Homeಸಿನಿಮಾಕ್ರೀಡೆRCB ಪ್ಲೇಆಫ್ ಭವಿಷ್ಯ ಮುಂಬೈ ಇಂಡಿಯನ್ಸ್ ಕೈಯಲ್ಲಿ: ಇಂದು ರೋಚಕ ಪಂದ್ಯ

RCB ಪ್ಲೇಆಫ್ ಭವಿಷ್ಯ ಮುಂಬೈ ಇಂಡಿಯನ್ಸ್ ಕೈಯಲ್ಲಿ: ಇಂದು ರೋಚಕ ಪಂದ್ಯ

- Advertisement -
- Advertisement -

RCB ತಂಡವು ಲೀಗ್ ಹಂತದ 14 ಪಂದ್ಯಗಳಲ್ಲಿ 8 ಅನ್ನು ಗೆಲ್ಲುವು ಮೂಲಕ 16 ಅಂಕ ಗಳಿಸಿ ತನ್ನ ಲೀಗ್ ಪೂರ್ಣಗೊಳಿಸಿದ್ದು ಪ್ಲೇಆಫ್ ಹತ್ತಿರಕ್ಕೆ ಬಂದಿದೆ. ಆದರೆ ಆರ್‌ಸಿಬಿ ಪ್ಲೇಆಫ್ ಪ್ರವೇಶಿಸಬೇಕಾದರೆ ಇಂದು ರಾತ್ರಿ ನಡೆಯುವ ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯದಲ್ಲಿ ಮುಂಬೈ ಗೆಲ್ಲಬೇಕಿದೆ. ಅದಕ್ಕಾಗಿ RCB ಅಭಿಮಾನಿಗಳು ಮುಂಬೈ ಗೆಲುವಿಗಾಗಿ ಮತ್ತು ಡೆಲ್ಲಿ ಸೋಲಿಗಾಗಿ ಪ್ರಾರ್ಥಿಸುತ್ತಿದ್ದಾರೆ.

ಆರ್‌ಸಿಬಿ ತಂಡವೂ ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ 8 ವಿಕೆಟ್‌ಗಳ ಅಧಿಕಾರಯುತ ಗೆಲುವು ಸಾಧಿಸಿದೆ. 16 ಅಂಕ ಗಳಿಸಿ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ. ಆದರೆ ಅದರ ನೆಟ್‌ ರನ್‌ ರೇಟ್ -253 ಇರುವುದು ಕಂಟಕವಾಗಿ ಪರಿಣಮಿಸಿದೆ. ಮುಂಬೈ ತಂಡ ಪ್ಲೇ ಆಫ್‌ನಿಂದ ಹೊರಹೋಗಿದ್ದು ಔಪಚಾರಿಕವಾಗಿ ತನ್ನ ಕೊನೆಯ ಪಂದ್ಯ ಎದುರಿಸುತ್ತಿದೆ. ಡೆಲ್ಲಿ ತಂಡ ಸದ್ಯ 13 ಪಂದ್ಯಗಳಲ್ಲಿ 14 ಅಂಕ ಗಳಿಸಿದ್ದರೂ ಅದರ ನೆಟ್‌ ರನ್‌ ರೇಟ್ +255 ಇದೆ. ಒಂದು ವೇಳೆ ಅದು ಇಂದಿನ ಪಂದ್ಯದಲ್ಲಿ ಮುಂಬೈ ವಿರುದ್ಧ ಗೆದ್ದರೆ 16 ಅಂಕ ಮತ್ತು ಉತ್ತಮ ನೆಟ್ ರನ್‌ ರೇಟ್ ಆಧಾರದಲ್ಲಿ ಪ್ಲೇಆಫ್ ಪ್ರವೇಶಿಸುತ್ತದೆ ಮತ್ತು ಬೆಂಗಳೂರು ಹೊರಬೀಳುತ್ತದೆ.

ಆರ್‌ಸಿಬಿ ಬಯಕೆಯಂತೆ ಇಂದು ಮುಂಬೈ ಗೆದ್ದರೆ ಡೆಲ್ಲಿ ತಂಡ 14 ಅಂಕಗಳಿಗೆ ಸೀಮಿತವಾಗುವುದರಿಂದ ಅದು ಪ್ಲೇಆಫ್‌ ರೇಸ್‌ನಿಂದ ಹೊರಬೀಳುತ್ತದೆ. ಆರ್‌ಸಿಬಿ ತಂಡ ಪ್ಲೇ ಆಫ್‌ಗೇರುತ್ತದೆ.

ಇದನ್ನೂ ಓದಿ: ಫ್ಲೇಆಫ್ ಹತ್ತಿರಕ್ಕೆ ಬಂದ RCB: ಗುಜರಾತ್‌ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಜಯ

ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ಗುಜರಾತ್ ಟೈಟನ್ಸ್ ಮತ್ತು ಎರಡನೇ ಸ್ಥಾನದಲ್ಲಿರುವ ರಾಜಸ್ಥಾನ್ ರಾಯಲ್ಸ ತಂಡಗಳು ಮೇ 24 ರಂದು ಮೊದಲ ಕ್ವಾಲಿಫೈಯರ್ ಪಂದ್ಯ ಎದುರಿಸಲಿವೆ. ಅಲ್ಲಿ ಗೆದ್ದವರು ನೇರ ಫೈನಲ್ ತಲುಪುತ್ತಾರೆ. ಸೋತವರಿಗೆ ಎರಡನೇ ಕ್ವಾಲಿಫೈಯರ್ (ಸೆಮಿಫೈನಲ್) ಅವಕಾಶವಿರುತ್ತದೆ. ಮೂರನೇ ಸ್ಥಾನದಲ್ಲಿರುವ ಲಕ್ನೋ ಸೂಪರ್ ಜೈಂಟ್ಸ್ ಮತ್ತು ನಾಲ್ಕನೇ ಸ್ಥಾನ ಪಡೆಯುವ ಡೆಲ್ಲಿ/ಆರ್‌ಸಿಬಿ ನಡುವೆ ಎಲಿಮಿನೇಟರ್ ಪಂದ್ಯ ಮೇ 25 ರಂದು ನಡೆಯಲಿದೆ. ಅಲ್ಲಿ ಸೋತವರು ಟೂರ್ನಿಯಿಂದ ಹೊರಬೀಳುತ್ತಾರೆ. ಗೆದ್ದವರು ಎರಡನೇ ಕ್ವಾಲಿಫೈಯರ್ (ಸೆಮಿಫೈನಲ್) ಪ್ರವೇಶಿಸುತ್ತಾರೆ. ಆ ಪಂದ್ಯ ಮೇ 27 ರಂದು ನಡೆಯಲಿದೆ. ಅಲ್ಲಿ ಗೆದ್ದವರು ಮೇ 29 ರಂದು ನಡೆಯುವ ಫೈನಲ್ ಪಂದ್ಯದಲ್ಲಿ ಸೆಣಸುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...