ಬಯೋ-ಬಬಲ್‌ನೊಳಗೆ ಪಂದ್ಯಾಟ ನಡೆಯುತ್ತಿರುವ ಮಧ್ಯೆಯು ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳದಿಂದಾಗಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಈ ವರ್ಷದ ಸೀಸನನ್ನು ಅಮಾನತುಗೊಳಿಸಲಾಗಿದೆ ಎಂದು ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲ ಮಂಗಳವಾರ ಘೋಷಿಸಿದ್ದಾರೆ.
“ಐಪಿಎಲ್ ಅನ್ನು ಅಮಾನತುಗೊಳಿಸಲಾಗಿದೆ. ಅದನ್ನು ಮತ್ತೆ ನಡೆಸಲು ಸಾಧ್ಯವೆ ಎಂದು ಪರಿಶೀಲಿಸುತ್ತೇವೆ. ಪಂದ್ಯಾಟವನ್ನು ರದ್ದುಗೊಳಿಸಲಾಗಿಲ್ಲ, ಮುಂದೂಡಲಾಗಿದೆ” ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ: ಜನರ ಗಮನ ಬೇರೆಡೆ ಸೆಳೆಯಲು ರೋಮ್ ಚಕ್ರವರ್ತಿಗಳು ಗ್ಲಾಡಿಯೇಟರ್‌ಗಳನ್ನು ಆಡಿಸುತ್ತಿದ್ದರು, ನಮಗೆ ಐಪಿಎಲ್ ಇದೆ!
“ಆಟಗಾರರು, ಸಿಬ್ಬಂದಿ ಮತ್ತು ಐಪಿಎಲ್‌ನಲ್ಲಿ ಪಾಲ್ಗೊಳ್ಳುವ ಇತರರ ಸುರಕ್ಷತೆಯ ಬಗ್ಗೆ ಬಿಸಿಸಿಐ ರಾಜಿ ಮಾಡಿಕೊಳ್ಳಲು ಬಯಸುವುದಿಲ್ಲ. ಎಲ್ಲರ ಸುರಕ್ಷತೆ, ಆರೋಗ್ಯ ಮತ್ತು ಯೋಗಕ್ಷೇಮವನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ” ಎಂದು ಐಪಿಎಲ್ ಹೇಳಿಕೆಯಲ್ಲಿ ತಿಳಿಸಿದೆ.
UPDATE: The Indian Premier League Governing Council (IPL GC) and Board of Control for Cricket in India (BCCI) in an emergency meeting has unanimously decided to postpone IPL 2021 season with immediate effect.
Details – https://t.co/OgYXPj9FQy pic.twitter.com/lYmjBId8gL
— IndianPremierLeague (@IPL) May 4, 2021
ಇದಕ್ಕೂ ಮುನ್ನ ಮಂಗಳವಾರ, ಸನ್‌ರೈಸರ್ಸ್ ಹೈದರಾಬಾದ್‌ನ ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ವೃದ್ಧಿಮಾನ್ ಸಹಾ ಕೊರೊನಾ ಪಾಸಿಟಿವ್ ಆಗಿದ್ದಾರೆ.
ಸನ್‌ರೈಸರ್ಸ್ ಹೈದರಾಬಾದ್‌ನ ಮೂಲಗಳ ಪ್ರಕಾರ, “ತಂಡದಲ್ಲಿ ವೃದ್ಧಿಮಾನ್ ಸಹಾ ಕೊರೊನಾ ಪಾಸಿಟಿವ್ ಆಗಿದ್ದಾರೆ.ಆದ್ದರಿಂದ ಇಡೀ ತಂಡ ಈಗ ಐಸೋಲೇಷನ್‌ನಲ್ಲಿದೆ. ಬೇರೆ ಯಾರಿಗೂ ಕೊರೊನಾ ಪಾಸಿಟಿವ್ ಆಗಿಲ್ಲ” ಎಂದು ಹೇಳಿದ್ದಾರೆ.
ಇದನ್ನೂ ಓದಿ: ಅತಿ ದೊಡ್ಡ ಮಾನವೀಯ ಬಿಕ್ಕಟ್ಟಿನ ಕಾಲ ಮತ್ತು ಐಪಿಎಲ್ ಔಚಿತ್ಯ
ಇದನ್ನೂ ಓದಿ: ಸಾಂಕ್ರಾಮಿಕ ದುರಂತದ ಸಮಯದಲ್ಲಿ ಐಪಿಎಲ್ ಕವರೇಜ್ ಮಾಡುವುದಿಲ್ಲವೆಂದ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್!


