Homeಸಿನಿಮಾಕ್ರೀಡೆಐಪಿಎಲ್‌: ಪಂಜಾಬ್‌ ವಿರುದ್ಧದ ಪಂದ್ಯದಲ್ಲಿ ಕ್ರೀಡಾಸ್ಫೂರ್ತಿ ಮೆರೆದ ಕ್ವಿಂಟನ್ ಡಿಕಾಕ್‌

ಐಪಿಎಲ್‌: ಪಂಜಾಬ್‌ ವಿರುದ್ಧದ ಪಂದ್ಯದಲ್ಲಿ ಕ್ರೀಡಾಸ್ಫೂರ್ತಿ ಮೆರೆದ ಕ್ವಿಂಟನ್ ಡಿಕಾಕ್‌

- Advertisement -
- Advertisement -

ಪಂಜಾಬ್‌ ಕಿಂಗ್ಸ್‌ (ಪಿಬಿಕೆಎಸ್‌) ಹಾಗೂ ಲಕ್ನೋ ಸೂಪರ್‌ ಜೈಂಟ್ಸ್‌ (ಎಲ್‌ಎಸ್‌ಜಿ) ನಡುವಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾದ ಎಡಗೈ ಬ್ಯಾಟ್‌ಮನ್‌, ಎಲ್‌ಎಸ್‌ಜಿ ಪರ ಆಡುತ್ತಿರುವ ಕ್ವಿಂಟನ್‌ ಡಿಕಾಕ್‌ ಕ್ರೀಡಾ ಸ್ಫೂರ್ತಿ ಮೆರೆದು ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಐಪಿಎಲ್‌ 15ನೇ ಆವೃತ್ತಿಯ 42ನೇ ಪಂದ್ಯದಲ್ಲಿ ಇಂದು ಉಭಯ ತಂಡಗಳು ಮುಖಾಮುಖಿಯಾಗಿವೆ. ಕನ್ನಡಿಗರಾದ ಕೆ.ಎಲ್‌.ರಾಹುಲ್‌ ಎಲ್‌ಎಸ್‌ಜಿಗೆ, ಮಯಾಂಕ್‌ ಅಗರ್‌ವಾಲ್‌ ಪಂಜಾಬ್‌ ಕಿಂಗ್ಸ್‌ ತಂಡಕ್ಕೆ ನಾಯಕರಾಗಿದ್ದು ಟಾಸ್‌ ಗೆದ್ದ ಪಂಜಾಬ್‌ ಬೌಲಿಂಗ್ ಆಯ್ದುಕೊಂಡಿತು.

ಬ್ಯಾಟಿಂಗ್‌ಗೆ ಇಳಿದ ಎಲ್‌ಎಸ್‌ಜಿ ಆರಂಭಿಕ ಆಘಾತ ಎದುರಿಸಿತು. ಕೆ.ಎಲ್‌.ರಾಹುಲ್‌ 6 ರನ್‌ ಗಳಿಸಿ ಔಟಾದರು. ಆದರೆ ಕ್ವಿಂಟನ್‌ ಡಿಕಾಕ್ ಹಾಗೂ ದೀಪಕ್‌ ಹೂಡಾ 2ನೇ ವಿಕೆಟ್‌ಗೆ ಉತ್ತಮ ಆರಂಭ ನೀಡಿದರು. 37 ಬಾಲ್‌ಗಳಲ್ಲಿ 4 ಫೋರ್‌, 2 ಸಿಕ್ಸ್‌ ಮೂಲಕ 46 ರನ್‌ ಗಳಿಸಿ ಅರ್ಧ ಶತಕದ ಹೊಸ್ತಿಲಲ್ಲಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಉತ್ತಮ ಆರಂಭ ನೀಡಿ ಆಟವಾಡುತ್ತಿದ್ದ ಡಿಕಾಕ್‌ 12ನೇ ಓವರ್‌ನಲ್ಲಿ ಔಟ್‌ ಆಗಿದ್ದು ವಿಶೇಷ. ಸಂದೀಶ್ ಶರ್ಮಾ ಅವರು ಬೌಲಿಂಗ್ ಮಾಡುತ್ತಿದ್ದರು. ಆದರೆ ಓವರ್‌ನ ನಾಲ್ಕನೇ ಎಸೆತದಲ್ಲಿ ಡಿಕಾಕ್‌ ಅವರ ಬ್ಯಾಟ್‌ಗೆ ತಾಕಿ ಬಾಲ್‌ ಕೀಪರ್‌ (ಜಿತೇಶ್‌ ಶರ್ಮಾ) ಕೈ ಸೇರಿತ್ತು. ಆದರೆ ಅಂಪೈರ್‌ ಔಟ್ ಕೊಡಲಿಲ್ಲ. ಆಗ ಕ್ರೀಡಾ ಸ್ಫೂರ್ತಿ ಮೆರೆದ ಡಿಕಾಕ್‌ ತಾವಾಗಿಯೇ ಔಟ್ ಎಂದು ಒಪ್ಪಿಕೊಂಡು ಕ್ರೀಸ್‌ನಿಂದ ಹೊರನಡೆದರು.

ಕ್ರಿಕೆಟ್ ಇತಿಹಾಸದಲ್ಲಿ ಇದೇ ರೀತಿಯ ಕ್ರೀಡಾ ಸ್ಫೂರ್ತಿಯನ್ನು ಹಲವು ಸಲ ಕ್ರಿಕೆಟ್ ಪ್ರೇಮಿಗಳು ಕಂಡಿದ್ದಾರೆ. ಆಡಮ್‌ ಕಿಲ್‌ಕ್ರಿಸ್ಟ್‌, ಸಚಿನ್‌ ತೆಂಡೂಲ್ಕರ್‌, ಬ್ರಿಯಾನ್‌ ಲಾರಾ, ಕುಮಾರ ಸಂಗಾಕ್ಕಾರ ಸೇರಿದಂತೆ ಹಲವು ಆಟಗಾರರು ಇದೇ ರೀತಿಯಲ್ಲಿ ಕ್ರೀಡಾ ಸ್ಫೂರ್ತಿಯನ್ನು ಮೆರೆದಿದ್ದಾರೆ.

ಬ್ಲಾಕ್‌ ಲೈವ್ಸ್‌ ಮ್ಯಾಟರ್‌ನಲ್ಲಿ ವಿವಾದ: ಕ್ರೀಡಾ ಸ್ಫೂರ್ತಿಯಿಂದ ಮೆಚ್ಚುಗೆಗೆ ಒಳಗಾಗಿರುವ ಕ್ವಿಂಟನ್‌ ಡಿಕಾಕ್‌ ಈ ಹಿಂದೆ ಬ್ಲಾಕ್‌ ಲೈವ್ಸ್‌ ಮ್ಯಾಟರ್‌ ಚಳವಳಿಯ ವೇಳೆ ಟೀಕೆಗೆ ಒಳಗಾಗಿದ್ದರು. ಎಲ್ಲ ಆಟಗಾರರು ಮಂಡಿಯೂರಿದ್ದಾಗ ಡಿಕಾಕ್‌ ಮಂಡಿಯೂರದೇ ಟೀಕೆಗೆ ಒಳಗಾಗಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...