Homeಮುಖಪುಟವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣದ ತನಿಖೆ ಅತ್ಯಂತ ಗಂಭೀರವಾಗಿ ನಡೆಯುತ್ತಿದೆ: ಸಿಬಿಐ

ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣದ ತನಿಖೆ ಅತ್ಯಂತ ಗಂಭೀರವಾಗಿ ನಡೆಯುತ್ತಿದೆ: ಸಿಬಿಐ

- Advertisement -
- Advertisement -

ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಟ್ರೈನಿ ವೈದ್ಯೆಯೊಬ್ಬರ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆ ಅತ್ಯಂತ ಗಂಭೀರವಾಗಿ ನಡೆಯುತ್ತಿದೆ ಎಂದು ಕೇಂದ್ರೀಯ ತನಿಖಾ ದಳ (ಸಿಬಿಐ) ಮಂಗಳವಾರ ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದೆ.

ಸಿಬಿಐ ಅನ್ನು ಪ್ರತಿನಿಧಿಸುವ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆ ಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರ ಪೀಠದ ಮುಂದೆ ಏಜೆನ್ಸಿಯ ಐದನೇ ತನಿಖಾ ಸ್ಥಿತಿ ವರದಿಯನ್ನು ಸಲ್ಲಿಸಿದರು.

“ಈ ವಿಷಯದಲ್ಲಿ ಅತ್ಯಂತ ಗಂಭೀರವಾಗಿ ತನಿಖೆ ನಡೆಯುತ್ತಿದೆ. ಈ ಪ್ರಕರಣದ ಆರೋಪಪಟ್ಟಿಯನ್ನು ಅಕ್ಟೋಬರ್ 7 ರಂದು ಆರೋಪಿ ಸಂಜಯ್ ರಾಯ್ ವಿರುದ್ಧ ಸಲ್ಲಿಸಲಾಗಿದೆ. ಸೀಲ್ದಾ ನ್ಯಾಯಾಲಯವು ವಿಚಾರಣೆಗೆ ತೆಗೆದುಕೊಂಡಿದೆ” ಎಂದು ಅವರು ಪೀಠಕ್ಕೆ ತಿಳಿಸಿದರು.

ನಡೆಯುತ್ತಿರುವ ತನಿಖೆಯ ಭಾಗವಾಗಿ ಇತರ ವ್ಯಕ್ತಿಗಳ ಪಾತ್ರವನ್ನು ಸಿಬಿಐ ತನಿಖೆ ನಡೆಸುತ್ತಿದೆ ಎಂದು ಹೇಳಿದೆ. ಮೂರು ವಾರಗಳಲ್ಲಿ ಹೆಚ್ಚಿನ ತನಿಖಾ ಸ್ಥಿತಿ ವರದಿ ಕೇಳಿದೆ ಎಂದು ಸುಪ್ರೀಂ ಕೋರ್ಟ್ ಗಮನಿಸಿದೆ.

ವೈದ್ಯಕೀಯ ವೃತ್ತಿಪರರ ಸುರಕ್ಷತೆ ಮತ್ತು ಭದ್ರತೆಯ ಕುರಿತು ಶಿಫಾರಸುಗಳನ್ನು ಮಾಡಲು ರಚಿಸಲಾದ ರಾಷ್ಟ್ರೀಯ ಕಾರ್ಯಪಡೆ (ಎನ್‌ಟಿಎಫ್) ವಿಷಯದ ಕುರಿತು, ಸೆಪ್ಟೆಂಬರ್ ಮೊದಲ ವಾರದಿಂದ ಯಾವುದೇ ಸಭೆ ನಡೆಸಿಲ್ಲ ಎಂಬುದನ್ನು ಸುಪ್ರೀಂ ಕೋರ್ಟ್ ಇದೇ ಸಂದರ್ಭದಲ್ಲಿ ಗಮನಿಸಿದೆ.

ಹಾಗಾಗಿ, ತನಿಖೆಯನ್ನು ಸೂಕ್ತ ಅವಧಿಯಲ್ಲಿ ಪೂರ್ಣಗೊಳಿಸಲು ಪೂರ್ವಭಾವಿ ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿದೆ.

“ಎನ್‌ಟಿಎಫ್‌ನ ಸಭೆಗಳು ನಡೆಯಬೇಕು ಮತ್ತು ಎಲ್ಲ ಉಪ ಗುಂಪುಗಳು ನಿಯಮಿತ ಸಭೆಗಳನ್ನು ನಡೆಸಬೇಕು” ಎಂದು ಮೂರು ವಾರಗಳಲ್ಲಿ ಕೋಲ್ಕತ್ತಾ ವೈದ್ಯರ ಸುರಕ್ಷತೆಯ ಕುರಿತು ಶಿಫಾರಸುಗಳನ್ನು ರೂಪಿಸಲು ನಿರ್ದೇಶಿಸಿದಾಗ ಪೀಠವು ಹೇಳಿದೆ.

ಸೆಪ್ಟೆಂಬರ್ 30 ರಂದು, ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಸಿಸಿಟಿವಿಗಳ ಅಳವಡಿಕೆ ಮತ್ತು ಶೌಚಾಲಯಗಳು, ಪ್ರತ್ಯೇಕ ವಿಶ್ರಾಂತಿ ಕೊಠಡಿಗಳ ನಿರ್ಮಾಣದಲ್ಲಿ ಪಶ್ಚಿಮ ಬಂಗಾಳ ಸರ್ಕಾರದ ವಿಳಂಭದ ಬಗ್ಗೆ ಸುಪ್ರೀಂ ಕೋರ್ಟ್ ಅತೃಪ್ತಿ ವ್ಯಕ್ತಪಡಿಸಿತು. ಅಕ್ಟೋಬರ್ 15ರ ಒಳಗೆ ನಡೆಯುತ್ತಿರುವ ಕೆಲಸವನ್ನು ಪೂರ್ಣಗೊಳಿಸಲು ರಾಜ್ಯಕ್ಕೆ ನಿರ್ದೇಶನ ನೀಡಿತು.

ಆಗಸ್ಟ್ 22 ರಂದು, ಮಹಿಳಾ ವೈದ್ಯರ ಅಸಹಜ ಸಾವಿನ ಪ್ರಕರಣವನ್ನು ದಾಖಲಿಸುವಲ್ಲಿ ವಿಳಂಬವಾದ ಬಗ್ಗೆ ಸುಪ್ರೀಂ ಕೋರ್ಟ್ ಕೋಲ್ಕತ್ತಾ ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿತು. ಇದನ್ನು “ಅತ್ಯಂತ ಗೊಂದಲ” ಎಂದು ಕರೆದಿತ್ತು.

ವೈದ್ಯರು ಮತ್ತು ಇತರ ಆರೋಗ್ಯ ವೃತ್ತಿಪರರ ಸುರಕ್ಷತೆ, ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಪ್ರೋಟೋಕಾಲ್ ಅನ್ನು ರೂಪಿಸಲು ಉನ್ನತ ನ್ಯಾಯಾಲಯವು 10 ಸದಸ್ಯರ ರಾಷ್ಟ್ರೀಯ ಕಾರ್ಯಪಡೆಯನ್ನು ರಚಿಸಿದೆ.

ಘಟನೆಯನ್ನು “ಭಯಾನಕ” ಎಂದು ಬಣ್ಣಿಸಿದ ಸುಪ್ರೀಂ ಕೋರ್ಟ್, ಎಫ್‌ಐಆರ್ ದಾಖಲಿಸುವಲ್ಲಿ ವಿಳಂಬ ಮತ್ತು ಸರ್ಕಾರಿ ಸೌಲಭ್ಯವನ್ನು ಧ್ವಂಸಗೊಳಿಸಲು ಸಾವಿರಾರು ಜನರಿಗೆ ಅವಕಾಶ ನೀಡಿದ ಆರೋಪದ ಮೇಲೆ ರಾಜ್ಯ ಸರ್ಕಾರವನ್ನು ಖಂಡಿಸಿದೆ.

ಗಾಯದ ಗುರುತುಗಳೊಂದಿಗೆ ವೈದ್ಯೆಯನ್ನು ಕೊಂದ ಘಟನೆ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕಾರಣವಾಗಿತ್ತು. ಅಪರಾಧದ ಮರುದಿನ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗರಿಕ ಸ್ವಯಂಸೇವಕನನ್ನು ಕೋಲ್ಕತ್ತಾ ಪೊಲೀಸರು ಬಂಧಿಸಿದರು. ಆಗಸ್ಟ್ 13 ರಂದು ಕಲ್ಕತ್ತಾ ಹೈಕೋರ್ಟ್ ತನಿಖೆಯನ್ನು ಕೋಲ್ಕತ್ತಾ ಪೊಲೀಸರಿಂದ ಸಿಬಿಐಗೆ ವರ್ಗಾಯಿಸಲು ಆದೇಶಿಸಿತು, ಅದು ಆಗಸ್ಟ್ 14 ರಂದು ತನಿಖೆಯನ್ನು ಪ್ರಾರಂಭಿಸಿತು.

ಇದನ್ನೂ ಓದಿ; ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭೆಗೆ ಚುನಾವಣಾ ದಿನಾಂಕ ಘೋಷಣೆ; ನವೆಂಬರ್ 23ರಂದು ಎರಡೂ ರಾಜ್ಯಗಳ ಫಲಿತಾಂಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...