Homeಸಿನಿಮಾಕ್ರೀಡೆIPL2022: ಸತತ ಮುಗ್ಗರಿಸುತ್ತಿರುವ ದಿಗ್ಗಜ ತಂಡಗಳು - ಗೆಲುವಿನ ಅಲೆಯಲ್ಲಿ ಹೊಸ ತಂಡಗಳು

IPL2022: ಸತತ ಮುಗ್ಗರಿಸುತ್ತಿರುವ ದಿಗ್ಗಜ ತಂಡಗಳು – ಗೆಲುವಿನ ಅಲೆಯಲ್ಲಿ ಹೊಸ ತಂಡಗಳು

ಐದು ಬಾರಿ ಚಾಂಪಿಯನ್ ಆಗಿರುವ ಮುಂಬೈ ಇಂಡಿಯನ್ಸ್ ಹಾಗೂ ನಾಲ್ಕು ಬಾರಿ ಪ್ರಶಸ್ತಿ ಮುಡಿಗೇರಿಸಿಕೊಂಡಿರುವ ಚನ್ನೈ ಸೂಪರ್ ಸಿಂಗ್ಸ್ ಎರಡೂ ತಂಡಗಳು ಸೋಲಿನ ಸುಳಿಯಲ್ಲಿವೆ.

- Advertisement -
- Advertisement -

2022ರ ಸಾಲಿನ ಐಪಿಲ್ ಆರಂಭಗೊಂಡಿದೆ. ಗುಜರಾತ್ ಟೈಟನ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ಎಂಬ ಎರಡು ಹೊಸ ತಂಡಗಳ ಆಗಮನದೊಂದಿಗೆ ಕ್ರಿಕೆಟ್ ಮೆರಗು ಮತ್ತಷ್ಟು ಹೆಚ್ಚಿದೆ. ಲೀಗ್ ಹಂತದ 18 ಪಂದ್ಯಗಳು ಮುಕ್ತಾಯವಾಗಿದ್ದು, ಹಲವು ರೋಚಕ ಪಂದ್ಯಗಳನ್ನು ಅಭಿಮಾನಿಗಳು ಸವಿದಿದ್ದಾರೆ. ಈ ವರ್ಷದ ಐಪಿಎಲ್‌ನ ವಿಶೇಷತೆಯೆಂದರೆ ಹಲವು ಬಾರಿ ಚಾಂಪಿಯನ್ ಆಗಿರುವ ದಿಗ್ಗಜ ತಂಡಗಳು ಸತತವಾಗಿ ಮುಗ್ಗರಿಸುತ್ತಿದ್ದರೆ, ಹೊಸ ತಂಡಗಳು ಗೆಲುವಿನ ನಗೆ ಬೀರುತ್ತಿವೆ.

ಐದು ಬಾರಿ ಚಾಂಪಿಯನ್ ಆಗಿರುವ ಮುಂಬೈ ಇಂಡಿಯನ್ಸ್ ಮತ್ತು ಹಾಲಿ ಚಾಂಪಿಯನ್ಸ್ ಹಾಗೂ ನಾಲ್ಕು ಬಾರಿ ಪ್ರಶಸ್ತಿ ಮುಡಿಗೇರಿಸಿಕೊಂಡಿರುವ ಚನ್ನೈ ಸೂಪರ್ ಸಿಂಗ್ಸ್ ಎರಡೂ ತಂಡಗಳು ತಲಾ ನಾಲ್ಕು ಪಂದ್ಯಗಳನ್ನು ಆಡಿದ್ದು ನಾಲ್ಕರಲ್ಲಿಯೂ ಸೋಲೊಪ್ಪಿಕೊಂಡಿವೆ. ಇದಕ್ಕೆ ತದ್ವಿರುದ್ಧವಾಗಿ ಹೊಸದಾಗಿ ಆಗಮಿಸಿದ ಗುಜರಾತ್ ಟೈಟನ್ಸ್ ತಂಡ ತಾನಾಡಿದ ಮೂರು ಪಂದ್ಯಗಳಲ್ಲಿಯೂ ಜಯಗಳಿಸಿದರೆ, ಲಕ್ನೋ ಸೂಪರ್ ಜೈಂಟ್ಸ್ ತಂಡ ನಾಲ್ಕು ಪಂದ್ಯಗಳಲ್ಲಿ ಮೂರನ್ನು ಜಯಿಸಿದೆ!.

ಸದ್ಯಕ್ಕೆ 4 ಪಂದ್ಯಗಳಲ್ಲಿ ಮೂರನ್ನು ಜಯಿಸಿರುವ ಕೋಲ್ಕತ್ತ ನೈಟ್ ರೈಡರ್ಸ್ 6 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲಿದ್ದರೆ, ಅಷ್ಟೇ ಅಂಕಗಳನ್ನು ಪಡೆದಿರುವ ಗುಜರಾತ್ ಟೈಟನ್ಸ್ ಎಡನೇ ಸ್ಥಾನ, ಆರ್‌ಸಿಬಿ ಮೂರನೇ ಸ್ಥಾನ ಮತ್ತು ಲಕ್ನೋ ನಾಲ್ಕನೇ ಸ್ಥಾನದಲ್ಲಿದೆ. ಎರಡು ಪಂದ್ಯ ಜಯಿಸಿರುವ ರಾಜಸ್ಥಾನ್ ರಾಯಲ್ಸ್ ಐದನೇ ಸ್ಥಾನ, ಪಂಜಾಬ್ ಕಿಂಗ್ಸ್ ಆರನೇ ಸ್ಥಾನ ಪಡೆದಿವೆ. ಒಂದು ಪಂದ್ಯ ಜಯಿಸಿರುವ ಡೆಲ್ಲಿ ಕ್ಯಾಪಿಟಲ್ಸ್ ಏಳನೇ ಸ್ಥಾನ ಮತ್ತು ಸನ್‌ ರೈಸರ್ಸ್ ಹೈದರಾಬಾದ್ ಎಂಟನೇ ಸ್ಥಾನದಲ್ಲಿವೆ. ಒಂದೂ ಗೆಲುವು ಕಾಣದ ಮುಂಬೈ ಇಂಡಿಯನ್ಸ್ ಒಂಭತ್ತನೆ ಸ್ಥಾನದಲ್ಲಿದ್ದರೆ, ಚನ್ನೈ ಕೊನೆಯ ಸ್ಥಾನದಲ್ಲಿದೆ.

ಉತ್ತಮ ಆರಂಭ ಕಂಡ ಗುಜರಾತ್, ಲಕ್ನೋ

ಗುಜರಾತ್ ಟೈಟನ್ಸ್ ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಉತ್ತಮ ಆರಂಭ ಕಂಡಿದೆ. ಮೊದಲ ಪಂದ್ಯದಲ್ಲಿ ಲಕ್ನೋವನ್ನು ಮಣಿಸಿ ಶುಭಾರಂಭ ಮಾಡಿದ ಅದು ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಪಂಜಾಬ್ ಕಿಂಗ್ಸ್ ಅನ್ನು ಮಣಿಸಿ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿದೆ. ಶುಭ್‌ಮನ್ ಗಿಲ್, ಹಾರ್ದಿಕ್ ಪಾಂಡ್ಯ ಮತ್ತು ರಾಹುಲ್ ತಿವಾಟಿಯ ಉತ್ತಮ ಬ್ಯಾಟಿಂಗ್ ಫಾರ್ಮ್‌ನಲ್ಲಿದ್ದಾರೆ. ಅದೇ ರೀತಿ ಮೊಹಮ್ಮದ್ ಶಮಿ, ರಶೀದ್ ಖಾನ್ ವಿಕೆಟ್ ಕಬಳಿಸುತ್ತಾ ತಂಡಕ್ಕೆ ಬೆನ್ನೆಲುಬಾಗಿದ್ದಾರೆ. ಮುಂದಿನ ಪಂದ್ಯದಲ್ಲಿ ಹೈದರಾಬಾದ್ ಅನ್ನು ಎದುರಿಸಲಿದ್ದಾರೆ.

ಲಕ್ನೋ ತಂಡವು ಮೊದಲ ಪಂದ್ಯ ಸೋತ ನಂತರ ಸತತ ಮೂರು ಪಂದ್ಯಗಳಲ್ಲಿ ಜಯಗಳಿಸಿದೆ. ಕೆ.ಎಲ್ ರಾಹುಲ್ ನಾಯಕತ್ವದಲ್ಲಿ ಮುನ್ನಡೆಯುತ್ತಿರುವ ತಂಡ ಅದ್ಭುತ ಬ್ಯಾಟಿಂಗ್ ಲೈನ್ ಅಪ್ ಹೊಂದಿದೆ. ಅವರೊಟ್ಟಿಗೆ ಕ್ವಿಂಟನ್ ಡಿ ಕಾಕ್, ಎವಿನ್ ಲೆವಿಸ್ ಉತ್ತಮ ಫಾರ್ಮ್‌ನಲ್ಲಿದ್ದಾರೆ. ಬೌಲಿಂಗ್‌ನಲ್ಲಿ ಆವೇಶ್ ಖಾನ್ ಮತ್ತು ರವಿ ಬಿಷ್ಣೋಯಿ ಪರಿಣಾಮಕಾರಿ ಪ್ರದರ್ಶನ ನೀಡುತ್ತಿದ್ದಾರೆ. ಲಕ್ನೋ ಇಂದು ರಾತ್ರಿ ರಾಜಸ್ಥಾನ್ ರಾಯಲ್ಸ್ ವಿರುದ್ದ ಸೆಣಸಲಿದೆ.

ಹೀನಾಯ ಸ್ಥಿತಿಯಲ್ಲಿ ಮುಂಬೈ ಮತ್ತು ಚನ್ನೈ

ಐದು ಬಾರಿ ಚಾಂಪಿಯನ್ ಆಗಿರುವ ಮುಂಬೈ ಈ ಆವೃತ್ತಿಯಲ್ಲಿ ಗೆಲುವಿಗಾಗಿ ಪರಿತಪಿಸುತ್ತಿದೆ. ನಾಲ್ಕು ಪಂದ್ಯ ಆಡಿರುವ ಅದು ನಾಲ್ಕರಲ್ಲಿಯೂ ಸೋತಿದೆ. ಇಶಾಂತ್ ಕಿಶನ್, ಸೂರ್ಯಕುಮಾರ್ ಯಾದವ್‌ ಅದ್ಭುತ ಬ್ಯಾಟಿಂಗ್ ಆಡುತ್ತಿದ್ದರೂ, ಇಡೀ ತಂಡ ಸಾಂಘಿಕ ಪ್ರದರ್ಶನ ನೀಡುವಲ್ಲಿ ವಿಫಲವಾಗಿದೆ. ಜಸ್ಪ್ರಿತ್ ಬುಮ್ರ ಮತ್ತು ಪೊಲಾರ್ಡ್ ವಿಕೆಟ್ ಪಡೆಯುವಲ್ಲಿ ವಿಫಲವಾಗುತ್ತಿರುವುದು ತಂಡದ ಮೇಲೆ ಪರಿಣಾಮ ಬೀರಿದೆ. ಮುಂದಿನ ಪಂದ್ಯ ಏಪ್ರಿಲ್ 13 ರಂದು ಪಂಜಾಬ್ ಕಿಂಗ್ಸ್ ಎದುರು ಆಡಲಿದ್ದು, ಗೆಲುವಿನ ಲಯಕ್ಕೆ ಮರಳಬೇಕಿದೆ.

ಚನ್ನೈ ತಂಡವೂ ಒತ್ತಡದಲ್ಲಿದೆ. ತಂಡದ ಯಾವುದೇ ಬ್ಯಾಟ್ಸ್‌ಮನ್ ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದಾರೆ. ಅನುಭವಿ ಆಟಗಾರರಿದ್ದರೂ ಉತ್ತರ ಪ್ರದರ್ಶನ ಬಾರದ ಕಾರಣ ಸತತ 4 ಸೋಲು ಕಂಡಿದೆ. ಮುಂದಿನ ಪಂದ್ಯ ಏಪ್ರಿಲ್ 12 ರಂದು ಆರ್‌ಸಿಬಿ ಎದುರು ಆಡಬೇಕಿದೆ. ಸತತ ಮೂರು ಗೆಲುವಿನೊಂದಿಗೆ ಆರ್‌ಸಿಬಿ ಆತ್ಮವಿಶ್ವಾಸದಲ್ಲಿದ್ದರೆ ಚನ್ನೈಗೆ ಗೆಲುವು ಬೇಕೆ ಬೇಕಿದೆ.


ಇದನ್ನೂ ಓದಿ: ಪಾಕ್ ಕ್ರಿಕೆಟ್ ನಾಯಕಿಯ ಪುಟ್ಟ ಮಗುವಿನೊಂದಿಗೆ ಭಾರತೀಯ ತಂಡದ ಪ್ರೀತಿಯ ಕ್ಷಣಗಳು: ಎಲ್ಲೆಡೆ ಅಭಿಮಾನದ ಮಹಾಪೂರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...