Homeರಂಜನೆಕ್ರೀಡೆಕೊರೊನ ವೈರಸ್ ಭೀತಿ : ಏಪ್ರಿಲ್ 15ಕ್ಕೆ ಐಪಿಎಲ್ ಮುಂದೂಡಿಕೆ

ಕೊರೊನ ವೈರಸ್ ಭೀತಿ : ಏಪ್ರಿಲ್ 15ಕ್ಕೆ ಐಪಿಎಲ್ ಮುಂದೂಡಿಕೆ

- Advertisement -
- Advertisement -

ಹೆಚ್ಚುತ್ತಿರುವ ಕೊರೊನ ವೈರಸ್ ಭೀತಿಯಿಂದ ಇಂಡಿಯನ್ ಪ್ರೀಮಿಯರ್ ಲೀಗ್ 2020 ರ ಪ್ರಾರಂಭವನ್ನು ಏಪ್ರಿಲ್ 15 ಕ್ಕೆ ಮುಂದೂಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಪಂದ್ಯಾವಳಿಯನ್ನು ‘ನಿಷೇಧಿಸಲು’ ದೆಹಲಿ ಸರ್ಕಾರ ನಿರ್ಧರಿಸಿದ ನಂತರ ಈ ನಿರ್ಧಾರವನ್ನು ಬಿಸಿಸಿಐ ಪ್ರಕಟಿಸಿದೆ.

ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು ಕಳೆದ ವರ್ಷದ ರನ್ನರ್ಸ್ ಅಪ್ ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಮುಖಾಮುಖಿಯೊಂದಿಗೆ ಮಾರ್ಚ್ 29 ರಂದು ಪಂದ್ಯಾವಳಿ ಪ್ರಾರಂಭಿಸುವುದಾಗಿ ನಿರ್ಧರಿಸಲಾಗಿತ್ತು. ಆದರೆ ಈಗ ಅನಿವಾರ್ಯವಾಗಿ ಮುಂದೂಡಬೇಕಾಗಿದೆ.

ಈ ಹಿಂದೆ ಮಹಾರಾಷ್ಟ್ರ ಸರ್ಕಾರ ಪ್ರೇಕ್ಷಕರಿಲ್ಲದೆ ಕೇವಲ ಆಟಗಾರರಿಗಷ್ಟೇ ಪಂದ್ಯಗಳಿಗೆ ಅವಕಾಶ ನೀಡುವುದಾಗಿ ತಿಳಿಸಿತ್ತು. ಆದರೆ ಏಪ್ರಿಲ್ 15 ರವರೆಗೆ ಐಪಿಎಲ್ 2020 ರದ್ದಾಗಿದೆ ಎಂದು ಬಿಸಿಸಿಐ ಇಂದು ಪ್ರಕಟಿಸಿದೆ.

“ಬಿಸಿಸಿಐ ತನ್ನ ಎಲ್ಲ ಪಾಲುದಾರರ ಬಗ್ಗೆ ಮತ್ತು ಸಾರ್ವಜನಿಕ ಆರೋಗ್ಯದ ಬಗ್ಗೆ ಕಾಳಜಿಯನ್ನು ಹೊಂದಿದೆ. ಅಭಿಮಾನಿಗಳು ಸೇರಿದಂತೆ ಐಪಿಎಲ್‌ಗೆ ಸಂಬಂಧಿಸಿದ ಎಲ್ಲ ಜನರಿಗೆ ಸುರಕ್ಷಿತ ಕ್ರಿಕೆಟಿಂಗ್ ಅನುಭವ ಖಚಿತಪಡಿಸಿಕೊಳ್ಳಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಬಿಸಿಸಿಐ ಭಾರತ ಸರ್ಕಾರದ ಯುವ ಹಾಗೂ ಕ್ರೀಡಾ ಸಚಿವಾಲಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮತ್ತು ಇತರ ಎಲ್ಲ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಇಲಾಖೆಗಳೊಂದಿಗೆ ನಿಕಟವಾಗಿ ಕೆಲಸ ಮಾಡುತ್ತದೆ”ಎಂದು ಮಂಡಳಿಯು ಅಧಿಕೃತ ಮೇಲ್ ಮೂಲಕ ಮಾಹಿತಿ ನೀಡಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

2023ರಲ್ಲಿ ತೀವ್ರ ಹಸಿವಿನಿಂದ ತತ್ತರಿಸಿದ 282 ಮಿಲಿಯನ್ ಜನರು: ಆಹಾರದ ಅಭಾವಕ್ಕೆ ವಿಶ್ವಸಂಸ್ಥೆ ಉಲ್ಲೇಖಿಸಿದ...

0
ಕಳೆದ ವರ್ಷ ಪ್ರಪಂಚದಾದ್ಯಂತ ಆಹಾರ ಅಭದ್ರತೆ ಸ್ಥಿತಿ ಭಾರೀ ಹದಗೆಟ್ಟಿದೆ, 2023ರಲ್ಲಿ ಸುಮಾರು 282 ಮಿಲಿಯನ್ ಜನರು ತೀವ್ರ ಹಸಿವಿನಿಂದ ಬಳಲಿದ್ದಾರೆ, ಇದರಲ್ಲಿ ವಿಶೇಷವಾಗಿ ಯುದ್ಧಪೀಡಿತ ಗಾಝಾ ಮತ್ತು ಸುಡಾನ್‌ನಲ್ಲಿ ಹೆಚ್ಚಿನ ಜನರು...