ಏನನ್ನುತ್ತಾರೆ?” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿಗೆ ಸೇರಿದ ಕೆಲವರು ಬಾಯಿ ಬಡ್ಕೊತಿದ್ದಾರೆ: ವಿಪಕ್ಷ ನಾಯಕ ಸಿದ್ದರಾಮಯ್ಯ

“ರಾಜ್ಯದಲ್ಲಿ ಸರ್ಕಾರವೇ ಜೀವಂತವಾಗಿಲ್ಲ, ಇನ್ನು ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ಮಾಡುವುದರಿಂದ ಜನರ ಮೇಲೆ ಯಾವ ಪರಿಣಾಮ ಬೀರಲು ಸಾಧ್ಯ? ಬಿಜೆಪಿಯಲ್ಲಿ ಒಳಜಗಳ, ಭ್ರಷ್ಟಾಚಾರ, ಅತೃಪ್ತಿ ತಾಂಡವವಾಡುತ್ತಿದೆ, ಹೀಗಿರುವಾಗ ಅಭಿವೃದ್ಧಿ ಕೆಲಸಗಳು ದೂರದ ಮಾತು” ಎಂದು ಹೇಳಿದ್ದಾರೆ.

“ಸರ್ಕಾರದಿಂದ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಪಡೆಯುವುದು ಪ್ರತಿಯೊಬ್ಬ ಶಾಸಕನ ಹಕ್ಕಾಗಿರುವಾಗ ಬ್ಲಾಕ್‌ಮೇಲ್ ಮಾಡುವ ಅಗತ್ಯವೇನಿದೆ? ಜಮೀರ್ ಅಹ್ಮದ್ ಅವರು ಅನುದಾನ ನೀಡಿ ಮಾಡಿ ಅಂತ ಮನವಿ ಮಾಡಿದ್ದಾರೆ, ಅದಕ್ಕೆ ಮುಖ್ಯಮಂತ್ರಿಗಳು ಆರ್ಥಿಕ ಇಲಾಖೆಗೆ ಶಿಫಾರಸು ಮಾಡಿದ್ದಾರೆ. ಆದೇಶಕ್ಕೂ, ಶಿಫಾರಸಿಗೂ ವ್ಯತ್ಯಾಸವಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೃತಜ್ಞತೆಯಿಲ್ಲದ ಕಾರಣಕ್ಕೆ ಯಡಿಯೂರಪ್ಪ ಹೆಚ್‌‌.ವಿಶ್ವನಾಥ್‌‌ರನ್ನು ಮಂತ್ರಿ ಮಾಡಿಲ್ಲ: ಸಿದ್ದರಾಮಯ್ಯ

“ಚಾಮರಾಜಪೇಟೆ ಕ್ಷೇತ್ರಕ್ಕೆ ನಮ್ಮ ಪಕ್ಷದ ಶಾಸಕ ಜಮೀರ್ ಅಹ್ಮದ್ ಅವರು ಕೇಳಿದಷ್ಟು ಮುಖ್ಯಮಂತ್ರಿಗಳು ಅನುದಾನ ನೀಡಿದ್ದರೆ ಬಸನಗೌಡ ಪಾಟೀಲ್ ಯತ್ನಾಳ್ ಮಾತಿಗೆ ಅರ್ಥವಿರುತ್ತಿತ್ತು. ಮಂತ್ರಿಗಿರಿ ಕೈತಪ್ಪಿದ್ದರಿಂದ ಹತಾಶರಾಗಿ ಆಡಿರುವ ಮಾತುಗಳಿಗೆ ಹೆಚ್ಚು ಮಹತ್ವ ನೀಡುವ ಅಗತ್ಯವಿಲ್ಲ” ಎಂದಿದ್ದಾರೆ.

“ಕೃಷಿಗೆ ಮಾರಕವಾದ ಕಾಯ್ದೆಗಳ ವಿರುದ್ಧ ರೈತರು ನಡೆಸುತ್ತಿರುವ ಹೋರಾಟ ಬೆಂಬಲಿಸಿ ಕಾಂಗ್ರೆಸ್ ಪಕ್ಷ ನಿನ್ನೆ ದೇಶಾದ್ಯಂತ ಪ್ರತಿಭಟನೆ ನಡೆಸಿತ್ತು. ಸಂಕ್ರಾಂತಿ ಹಬ್ಬದ ಕಾರಣಕ್ಕೆ ನಾವು ನಿನ್ನೆ ಪ್ರತಿಭಟನೆ ಮಾಡಿಲ್ಲ, ಈ ತಿಂಗಳ 20 ನೇ ತಾರೀಖಿನಂದು ಪಕ್ಷದ ವತಿಯಿಂದ ’ರಾಜಭವನ ಚಲೋ’ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ” ಎಂದು ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ರಾಜ್ಯದ ಬಫೂನ್‌ಗಳು: ಹೆಚ್‌. ವಿಶ್ವನಾಥ್‌‌ ವ್ಯಂಗ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...