Homeಮುಖಪುಟ'ಬಿಜೆಪಿ ಕಚೇರಿಯಿಂದಲೇ ತನಿಖೆ ನಡೆಸಲಾಗುತ್ತಿದೆ..'; ಇಡಿ ಅಧಿಕಾರಿಗಳ ವಿರುದ್ಧ ಎಎಪಿ ಕಿಡಿ

‘ಬಿಜೆಪಿ ಕಚೇರಿಯಿಂದಲೇ ತನಿಖೆ ನಡೆಸಲಾಗುತ್ತಿದೆ..’; ಇಡಿ ಅಧಿಕಾರಿಗಳ ವಿರುದ್ಧ ಎಎಪಿ ಕಿಡಿ

- Advertisement -
- Advertisement -

‘ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಅಬಕಾರಿ ಹಗರಣದ ದಾಖಲೆಗಳನ್ನು ಹೊಂದಿರುವ ಹಳೆಯ ಫೋನ್ ಅನ್ನು ತೊಡೆದುಹಾಕಿದ್ದಾರೆ’ ಎಂಬ ಜಾರಿ ನಿರ್ದೇಶನಾಲಯದ ತನಿಖಾಧಿಕಾರಿಗಳ ಹೇಳಿಕೆಯನ್ನು ಎಎಪಿ ತೀವ್ರವಾಗಿ ವಿರೋಧಿಸಿದೆ.

‘ಈ ಹಿಂದೆ ಪ್ರಕರಣದ ಸಾಕ್ಷ್ಯಾಧಾರಗಳನ್ನು ಹೊರಹಾಕಲು ಸಾಕ್ಷಿಗಳಿಂದ 170 ಫೋನ್‌ಗಳನ್ನು ವಿಲೇವಾರಿ ಮಾಡಲಾಗಿದೆ’ ಎಂದು ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ ಆರೋಪಿಸಿದೆ.

ಇಡಿ ಹೇಳಿಕೆಗಳನ್ನು ತಿರಸ್ಕರಿಸಿರುವ ಎಎಪಿ, “ಬಿಜೆಪಿ ಕಚೇರಿಯಿಂದಲೇ ತನಿಖೆ ನಡೆಸಲಾಗುತ್ತಿದೆ” ಎಂದು ಹೇಳಿದ್ದು, ಜಾರಿ ನಿರ್ದೇಶನಾಲಯ ಬಿಜೆಪಿಯ ರಾಜಕೀಯ ಪಾಲುದಾರ ಎಂದು ಆರೋಪಿಸಿದ್ದಾರೆ.

ಇಂದು ಬೆಳಗ್ಗೆ ಮಾತನಾಡಿದ ದೆಹಲಿ ಸಚಿವ ಅತಿಶಿ, ‘ಜಾರಿ ನಿರ್ದೇಶನಾಲಯವು ಸ್ವತಂತ್ರ ತನಿಖಾ ಸಂಸ್ಥೆಯಾಗಿದೆ, ಇಡಿ ಏನಾದರೂ ಹೇಳಬೇಕಾದರೆ, ಮೊದಲು ಅವರು ಆರೋಪಪಟ್ಟಿ ಸಲ್ಲಿಸಬೇಕು; ನ್ಯಾಯಾಧೀಶರ ಮುಂದೆ ಹೇಳಬೇಕು’ ಎಂದು ಅವರು ಹೇಳಿದರು.

“ದೇಶದ ಸಂವಿಧಾನ ಮತ್ತು ಕಾನೂನು ನಿಮಗೆ ಸ್ವಲ್ಪ ಅಧಿಕಾರವನ್ನು ನೀಡಿದೆ ಎಂದು ನಾನು ಎಲ್ಲ ಇಡಿ ಅಧಿಕಾರಿಗಳಿಗೆ ಹೇಳಲು ಬಯಸುತ್ತೇನೆ. ನೀವು ಸಂವಿಧಾನವನ್ನು ಉಲ್ಲಂಘಿಸಬೇಡಿ; ಸಂವಿಧಾನವನ್ನು ಕೊಲ್ಲಬೇಡಿ. ನೀವು ಭಾರತೀಯ ಜನತಾ ಪಕ್ಷದ ಅಂಗಸಂಸ್ಥೆಯಲ್ಲ. ನೀವು ಈ ದೇಶದ ಕಾನೂನುಗಳ ಅಡಿಯಲ್ಲಿ ರಚಿಸಲಾದ ಸ್ವತಂತ್ರ ತನಿಖಾ ಸಂಸ್ಥೆ” ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

ಎರಡು ವರ್ಷಗಳ ಹಿಂದೆ ಕೇಜ್ರಿವಾಲ್ ಅವರು ಅಬಕಾರಿ ಹಗರಣ ನಡೆದಾಗ ಬಳಸಿದ್ದ ಫೋನ್ ಕಾಣೆಯಾಗಿದೆ ಎಂದು ಏಜೆನ್ಸಿಯ ಮೂಲಗಳು ನಿನ್ನೆ ತಿಳಿಸಿವೆ. ಈ ಬಗ್ಗೆ ಕೇಳಿದಾಗ, ಅದು ಎಲ್ಲಿದೆ ಎಂದು ನನಗೆ ಗೊತ್ತಿಲ್ಲ ಎಂದು ಮುಖ್ಯಮಂತ್ರಿ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕೇಜ್ರಿವಾಲ್ ಅವರನ್ನು ಗುರುವಾರ ಸಂಜೆ ತಡರಾತ್ರಿ ಬಂಧಿಸಲಾಗಿದ್ದು, ಇಡಿ ಅವರನ್ನು ವಿಚಾರಣೆ ನಡೆಸುತ್ತಿದೆ. ಮಾರ್ಚ್ 28ರವರೆಗೆ ಅವರು ತನಿಖಾ ಸಂಸ್ಥೆಯ ವಶದಲ್ಲಿರುತ್ತಾರೆ.

ಇದನ್ನೂ ಓದಿ; ‘ಅರವಿಂದ್ ಕೇಜ್ರಿವಾಲ್ ಈಗ ಹೆಚ್ಚು ಅಪಾಯಕಾರಿ; ಪಿಎಂ ಮೋದಿ ದೆಹಲಿ ಸಿಎಂಗೆ ಹೆದರುತ್ತಿದ್ದಾರೆ’

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಧ್ಯಪ್ರದೇಶ: ಆಸ್ಪತ್ರೆಗೆ ದಾಖಲಿಸಿಕೊಳ್ಳಲು ನಿರಾಕರಿಸಿದ ವೈದ್ಯರು; ಆಟೋ ರಿಕ್ಷಾದಲ್ಲೆ ಹೆರಿಗೆ

0
ಮಧ್ಯಪ್ರದೇಶದ ನೀಮುಚ್ ಜಿಲ್ಲಾ ಆಸ್ಪತ್ರೆಯಲ್ಲಿ ಅರಿವಳಿಕೆ ವೈದ್ಯರ ಕೊರತೆಯಿಂದಾಗಿ ಆಸ್ಪತ್ರೆಗೆ ದಾಖಲಿಸಿಕೊಳ್ಳಲು ವೈದ್ಯರು ನಿರಾಕರಿಸಿದ್ದು, 30 ವರ್ಷದ ಮಹಿಳೆಯೊಬ್ಬರು ಆಟೋ ರಿಕ್ಷಾದಲ್ಲಿ ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಮತ್ತು ಮಗುವನ್ನು ತರುವಾಯ ಆಸ್ಪತ್ರೆಗೆ...